ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ಕರ್ನಾಟಕ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳ ವಿರುದ್ಧ ಇಂದು ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ. ರಾಜ್ಯದಲ್ಲಿ ಬರಗಾಲ ಇದ್ದರೂ ಯಾವುದೇ ಕ್ರಮಕೈಗೊಂಡಿಲ್ಲ. ಭ್ರಷ್ಟಾಚಾರದಲ್ಲಿ ಮುಳುಗಿರುವ ಸರ್ಕಾರ ಅಭಿವೃದ್ಧಿಯನ್ನು ಕಡೆಗಣಿಸಿದೆ. ಅಷ್ಟೇ ಅಲ್ಲದೆ, ಬಿಜೆಪಿ ಕಾರ್ಯಕರ್ತರ ಮೇಲೆ ಅನಗತ್ಯವಾಗಿ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಲಿದ್ದಾರೆ.

ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ
ಕರ್ನಾಟಕ ರಾಜ್ಯಾದ್ಯಂತ ಇಂದು ಬಿಜೆಪಿ ಪ್ರತಿಭಟನೆ
Follow us
TV9 Web
| Updated By: Rakesh Nayak Manchi

Updated on:Sep 08, 2023 | 6:26 AM

ಬೆಂಗಳೂರು, ಸೆ.8: ಕರ್ನಾಟಕ ಕಾಂಗ್ರೆಸ್ (Congress) ಸರ್ಕಾರದ ವೈಫಲ್ಯಗಳ ವಿರುದ್ಧ ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ (BJP Protest) ನಡೆಸಲಿದೆ. ಬೆಂಗಳೂರಿನಲ್ಲಿ (Bengaluru) ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (B.S.Yediyurappa) ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.

ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಅಭಿವೃದ್ಧಿಯನ್ನು ಕಡೆಗಣಿಸಿದೆ. ರಾಜ್ಯದಲ್ಲಿ ಬರಗಾಲ ಇದ್ದರೂ ಯಾವುದೇ ಕ್ರಮಕೈಗೊಂಡಿಲ್ಲ. ಬಿಜೆಪಿ ಅವಧಿಯ ಕಾಮಗಾರಿಗಳನ್ನು ತಡೆದಿರುವುದಕ್ಕೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸುತ್ತಿದೆ. ಅಷ್ಟೇ ಅಲ್ಲದೆ, ಕಾರ್ಯಕರ್ತರ ಮೇಲೆ ಅನಗತ್ಯ ಕೇಸ್ ಹಾಕಿ ದ್ವೇಷ ಸಾಧಿಸುತ್ತಿದ್ದಾರೆ ಎಂದು ಆರೋಪಿಸಿ ಇಂದು ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಎಲ್ಲಾ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಲಿದ್ದಾರೆ.

ಇದನ್ನೂ ಓದಿ: ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ: ವಿಧಾನಸಭೆ ಎಲೆಕ್ಷನ್​ ಸೋಲಿನ ಬಳಿಕ 2 ಮಹತ್ವದ ಸಭೆ ಕರೆದ ಬಿಜೆಪಿ

ನಾಳೆ 15-20 ಸಾವಿರ ಜನರನ್ನು ಸೇರಿಸಿ ಪ್ರತಿಭಟನೆ ಮಾಡುತ್ತೇವೆ. ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಅದಕ್ಕೆ ರಾಜ್ಯ ಸರ್ಕಾರವೇ ಹೊಣೆ. ಈ ಎಚ್ಚರಿಕೆಯನ್ನು ಸರ್ಕಾರಕ್ಕೆ ಕೊಡುತ್ತಿದ್ದೇನೆ ಎಂದು ಯಡಿಯೂರಪ್ಪ ಅವರು ಈಗಾಗಲೇ ಎಚ್ಚರಿಕೆ ನೀಡಿದ್ದಾರೆ.

ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಅಭಿವೃದ್ಧಿಯನ್ನು ಕಡೆಗಣಿಸಿರುವ ಕಾಂಗ್ರೆಸ್ ಸರ್ಕಾರ, ಹಿಂದೆ ಮಾಡಿರುವ ಕೆಲಸಗಳಿಗೆ ಕೂಡ ಕಮಿಷನ್ ಕೇಳುತ್ತಿದ್ದಾರೆ. ಶಾಸಕರಿಗೆ ಅನುದಾನ ಕೊಡುತ್ತಿಲ್ಲ ಎಂದು ಯಡಿಯೂರಪ್ಪ ಆರೋಪಿಸಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:21 am, Fri, 8 September 23

ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!
ಬೇಕರಿ ಮಾಲೀಕ ಹೇಳುವಂತೆ ಕೇಕ್ ಕಟ್ ಮಾಡುವ ಕ್ರೇಜ್ ಕಡಿಮೆಯಾಗಿದೆ!
ಬೇಕರಿ ಮಾಲೀಕ ಹೇಳುವಂತೆ ಕೇಕ್ ಕಟ್ ಮಾಡುವ ಕ್ರೇಜ್ ಕಡಿಮೆಯಾಗಿದೆ!
ಮೈಸೂರು; ಹುಚ್ಚು ಸಾಹಸಗಳನ್ನು ಸೆರೆಹಿಡಿಯಲು ಸಿಸಿಟಿವಿ ಕೆಮೆರಾಗಳು: ಡಿಸಿಪಿ
ಮೈಸೂರು; ಹುಚ್ಚು ಸಾಹಸಗಳನ್ನು ಸೆರೆಹಿಡಿಯಲು ಸಿಸಿಟಿವಿ ಕೆಮೆರಾಗಳು: ಡಿಸಿಪಿ
ಮರಳಿನಲ್ಲಿ ಸಿಲುಕಿಕೊಂಡ ಫೆರಾರಿ ಕಾರು; ರಸ್ತೆಗೆ ಎಳೆದು ತಂದ ಎತ್ತಿನ ಗಾಡಿ
ಮರಳಿನಲ್ಲಿ ಸಿಲುಕಿಕೊಂಡ ಫೆರಾರಿ ಕಾರು; ರಸ್ತೆಗೆ ಎಳೆದು ತಂದ ಎತ್ತಿನ ಗಾಡಿ