ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸ್ಪೋಟ; 6 ಮಂದಿಗೆ ಗಾಯ

ನಿಲ್ದಾಣದ ಎರಡನೇ ಟರ್ಮಿನಲ್​ ನಿರ್ಮಾಣ ಕಾಮಗಾರಿ ಕೆಲಸ ಕೆಲ ದಿನಗಳಿಂದ ನಡೆಯುತ್ತಿದೆ. ಹಾಗಾಗಿ ಕೆಳ ಸೇತುವೆಯಲ್ಲಿ ರಾಸಾಯನಿಕ ಡಬ್ಬಿಗಳನ್ನು, ಸಲಕರಣೆಗಳನ್ನು ಇಡಲಾಗಿತ್ತು. ನಿನ್ನೆ (ಭಾನುವಾರ) ರಾಸಾಯನಿಕ ಡಬ್ಬಿಗಳ ಸ್ಟೋಟಗೊಂಡ ಪರಿಣಾಮ ಘಟನೆ ಸಂಭವಿಸಿದೆ.

ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸ್ಪೋಟ; 6 ಮಂದಿಗೆ ಗಾಯ
ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸ್ಪೋಟ
Follow us
TV9 Web
| Updated By: shruti hegde

Updated on:Jun 07, 2021 | 11:48 AM

ಬೆಂಗಳೂರು: ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸ್ಟೋಟ ಸಂಭವಿಸಿದೆ. ಘಟನೆಯಲ್ಲಿ 6 ಜನ ಕೆಲಸಗಾರರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಿಲ್ದಾಣದ ಎರಡನೇ ಟರ್ಮಿನಲ್​ ನಿರ್ಮಾಣ ಕಾಮಗಾರಿ ಕೆಲಸ ಕೆಲ ದಿನಗಳಿಂದ ನಡೆಯುತ್ತಿದೆ. ಹಾಗಾಗಿ ಕೆಳ ಸೇತುವೆಯಲ್ಲಿ ರಾಸಾಯನಿಕ ಡಬ್ಬಿಗಳನ್ನು, ಸಲಕರಣೆಗಳನ್ನು ಇಡಲಾಗಿತ್ತು. ನಿನ್ನೆ (ಭಾನುವಾರ) ರಾಸಾಯನಿಕ ಡಬ್ಬಿಗಳ ಸ್ಟೋಟಗೊಂಡ ಪರಿಣಾಮ ಘಟನೆ ಸಂಭವಿಸಿದೆ. ಕೆಲಸ ಮಾಡುತ್ತಿದ್ದ 6 ಮಂದಿ ಕಾರ್ಮಿಕರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. 

ಗಾಯಾಳುಗಳು ಅವಿನಾಶ್​, ಸಿರಾಜ್​, ಪ್ರಶಾಂತ್​, ಗೌತಮ್​, ಅಜಯ್​ಕುಮಾರ್​ ಮತ್ತು ನಾಗೇಶ್​ರಾವ್​ ಎಂದು ತಿಳಿದು ಬಂದಿದೆ. ಸ್ಪೋಟವಾದ ಸಂದರ್ಭದಲ್ಲಿ ಕಾರ್ಮಿಕರ ಕೂಗು ಕೇಳಿ ಭದ್ರತಾ ಸಿಬ್ಬಂದಿ ಸ್ಥಳಕ್ಕೆ ಬಂದು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿ ಹೊತ್ತಿಉರಿಯುತ್ತಿದ್ದ ಬೆಂಕಿಯನ್ನು ಆರಿಸಿದ್ದಾರೆ. ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆ ದಾಖಲು ಮಾಡಲಾಗಿದೆ. ಸಿರಾಜ್​ ಮತ್ತು ಅವಿನಾಶ್​ಗೆ ಶೇ.40ರಷ್ಟು ಸುಟ್ಟಗಾಯಗಳಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದಾರೆ.

ಬೆಂಗಳೂರಿನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ‌ನಿಲ್ಥಾಣಕ್ಕೆ ಆಗಮಿಸುವ ವಾಹನಗಳು ಕಿರಿದಾದ ರಸ್ತೆಯಲ್ಲಿಯೇ ಸಂಚರಿಸುತ್ತಿದ್ದ ಕಾರಣ ಏರ್ಪೋಟ್ ಆವರಣದಲ್ಲಿ 5 ಪಥಗಳ ರಸ್ತೆ ಅಗಲೀಕರಣ ಕಾಮಗಾರಿ ಭರದಿಂದ ನಡೆಯುತ್ತಿದೆ. ಈ ವೇಳೆ ರಸ್ತೆಗೆ ಬಿಳಿ ಪಟ್ಟಿಗಳನ್ನು ಹಚ್ಚಲು ಕಾರ್ಮಿಕರು ನಿನ್ನೆ ಕೆಲಸಕ್ಕೆ ಬಂದಿದ್ದರು. ಬಳಿಯ ಬೇಕಾದ ಬಣ್ಣವನ್ನು ರಾಸಾಯನಿಕಗಳ ಜತೆಗೆ ಮಿಶ್ರಣ ಮಾಡಿ ಸಿಲೆಂಡ್​ ಬಳಸಿ ಕಾಯಿಸುತ್ತಿದ್ದರು, ಈ ವೇಳೆ ಗ್ಯಾಸ್​ ಸೋರಿಕೆಯಾಗಿ ಸಿಲಿಂಡರ್​ ಸ್ಟೋಟಗೊಂಡಿದೆ.

ಇದನ್ನೂ ಓದಿ:

ಬಿಳಿಕಲ್ಲು ಕ್ವಾರಿಯಲ್ಲಿ ಸ್ಪೋಟ: ಕಾರ್ಮಿಕ ದುರ್ಮರಣ

ದಾವಣಗೆರೆ ಕಾಶೀಪುರ ಬಳಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 8 ಜಿಲೆಟಿನ್ ಕಡ್ಡಿ, ಎಲೆಕ್ಟ್ರಾನಿಕ್ ಡಿಟೋನೇಟರ್ ವಶ

Published On - 11:37 am, Mon, 7 June 21

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ