AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Blood Moon Eclipse: ದೇವರ ದರ್ಶನಕ್ಕೂ ‘ಗ್ರಹಣ’! ನಾಳೆ ರಾಜ್ಯದ ಪ್ರಮುಖ ದೇಗುಲಗಳು ಬಂದ್

ನಭೋ ಮಂಡಲದಲ್ಲಿ ನಾಳೆ ರಕ್ತಚಂದ್ರಗ್ರಹಣ ಜರುಗಲಿದೆ. ಗ್ರಹಣವನ್ನ ಒಬ್ಬೊಬ್ಬರು ಒಂದೊಂದು ದೃಷ್ಟಿಕೋನದಿಂದ ನೋಡಲಿದ್ದು, ನಭೋಮಂಡಲದಲ್ಲಿ ನಾಳಿನ ಚಮತ್ಕಾರ ನೋಡಲು ಎಲ್ಲರೂ ಕಾತರರಾಗಿದ್ದಾರೆ. ಇನ್ನು ಈ ವೇಳೆ ರಾಜ್ಯದ ಹಲವು ದೇಗುಲಗಳು ಬಂದ್ ಆಗಲಿದ್ದು, ಪೂಜೆ, ದರ್ಶನದ ಸಮಯದಲ್ಲೂ ಬದಲಾವಣೆ ಆಗಲಿದೆ. ಈ ಕುರಿತ ಮಾಹಿತಿ ಇಲ್ಲಿದೆ.

Blood Moon Eclipse: ದೇವರ ದರ್ಶನಕ್ಕೂ ‘ಗ್ರಹಣ’! ನಾಳೆ ರಾಜ್ಯದ ಪ್ರಮುಖ ದೇಗುಲಗಳು ಬಂದ್
ರಕ್ತಚಂದ್ರಗ್ರಹಣ
ಗಂಗಾಧರ​ ಬ. ಸಾಬೋಜಿ
|

Updated on: Sep 06, 2025 | 9:47 PM

Share

ಬೆಂಗಳೂರು, ಸೆಪ್ಟೆಂಬರ್​ 06: ನಾಳೆ (ಸೆ.07) ಆಗಸದಲ್ಲಿ ರಕ್ತಚಂದ್ರಗ್ರಹಣ (Blood Moon Eclipse) ಗೋಚರ ಆಗಲಿದೆ. ಸುಮಾರು ಐದು ಗಂಟೆಗಳ ಕಾಲ ಶಶಿಯ ಅಂದಕ್ಕೆ ಭೂಮಿ ಭಂಗ ತರಲಿದೆ. ನಾಳಿನ ರಕ್ತ ಚಂದಿರನ ದರ್ಶನದ ಭಾರತದಲ್ಲೂ ಸಿಗಲಿದೆ. ಈ ಚಂದ್ರಗ್ರಹಣ ಹಿನ್ನೆಲೆಯಲ್ಲಿ ನಾಳೆ ಹಲವು ದೇಗುಲಗಳು (Temples) ಬಂದ್ ಆಗಲಿದ್ದು, ಪೂಜೆ, ದರ್ಶನದ ಸಮಯದಲ್ಲೂ ಬದಲಾವಣೆ ಆಗಲಿದೆ.

ನಭೋ ಮಂಡಲದಲ್ಲಿ ಜರುಗುವ ಚಂದ್ರಗ್ರಹಣ ವಿದ್ಯಮಾನವನ್ನ, ಖಗೋಳ ತಜ್ಞರು ಅಧ್ಯಯನ ದೃಷ್ಟಿಯಿಂದ ನೋಡಲು ಕಾಯುತ್ತಿದ್ದಾರೆ. ಬೆಂಗಳೂರಿನ ನೆಹರು ಪ್ಲಾನಿಟೋರಿಯಂನಲ್ಲೂ ಚಂದ್ರಗ್ರಹಣ ವೀಕ್ಷಣೆಗೆ ಅವಕಾಶ ಸಿಗಲಿದೆ. ಆದರೆ, ಧಾರ್ಮಿಕ ನಂಬಿಕೆ ಹೊಂದಿರೋದು ಚಂದ್ರಗ್ರಹಣವನ್ನ ಬೇರೆ ದೃಷ್ಟಿಕೋನದಿಂದಲೇ ನೋಡುತ್ತಾರೆ. ಹೀಗಾಗಿ ನಾಳೆಯ ಚಂದ್ರಗ್ರಹಣ ದೇಗುಲಗಳಿಗೆ ತಟ್ಟಲಿದೆ.

ದೇವರ ದರ್ಶನಕ್ಕೂ ‘ಗ್ರಹಣ’!

ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನ ರಾತ್ರಿ 9 ಗಂಟೆಗೆ ಬಂದ್ ಆಗಲಿದೆ. ಗ್ರಹಣ ಆರಂಭ, ಅಂತ್ಯ ಕಾಲದಲ್ಲಿ ವಿಶೇಷ ಪೂಜೆ ನಡೆಯಲಿದ್ದು, ಈ ವೇಳೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಇನ್ನು, ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನ ರಾತ್ರಿ 8 ಗಂಟೆಗೆ ಬಂದ್ ಆಗುತ್ತೆ. ಹಾಗೇ, ಕೊಪ್ಪಳದ ಹುಲಿಗೆಮ್ಮ, ಅಂಜನಾದ್ರಿಯಲ್ಲಿ ಸಂಜೆ 5ರ ಬಳಿಕ ದರ್ಶನ ಇರುವುದಿಲ್ಲ.

ಇದನ್ನೂ ಓದಿ: ರಾಹುಗ್ರಸ್ತ ರಕ್ತ ಚಂದ್ರಗ್ರಹಣ ವಿಶೇಷತೆ ಏನು? ಬರಿಗಣ್ಣಿನಿಂದಲೇ ವೀಕ್ಷಿಸಬಹುದೇ?

ಹೊರನಾಡು ಅನ್ನಪೂರ್ಣೇಶ್ವರಿ ಗುಡಿಯಲ್ಲಿ ಮಧ್ಯಾಹ್ನ 3ಕ್ಕೆ ಅನ್ನದಾನ ಸ್ಥಗಿತ ಆಗಲಿದೆ. ಉಡುಪಿ ಕೃಷ್ಣ ಮಠದಲ್ಲಿ ಬೆಳಗ್ಗೆ 10.30ರಿಂದ 12 ಗಂಟೆ ಒಳಗೆಯೇ ಪ್ರಸಾದ ವ್ಯವಸ್ಥೆ ಮುಕ್ತಾಯ ಮಾಡಲಾಗುತ್ತೆ. ಇನ್ನು, ಚಿಕ್ಕಬಳ್ಳಾಪುರದ ಪ್ರಮುಖ ದೇಗುಲಗಳು ನಾಳೆ ಸಂಜೆ 4 ಗಂಟೆಗೆ ಬಂದ್ ಆಗಲಿವೆ.

ಕೋಲಾರ ಜಿಲ್ಲೆಯಲ್ಲಿ ಮಧ್ಯಾಹ್ನದ ಬಳಿಕ ದೇಗುಲಗಳ ಬಾಗಿಲಿಗೆ ಬೀಗ ಬೀಳಲಿದೆ. ಹಾಸನದ ಬೇಲೂರಿನ ಚನ್ನಕೇಶವ ದೇಗುಲ ಮಧ್ಯಾಹ್ನದ 3.30ಕ್ಕೆ ಕ್ಲೋಸ್ ಆಗುತ್ತೆ. ಹಾಗೇ, ಮಡಿಕೇರಿ ಓಂಕಾರೇಶ್ವರ ದೇಗುಲ, ತಲಕಾವೇರಿ ಸನ್ನಿಧಿ ಸಂಜೆ 5ಕ್ಕೆ ಬಂದ್ ಆಗಲಿದೆ.

ಮಲೆ ಮಹದೇಶ್ವರನಿಗೆ ತಟ್ಟಲ್ಲ ಗ್ರಹಣ: ನಾಳೆ ಎಂದಿನಂತೆಯೇ ದರ್ಶನ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಮದಪ್ಪಗೆ ಗ್ರಹಣ ತಟ್ಟಲ್ಲ, ಹೀಗಾಗಿ ನಾಳೆ ಎಂದಿನಂತೆಯೇ ದರ್ಶನ ಇರಲಿದೆ. ಗ್ರಹಣದ ಸಂದರ್ಭದಲ್ಲಿ ಸಾಮಾನ್ಯವಾಗಿ ಇತರೆ ದೇವಾಲಯಗಳು ಮುಚ್ಚಲ್ಪಡುತ್ತವೆ. ಆದರೆ ಗ್ರಹಣದ ವೇಳೆ ಮಾದೇಶ್ವರನಿಗೆ ತ್ರಿಕಾಲ ಪೂಜೆ, ಭಕ್ತರಿಗೆ ದರ್ಶನ ಇರುತ್ತೆ. ಆ ಮೂಲಕ ಮಾದಪ್ಪನ ಬೆಟ್ಟದಲ್ಲಿ ವಿಶಿಷ್ಟ ಪರಂಪರೆ ಇದೆ.

ದೇವರ ದರ್ಶನದಲ್ಲಿ ಬದಲಾವಣೆ

ನಾಳೆ ಚಂದ್ರಗ್ರಹಣ ಹಿನ್ನೆಲೆ ಕುಮಟಾ ತಾಲೂಕಿನ ಗೋಕರ್ಣದಲ್ಲಿ ಆತ್ಮಲಿಂಗದ ದರ್ಶನದಲ್ಲಿ ಬದಲಾವಣೆ ಮಾಡಲಾಗಿದೆ. ಗ್ರಹಣ ಕಾಲದ ರಾತ್ರಿ 9.45 ರಿಂದ ಮಧ್ಯರಾತ್ರಿ 1.26ರವರೆಗೆ ಆತ್ಮಲಿಂಗದ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಗೋಕರ್ಣದಲ್ಲಿ ರಾತ್ರಿ ಪ್ರಸಾದದ ವ್ಯವಸ್ಥೆ ಇರುವುದಿಲ್ಲ. ಬೆಳಗ್ಗೆ 10:45ರ ವರೆಗೆ ಮಾತ್ರ ಆತ್ಮಲಿಂಗದ ಸ್ಪರ್ಶ ದರ್ಶನಕ್ಕೆ ವ್ಯವಸ್ಥೆ ಇದೆ. ಇನ್ನು ಐತಿಹಾಸಿಕ ಬಾದಾಮಿ ಬನಶಂಕರಿ ದೇಗುಲ ಕೂಡ ಬಂದ್​ ಇಲ್ಲ. ಚಂದ್ರ ಗ್ರಹಣದ ವೇಳೆ ದೇವಿಗೆ ನಿರಂತರ ಜಲಾಭಿಷೇಕ ನಡೆಯಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ