Black Fungus: ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ಸಿಗುತಿಲ್ಲ ಔಷಧಿ, ಮಾತ್ರೆಗಳಿಗಾಗಿ ಜಿಲ್ಲಾಸ್ಪತ್ರೆಗೆ ಅಲೆದಾಟ

| Updated By: ಆಯೇಷಾ ಬಾನು

Updated on: Jul 20, 2021 | 2:40 PM

ದಾವಣಗೆರೆ ಜಿಲ್ಲಾಸ್ಪತ್ರೆಗೆ ಬಂದು ಮಾತ್ರೆಗಾಗಿ ಅಲೆದಾಡುತ್ತಿರುವ ಸೋಂಕಿತರು ಈ ಬಗ್ಗೆ ನೋವು ಹೇಳಿಕೊಂಡು ಕಣ್ಣೀರಿಟ್ಟಿದ್ದಾರೆ. ಬ್ಲ್ಯಾಕ್ ಫಂಗಸ್ ಬಂದು ಗುಣಮುಣರಾಗಿದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿದ್ದಾರೆ. ಆದ್ರೆ ಮಾತ್ರೆ ಮಾತ್ರ ನಿತ್ಯ ತೆಗೆದುಕೊಳ್ಳಲು ಹೇಳಿದ್ದರು. ಇದನ್ನ ಜಿಲ್ಲಾಸ್ಪತ್ರೆಯಲ್ಲಿ ಉಚಿತವಾಗಿ ನೀಡುತ್ತಿದ್ದರು. ಕಳೆದ ಇಪ್ಪತ್ತು ದಿನಗಳಿಂದ ಮಾತ್ರೆಗಳು ನೀಡುತ್ತಿಲ್ಲ.

Black Fungus: ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ಸಿಗುತಿಲ್ಲ ಔಷಧಿ, ಮಾತ್ರೆಗಳಿಗಾಗಿ ಜಿಲ್ಲಾಸ್ಪತ್ರೆಗೆ ಅಲೆದಾಟ
ಸಾಂಕೇತಿಕ ಚಿತ್ರ
Follow us on

ದಾವಣಗೆರೆ: ಇಷ್ಟು ದಿನ ಕಳೆದ್ರೂ ಬ್ಲ್ಯಾಕ್ ಫಂಗಸ್​ನಿಂದ(Black Fungu) ಪರದಾಡುತ್ತಿರುವಂತಹ ಸೋಂಕಿತರ ಸಮಸ್ಯೆ ಬರೆಹರಿದಿಲ್ಲ. ಇನ್ನೂ ಕೂಡ ಸೋಂಕಿತರಿಗೆ ಮಾತ್ರೆಗಳು ಸಿಗುತ್ತಿಲ್ಲ. ಕಳೆದ 20 ದಿನಗಳಿಂದ ಮಾತ್ರೆ ಇಲ್ಲದೆ ಸೋಂಕಿತರು ಪರದಾಡುತ್ತಿದ್ದಾರೆ.

ದಾವಣಗೆರೆ ಜಿಲ್ಲಾಸ್ಪತ್ರೆಗೆ ಬಂದು ಮಾತ್ರೆಗಾಗಿ ಅಲೆದಾಡುತ್ತಿರುವ ಸೋಂಕಿತರು ಈ ಬಗ್ಗೆ ನೋವು ಹೇಳಿಕೊಂಡು ಕಣ್ಣೀರಿಟ್ಟಿದ್ದಾರೆ. ಬ್ಲ್ಯಾಕ್ ಫಂಗಸ್ ಬಂದು ಗುಣಮುಣರಾಗಿದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿದ್ದಾರೆ. ಆದ್ರೆ ಮಾತ್ರೆ ಮಾತ್ರ ನಿತ್ಯ ತೆಗೆದುಕೊಳ್ಳಲು ಹೇಳಿದ್ದರು. ಇದನ್ನ ಜಿಲ್ಲಾಸ್ಪತ್ರೆಯಲ್ಲಿ ಉಚಿತವಾಗಿ ನೀಡುತ್ತಿದ್ದರು. ಕಳೆದ ಇಪ್ಪತ್ತು ದಿನಗಳಿಂದ ಮಾತ್ರೆಗಳು ನೀಡುತ್ತಿಲ್ಲ. ಒಂದು ಮಾತ್ರೆ ಬೆಲೆ ಆರು ನೂರು ರೂಪಾಯಿ. ದಿನಕ್ಕೆ ಮೂರು ಮಾತ್ರೆ ತೆಗೆದುಕೊಳ್ಳಬೇಕು. ದಿನಕ್ಕೆ 1800 ರೂಪಾಯಿ ಖರ್ಚು ಮಾಡುವ ಶಕ್ತಿಯಿಲ್ಲ. ಜಿಲ್ಲಾ ಆಸ್ಪತ್ರೆಯಲ್ಲಿ ಕೇಳಿದ್ರೆ ಇನ್ನೂ ಬಂದಿಲ್ಲ ಎನ್ನುತ್ತಿದ್ದಾರೆ ಎಂದು ಬ್ಲ್ಯಾಕ್ ಫಂಗಸ್ ಸೋಂಕಿತೆ ಆರೋಪಿಸಿದ್ದು ನೋವು ಹೇಳಿ ಕೊಂಡಿದ್ದಾರೆ.

ಯಾರಿಗೆ ಬ್ಲ್ಯಾಕ್ ಫಂಗಸ್ ಹೆಚ್ಚು ಅಪಾಯಕಾರಿ
1. ಅನಿಯಂತ್ರಿತ ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವವರು
2. ಅತಿ ಹೆಚ್ಚು ಸ್ಟೀರಾಯ್ಟ್​ ಬಳಕೆಯಲ್ಲಿರುವವರು
3. ರೋಗನಿರೋಧಕ ಶಕ್ತಿ ಶಮನ ಮಾಡುವ ಔಷಧ ಸೇವಿಸುತ್ತಿರುವವರು
4. ಕ್ಯಾನ್ಸರ್​ಗೆ ಚಿಕಿತ್ಸೆ ಪಡೆಯುತ್ತಿರುವವರು
5. ದೀರ್ಘಕಾಲದ ಅನಾರೋಗ್ಯ ಸಮಸ್ಯೆಯುಳ್ಳವರು
6. ಅತಿಯಾದ ಶೀತ, ಥಂಡಿ ಸಮಸ್ಯೆಯಿಂದ ಬಳಲುತ್ತಿರುವವರು ಹಾಗೂ ಉಸಿರಾಟದ ಸಮಸ್ಯೆಯಿದ್ದು ಮಡಿಕಲ್ ಆಕ್ಸಿಜನ್​ ಸಹಾಯ ಪಡೆಯುವವರು
ಇವರೆಲ್ಲರೂ ಬ್ಲ್ಯಾಕ್ ಫಂಗಸ್ ಸಮಸ್ಯೆಗೆ ತುತ್ತಾಗುವ ಸಾಧ್ಯತೆ ಹೆಚ್ಚಿದ್ದು, ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಾಗುತ್ತದೆ.

ಬ್ಲ್ಯಾಕ್​ ಫಂಗಸ್​ ಸೋಂಕು ತಗುಲಿದೆ ಎಂದು ಗುರುತಿಸುವುದು ಹೇಗೆ?
1. ಮೂಗಿನಿಂದ ಅಸಹಜ ಕಪ್ಪು ವಿಸರ್ಜನೆ, ರಕ್ತ ಬರುವುದು
2. ಮೂಗಿನಲ್ಲಿ ಕಿರಿಕಿರಿ, ತಲೆನೋವು, ಕಣ್ಣಿನ ನೋವು, ಕಣ್ಣಿನ ಸುತ್ತ ಊತ, ಎರಡೆರಡು ದೃಷ್ಟಿ, ಕಣ್ಣು ಕೆಂಪಾಗುವುದು, ಕಾಣದಿರುವುದು, ಅಸ್ಪಷ್ಟತೆ, ಕಣ್ಣು ತೆರೆಯುವುದಕ್ಕೆ ಹಾಗೂ ಮುಚ್ಚುದಕ್ಕೆ ಕಷ್ಟವಾಗುವುದು
3. ಮುಖ ಮರಗಟ್ಟುವಿಕೆ ಅಥವಾ ಜುಮ್ಮೆನಿಸುವ ಅನುಭವ
4. ಆಹಾರ ಸೇವಿಸುವ ವೇಳೆ ನೋವು, ಬಾಯಿ ತೆರೆಯಲು ಕಷ್ಟವಾಗುವುದು
5. ಮುಖದಲ್ಲಿ ಊತ, ಕಪ್ಪುಗಟ್ಟುವಿಕೆ, ಗಟ್ಟಿಯಾಗುವಿಕೆ, ನೋವು ಕಾಣಿಸಿಕೊಳ್ಳುವುದು
6. ಹಲ್ಲು ಉದರುವುದು, ಬಾಯಿ ಒಳಗೂ ಕಪ್ಪು ಬಣ್ಣ ಹಾಗೂ ಊತ ಕಾಣಿಸಿಕೊಳ್ಳುವುದು
ಇವು ಬ್ಲ್ಯಾಕ್ ಫಂಗಸ್​ ಸೋಂಕಿನ ಕೆಲ ಪ್ರಮುಖ ಲಕ್ಷಣಗಳು

ಸೋಂಕು ಕಾಣಿಸಿಕೊಂಡಾಗ ಏನು ಮಾಡಬೇಕು?
1. ಬ್ಲ್ಯಾಕ್ ಫಂಗಸ್ ಪತ್ತೆಯಾದಾಗ ENT ವೈದ್ಯರು, ಕಣ್ಣಿನ ವೈದ್ಯರು ಅಥವಾ ಸೂಕ್ತ ತಜ್ಞರ ಬಳಿ ತೆರಳಿ ಪರೀಕ್ಷೆ ಮಾಡಿಸಿಕೊಂಡು ಚಿಕಿತ್ಸೆ ಪಡೆಯಬೇಕು
2. ರಕ್ತದಲ್ಲಿನ ಮಧುಮೇಹ ಮಟ್ಟವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ನಿಯಮಿತವಾಗಿ ಪರೀಕ್ಷೆ ಮಾಡಿಸಿಕೊಳ್ಳಬೇಕು ಮತ್ತು ಸೂಕ್ತ ಕ್ರಮ ಅನುಸರಿಸಬೇಕು
3. ಇತರ ಆರೋಗ್ಯ ಸಮಸ್ಯೆಗಳಿದ್ದರೆ ಅದಕ್ಕೆ ಸೂಕ್ತ ಚಿಕಿತ್ಸೆ ಪಡೆಯುವುದನ್ನು ತಪ್ಪಿಸಬಾರದು
4. ವೈದ್ಯರನ್ನು ಕೇಳದೆ ಯಾವ ಕಾರಣಕ್ಕೂ ಸ್ಟಿರಾಯ್ಡ್ ಹಾಗೂ ಆ್ಯಂಟಿ ವೈರಲ್ ಡ್ರಗ್ ಪಡೆಯಬಾರದು
5. ವೈದ್ಯರ ಸಲಹೆ ಮೇರೆಗೆ MRI, ಸಿಟಿ ಸ್ಕ್ಯಾನ್ ಮಾಡಿಸಬೇಕು

ಇದನ್ನೂ ಓದಿ: Kidney Dialysis: ಕಿಡ್ನಿ ಡಯಾಲಿಸಿಸ್​ಗೆ ಬರುವ ಜನರ ಪ್ರಮಾಣದಲ್ಲಿ ಹೆಚ್ಚಳ; ಬ್ಲ್ಯಾಕ್ ಫಂಗಸ್ ರೋಗಿಗಳಲ್ಲಿ ಹೆಚ್ಚಿನ ಸಮಸ್ಯೆ