ಮಂಗಳೂರು ಪಾಲಿಕೆ ಬಿಜೆಪಿ ಮಡಿಲಿಗೆ, ಖಾತೆ ತೆರೆಯದ ಜೆಡಿಎಸ್

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ಬಿಜೆಪಿ ಮಡಿಲಿಗೆ ಬಿದ್ದಿದೆ. ಒಟ್ಟು 60 ವಾರ್ಡ್​ಗಳ ಪೈಕಿ 44ರಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಇನ್ನು ಕಾಂಗ್ರೆಸ್ 14, 2 ವಾರ್ಡ್​ಗಳಲ್ಲಿ ಎಸ್​ಡಿಪಿಐಗೆ ಗೆಲುವು ಕಂಡಿದೆ. ಜೆಡಿಎಸ್ ಯಾವುದೇ ಸ್ಥಾನ ಗಳಿಸುವಲ್ಲಿ ವಿಫಲವಾಗಿದೆ. ಕೋಲಾರ ನಗರಸಭೆ ಫಲಿತಾಂಶ ಅತಂತ್ರ: ಕೋಲಾರ ನಗರಸಭೆ ಚುನಾವಣೆ ಫಲಿತಾಂಶ ಅತಂತ್ರವಾಗಿದೆ.35 ವಾರ್ಡ್‌ಗಳ ಪೈಕಿ 12 ವಾರ್ಡ್‌ಗಳಲ್ಲಿ ಕಾಂಗ್ರೆಸ್, 8 ವಾರ್ಡ್‌ಗಳಲ್ಲಿ ಜೆಡಿಎಸ್, 3 ವಾರ್ಡ್‌ಗಳಲ್ಲಿ ಬಿಜೆಪಿ ಮತ್ತು 12 ವಾರ್ಡ್‌ಗಳಲ್ಲಿ ಪಕ್ಷೇತರ ಅಭ್ಯರ್ಥಿಗಳ ಗೆಲುವು ಸಾಧಿಸಿದ್ದಾರೆ. […]

ಮಂಗಳೂರು ಪಾಲಿಕೆ ಬಿಜೆಪಿ ಮಡಿಲಿಗೆ, ಖಾತೆ ತೆರೆಯದ ಜೆಡಿಎಸ್
ಸಾಧು ಶ್ರೀನಾಥ್​

Updated on: Nov 14, 2019 | 7:18 PM

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ಬಿಜೆಪಿ ಮಡಿಲಿಗೆ ಬಿದ್ದಿದೆ. ಒಟ್ಟು 60 ವಾರ್ಡ್​ಗಳ ಪೈಕಿ 44ರಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಇನ್ನು ಕಾಂಗ್ರೆಸ್ 14, 2 ವಾರ್ಡ್​ಗಳಲ್ಲಿ ಎಸ್​ಡಿಪಿಐಗೆ ಗೆಲುವು ಕಂಡಿದೆ. ಜೆಡಿಎಸ್ ಯಾವುದೇ ಸ್ಥಾನ ಗಳಿಸುವಲ್ಲಿ ವಿಫಲವಾಗಿದೆ.

ಕೋಲಾರ ನಗರಸಭೆ ಫಲಿತಾಂಶ ಅತಂತ್ರ:
ಕೋಲಾರ ನಗರಸಭೆ ಚುನಾವಣೆ ಫಲಿತಾಂಶ ಅತಂತ್ರವಾಗಿದೆ.35 ವಾರ್ಡ್‌ಗಳ ಪೈಕಿ 12 ವಾರ್ಡ್‌ಗಳಲ್ಲಿ ಕಾಂಗ್ರೆಸ್, 8 ವಾರ್ಡ್‌ಗಳಲ್ಲಿ ಜೆಡಿಎಸ್, 3 ವಾರ್ಡ್‌ಗಳಲ್ಲಿ ಬಿಜೆಪಿ ಮತ್ತು 12 ವಾರ್ಡ್‌ಗಳಲ್ಲಿ ಪಕ್ಷೇತರ ಅಭ್ಯರ್ಥಿಗಳ ಗೆಲುವು ಸಾಧಿಸಿದ್ದಾರೆ.

ಇನ್ನು, ಮುಳಬಾಗಿಲು ನಗರಸಭೆ ಚುನಾವಣೆ ಫಲಿತಾಂಶವೂ ಅತಂತ್ರಗೊಂಡಿದೆ. 31 ವಾರ್ಡ್‌ಗಳ ಕೋಲಾರ ಜಿಲ್ಲೆ ಮುಳಬಾಗಿಲು ನಗರಸಭೆ 10 ವಾರ್ಡ್‌ಗಳಲ್ಲಿ ಜೆಡಿಎಸ್, 7 ವಾರ್ಡ್‌ಗಳಲ್ಲಿ ಕಾಂಗ್ರೆಸ್, 2 ವಾರ್ಡ್‌ಗಳಲ್ಲಿ ಬಿಜೆಪಿ, 12ರಲ್ಲಿ ಪಕ್ಷೇತರರು ಗೆಲುವು ಕಂಡಿದ್ದಾರೆ.

Published On - 12:21 pm, Thu, 14 November 19

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us