ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ; ಬ್ಲ್ಯಾಕ್ ಫಂಗಸ್ ಸೋಂಕಿಗೆ ಎಲ್ಲಾ ಜಿಲ್ಲೆಯಲ್ಲಿ ಸಿಗುತ್ತೆ ಚಿಕಿತ್ಸೆ

ಬ್ಲ್ಯಾಕ್ ಫಂಗಸ್ ರೋಗಿಗಳಿಗೆ ಬೆಡ್ ಸಮಸ್ಯೆ ಆಗುತ್ತಿದ್ದ ಹಿನ್ನೆಲೆಯಲ್ಲಿ, ಎಲ್ಲಾ ಜಿಲ್ಲಾಸ್ಪತ್ರೆಗಳು, ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ನೀಡಲು ರಾಜ್ಯ ಸರ್ಕಾರ ಸೂಚನೆ ನೀಡಿದೆ.

ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ; ಬ್ಲ್ಯಾಕ್ ಫಂಗಸ್ ಸೋಂಕಿಗೆ ಎಲ್ಲಾ ಜಿಲ್ಲೆಯಲ್ಲಿ ಸಿಗುತ್ತೆ ಚಿಕಿತ್ಸೆ
ಪ್ರಾತಿನಿಧಿಕ ಚಿತ್ರ
Follow us
|

Updated on:May 24, 2021 | 8:08 AM

ಬೆಂಗಳೂರು: ಕೊರೊನಾ ಎರಡನೇ ಅಲೆಯ ಸೋಂಕು ತೀವ್ರವಾಗಿದ್ದು, ಸಾವು – ನೋವಿನ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ ಪರಿಸ್ಥಿತಿಯನ್ನು ಸುಧಾರಿಸಲು ಕೊವಿಡ್ ಕೇರ್ ಸೆಂಟರ್, ಆಕ್ಸಿಜನ್, ವೆಂಟಿಲೇಟರ್ ಬೆಡ್ ಹೀಗೆ ಎಲ್ಲಾ ವ್ಯವಸ್ಥೆಯನ್ನು ಮಾಡಲು ಮುಂದಾಗಿದೆ. ಆದರೂ ಕೊರೊನಾ ಸೋಂಕಿನ ತೀವ್ರತೆ ಇನ್ನು ಕಡಿಮೆಯಾಗಿಲ್ಲ. ಹೀಗಿರುವಾಗಲೇ ಕೊವಿಡ್​ನಿಂದ ಗುಣಮುಖರಾದವರಲ್ಲಿ ಇತ್ತಿಚೇಗೆ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡಿದೆ. ಇದು ಕೂಡ ಜನ ಜೀವನಕ್ಕೆ ಮಾರಕವಾಗಿದ್ದು, ಇದನ್ನು ಹತೋಟಿಗೆ ತರಲು ವೈದ್ಯರು ಪ್ರಯತ್ನಪಡುತ್ತಿದ್ದಾರೆ.

ಬ್ಲ್ಯಾಕ್ ಫಂಗಸ್ ಈಗ ರಾಜ್ಯದ ಹಲವೆಡೆ ಕಾಣಿಸಿಕೊಂಡಿದ್ದು, ಸೋಂಕಿತರು ಸಾವನ್ನಪ್ಪುತ್ತಿದ್ದಾರೆ. ಹೀಗಾಗಿ ಪರಿಸ್ಥಿತಿಯನ್ನು ಸುಧಾರಿಸಲು ಸರ್ಕಾರ ಮಹತ್ವದ ಆದೇಶ ಘೋಷಿಸಿದೆ. ಬ್ಲ್ಯಾಕ್ ಫಂಗಸ್ ರೋಗಿಗಳಿಗೆ ಬೆಡ್ ಸಮಸ್ಯೆ ಆಗುತ್ತಿದ್ದ ಹಿನ್ನೆಲೆಯಲ್ಲಿ, ಎಲ್ಲಾ ಜಿಲ್ಲಾಸ್ಪತ್ರೆಗಳು, ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ನೀಡಲು ಸೂಚನೆ ನೀಡಲಾಗಿದೆ. ಸೂಕ್ತ ಸೌಲಭ್ಯ ಇರುವ ತಾಲೂಕು ಮಟ್ಟದ ಆಸ್ಪತ್ರೆಯಲ್ಲೂ ಚಿಕಿತ್ಸೆ ನೀಡಲು ಆದೇಶ ನೀಡಲಾಗಿದೆ. ಬೆಂಗಳೂರಿನ ವಿಕ್ಟೋರಿಯಾ ಮತ್ತು ಬೌರಿಂಗ್​ ಆಸ್ಪತ್ರೆ ಸೇರಿದಂತೆ, ಇಷ್ಟು ದಿನ ರಾಜ್ಯದ ಆರು ಕಡೆ ಮಾತ್ರ ಚಿಕಿತ್ಸೆಗೆ ಅನುಮತಿ ನೀಡಲಾಗುತ್ತಿತ್ತು. ಆದರೆ ಈಗ ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಯಲ್ಲೂ ಬ್ಲ್ಯಾಕ್​ ಫಂಗಸ್ ಚಿಕಿತ್ಸೆಗೆ ಅವಕಾಶ ಮಾಡಲಾಗಿದೆ.

ವಿಜಯಪುರ ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್ ಪ್ರಕರಣ ಹೆಚ್ಚಳ: ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್ ಸೋಂಕಿತರ ಸಂಖ್ಯೆ 81ಕ್ಕೆ ಏರಿಕೆಯಾಗಿದ್ದು, ಈವರೆಗೆ 11 ಬ್ಲ್ಯಾಕ್ ಫಂಗಸ್ ಸೋಂಕಿತರು ಗುಣಮುಖರಾಗಿದ್ದಾರೆ. ಇನ್ನು ವಿಜಯಪುರ ಜಿಲ್ಲೆಯಲ್ಲಿ ಒಬ್ಬರು ಬ್ಲ್ಯಾಕ್ ಫಂಗಸ್‌ಗೆ ಬಲಿಯಾಗಿದ್ದಾರೆ. 69 ಬ್ಲ್ಯಾಕ್ ಫಂಗಸ್ ಪ್ರಕರಣಗಳು ಜಿಲ್ಲೆಯಲ್ಲಿ ಸಕ್ರಿಯವಾಗಿವೆ. ದಿನದಿಂದ ದಿನಕ್ಕೆ ಬ್ಲಾಕ್ ಫಂಗಸ್ ಕೇಸ್ ಹೆಚ್ಚಾಗುತ್ತಿದ್ದು, ಮೂರೇ ದಿನದಲ್ಲಿ ಹೊಸದಾಗಿ 31 ಕೇಸ್ ಪತ್ತೆಯಾಗಿದೆ. ಮೂರು ದಿನಗಳ ಹಿಂದೆ ಒಟ್ಟು 50 ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.

ಇದನ್ನೂ ಓದಿ;

ನಿಮಗೆ ಬ್ಲ್ಯಾಕ್ ಫಂಗಸ್ ಇದೆಯೋ, ಇಲ್ಲವೋ ಗುರುತಿಸುವುದು ಹೇಗೆ? ಏನು ಕ್ರಮ ತೆಗೆದುಕೊಳ್ಳಬೇಕು? ಚಿಕಿತ್ಸಾ ವಿಧಾನವೇನು?

ಭಾರತದಲ್ಲಿ ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಬಳಸುವ ಅಂಪೋಟೆರಿಸಿನ್ ಬಿ ಡ್ರಗ್ಸ್ ಕೊರತೆ ನಿವಾರಣೆ ಎಂದು?

Published On - 7:58 am, Mon, 24 May 21