AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಸಿದ್ದರಾಮಯ್ಯ ಭೇಟಿಯಾದ ಬಿಕೆ ಹರಿಪ್ರಸಾದ್: ಕಾಂಗ್ರೆಸ್ ಪಾಳಯದಲ್ಲಿ ಅಚ್ಚರಿಯ ಬೆಳವಣಿಗೆ

ಹಲವಾರು ದಿನಗಳಿಂದ ಸಿಎಂ ಸಿದ್ದರಾಮಯ್ಯರನ್ನು ಟೀಕಿಸುತ್ತಲೇ ಬಂದಿದ್ದ ಕಾಂಗ್ರೆಸ್ ಎಂಎಲ್​ಸಿ ಬಿಕೆ ಹರಿಪ್ರಸಾದ್ ಇದೀಗ ದಿಢೀರನೆ ಸಿಎಂ ನಿವಾಸಕ್ಕೆ ಆಗಮನಿಸಿ ಸುಮಾರು ಒಂದು ತಾಸು ಸುದೀರ್ಘ ಸಮಾಲೋಚನೆ ನಡೆಸಿದ್ದಾರೆ. ಕಾಂಗ್ರೆಸ್​ ಪಾಳಯದಲ್ಲಿ ನಡೆದ ಈ ವಿದ್ಯಮಾನ ರಾಜ್ಯ ರಾಜಕೀಯದಲ್ಲಿ ಅಚ್ಚರಿಗೆ ಕಾರಣವಾಗಿದೆ.

ಸಿಎಂ ಸಿದ್ದರಾಮಯ್ಯ ಭೇಟಿಯಾದ ಬಿಕೆ ಹರಿಪ್ರಸಾದ್: ಕಾಂಗ್ರೆಸ್ ಪಾಳಯದಲ್ಲಿ ಅಚ್ಚರಿಯ ಬೆಳವಣಿಗೆ
ಬಿಕೆ ಹರಿಪ್ರಸಾದ್ & ಸಿದ್ದರಾಮಯ್ಯ
ಪ್ರಸನ್ನ ಗಾಂವ್ಕರ್​
| Updated By: Ganapathi Sharma|

Updated on:Aug 08, 2024 | 11:33 AM

Share

ಬೆಂಗಳೂರು, ಆಗಸ್ಟ್ 8: ಸದಾ ಸಿಎಂ ಸಿದ್ದರಾಮಯ್ಯರನ್ನು ಟೀಕಿಸುತ್ತಲೇ ಬಂದಿದ್ದ ಕಾಂಗ್ರೆಸ್ ಎಂಎಲ್​ಸಿ ಬಿಕೆ ಹರಿಪ್ರಸಾದ್ ದಿಢೀರಾಗಿ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಒಂದು ವರ್ಷದ ನಂತರ ಉಭಯ ನಾಯಕರು ಭೇಟಿಯಾಗಿ ಸಮಾಲೋಚನೆ ನಡೆಸಿರುವುದು ಕಾಂಗ್ರೆಸ್ ಪಾಳಯದಲ್ಲಿ ಅಚ್ಚರಿಗೆ ಕಾರಣವಾಗಿದೆ. ಎಐಸಿಸಿ ನಾಯಕರು ರಾಜ್ಯಕ್ಕೆ ಭೇಟಿ ನೀಡಿ ವಾಪಸ್ ತೆರಳಿರುವ ಬೆನ್ನಲ್ಲೇ ಸಿಎಂ ಸರ್ಕಾರಿ ನಿವಾಸ ಕಾವೇರಿಗೆ ತೆರಳಿದ ಹರಿಪ್ರಸಾದ್, ಕ್ಲೋಸ್ ಡೋರ್ ಮೀಟಿಂಗ್ ನಡೆಸಿದ್ದಾರೆ.

ಸುಮಾರು ಒಂದು ಗಂಟೆ ಕಾಲ ಉಭಯ ನಾಯಕರು ಸುದೀರ್ಘ ಚರ್ಚೆ ನಡೆಸಿದ್ದಾರೆ. ವರ್ಷದ ಬಳಿಕ ಉಭಯ ನಾಯಕರು ಮುಖಾಮುಖಿಯಾಗಿ ಸುದೀರ್ಘ ಮಾತುಕತೆ ನಡೆಸಿರುವುದು ತೀವ್ರ ಕುತೂಹಲ ಮೂಡಿಸಿದೆ.

ಕಳೆದ ವಾರವಷ್ಟೇ ಹರಿಪ್ರಸಾದ್ ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಜೊತೆಗೆ ಸುದೀರ್ಘ ಮಾತುಕತೆ ನಡೆಸಿದ್ದರು. ಪಕ್ಷ ಹಾಗೂ ಸರ್ಕಾರದ ಪ್ರಮುಖ ಬೆಳವಣಿಗೆಗೆ ಸಂಬಂಧಪಟ್ಟಂತೆ ದೆಹಲಿಯಲ್ಲಿ ಕೆಸಿ ವೇಣುಗೋಪಾಲ ಹಾಗೂ ಪ್ರಮುಖ ನಾಯಕರ ಭೇಟಿ ಮಾಡಿ ಮಾತುಕತೆ ನಡೆಸಿದ್ದರು.

ಮೈಸೂರಿನಲ್ಲಿ ಶುಕ್ರವಾರ ನಡೆಯಲಿರುವ ಜನಾಂದೋಲನ ಸಮಾವೇಶದ ವಿಚಾರವಾಗಿಯೂ ಇಬ್ಬರೂ ನಾಯಕರು ಮಾತುಕತೆ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಮುಡಾ ಹಗರಣ: ರಾಜ್ಯಪಾಲರ ಶೋಕಾಸ್ ನೋಟಿಸ್​ಗೆ ಉತ್ತರ ನೀಡಿದ ಸಿಎಂ ಸಿದ್ದರಾಮಯ್ಯ

ಅಹಿಂದ ವಿಚಾರವಾಗಿ ಹರಿಪ್ರಸಾದ್ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಬಂದಿದ್ದರು. ಲೋಕಸಭೆ ಚುನಾವಣೆ ಸಂದರ್ಭದಲ್ಲಿಯೂ ಸಿಎಂ ವಿರುದ್ಧ ಬಹಿರಂಗವಾಗಿ ವಾಗ್ದಾಳಿ ನಡೆಸಿದ್ದರು. ಸಿದ್ದರಾಮಯ್ಯ ಸಂಪುಟದಲ್ಲಿ ತಮಗೆ ಸಚಿವ ಸ್ಥಾನ ದೊರೆಯದೇ ಇರುವ ಬಗ್ಗೆಯೂ ಹರಿಪ್ರಸಾದ್ ಆಗಾಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಲೇ ಬಂದಿದ್ದರು.

ವಿಶೇಷ ಏನಿಲ್ಲ: ಸಿದ್ದರಾಮಯ್ಯ ಸ್ಪಷ್ಟನೆ

ಹರಿಪ್ರಸಾದ್ ಭೇಟಿ ಹಾಗೂ ಮಾತುಕತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಹರಿಪ್ರಸಾದ್​ ನಮ್ಮ ಪಕ್ಷದ ನಾಯಕ, ಅವರ ಭೇಟಿಯಲ್ಲಿ ವಿಶೇಷ ಏನೂ ಇಲ್ಲ. ಉಭಯ ಕುಶಲೊಪರಿ ಮಾತನಾಡಿದ್ದೇವೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:18 am, Thu, 8 August 24