ನಾವೂ ಮೋದಿ ಮೋದಿ ಎನ್ನುತ್ತೇವೆ… ಬನ್ನಿ ನಮ್ಮ ಕಪಾಳಕ್ಕೆ ಹೊಡೆಯಿರಿ: ತಂಗಡಗಿಗೆ ಕಾರ್ಯಕರ್ತರ ಸವಾಲ್

“ಯುವಕರು ಮೋದಿ.. ಮೋದಿ.. ಎಂದರೆ ಕಪಾಳಕ್ಕೆ ಹೊಡಿಯಬೇಕು” ಎನ್ನುವ ಸಚಿವ ಶಿವರಾಜ ತಂಗಡಗಿ ಹೇಳಿಕೆ ವಿರುದ್ಧ ತಿರುಗಿಬಿದ್ದಿರುವ ಬಿಜೆಪಿ ಕಾರ್ಯಕರ್ತರು ಈ ಸಂಬಂಧ ಈಗ ಪೋಸ್ಟರ್‌ ಒಂದನ್ನು ಬಿಡುಗಡೆ ಮಾಡಿದ್ದಾರೆ. “ನಾವು ಸಹ ಮೋದಿ.. ಮೋದಿ.. ಎನ್ನುತ್ತೇವೆ. ನಮಗೆ ಹೊಡೆಯಿರಿ ಬನ್ನಿ” ಎನ್ನುವ ಬಿಜೆಪಿ ಕಾರ್ಯಕರ್ತರು ಸವಾಲು ಹಾಕಿದ್ದಾರೆ.

ನಾವೂ ಮೋದಿ ಮೋದಿ ಎನ್ನುತ್ತೇವೆ... ಬನ್ನಿ ನಮ್ಮ ಕಪಾಳಕ್ಕೆ ಹೊಡೆಯಿರಿ: ತಂಗಡಗಿಗೆ ಕಾರ್ಯಕರ್ತರ ಸವಾಲ್
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Mar 25, 2024 | 6:30 PM

ಬೆಂಗಳೂರು, (ಮಾರ್ಚ್ 25): ಲೋಕಸಭೆ ಚುನಾವಣೆ (Loksabha Elections 2024) ಸಮೀಪಿಸುತ್ತಿದ್ದಂತೆಯೇ ರಾಜಕೀಯ ಆರೋಪ ಪ್ರತ್ಯಾರೋಪಗಳು ತಾರಕಕ್ಕೇರುತ್ತಿವೆ. ಹಾಗೆಯೇ ರಾಜಕಾರಣಿಗಳ ವಿವಾದಾತ್ಮಕ ಹೇಳಿಕೆಗಳೂ ಸುದ್ದಿಯಾಗುತ್ತಿವೆ. ಇದೀಗ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಚಿವ ಶಿವರಾಜ ತಂಗಡಗಿ(shivaraj tangadagi) ಅವರು ಕಾರ್ಯಕ್ರಮವೊಂದರಲ್ಲಿ ಮಾತನಾಡುವಾಗ ‘ಮೋದಿ ಮೋದಿ’ (Nagendra Modi) ಎಂದು ಘೋಷಣೆ ಕೂಗುವ ಯುವಕರು, ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಬೇಕು ಎಂದಿದ್ದಾರೆ. ಈ ಹೇಳಿಕೆ ಇದೀಗ ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ. ಅಲ್ಲದೇ “ನಾವು ಮೋದಿ ಎನ್ನುತ್ತೇವೆ, ನಮಗೆ ಹೊಡೆಯಿರಿ ಬನ್ನಿ..” ಎಂದು ಬಿಜೆಪಿ ಸಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್ ಶೇರ್ ಮಾಡಿ ಸವಾಲು ಹಾಕಿದೆ.

“ಯುವಕರು ಮೋದಿ.. ಮೋದಿ.. ಎಂದರೆ ಕಪಾಳಕ್ಕೆ ಹೊಡಿಯಬೇಕು” ಎನ್ನುವ ಸಚಿವ ಶಿವರಾಜ ತಂಗಡಗಿ ಹೇಳಿಕೆ ವಿರುದ್ಧ ತಿರುಗಿಬಿದ್ದಿರುವ ಬಿಜೆಪಿ ಕಾರ್ಯಕರ್ತರು ಈ ಸಂಬಂಧ ಈಗ ಪೋಸ್ಟರ್‌ ಒಂದನ್ನು ಬಿಡುಗಡೆ ಮಾಡಿದ್ದಾರೆ. “ನಾವು ಸಹ ಮೋದಿ.. ಮೋದಿ.. ಎನ್ನುತ್ತೇವೆ. ನಮಗೆ ಹೊಡೆಯಿರಿ ಬನ್ನಿ” ಎನ್ನುವ ಬಿಜೆಪಿ ಪೋಸ್ಟರ್​ ಅನ್ನು ಕಾರ್ಯಕರ್ತರು ಸಹ ತಮ್ಮ ತಮ್ಮ ಸಾಮಾಜಿಕ ಜಾಲತಾಣಗಳ ಅಕೌಂಟ್​ ಮೂಲಕ ಶೇರ್ ಮಾಡಿ ಶಿವರಾಜ ತಂಗಡಗಿ ಆಹ್ವಾನಿಸುತ್ತಿದ್ದಾರೆ.

ಇದನ್ನೂ ಓದಿ: ಮೋದಿ ಮೋದಿ ಘೋಷಣೆ ಕೂಗುವ ಯುವಕರು, ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಬೇಕು: ಸಚಿವ ಶಿವರಾಜ ತಂಗಡಗಿ

ಈಗ ಬಿಜೆಪಿ ಕಾರ್ಯಕರ್ತರು ವಾಟ್ಸಪ್‌ ಸ್ಟೇಟಸ್‌ಗಳಲ್ಲಿ ಈ ಪೋಸ್ಟರ್‌ಗಳನ್ನು ಹಾಕಿಕೊಳ್ಳುತ್ತಿದ್ದು, ಅಭಿಯಾನ ಮಾದರಿಯಲ್ಲಿ ಮಾಡುತ್ತಿದ್ದಾರೆ. ಅಲ್ಲದೆ, ಕಾಂಗ್ರೆಸ್‌ ಸರ್ಕಾರ ಹಾಗೂ ಸಚಿವ ಶಿವರಾಜ್‌ ತಂಗಡಗಿ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.

ಶಿವರಾಜ ತಂಗಡಗಿ ಹೇಳಿದ್ದೇನು?

ಕಾರಟಗಿಯಲ್ಲಿ ಏರ್ಪಡಿಸಲಾಗಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಶಿವರಾಜ್‌ ತಂಗಡಗಿ, ಯುವಕರಿಗೆ ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇನೆ ಎಂದಿದ್ದರು. ಹಾಗೆ ನೋಡಿದರೆ 10 ವರ್ಷದಲ್ಲಿ 20 ಕೋಟಿ ಉದ್ಯೋಗ ನೀಡಬೇಕಿತ್ತು. ನೀಡಿದ್ದಾರಾ? ಇನ್ನೂ ಯುವಕರು, ವಿದ್ಯಾರ್ಥಿಗಳು ಮೋದಿ ಮೋದಿ ಎನ್ನುತ್ತಾರೆ. ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿದ್ದಾರೆ. ಇನ್ನೂ 5-10 ವರ್ಷ ಸುಳ್ಳು ಹೇಳುತ್ತಾರೆ. ಈ ಸುಳ್ಳು ಕೇಳಿಕೊಂಡು ಹೋಗಬೇಕಾ? ಎಂದು ಪ್ರಶ್ನೆ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ