ಬೆಂಗಳೂರು, (ಮಾರ್ಚ್ 25): ಲೋಕಸಭೆ ಚುನಾವಣೆ (Loksabha Elections 2024) ಸಮೀಪಿಸುತ್ತಿದ್ದಂತೆಯೇ ರಾಜಕೀಯ ಆರೋಪ ಪ್ರತ್ಯಾರೋಪಗಳು ತಾರಕಕ್ಕೇರುತ್ತಿವೆ. ಹಾಗೆಯೇ ರಾಜಕಾರಣಿಗಳ ವಿವಾದಾತ್ಮಕ ಹೇಳಿಕೆಗಳೂ ಸುದ್ದಿಯಾಗುತ್ತಿವೆ. ಇದೀಗ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಚಿವ ಶಿವರಾಜ ತಂಗಡಗಿ(shivaraj tangadagi)
ಅವರು ಕಾರ್ಯಕ್ರಮವೊಂದರಲ್ಲಿ ಮಾತನಾಡುವಾಗ ‘ಮೋದಿ ಮೋದಿ’ (Nagendra Modi) ಎಂದು ಘೋಷಣೆ ಕೂಗುವ ಯುವಕರು, ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಬೇಕು ಎಂದಿದ್ದಾರೆ. ಈ ಹೇಳಿಕೆ ಇದೀಗ ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ. ಅಲ್ಲದೇ “ನಾವು ಮೋದಿ ಎನ್ನುತ್ತೇವೆ, ನಮಗೆ ಹೊಡೆಯಿರಿ ಬನ್ನಿ..” ಎಂದು ಬಿಜೆಪಿ ಸಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್ ಶೇರ್ ಮಾಡಿ ಸವಾಲು ಹಾಕಿದೆ.
“ಯುವಕರು ಮೋದಿ.. ಮೋದಿ.. ಎಂದರೆ ಕಪಾಳಕ್ಕೆ ಹೊಡಿಯಬೇಕು” ಎನ್ನುವ ಸಚಿವ ಶಿವರಾಜ ತಂಗಡಗಿ ಹೇಳಿಕೆ ವಿರುದ್ಧ ತಿರುಗಿಬಿದ್ದಿರುವ ಬಿಜೆಪಿ ಕಾರ್ಯಕರ್ತರು ಈ ಸಂಬಂಧ ಈಗ ಪೋಸ್ಟರ್ ಒಂದನ್ನು ಬಿಡುಗಡೆ ಮಾಡಿದ್ದಾರೆ. “ನಾವು ಸಹ ಮೋದಿ.. ಮೋದಿ.. ಎನ್ನುತ್ತೇವೆ. ನಮಗೆ ಹೊಡೆಯಿರಿ ಬನ್ನಿ” ಎನ್ನುವ ಬಿಜೆಪಿ ಪೋಸ್ಟರ್ ಅನ್ನು ಕಾರ್ಯಕರ್ತರು ಸಹ ತಮ್ಮ ತಮ್ಮ ಸಾಮಾಜಿಕ ಜಾಲತಾಣಗಳ ಅಕೌಂಟ್ ಮೂಲಕ ಶೇರ್ ಮಾಡಿ ಶಿವರಾಜ ತಂಗಡಗಿ ಆಹ್ವಾನಿಸುತ್ತಿದ್ದಾರೆ.
ಇದನ್ನೂ ಓದಿ: ಮೋದಿ ಮೋದಿ ಘೋಷಣೆ ಕೂಗುವ ಯುವಕರು, ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಬೇಕು: ಸಚಿವ ಶಿವರಾಜ ತಂಗಡಗಿ
ಈಗ ಬಿಜೆಪಿ ಕಾರ್ಯಕರ್ತರು ವಾಟ್ಸಪ್ ಸ್ಟೇಟಸ್ಗಳಲ್ಲಿ ಈ ಪೋಸ್ಟರ್ಗಳನ್ನು ಹಾಕಿಕೊಳ್ಳುತ್ತಿದ್ದು, ಅಭಿಯಾನ ಮಾದರಿಯಲ್ಲಿ ಮಾಡುತ್ತಿದ್ದಾರೆ. ಅಲ್ಲದೆ, ಕಾಂಗ್ರೆಸ್ ಸರ್ಕಾರ ಹಾಗೂ ಸಚಿವ ಶಿವರಾಜ್ ತಂಗಡಗಿ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.
ಕಾರಟಗಿಯಲ್ಲಿ ಏರ್ಪಡಿಸಲಾಗಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಶಿವರಾಜ್ ತಂಗಡಗಿ, ಯುವಕರಿಗೆ ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇನೆ ಎಂದಿದ್ದರು. ಹಾಗೆ ನೋಡಿದರೆ 10 ವರ್ಷದಲ್ಲಿ 20 ಕೋಟಿ ಉದ್ಯೋಗ ನೀಡಬೇಕಿತ್ತು. ನೀಡಿದ್ದಾರಾ? ಇನ್ನೂ ಯುವಕರು, ವಿದ್ಯಾರ್ಥಿಗಳು ಮೋದಿ ಮೋದಿ ಎನ್ನುತ್ತಾರೆ. ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿದ್ದಾರೆ. ಇನ್ನೂ 5-10 ವರ್ಷ ಸುಳ್ಳು ಹೇಳುತ್ತಾರೆ. ಈ ಸುಳ್ಳು ಕೇಳಿಕೊಂಡು ಹೋಗಬೇಕಾ? ಎಂದು ಪ್ರಶ್ನೆ ಮಾಡಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ