ಜಾತಿ ಗಣತಿ: ಸುಧಾ ಮೂರ್ತಿ ದಂಪತಿ ವಿರುದ್ಧ ಪರಿಷತ್ ಸದಸ್ಯ ಹರಿಪ್ರಸಾದ್ ಪರೋಕ್ಷ ಕಿಡಿ
ಜಾತಿ ಗಣತಿಯಲ್ಲಿ ಭಾಗಿಯಾಗದ ಉದ್ಯಮಿ ನಾರಾಯಣಮೂರ್ತಿ ಮತ್ತು ಸುಧಾಮೂರ್ತಿ ದಂಪತಿ ವಿರುದ್ಧ ಪರಿಷತ್ ಕಾಂಗ್ರೆಸ್ ಸದಸ್ಯ ಬಿ.ಕೆ.ಹರಿಪ್ರಸಾದ್ ಪರೋಕ್ಷವಾಗಿ ಆಕ್ರೋಶ ಹೊರ ಹಾಕಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಸ್ವಾರ್ಥ ಮನಸ್ಥಿತಿಯ ಮುಖವಾಡದ ಅನಾವರಣವಾಗಿದೆ ಎಂದು ಆರೋಪಿಸಿದ್ದಾರೆ.
ಬೆಂಗಳೂರು, ಅಕ್ಟೋಬರ್ 17: ರಾಜ್ಯ ಸರ್ಕಾರದಿಂದ ನಡೆಸಲಾಗುತ್ತಿರುವ ಸಾಮಾಜಿಕ, ಶೈಕ್ಷಣಿಕ & ಆರ್ಥಿಕ ಸಮೀಕ್ಷೆಯಲ್ಲಿ (Caste Census) ಭಾಗಿಯಾಗಲ್ಲ ಎಂದು ಹಿಂಬರಹ ನೀಡಿರುವ ಸುಧಾ ಮೂರ್ತಿ ದಂಪತಿ ವಿರುದ್ಧ ಪರಿಷತ್ ಕಾಂಗ್ರೆಸ್ ಸದಸ್ಯ ಬಿ.ಕೆ.ಹರಿಪ್ರಸಾದ್ ಪರೋಕ್ಷವಾಗಿ ಕಿಡಿ ಕಾರಿದ್ದಾರೆ. ಶ್ರೀಮಂತಿಕೆಯನ್ನು ಸರಳತೆಯಲ್ಲಿ ಬಚ್ಚಿಟ್ಟು, ಸಾಮಾಜಿಕ ಸಮೀಕ್ಷೆಯಿಂದ ಮಾಹಿತಿಯನ್ನು ಮುಚ್ಚಿಡುವ ಮೂಲಕ ಸ್ವಾರ್ಥ ಮನಸ್ಥಿತಿಯ ಮುಖವಾಡದ ಅನಾವರಣವಾಗಿದೆ. ದೀನ ದಲಿತರು, ಹಿಂದುಳಿದವರು ಹಾಗೂ ಬಡ ಜನರನ್ನು ಆರ್ಥಿಕವಾಗಿ ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಅಭಿವೃದ್ಧಿಪಡಿಸಿ ನ್ಯಾಯ ಕಲ್ಪಿಸಲು ಸರ್ಕಾರ ನಡೆಸುತ್ತಿರುವ ಸಮೀಕ್ಷೆಯಿಂದ ಮಾತ್ರ ಸಾಧ್ಯ. ತೋರಿಕೆಗೆ, ಪ್ರಚಾರದ ಮೋಹದಿಂದ ಕೂಡಿದ ಸಮಾಜಸೇವೆಯಿಂದ ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ ಎಂದು ಬಿ.ಕೆ.ಹರಿಪ್ರಸಾದ್ ಆರೋಪಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
