Namma Metro ಮೆಟ್ರೋ ಪ್ರಯಾಣಿಕರ ಗಮನಕ್ಕೆ.. ಮೆಟ್ರೋ ರೈಲಿನಲ್ಲಿ ಶೀಘ್ರವೇ ಟೋಕನ್ ವ್ಯವಸ್ಥೆ ಶುರು

| Updated By: ಆಯೇಷಾ ಬಾನು

Updated on: Jun 30, 2021 | 11:51 AM

ಸ್ಮಾರ್ಟ್ ಕಾರ್ಡ್ ಕಡ್ಡಾಯದಿಂದ ಆದಾಯಕ್ಕೆ ಭಾರಿ ಹೊಡೆತ ಬಿದ್ದಿದೆ. ಹೀಗಾಗಿ ಕೊವಿಡ್ ಆತಂಕದಿಂದ ಸ್ಥಗಿತಗೊಂಡಿದ್ದ ಟೋಕನ್ ವ್ಯವಸ್ಥೆಯನ್ನು ಮತ್ತೆ ಆರಂಭಿಸಲು BMRCL ವ್ಯವಸ್ಥೆ ಮಾಡಿಕೊಳ್ಳುತ್ತಿದೆ.

Namma Metro ಮೆಟ್ರೋ ಪ್ರಯಾಣಿಕರ ಗಮನಕ್ಕೆ.. ಮೆಟ್ರೋ ರೈಲಿನಲ್ಲಿ ಶೀಘ್ರವೇ ಟೋಕನ್ ವ್ಯವಸ್ಥೆ ಶುರು
ನಮ್ಮ ಮೆಟ್ರೋ (ಸಾಂಕೇತಿಕ ಚಿತ್ರ)
Follow us on

ಬೆಂಗಳೂರು: ಕೊರೊನಾ 2ನೇ ಅಲೆ ನಿಯಂತ್ರಣಕ್ಕೆ ಕರ್ನಾಟಕದಲ್ಲಿ ಹೇರಲಾಗಿದ್ದ ಲಾಕ್ಡೌನ್ ಹಂತಹಂತವಾಗಿ ಸಡಿಲಿಕೆ ಮಾಡಲಾಗುತ್ತಿದೆ. ಸದ್ಯ ಸುಮಾರು 2 ತಿಂಗಳ ನಂತರ ಮೆಟ್ರೋ ಸಂಚಾರಕ್ಕೆ ಸರ್ಕಾರ ಅನುಮತಿ ನೀಡಿತ್ತು. ಆದ್ರೆ ಟೋಕನ್ ವ್ಯವಸ್ಥೆ ಸ್ಥಗಿತಗೊಳಿಸಲಾಗಿತ್ತು. ಹೋಗಾಗಿ ಕಾರ್ಡ್ ಇಲ್ಲದವರು ಮೆಟ್ರೋದಲ್ಲಿ ಸಂಚರಿಸುವುದು ಕಷ್ಟವಾಗುತ್ತಿತ್ತು. ಸದ್ಯ ಈಗ ಮತ್ತೆ ಮೆಟ್ರೋ ರೈಲಿನಲ್ಲಿ ಟೋಕನ್ ವ್ಯವಸ್ಥೆ ಆರಂಭಿಸಲು ಚಿಂತನೆ ನಡೆಯುತ್ತಿದೆ.

ಸ್ಮಾರ್ಟ್ ಕಾರ್ಡ್ ಕಡ್ಡಾಯದಿಂದ ಆದಾಯಕ್ಕೆ ಭಾರಿ ಹೊಡೆತ ಬಿದ್ದಿದೆ. ಹೀಗಾಗಿ ಕೊವಿಡ್ ಆತಂಕದಿಂದ ಸ್ಥಗಿತಗೊಂಡಿದ್ದ ಟೋಕನ್ ವ್ಯವಸ್ಥೆಯನ್ನು ಮತ್ತೆ ಆರಂಭಿಸಲು BMRCL ವ್ಯವಸ್ಥೆ ಮಾಡಿಕೊಳ್ಳುತ್ತಿದೆ. ಕೊವಿಡ್ ಪೂರ್ವದಲ್ಲಿ ನಿತ್ಯ 5 ಲಕ್ಷ ಜನರು ಪ್ರಯಾಣ ಮಾಡುತ್ತಿದ್ದರು. ಆದ್ರೆ 2021ರ ಮಾರ್ಚ್, ಏಪ್ರಿಲ್ನಲ್ಲಿ ಸರಾಸರಿ 1.5 ಲಕ್ಷ ಜನ ಮಾತ್ರ ಪ್ರಯಾಣಿಸಿದ್ದಾರೆ. ನಿನ್ನೆ ಕೇವಲ 59 ಸಾವಿರ ಜನರಷ್ಟೇ ಮೆಟ್ರೋದಲ್ಲಿ ಪ್ರಯಾಣ ಬೆಳೆಸಿದ್ದಾರೆ. ಪ್ರಯಾಣಿಕರ ಸಂಖ್ಯೆ ಕುಸಿತಕ್ಕೆ ‘ಸ್ಮಾರ್ಟ್ ಕಾರ್ಡ್’ ಕಾರಣವಾಗುತ್ತಿದೆ ಹೀಗಾಗಿ ಸದ್ಯದಲ್ಲೇ ಟೋಕನ್ ವ್ಯವಸ್ಥೆ ಮಾಡಲು ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ.

ಕೊವಿಡ್ ಪೂರ್ವದಲ್ಲಿ ಶೇ40% ಪ್ರಯಾಣಿಕರು ಟೋಕನ್ ಬಳಸಿಯೇ ಪ್ರಯಾಣಿಸುತ್ತಿದ್ರು. ಸದ್ಯ ಟೋಕನ್ ಇಲ್ಲದೆ ಇರುವ ಕಾರಣ ಸ್ಮಾರ್ಟ್ ಕಾರ್ಡ್ಗೆ 150 ರೂಪಾಯಿ ನೀಡಿ ಪ್ರಯಾಣಿಸಬೇಕಿದೆ. ಹೀಗಾಗಿ ಬೆಂಗಳೂರಿಗೆ ಬಂದು ಹೋಗುವ ಪ್ರಯಾಣಿಕರು ಮೆಟ್ರೋದತ್ತ ಸುಳಿಯುತ್ತಿಲ್ಲ. ಸದ್ಯ ಮೆಟ್ರೋದಲ್ಲಿ 50% ರಷ್ಟು ಜನರು ಸಂಚರಿಸಲು ಮಾತ್ರ ಅವಕಾಶ ನೀಡಲಾಗಿದೆ. ಮೂರನೇ ಹಂತದ ಅನ್ಲಾಕ್ನಲ್ಲಿ ದಿನವಿಡೀ ಮೆಟ್ರೋ ಸಂಚಾರ ಆರಂಭವಾಗುವ ಸಾಧ್ಯತೆ ಇದೆ.

ಮೆಟ್ರೋ ಬೆಳಗ್ಗೆ 7ರಿಂದ 11ಗಂಟೆವರೆಗೆ ಹಾಗೂ ಮಧ್ಯಾಹ್ನ 3ರಿಂದ ಸಂಜೆ 6 ಗಂಟೆಯವರೆಗೆ ಪ್ರತಿ 5ನಿಮಿಷಕ್ಕೆ ಒಂದರಂತೆ ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಸಂಚಾರ ನಡೆಸುತ್ತಿದೆ. ಮೆಟ್ರೋ ನಿಲ್ದಾಣದಲ್ಲಿ ದೇಹದ ಉಷ್ಣಾಂಶ ತಪಾಸಣೆ, ಹ್ಯಾಂಡ್ ಸ್ಯಾನಿಟೈಸ್ ಕಡ್ಡಾಯ. ಮುಖಗವಸು ಧರಿಸಿದವರಿಗೆ ಮಾತ್ರ ಪ್ರಯಾಣಕ್ಕೆ ಅವಕಾಶ ನೀಡಲಾಗುವುದು ಹಾಗೂ ಎಲ್ಲಾ ಸಂದರ್ಭದಲ್ಲೂ ದೈಹಿಕ ಅಂತರ ಪಾಲಿಸಲೇಬೇಕು. ಹಳದಿ ಬಣ್ಣದ ಪಟ್ಟಿಯಲ್ಲಿ ಮಾತ್ರ ಕುಳಿತು ಅಥವಾ ನಿಂತು ಪ್ರಯಾಣ ಮಾಡಬೇಕಿದ್ದು, ವಾರಾಂತ್ಯದ ಕರ್ಫ್ಯೂ ನಿಮಿತ್ತ ಶನಿವಾರ, ಭಾನುವಾರ ಮೆಟ್ರೋ ಸಂಚಾರ ಇರುವುದಿಲ್ಲ.

ಇದನ್ನೂ ಓದಿ: ನಮ್ಮ ಮೆಟ್ರೋ ಹೆಸರು ಬದಲಿಸುವಂತೆ ಸಿಎಂ ಯಡಿಯೂರಪ್ಪಗೆ ನಂಜಾವಧೂತ ಸ್ವಾಮೀಜಿ ಮನವಿ