Bed Blocking Case: ಬೆಡ್ ಬ್ಲಾಕಿಂಗ್ ಪ್ರಕರಣ: ತೇಜಸ್ವಿ ಸೂರ್ಯ ಹಾಗೂ ಸತೀಶ್ ರೆಡ್ಡಿ ಬಂಧಿಸುವಂತೆ ಕಮಲ್ ಪಂತ್​ಗೆ ದೂರು

ಬೆಡ್ ಬ್ಲಾಕ್ ದಂಧೆಯಲ್ಲಿ ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಆಪ್ತನಾಗಿರುವ ಬಾಬು ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ, ಪೊಲೀಸರು ಕೂಡಲೇ ತೇಜಸ್ವಿ ಸೂರ್ಯ ಹಾಗೂ ಸತೀಶ್ ರೆಡ್ಡಿ ಬಂಧಿಸಬೇಕು ಎಂದು ಆಗ್ರಹ ಕೇಳಿಬಂದಿದೆ.

Bed Blocking Case: ಬೆಡ್ ಬ್ಲಾಕಿಂಗ್ ಪ್ರಕರಣ: ತೇಜಸ್ವಿ ಸೂರ್ಯ ಹಾಗೂ ಸತೀಶ್ ರೆಡ್ಡಿ ಬಂಧಿಸುವಂತೆ ಕಮಲ್ ಪಂತ್​ಗೆ ದೂರು
ಸಂಸದ ತೇಜಸ್ವಿ ಸೂರ್ಯ
Follow us
TV9 Web
| Updated By: ganapathi bhat

Updated on:Aug 21, 2021 | 9:47 AM

ಬೆಂಗಳೂರು: ನಗರದಲ್ಲಿ ಕೊವಿಡ್ ಬೆಡ್ ಬ್ಲಾಕ್ ದಂಧೆ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಹಾಗೂ ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಬಂಧನಕ್ಕೆ ಒತ್ತಾಯಿಸಿ ಬ್ಲಾಕ್​ ಕಾಂಗ್ರೆಸ್ ಸಮಿತಿಯಿಂದ ಪೊಲೀಸ್ ಕಮಿಷನರ್​ಗೆ ದೂರು ನೀಡಲಾಗಿದೆ. ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್​ಗೆ ದೂರು ಸಲ್ಲಿಸಲಾಗಿದೆ.

ಬೆಡ್ ಬ್ಲಾಕ್ ದಂಧೆಯಲ್ಲಿ ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಆಪ್ತನಾಗಿರುವ ಬಾಬು ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ, ಪೊಲೀಸರು ಕೂಡಲೇ ತೇಜಸ್ವಿ ಸೂರ್ಯ ಹಾಗೂ ಸತೀಶ್ ರೆಡ್ಡಿ ಬಂಧಿಸಬೇಕು ಎಂದು ಆಗ್ರಹ ಕೇಳಿಬಂದಿದೆ. ಈ ಬಗ್ಗೆ, ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್​ಗೆ ದೂರು ಸಲ್ಲಿಸಲಾಗಿದೆ.

ರಾಜ್ಯದಲ್ಲಿ ಬಾರಿ ಸಂಚಲನ ಮೂಡಿಸಿದ ಆಸ್ಪತ್ರೆಗಳಲ್ಲಿ ಬೆಡ್ ಬ್ಲಾಕಿಂಗ್ ಹಗರಣದ ಆರೋಪ ತಮಗೇ ತಿರುಗುಬಾಣವಾಗುತ್ತಿರುವ ಕುರಿತು ಶಾಸಕ ಸತೀಶ್ ರೆಡ್ಡಿ ಸ್ಪಷ್ಟನೆ ನೀಡಿದ್ದರು. ಕೊವಿಡ್ ವಿರುದ್ಧದ ಹೋರಾಟದಲ್ಲಿ ಏಜೆನ್ಸಿಗಳನ್ನು ನೇಮಿಸಿದ್ದ ಓರ್ವ ಐಎಎಸ್ ಅಧಿಕಾರಿ ನನ್ನ ಬಗ್ಗೆ ಸುದ್ದಿ ಹಬ್ಬಿಸುತ್ತಿದ್ದಾರೆ. ಈಗ ಬೆಡ್ ಬ್ಲಾಕಿಂಗ್ ಹಗರಣದಲ್ಲಿ ತನ್ನ ಹೆಸರು ಬಯಲಾಗುತ್ತದೆ ಎಂದು ನನ್ನ ಹೆಸರನ್ನು ಈ ಪ್ರಕರಣದಲ್ಲಿ ತರುವ ಕುತಂತ್ರ ಮಾಡುತ್ತಿದ್ದಾರೆ. ತಾವು ಸಿಕ್ಕಿಬೀಳಬಾರದು ಎಂದು ನನ್ನ ಹೆಸರು ಹೇಳಿದ್ದಾರೆ. ಈ ಮೂಲಕ ಪ್ರಕರಣದ ದಾರಿ ತಪ್ಪಿಸಲು ಪ್ರಯತ್ನಿಸಿದ್ದಾರೆ ಎಂದು ಶಾಸಕ ಸತೀಶ್ ರೆಡ್ಡಿ ಆಪಾದಿಸಿದ್ದರು.

ಸಂಸದ ತೇಜಸ್ವಿ ಸೂರ್ಯ ಬಿಬಿಎಂಪಿ ದಕ್ಷಿಣ ವಯಲದ ವಾರ್ ರೂಂ ನಲ್ಲಿ ನಡೆಯುತ್ತಿದ್ದ ಬೆಡ್ ಬ್ಲಾಕಿಂಗ್ ದಂಧೆಯನ್ನು ಬಯಲಿಗೆಳೆದಿದ್ದರು. ಈಗ ಇದೇ ಪ್ರಕರಣಕ್ಕೆ ಸಂಬಂಧಿಸಿ ಕೆ.ಎಸ್.ಲೇಔಟ್ ಠಾಣಾ ವ್ಯಾಪ್ತಿಯ ಪ್ರಕರಣದ ಪ್ರಮುಖ ಆರೋಪಿ ಮಂಜುನಾಥ್ನನ್ನು ಪೊಲೀಸರು ಬಂಧಿಸಿದ್ದರು.

ಮೇ 12 ರಂದು ಕೆ.ಎಸ್‌.ಲೇಔಟ್ ಠಾಣಾ ವ್ಯಾಪ್ತಿಯ ಇಸ್ರೋ ಲೇಔಟ್ನಲ್ಲಿ ನಡೆದಿದ್ದ ಬೆಡ್ ಬ್ಲಾಂಕಿಂಗ್ ಕೇಸ್ನಲ್ಲಿ ಹಣ ಪಡೆಯಲು ಸಂಚು ರೂಪಿಸಿದ್ದ ಪ್ರಮುಖ ಆರೋಪಿ ಮಂಜುನಾಥ್ ಅರೆಸ್ಟ್ ಆಗಿದ್ದಾನೆ. ಬಿಬಿಎಂಪಿ ಬೆಡ್ ಕೊಡಿಸುವುದಾಗಿ ಹೇಳಿ ಹಣ ಪಡೆಯಲು ಸೋಂಕಿತನ ಮನೆಗೆ ಬಂದಿದ್ದ ನವೀನ್ನನ್ನು ಬಂಧಿಸಿದ್ದು ನವೀನ್ ಸಹಾಯದಿಂದ ಮಂಜುನಾಥ್ ಕೂಡ ಅರೆಸ್ಟ್ ಆಗಿದ್ದ.

ಇದನ್ನೂ ಓದಿ: ಬೆಡ್ ಬ್ಲಾಕಿಂಗ್ ಹಗರಣ: ಬೆಂಗಳೂರಿನ ಎಲ್ಲಾ ವಲಯದ ಕೊವಿಡ್ ವಾರ್ ರೂಮ್ ಮೇಲೆ ಸಿಸಿಬಿ ಅಧಿಕಾರಿಗಳ ದಾಳಿ

ಕೋವಿಡ್ ಬೆಡ್ ಬ್ಲಾಕಿಂಗ್ ದಂಧೆ; ಬಿ.ಯು. ನಂಬರ್ ನಿಮಗೆ ನೀಡಿದ್ದರೆ ಸಿಸಿಬಿಯಿಂದ ನಿಮಗೂ ಕರೆ ಬರಲಿದೆ

Published On - 8:14 pm, Wed, 26 May 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್