ಮುಂದಿನ ವಾರ ಪ್ರತಿಪಕ್ಷ ನಾಯಕನ ಆಯ್ಕೆ: ಬಿಜೆಪಿ ನೂತನ ಅಧ್ಯಕ್ಷ ಬಿವೈ ವಿಜಯೇಂದ್ರ

| Updated By: Ganapathi Sharma

Updated on: Nov 10, 2023 | 8:48 PM

ರಾಜ್ಯಾಧ್ಯಕ್ಷ ಹುದ್ದೆಗೆ ಆಯ್ಕೆಯಾದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮಾಜಿ ಸಿಎಂ ಯಡಿಯೂರಪ್ಪ ಮಗ ಎನ್ನುವ ಕಾರಣಕ್ಕೆ ನನಗೆ ಹುದ್ದೆ ಕೊಟ್ಟಿಲ್ಲ. ಅವರ ಮಗ ಎನ್ನುವ ಹೆಮ್ಮೆ ಇದೆ. ಪಕ್ಷ ಬಿಡುವ ಯೋಚನೆಯಲ್ಲಿ ಇರುವವರನ್ನು ಒಟ್ಟಿಗೆ ತೆಗೆದುಕೊಂಡು ಹೋಗುತ್ತೇನೆ ಎಂದು ಹೇಳಿದರು.

ಮುಂದಿನ ವಾರ ಪ್ರತಿಪಕ್ಷ ನಾಯಕನ ಆಯ್ಕೆ: ಬಿಜೆಪಿ ನೂತನ ಅಧ್ಯಕ್ಷ ಬಿವೈ ವಿಜಯೇಂದ್ರ
ಬಿವೈ ವಿಜಯೇಂದ್ರ
Follow us on

ಬೆಂಗಳೂರು, ನವೆಂಬರ್ 10: ಮುಂದಿನ ಶುಕ್ರವಾರ ಬಿಜೆಪಿ (BJP) ಶಾಸಕಾಂಗ ಪಕ್ಷದ ಸಭೆ ಕರೆದು ಸಮಾಲೋಚನೆ ನಡೆಸಲಾಗುವುದು. ಎಲ್ಲ ಶಾಸಕರ ಜೊತೆ ಚರ್ಚೆ ನಡೆಸಿ ಪ್ರತಿಪಕ್ಷ ನಾಯಕನ ಆಯ್ಕೆ ಮಾಡಲಾಗುವುದು ಎಂದು ಪಕ್ಷದ ರಾಜ್ಯ ಘಟಕದ ನೂತನ ಅಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಶುಕ್ರವಾರ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಶಾಸಕಾಂಗ ಪಕ್ಷದ ಸಭೆಗೆ ಕೇಂದ್ರದ ವೀಕ್ಷಕರು ಕೂಡ ಆಗಮಿಸುತ್ತಿದ್ದಾರೆ. ಅವರ ಸಮ್ಮುಖದಲ್ಲೇ ಪ್ರತಿ ಪಕ್ಷದ ನಾಯಕನ ಆಯ್ಕೆ ನಡೆಯಲಿದೆ. ಮುಂದಿನ ಶುಕ್ರವಾರ ವಿಪಕ್ಷ ನಾಯಕನ ಆಯ್ಕೆಯಾಗಲಿದೆ ಎಂದು ತಿಳಿಸಿದರು.

ಇನ್ನು, ರಾಜ್ಯಾಧ್ಯಕ್ಷ ಹುದ್ದೆಗೆ ಆಯ್ಕೆಯಾದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮಾಜಿ ಸಿಎಂ ಯಡಿಯೂರಪ್ಪ ಮಗ ಎನ್ನುವ ಕಾರಣಕ್ಕೆ ನನಗೆ ಹುದ್ದೆ ಕೊಟ್ಟಿಲ್ಲ. ಅವರ ಮಗ ಎನ್ನುವ ಹೆಮ್ಮೆ ಇದೆ. ಪಕ್ಷ ಬಿಡುವ ಯೋಚನೆಯಲ್ಲಿ ಇರುವವರನ್ನು ಒಟ್ಟಿಗೆ ತೆಗೆದುಕೊಂಡು ಹೋಗುತ್ತೇನೆ ಎಂದು ಹೇಳಿದರು.

ಮಾಜಿ ಸಚಿವ ವಿ. ಸೋಮಣ್ಣ, ಆರ್ ಅಶೋಕ್, ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ‌ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತೇನೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಬಿವೈ ವಿಜಯೇಂದ್ರ ಕರ್ನಾಟಕ ಬಿಜೆಪಿ ಅಧ್ಯಕ್ಷ; ಯಡಿಯೂರಪ್ಪರಂತೆ ಮಗನ ಮುಂದೆಯೂ ಇದೆ ಸವಾಲುಗಳ ಸರಮಾಲೆ

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಹೊಸಬರ ನೇಮಕ ಹಾಗೂ ಪ್ರತಿಪಕ್ಷ ನಾಯಕನ ಆಯ್ಕೆಯಾಗದಿರುವುದು ರಾಜ್ಯ ನಾಯಕರಲ್ಲಿ ಬಹಳಷ್ಟು ಗೊಂದಲಕ್ಕೆ ಕಾರಣವಾಗಿತ್ತು. ಈ ವಿಚಾರವಾಗಿ ಅನೇಕ ನಾಯಕರು ಪಕ್ಷದ ಹೈಕಮಾಂಡ್ ವಿರುದ್ಧ ಪರೋಕ್ಷವಾಗಿ ಅಸಮಾಧಾನವನ್ನೂ ವ್ಯಕ್ತಪಡಿಸಿದ್ದರು. ಇದೀಗ ಅಂತಿಮವಾಗಿ ಬಿಜೆಪಿ ಹೈಕಮಾಂಡ್ ರಾಜ್ಯಾಧ್ಯಕ್ಷ ಪಟ್ಟಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಮಗ ಬಿವೈ ವಿಜಯೇಂದ್ರಗೆ ಮಣೆ ಹಾಕಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ