ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಎಡಬಿಡಂಗಿ ಸರ್ಕಾರ: ಆರ್ ಅಶೋಕ ವಾಗ್ದಾಳಿ

ರಾಜ್ಯದಲ್ಲಿರುವುದು ಎಡಬಿಡಂಗಿ ಸರ್ಕಾರ ಎಂದು ಆಕ್ರೋಶ ಹೊರಹಾಕಿದ ಆರ್.ಅಶೋಕ, ಮನಸ್ಸಿಗೆ ಬಂದಂತೆ ಐದು ಗ್ಯಾರಂಟಿ ಘೋಷಿಸಿ ಅದನ್ನು ಪೂರ್ಣ ಪ್ರಮಾಣದಲ್ಲಿ ಜಾರಿ ಮಾಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು. ಬಿಜೆಪಿ ಅಭ್ಯರ್ಥಿಗಳ ಪಟ್ಟಿ ವಿಚಾರವಾಗಿ ಮಾತನಾಡಿದ ಅವರು, ಇನ್ನೊಂದು ಸುತ್ತಿನ ಮಾತುಕತೆ ಬಳಿಕ ಪಟ್ಟಿ ಬಿಡುಗಡೆ ಆಗಲಿದೆ ಎಂದರು. ಅಲ್ಲದೆ, ಮಂಡ್ಯ ಸಂಸದೆ ಸುಮಲತಾ ಅವರು ಪಕ್ಷ ಸೇರ್ಪಡೆಯಾಗಿಲ್ಲ. ಹೀಗಾಗಿ ವರಿಷ್ಠರ ತೀರ್ಮಾನವೇ ಅಂತಿಮ ಎಂದಿದ್ದಾರೆ.

ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಎಡಬಿಡಂಗಿ ಸರ್ಕಾರ: ಆರ್ ಅಶೋಕ ವಾಗ್ದಾಳಿ
ಆರ್.ಆಶೋಕ
Follow us
| Updated By: Rakesh Nayak Manchi

Updated on:Mar 08, 2024 | 12:54 PM

ಬೆಂಗಳೂರು, ಮಾ.8: ಲೋಕಸಭೆ ಚುನಾವಣೆಗೆ ಅಖಾಡಕ್ಕಿಳಿಯುವ ಬಿಜೆಪಿ (BJP) ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿರುವ ಹೈಕಮಾಂಡ್, ಎರಡನೇ ಪಟ್ಟಿಯನ್ನು ಸಿದ್ಧಪಡಿಸುತ್ತಿದೆ. ಇನ್ನೊಂದೆಡೆ, ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲ ಮೂಡಿಸುತ್ತಿರುವ ಮಂಡ್ಯ ಕ್ಷೇತ್ರದ ಬಿಜೆಪಿ ಟಿಕೆಟ್​ಗಾಗಿ ಹಾಲಿ ಸಂಸದೆ ಸುಮಲತಾ (Sumalatha) ಅವರು ತೀವ್ರ ಪೈಪೋಟಿ ನಡೆಸುತ್ತಿದ್ದಾರೆ. ಈ ಎಲ್ಲದರ ಬಗ್ಗೆ ಪ್ರತಿಕ್ರಿಯೆ ನೀಡಿದ ವಿಪಕ್ಷ ನಾಯಕ ಆರ್.ಅಶೋಕ (R.Ashoka), ರಾಜ್ಯ ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ವಾಗ್ದಾಳಿಯೂ ನಡೆಸಿದರು.

ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಎಡಬಿಡಂಗಿ ಸರ್ಕಾರ ಎಂದು ಹೇಳಿದ ಅಶೋಕ, ಮನಸ್ಸಿಗೆ ಬಂದಂತೆ ಐದು ಗ್ಯಾರಂಟಿ ಘೋಷಿಸಿ ಅದನ್ನು ಪೂರ್ಣ ಪ್ರಮಾಣದಲ್ಲಿ ಜಾರಿ ಮಾಡಿಲ್ಲ. ಕಾಂಗ್ರೆಸ್ ಸರ್ಕಾರ ಬೇಜವಾಬ್ದಾರಿಯಿಂದ ಕೆಆರ್​ಎಸ್ ನೀರನ್ನು ತಮಿಳುನಾಡಿಗೆ ಬಿಟ್ಟು ಕೊಟ್ಟಿದೆ. ಈ ಕಾರಣದಿಂದ ಇವತ್ತು ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಕಾಣಿಸಿದೆ ಎಂದು ಆರೋಪಿಸಿದರು.

ನಾವು ಕೋವಿಡ್ ಸಂದರ್ಭದಲ್ಲಿ ಸಭೆ ಮಾಡಿ ಸಮರ್ಥವಾಗಿ ನಿಭಾಯಿಸಿದ್ದೇವೆ. ಆದರೆ ಕಾಂಗ್ರೆಸ್ ಸರ್ಕಾರ ಬೆಂಗಳೂರಿನ ವಾರ್ಡ್ ಮಟ್ಟದಲ್ಲಿ ಒಂದು ಸಭೆಯನ್ನೂ ಮಾಡಿಲ್ಲ. ಕೇಂದ್ರ ಸರ್ಕಾರದ ಮೇಲೆ ಹೇಳುತ್ತೀರಲ್ಲಾ ನಿಮಗೆ‌ ನಾಚಿಕೆ ಆಗಲ್ವಾ? ರಾಜ್ಯದಲ್ಲಿ ಕುಡಿಯುವ ನೀರನ್ನು ಒದಗಿಸುವಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ರಾಜ್ಯದ ಹಣಕಾಸಿನ ಪರಿಸ್ಥಿತಿ ಪಾತಾಳಕ್ಕೆ ಇಳಿದಿದೆ ಎಂದು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ದಲಿತರನ್ನು ಡಿಸಿಎಂ ಕೂಡ ಮಾಡಲ್ಲ

ಕಾಂಗ್ರೆಸ್ ಪಕ್ಷದಲ್ಲಿ ದಲಿತ ಮುಖ್ಯಮಂತ್ರಿ ಕೂಗು ಕೇಳಿಬರುತ್ತಿರುವ ಬಗ್ಗೆ ಮಾತನಾಡಿದ ಅಶೋಕ, ಕಾಂಗ್ರೆಸ್​ ದಲಿತರನ್ನು ಮುಖ್ಯಮಂತ್ರಿ ಅಲ್ಲ, ಉಪಮುಖ್ಯಮಂತ್ರಿಗಳನ್ನೂ ಮಾಡಲ್ಲ. ಪಾಪ ಸತೀಶ್ ಜಾರಕಿಹೊಳಿ, ಪರಮೇಶ್ವರ್ ಎಲ್ಲರು ಕ್ಯೂ ನಿಂತಿದ್ದಾರೆ. ಸಿದ್ದರಾಮಯ್ಯ ಮಗ ಯತೀಂದ್ರ ಅವರು ನಮ್ಮ ಅಪ್ಪನೇ ಐದು ವರ್ಷ ಮುಖ್ಯಮಂತ್ರಿ ಅಂತಿದ್ದಾರೆ. ಡಿ.ಕೆ. ಶಿವಕುಮಾರ್ ಬೇರೆ ಮುಂದಿನ ಬಜೆಟ್ ಅನ್ನು ಕಾಂಗ್ರೆಸ್ ಮುಖ್ಯಮಂತ್ರಿ ಮಾಡುತ್ತಾರೆ ಅಂತಾರೆ, ಆದರೆ ಸಿದ್ದರಾಮಯ್ಯ ಅಂತಾ ಹೇಳಿಲ್ಲ ಎಂದರು.

ಇದನ್ನೂ ಓದಿ: ನಾಸೀರ್​ ಹುಸೇನ್​​ಗೆ ಪ್ರತಿಜ್ಞಾವಿಧಿ ಬೋಧಿಸದಂತೆ ಉಪ ರಾಷ್ಟ್ರಪತಿಗಳಿಗೆ ಪತ್ರ: ಹಿರಿಯ ಅಧಿಕಾರಿಗಳ ನಡೆ ಸ್ವಾಗತಿಸಿದ ಆರ್​ ಅಶೋಕ್​​

ಕಾಂಗ್ರೆಸ್ ಸರ್ಕಾರದಲ್ಲಿ ಯಾವುದೇ ರೀತಿಯ ಕಂಟ್ರೋಲ್‌ ಇಲ್ಲ. ಸರ್ಕಾರದಲ್ಲಿರುವ ಮಂತ್ರಿಗಳು ಬೇಕಾಬಿಟ್ಟಿ ಮಾತಾಡುತ್ತಾರೆ. ಗೃಹ ಸಚಿವರು ನಾನು ಹೇಳಿದ್ದೇ ಅಂತಿಮ ಅಂತಾರೆ. ಇದರಿಂದ ಮಂತ್ರಿಗಳಿಗೆ ಮರ್ಯಾದೆ ಇಲ್ಲದಂತಾಗಿದೆ. ಕಾಂಗ್ರೆಸ್ ಸರ್ಕಾರಕ್ಕೆ ದಿಕ್ಕು ದೆಸೆ ಇಲ್ಲದಂತಾಗಿದೆ. ಲೋಕಸಭೆಯಲ್ಲಿ ಕಾಂಗ್ರೆಸ್ ವಿಪಕ್ಷವಾಗುವುದೂ ಕೂಡ ಗ್ಯಾರಂಟಿ ಇಲ್ಲ ಎಂದರು.

ಟ್ಯಾಕ್ಸ್ ಹೆಚ್ಚಿಸಿದ ಕಾಂಗ್ರೆಸ್ ಸರ್ಕಾರ

ಕುಡಿಯುವ ನೀರು ಮುಂದೆ ಹೇಗೆ ಸಮಸ್ಯೆ ಆಗಲಿದೆ ಊಹಿಸಿ. ಕುಡಿಯುವ ನೀರಿಗೆ ಸಮಸ್ಯೆಯಾದರೆ ರಾಜ್ಯ ಸರ್ಕಾರವೇ ಕಾರಣವಾಗುತ್ತದೆ. ಟ್ಯಾಂಕರ್ ನೀರಿಗೆ ದರ ಫಿಕ್ಸ್ ಮಾಡಿರುವುದು ಬಿಟ್ಟರೇ ಏನೂ ಮಾಡಿಲ್ಲ. ನಾವು ಸಾಲ ಮಾಡಲು ಸಾಧ್ಯವಿಲ್ಲದಷ್ಟು ಹಣ ಸಾಲ ಮಾಡಿದ್ದಾರೆ. ರಾಜ್ಯ ಸರ್ಕಾರ ಎಲ್ಲಾ ರೀತಿಯ ತೆರಿಗೆಯನ್ನು ಹೆಚ್ಚಿಸಿದೆ. ಉಳಿದಿರುವುದು ಕೇವಲ ಕುಡುಕರು ಮಾತ್ರ, ಅವರಿಗೆ ಟ್ಯಾಕ್ಸ್ ಹಾಕಬೇಕಷ್ಟೇ ಎಂದು ಅಶೋಕ ಹೇಳಿದರು.

ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಯಾವಾಗಾ?

ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಮಾತನಾಡಿದ ಆರ್.ಅಶೋಕ, ನವದೆಹಲಿಯಲ್ಲಿ ಎರಡು ದಿನಗಳ ಕಾಲ ಸಭೆ ನಡೆಸಲಾಗಿದೆ. ಒಂದು ಸುತ್ತಿನ ಮಾತುಕತೆ ನಡೆದಿದೆ. ಇನ್ನೊಂದು ಸುತ್ತಿನ ಮಾತುಕತೆ ಬಳಿಕ ಪಟ್ಟಿ ಬಿಡುಗಡೆಯಾಗಲಿದೆ ಎಂದರು. ಅಲ್ಲದೆ, ಸಮಸ್ಯೆ ಇರುವ ಕ್ಷೇತ್ರಗಳಲ್ಲಿ ಮತ್ತೊಮ್ಮೆ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳಲಾಗುತ್ತದೆ. ರಾಜ್ಯ ಕೋರ್ ಕಮಿಟಿ ಕಳಿಸಿದ್ದ ಪಟ್ಟಿ ಬಗ್ಗೆ ಚರ್ಚೆ ಆಗಿದೆ. ಅಮಿತ್ ಶಾ, ನಡ್ಡಾ, ಬಿಎಲ್ ಸಂತೋಷ್ ಜೊತೆ ಚರ್ಚೆ ಆಗಿದೆ. ವಯಸ್ಸು, ಆರೋಗ್ಯ ಕಾರಣದಿಂದ ಕೆಲವರ ಬದಲಾವಣೆ ಆಗಲಿದೆ. ಬಹುತೇಕ ಚರ್ಚೆ ಒಂದು ಹಂತಕ್ಕೆ ಬಂದಿದೆ ಎಂದರು.

ಇದನ್ನೂ ಓದಿ: ಪಾಕಿಸ್ತಾನ ಪರ ಘೋಷಣೆ ಪ್ರಕರಣ; ಬಂಧಿತರಿಗೆ ಮೈಸೂರು ಪಾಕ್ ತಿನ್ನಿಸಿ ಜೈಲಿಗೆ ಕಳಿಸಲಾಗಿದೆ: ಆರ್ ಅಶೋಕ

ಮೈಸೂರು, ಮಂಡ್ಯ, ಗುಲ್ಬರ್ಗ, ಹಾಸನ ಎಲ್ಲಾ ಕ್ಷೇತ್ರಗಳ ಬಗ್ಗೆ ಚರ್ಚೆ ಆಗಿದೆ. ಹಾಲಿ ಉತ್ತಮ ಸಂಸದರಿಗೆ ಮತ್ತೊಮ್ಮೆ ಅವಕಾಶ ಕೊಡುವ ಬಗ್ಗೆ ಚರ್ಚೆ ಆಗಿದೆ. ಬೆಂಗಳೂರು ಉತ್ತರಕ್ಕೆ ನಮ್ಮ ಅಭಿಪ್ರಾಯವನ್ನು ನಾವು ತಿಳಿಸಿದ್ದೇವೆ. ಮುಂದಿನ ತೀರ್ಮಾನವನ್ನು ನಮ್ಮ ವರಿಷ್ಠರು ಮಾಡುತ್ತಾರೆ ಎಂದರು.

ಸುಮಲತಾ ಟಿಕೆಟ್ ಫೈಟ್: ವರಿಷ್ಠರ ತೀರ್ಮಾನವೇ ಅಂತಿಮ

ಮಂಡ್ಯದಲ್ಲಿ ಬಿಜೆಪಿಯಿಂದ ಶೇಕಡಾ 500 ರಷ್ಟು ನಾನೇ ಸ್ಪರ್ಧೆ ಮಾಡುತ್ತೇನೆ ಎಂಬ ಸಂಸದೆ ಸುಮಲತಾ ಹೇಳಿಕೆ ವಿಚಾರವಾಗಿ ಮಾತನಾಡಿದ ಆರ್.ಅಶೋಕ, ಸುಮಲತಾ ಅಂಬರೀಶ್ ನಮಗೆ ಕೇವಲ ಬೆಂಬಲ ಅಷ್ಟೇ ಕೊಟ್ಟಿದ್ದಾರೆ. ಆದರೆ ಅವರು ಇನ್ನೂ ಪಕ್ಷಕ್ಕೆ ಸೇರಿಲ್ಲ. ಹೀಗಾಗಿ ಅವರ ಬಗ್ಗೆ ವರಿಷ್ಠರು ತೀರ್ಮಾನ ಮಾಡುತ್ತಾರೆ. ಜೆಡಿಎಸ್ ನಾಯಕರು ಇನ್ನು ಎರಡು-ಮೂರು ದಿನಗಳಲ್ಲಿ ದೆಹಲಿಗೆ ಹೋಗುತ್ತಾರೆ. ಅವರು ಯಾವ ಸೀಟು ಕೇಳುತ್ತಾರೋ ಅದನ್ನು ಬಿಟ್ಟು ಕೊಡುವ ಬಗ್ಗೆ ವರಿಷ್ಠರು ಮಾತಾಡುತ್ತಾರೆ. ಉಳಿದ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸ್ಪರ್ಧೆ ಮಾಡುತ್ತಾರೆ ಎಂದರು.

ಬೆಂಗಳೂರಿನಲ್ಲಿ ಗ್ರಾಮಾಂತರದಲ್ಲಿ ಅಚ್ಚರಿಯ ಅಭ್ಯರ್ಥಿ ಆಯ್ಕೆ

ಮಂಡ್ಯದಲ್ಲಿ ನಮಗೆ ಮತಗಳಿಕೆ ಜಾಸ್ತಿಯಾಗಿದೆ. ಬಿಜೆಪಿ ಹಾಗೂ ಜೆಡಿಎಸ್ ಎರಡೂ ಪಕ್ಷಗಳ ಶಕ್ತಿ ಒಟ್ಟು ಸೇರಿದರೆ ಇನ್ನಷ್ಟು ಹೆಚ್ಚಳವಾಗಲಿದೆ. ಹೀಗಾಗಿ ಈ ಬಾರಿ ಮಂಡ್ಯದಲ್ಲಿ ನಮ್ಮ ಅಭ್ಯರ್ಥಿ ಗೆಲುವು ನಿಶ್ಚಿತ. ಬೆಂಗಳೂರು ಗ್ರಾಮಾಂತರಕ್ಕೆ ಮೂರು ಹೆಸರು ಕಳುಹಿಸಲಾಗಿದೆ. ಬೆಂಗಳೂರಿನಲ್ಲಿ ಗ್ರಾಮಾಂತರದಲ್ಲಿ ಪ್ರಬಲ, ಆಶ್ಚರ್ಯ ಅಭ್ಯರ್ಥಿ ಕಣಕ್ಕಿಳಿಸುವುದು ನಿಶ್ಚಿತ ಎಂದರು.

ಬೆಂಗಳೂರು ಗ್ರಾಮಾಂತರದಲ್ಲಿ ಡಾ. ಮಂಜುನಾಥ್ ಸ್ಪರ್ಧೆ ವಿಚಾರವಾಗಿ ಮಾತನಾಡಿದ ಅಶೋಕ, ಇಂದು ಮುನಿರತ್ನ ಅವರ ಕಾರ್ಯಕ್ರಮಕ್ಕೆ ಮಂಜುನಾಥ್ ಬರುತ್ತಿದ್ದಾರೆ. ಅವರ ಜೊತೆ ನಾನು ಸಂಜೆ ಮಾತಾಡುತ್ತೇನೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:51 pm, Fri, 8 March 24

ತಾಜಾ ಸುದ್ದಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್