AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಸ್ಫೋಟ: ಭಾರಿ ರಾಜಕೀಯ ಸಂಚಲನ

ಹುಬ್ಬಳ್ಳಿ: ನಗರದ ರೈಲ್ವೆ ನಿಲ್ದಾಣದಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು 22 ವರ್ಷದ ಹುಸೇನ್ ಸಾಬ್ ನಾಯಕವಾಲೆ ಎಂಬುವರ ಕೈ ಕಟ್​ ಆಗಿರುವ ಘಟನೆ ನಡೆದಿದೆ. ಬಿರಿಯಾನಿ ಮಾರುತ್ತಿದ್ದವನ ಕೈ ಕಟ್: ವಿಜಯವಾಡ-ಹುಬ್ಬಳ್ಳಿ ಮಾರ್ಗದ ಅಮರಾವತಿ ಎಕ್ಸ್‌ಪ್ರೆಸ್​ ರೈಲಿನಲ್ಲಿ ಸುಮಾರು 10 ಬಾಕ್ಸ್​ಗಳು ಪಾರ್ಸೆಲ್​ ಬಂದಿದ್ದವು. ​ಹುಬ್ಬಳ್ಳಿ ಕೊನೆಯ ನಿಲ್ದಾಣವಾದ ಕಾರಣ ರೈಲು ಕ್ಲೀನಿಂಗ್ ಮಾಡುವ ವೇಳೆ ಹತ್ತು ಬಾಕ್ಸ್​ಗಳು ಪತ್ತೆಯಾಗಿವೆ. ಅನುಮಾನ ಬಂದು ಆರ್​ಪಿಎಫ್​  ಸಿಬ್ಬಂದಿ ಬಾಕ್ಸ್ ಓಪನ್ ಮಾಡುವಂತೆ ರೈಲ್ವೆ ನಿಲ್ದಾಣದಲ್ಲಿ ಕ್ಯಾಂಟೀನ್ ಗುತ್ತಿಗೆ ಪಡೆದಿದ್ದ […]

ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಸ್ಫೋಟ: ಭಾರಿ ರಾಜಕೀಯ ಸಂಚಲನ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Oct 21, 2019 | 4:03 PM

Share

ಹುಬ್ಬಳ್ಳಿ: ನಗರದ ರೈಲ್ವೆ ನಿಲ್ದಾಣದಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು 22 ವರ್ಷದ ಹುಸೇನ್ ಸಾಬ್ ನಾಯಕವಾಲೆ ಎಂಬುವರ ಕೈ ಕಟ್​ ಆಗಿರುವ ಘಟನೆ ನಡೆದಿದೆ.

ಬಿರಿಯಾನಿ ಮಾರುತ್ತಿದ್ದವನ ಕೈ ಕಟ್: ವಿಜಯವಾಡ-ಹುಬ್ಬಳ್ಳಿ ಮಾರ್ಗದ ಅಮರಾವತಿ ಎಕ್ಸ್‌ಪ್ರೆಸ್​ ರೈಲಿನಲ್ಲಿ ಸುಮಾರು 10 ಬಾಕ್ಸ್​ಗಳು ಪಾರ್ಸೆಲ್​ ಬಂದಿದ್ದವು. ​ಹುಬ್ಬಳ್ಳಿ ಕೊನೆಯ ನಿಲ್ದಾಣವಾದ ಕಾರಣ ರೈಲು ಕ್ಲೀನಿಂಗ್ ಮಾಡುವ ವೇಳೆ ಹತ್ತು ಬಾಕ್ಸ್​ಗಳು ಪತ್ತೆಯಾಗಿವೆ. ಅನುಮಾನ ಬಂದು ಆರ್​ಪಿಎಫ್​  ಸಿಬ್ಬಂದಿ ಬಾಕ್ಸ್ ಓಪನ್ ಮಾಡುವಂತೆ ರೈಲ್ವೆ ನಿಲ್ದಾಣದಲ್ಲಿ ಕ್ಯಾಂಟೀನ್ ಗುತ್ತಿಗೆ ಪಡೆದಿದ್ದ ಹುಸೇನ್​ಗೆ ಸೂಚಿಸಿದ್ದಾರೆ. ರೈಲು ನಿಲ್ದಾಣದಲ್ಲಿ ಬಿರಿಯಾನಿ ಮಾರುತ್ತಿದ್ದ ಹುಸೇನ್​ ಸಾಬ್ ಬಾಕ್ಸ್ ಓಪನ್ ಮಾಡುತ್ತಿದ್ದಂತೆ ಸ್ಫೋಟಗೊಂಡು, ಆತನ ಕೈ ಕಟ್​ ಆಗಿದೆ. ತಕ್ಷಣ ಗಾಯಾಳುವಿಗೆ ರೈಲ್ವೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಕಿಮ್ಸ್​ಗೆ ದಾಖಲಿಸಿದ್ದಾರೆ.

ಬಾಕ್ಸ್​ ಮೇಲೆ ಬರಹ ಪತ್ತೆ: ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಲ್ಲಿ ಸ್ಫೋಟಗೊಂಡ ಬಾಕ್ಸ್​ ಮೇಲೆ ಬರಹ ಪತ್ತೆಯಾಗಿದೆ. ನೋ ಬಿಜೆಪಿ ನೋ ಕಾಂಗ್ರೆಸ್ ಓನ್ಲಿ ಶಿವಸೇನೆ, ಕೊಲ್ಹಾಪುರ ಎಂಎಲ್​ಎ ಗರಗಟ್ಟಿ ಎಂಬ ಬರಹ ಪತ್ತೆಯಾಗಿದ್ದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಅಲ್ಲದೆ, ಖಾನಾಪುರ ಶಾಸಕರ ಹೆಸರಿಗೆ ಬಾಕ್ಸ್​ಗಳು ಬಂದಿವೆ ಎಂದು ರೈಲ್ವೇ ನಿಲ್ದಾಣದ ಸಿಬ್ಬಿಂದ ಮಾಹಿತಿ ನೀಡಿದ್ದಾರೆ.

ಸ್ಫೋಟದ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಅಕ್ರಮವಾಗಿ ಬಾಂಗ್ಲಾ ನುಸುಳುಕೋರರು ನುಗ್ಗಿದ್ದಾರೆಂದು ಹೇಳಿದ್ದೇವೆ. ಆದ್ರೆ ಹಿಂದಿನ ಗೃಹ ಸಚಿವರು ಇದನ್ನು ಗಂಭೀರವಾಗಿ ಪರಿಗಣಿಸಲಿಲ್ಲ ಎಂದು ಕೊಪ್ಪಳದಲ್ಲಿ ಸಚಿವ ಜಗದೀಶ್ ಶೆಟ್ಟರ್ ಗಂಭೀರ ಆರೋಪ ಮಾಡಿದ್ದಾರೆ.

ಬಾಕ್ಸ್​ ಸ್ಫೋಟಗೊಳ್ಳುತ್ತಿದ್ದಂತೆ ರೈಲ್ವೆ ನಿಲ್ದಾಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಹುಬ್ಬಳ್ಳಿ- ಧಾರವಾಡ ನಗರ ಪೊಲೀಸ್ ಆಯುಕ್ತ ಆರ್.ದಿಲೀಪ್ ನೇತೃತ್ವದಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಪೊಲೀಸರ ತನಿಖೆಗೆ ರೈಲ್ವೇ ಇಲಾಖೆ ಅಧಿಕಾರಿಗಳೂ ಸಾಥ್ ನೀಡಿದ್ದಾರೆ.

ಸ್ಫೋಟವಾಗಿರುವುದು ಐಇಡಿ ಅಲ್ಲ, ಫೀಲ್ಡ್ ಬಾಂಬ್! ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಲ್ಲಿ ಸ್ಫೋಟಗೊಂಡಿರುವುದು ಫೀಲ್ಡ್ ಬಾಂಬ್ ಅಥವಾ ಬೆಳ್ಳುಳ್ಳಿ ಪಟಾಕಿ ಎಂಬುದು ಪ್ರಾಥಮಿಕ ತನಿಖೆಯಿಂದ ದೃಢವಾಗಿದೆ. ಸಾಮಾನ್ಯವಾಗಿ ಇವುಗಳನ್ನು ತೋಟಕ್ಕೆ ಬರುವ ಪ್ರಾಣಿಗಳನ್ನು ಓಡಿಸಲು ಬಳಸುವ ಸ್ಫೋಟಕವಾಗಿದೆ. ಇವುಗಳನ್ನು ಏಕಕಾಲಕ್ಕೆ ಸ್ಫೋಟಗೊಂಡ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ. ಆದ್ರೆ, ಸ್ಥಳದಲ್ಲಿ ಐಇಡಿಗೆ ಬಳಸುವ ಉಪಕರಣಗಳು ಲಭ್ಯವಾಗಿಲ್ಲ. ಐಇಡಿ ಆಗಿದ್ರೆ ಅದಕ್ಕೆ ಬಳಸುವ ಉಪಕರಣಗಳು ಸಿಗಬೇಕಿತ್ತು. ಹೀಗಾಗಿ ಇದು ಫೀಲ್ಡ್ ಬಾಂಬ್ ಎನ್ನುವುದು ದೃಢವಾಗಿದೆ ಎಂದು ಗುಪ್ತಚರ ಇಲಾಖೆಯ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

Published On - 3:43 pm, Mon, 21 October 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?