AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಲಿತಾಂಶ ಹೊರಬೀಳುತ್ತಿದ್ದಂತೆ ಅರ್ಧ ಸತ್ಯಗಳನ್ನ ಹೇಳಿದ ರಮೇಶ್ ಜಾರಕಿಹೊಳಿ!

ಬೆಳಗಾವಿ: ಬೈ ಎಲೆಕ್ಷನ್ ಫಲಿತಾಂಶ ಹೊರಬೀಳುತ್ತಿದ್ದಂತೆ ತಾವೇಕೆ ಕಾಂಗ್ರೆಸ್​ ಬಿಡುವಂತಾಯಿತು, ಬಿಜೆಪಿಯನ್ನು ಸೇರಿದ್ದೇಕೆ ಎಂಬ ಸತ್ಯ ಸಂಗತಿಗಳನ್ನ ಸುದ್ದಿಗೋಷ್ಠಿಯಲ್ಲಿ ಬಹಿರಂಗಪಡಿಸುವುದಾಗಿ ಅಂದಿನ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ಹೇಳಿದ್ದರು. ಅದರಂತೆ ಇಂದು ವಿಜಯ ಸಾಹುಕಾರನಾಗಿ ಹೊರಹೊಮ್ಮುತ್ತಿದ್ದಂತೆ ರಮೇಶ್ ಜಾರಕಿಹೊಳಿ ಒಂದಷ್ಟು ಅರ್ಧ ಸತ್ಯಗಳನ್ನ ಹೇಳಿದ್ದಾರೆ. ಮುಖ್ಯವಾಗಿ ಸಿದ್ದರಾಮಯ್ಯ ಮತ್ತು ಸ್ಥಳೀಯ ಶತ್ರು ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಕೆಂಡಕಾರಿದ್ದಾರೆ. ನನ್ನ ವಿರುದ್ಧ ಸಿದ್ದರಾಮಯ್ಯ ಹೇಳಿಕೆ ನೀಡಿದರೆ ಅವರ ಎಲ್ಲಾ ವಿಚಾರಗಳನ್ನು ನಾನೂ ಬಹಿರಂಗ ಪಡಿಸುವೆ ಎಂದು ಬೆಳಗಾವಿಯಲ್ಲಿ ಟಿವಿ9ಗೆ […]

ಫಲಿತಾಂಶ ಹೊರಬೀಳುತ್ತಿದ್ದಂತೆ ಅರ್ಧ ಸತ್ಯಗಳನ್ನ ಹೇಳಿದ ರಮೇಶ್ ಜಾರಕಿಹೊಳಿ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 09, 2019 | 3:36 PM

Share

ಬೆಳಗಾವಿ: ಬೈ ಎಲೆಕ್ಷನ್ ಫಲಿತಾಂಶ ಹೊರಬೀಳುತ್ತಿದ್ದಂತೆ ತಾವೇಕೆ ಕಾಂಗ್ರೆಸ್​ ಬಿಡುವಂತಾಯಿತು, ಬಿಜೆಪಿಯನ್ನು ಸೇರಿದ್ದೇಕೆ ಎಂಬ ಸತ್ಯ ಸಂಗತಿಗಳನ್ನ ಸುದ್ದಿಗೋಷ್ಠಿಯಲ್ಲಿ ಬಹಿರಂಗಪಡಿಸುವುದಾಗಿ ಅಂದಿನ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ಹೇಳಿದ್ದರು. ಅದರಂತೆ ಇಂದು ವಿಜಯ ಸಾಹುಕಾರನಾಗಿ ಹೊರಹೊಮ್ಮುತ್ತಿದ್ದಂತೆ ರಮೇಶ್ ಜಾರಕಿಹೊಳಿ ಒಂದಷ್ಟು ಅರ್ಧ ಸತ್ಯಗಳನ್ನ ಹೇಳಿದ್ದಾರೆ. ಮುಖ್ಯವಾಗಿ ಸಿದ್ದರಾಮಯ್ಯ ಮತ್ತು ಸ್ಥಳೀಯ ಶತ್ರು ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಕೆಂಡಕಾರಿದ್ದಾರೆ.

ನನ್ನ ವಿರುದ್ಧ ಸಿದ್ದರಾಮಯ್ಯ ಹೇಳಿಕೆ ನೀಡಿದರೆ ಅವರ ಎಲ್ಲಾ ವಿಚಾರಗಳನ್ನು ನಾನೂ ಬಹಿರಂಗ ಪಡಿಸುವೆ ಎಂದು ಬೆಳಗಾವಿಯಲ್ಲಿ ಟಿವಿ9ಗೆ ರಮೇಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಹಿಂದಿನ ದಿನ ಸಿದ್ದರಾಮಯ್ಯ ಶಿಷ್ಯ ಜಮೀರ್ ಅಹ್ಮದ್ ನಮ್ಮ ಜತೆಗಿದ್ರು. ಅವರ ಬಗ್ಗೆ ಎಲ್ಲ ಹೇಳಿದ್ರೆ ರಾಜೀನಾಮೆ ಕೊಡಬೇಕಾಗುತ್ತೆ ಎಂದು ರಮೇಶ್ ಹೇಳಿದ್ದಾರೆ.

ಲಕ್ಷ್ಮೀ ಹೆಬ್ಬಾಳ್ಕರ್ ವಿಷ ಕನ್ಯೆ: ಇನ್ನು, ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿಷ ಕನ್ಯೆ. ಅಕೆ ಕಾಲಿಟ್ಟ ಮನೆ ಭಸ್ಮವಾಗುತ್ತದೆ. ಬಿಜೆಪಿಗೆ ಬರುತ್ತೇನೆಂದು 2 ಬಾರಿ ಲಕ್ಷ್ಮೀ ಹೆಬ್ಬಾಳ್ಕರ್ ಕರೆ ಮಾಡಿ ಕೇಳಿಕೊಂಡಿದ್ದರು. ಲಕ್ಷ್ಮೀ ಹೆಬ್ಬಾಳ್ಕರ್, ಮಹೇಶ್ ಕುಮಟಳ್ಳಿಗೆ ಕರೆ ಮಾಡಿದ್ದರು. ಆದ್ರೆ ಅವಳ ಸಹವಾಸ ಬೇಡವೆಂದು ನಾವು ಕೈಬಿಟ್ಟೆವು ಎಂದು ರಮೇಶ್ ಹೇಳಿದ್ದಾರೆ.

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮುಂದೆ ಮರಾಠ ಅಭ್ಯರ್ಥಿಯನ್ನ ಕಣಕ್ಕೆ ನಿಲ್ಲಿಸಿ ಲಕ್ಷ್ಮೀ ಹೆಬ್ಬಾಳ್ಕರ್​ನ್ನ ಸೋಲಿಸ್ತೇವೆ ಎಂದು ರಮೇಶ್ ಗುಟುರು ಹಾಕಿದ್ದಾರೆ.

Published On - 3:35 pm, Mon, 9 December 19

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!