ಆನೇಕಲ್, ಮೇ 16: ಬೆಂಗಳೂರು ಪದವೀಧರ ಕ್ಷೇತ್ರದ ಮತದಾರರಿಗೆ (voters) ಹಂಚಲು ತಂದಿದ್ದ ಗಿಫ್ಟ್ ಬಾಕ್ಸ್ಗಳು (gift boxes) ಪತ್ತೆ ಆಗಿವೆ. ಆನೇಕಲ್ ತಾಲ್ಲೂಕಿನ ತಿರುಮಗೊಂಡನಹಳ್ಳಿ ಡಿಟಿಡಿಸಿ ಗೋದಾಮಿನಲ್ಲಿ ಸಾವಿರಾರು ಗಿಫ್ಟ್ ಬಾಕ್ಸ್ಗಳು ಪತ್ತೆ ಆಗಿವೆ. ಗೋದಾಮಿನ ಮೇಲೆ ದಾಳಿ ನಡೆಸಿ ಬಿಜೆಪಿ ಕಾರ್ಯಕರ್ತರು ಪತ್ತೆ ಹಚ್ಚಿದ್ದಾರೆ. ಗಿಫ್ಟ್ ಬಾಕ್ಸ್ಗಳ ಮೇಲೆ ಆರ್ಜಿ ಪ್ರಿಂಟ್ ಎಂದು ಬರೆಯಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ರಾಮೋಜಿ ಗೌಡರವರಿಗೆ ಬಾಕ್ಸ್ಗಳು ಸೇರಿದೆ ಎನ್ನಲಾಗುತ್ತಿದೆ.
ಜಯನಗರದಲ್ಲಿ ರಾತ್ರಿ ಪತ್ತೆಯಾಗಿರುವ ಗಿಫ್ಟ್ ಸೇಟ್ಗಳು ಅದೇ ರೀತಿ ಸಾಮ್ಯತೆ ಹೊಂದಿದೆ ಎಂದು ಬಿಜೆಪಿ ಕಾರ್ಯಕರ್ತರು ಆರೋಪ ಮಾಡಿದ್ದಾರೆ. ಸದ್ಯ ಬಿಜೆಪಿ ಕಾರ್ಯಕರ್ತರಿಂದ ಚುನಾವಣಾ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಅತ್ತಿಬೆಲೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಇದನ್ನೂ ಓದಿ: ವಿಧಾನ ಪರಿಷತ್ ಚುನಾವಣೆ: ದಕ್ಷಿಣ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಕಾಂಗ್ರೆಸ್ನಿಂದ ಮರಿತಿಬ್ಬೇಗೌಡ ಕಣಕ್ಕೆ
ರಾಜ್ಯದಲ್ಲಿ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರ ಸೇರಿದಂತೆ ಒಟ್ಟು 6 ಕ್ಷೇತ್ರಗಳಿಗೆ ಜೂ.3ಕ್ಕೆ ಚುನಾವಣೆ ನಿಗದಿಯಾಗಿದೆ. ಇತ್ತೀಚೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿತ್ತು.
ಮೈಸೂರು: ನೈಋತ್ಯ ಪದವೀಧರ, ಶಿಕ್ಷಕರ ಕ್ಷೇತ್ರ ಚುನಾವಣೆ ಹಿನ್ನಲೆ ನೈಋತ್ಯ ಪದವೀಧರರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದು, ಈ ವೇಳೆ ಅಭ್ಯರ್ಥಿಗಳಿಗೆ ಸಚಿವ ಮಧು ಬಂಗಾರಪ್ಪ ಸಾಥ್ ನೀಡಿದ್ದಾರೆ.
ಇದನ್ನೂ ಓದಿ: ಪರಿಷತ್ ಚುನಾವಣೆಯಲ್ಲೂ ಬಿಜೆಪಿ- ಜೆಡಿಎಸ್ ಮೈತ್ರಿ ಮುಂದುವರಿಕೆ, ಯಾರಿಗೆ ಯಾವ ಕ್ಷೇತ್ರ? ಇಲ್ಲಿದೆ ವಿವರ
ಕಲಬುರಗಿ ಈಶಾನ್ಯ ಪದವಿಧರ ಮತ್ತು ಕ್ಷೇತ್ರದಿಂದ ಪರಿಷತ್ತಿಗೆ ನಡೆಯುವ ಚುನಾವಣೆ ಹಿನ್ನೆಲೆ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮ ಪತ್ರ ಸಲ್ಲಿಸಲು ನಿರ್ಧಾರ ಮಾಡಿದ್ದಾರೆ. ಬಿಜೆಪಿ ಮುಖಂಡ ಎನ್. ರವಿಕುಮಾರ ನಡೆಸಿದ ಸಂಧಾನ ಯತ್ನ ವಿಫಲವಾಗಿದೆ. ಆದರೆ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವುದರಿಂದ ಹಿಂದೆ ಸರಿಯಲಾರೆ. ಇಂದೇ ನಾಮಪತ್ರ ಸಲ್ಲಿಸುವೆ ಎಂದು ಹೇಳಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 1:27 pm, Thu, 16 May 24