AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಬ್ಬದ ದಿನವೇ ಪ್ರಯಾಣಿಕರಿಗೆ ಶುಭ ಸುದ್ದಿ​​ ಕೊಟ್ಟ ನಮ್ಮ ಮೆಟ್ರೋ: ಇಂದಿನಿಂದ ಕ್ಯೂಆರ್​ ಆಧಾರಿತ ಪಾಸ್​​ ಲಭ್ಯ

ಹಬ್ಬದ ದಿನವೇ ಪ್ರಯಾಣಿಕರಿಗೆ ಶುಭ ಸುದ್ದಿ​​ ಕೊಟ್ಟ ನಮ್ಮ ಮೆಟ್ರೋ: ಇಂದಿನಿಂದ ಕ್ಯೂಆರ್​ ಆಧಾರಿತ ಪಾಸ್​​ ಲಭ್ಯ

Kiran Surya
| Edited By: |

Updated on:Jan 15, 2026 | 1:01 PM

Share

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಪ್ರಯಾಣಿಕರಿಗೆ 1, 3 ಮತ್ತು 5 ದಿನಗಳ ಅನಿಯಮಿತ QR ಕೋಡ್ ಪಾಸ್‌ಗಳನ್ನು ಬಿಡುಗಡೆ ಮಾಡಿದೆ. ಈ ಹೊಸ ಡಿಜಿಟಲ್ ಪಾಸ್‌ಗಳು ಮೊಬೈಲ್ ಅಪ್ಲಿಕೇಶನ್ ಮೂಲಕ ಲಭ್ಯವಿದ್ದು, ಪ್ರಯಾಣಿಕರಿಗೆ ಕ್ಯೂ ನಿಲ್ಲುವ ತೊಂದರೆಯಿಲ್ಲದೆ ಸುಲಭ ಪ್ರಯಾಣ ಒದಗಿಸುತ್ತವೆ. ಸ್ಮಾರ್ಟ್ ಕಾರ್ಡ್‌ಗಳ ರೀತಿ ಇವುಗಳಿಗೆ ಯಾವುದೇ ಭದ್ರತಾ ಠೇವಣಿ ಅಗತ್ಯವಿಲ್ಲ.

ಬೆಂಗಳೂರು, ಜನವರಿ 15: ಸಂಕ್ರಾಂತಿ ಹಬ್ಬದ ದಿನವೇ ಪ್ರಯಾಣಿಕರಿಗೆ ನಮ್ಮ ಮೆಟ್ರೋ ಗುಡ್ ನ್ಯೂಸ್ ಕೊಟ್ಟಿದ್ದು, ಇಂದಿನಿಂದ ಮೆಟ್ರೋ ನಿಲ್ದಾಣದಲ್ಲಿ ಕ್ಯೂಆರ್​ ಆಧಾರಿತ ದಿನ,‌ ಮೂರು ದಿನ ಮತ್ತು 5 ದಿನಗಳ ಪಾಸ್ ಲಭ್ಯವಿರಲಿದೆ. 1, 3, 5 ದಿನಗಳ ಅನಿಯಮಿತ ಪ್ರಯಾಣದ ಪಾಸ್​​ನ BMRCL ಪರಿಚಯಿಸಿದ್ದು, ಡಿಜಿಟಲ್ ಟಿಕೆಟ್ ವ್ಯವಸ್ಥೆ ಉತ್ತೇಜಿಸಲು ಈ​ ಕ್ರಮ ಕೈಗೊಳ್ಳಲಾಗಿದೆ. ಇಷ್ಟುದಿನ ಕಾಂಟ್ಯಾಕ್ಟ್ ಲೆಸ್ ಸ್ಮಾರ್ಟ್​​ ಕಾರ್ಡ್​ ಮೂಲಕ ಮಾತ್ರ ಅನಿಯಮಿತ ಪಾಸ್ ಇತ್ತು. ಅದಕ್ಕಾಗಿ ಭದ್ರತಾ ಠೇವಣಿ 50 ರೂಪಾಯಿ ಪಾವತಿ ಮಾಡಬೇಕಿತ್ತು. ಆದರಿನ್ನು ಮೊಬೈಲ್‌ನಲ್ಲೇ QR ಕೋಡ್ ಬಳಸಿ ಪಾಸ್ ಪಡೆಯಬಹುದಾಗಿದ್ದು, ಯಾವುದೇ ಭದ್ರತಾ ಠೇವಣಿ ಇರುವುದಿಲ್ಲ. 1 ದಿನದ ಮೆಟ್ರೋ ಪ್ರಯಾಣ ಪಾಸ್​​ಗೆ 250 ರೂ., 3 ದಿನಗಳ ಮೆಟ್ರೋ ಪ್ರಯಾಣ ಪಾಸ್​​ಗೆ 550 ರೂ. ಮತ್ತು 5 ದಿನಗಳ ಮೆಟ್ರೋ ಪ್ರಯಾಣ ಪಾಸ್​ಗೆ 850 ರೂ. ನಿಗದಿ ಮಾಡಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Jan 15, 2026 01:00 PM