ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದವರೆಗೂ ‘ನಮ್ಮ ಮೆಟ್ರೋ’ ವಿಸ್ತರಣೆ ಮಾಡುವುದಾಗಿ ಸಿಎಂ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.
ರಾಜ್ಯ ರಾಜಧಾನಿ ಬೆಂಗಳೂರು ಅಭಿವೃದ್ಧಿಗೆ ಮೊದಲ ಆದ್ಯತೆ ಕೊಟ್ಟಿದ್ದೇವೆ. ನಗರದ 12 ಕಡೆ ಹೈಡೆನ್ಸಿಟಿ ಕಾರಿಡಾರ್ ರಸ್ತೆ ನಿರ್ಮಾಣ ಮಾಡಲಾಗುವುದು. ಇನ್ನು 7-8 ತಿಂಗಳಲ್ಲಿ ಬೆಂಗಳೂರನ್ನ ವಿಶ್ವದರ್ಜೆಗೆರಿಸುತ್ತೇವೆ. ಕೆರೆಗಳ ಸ್ವಚ್ಛತೆ, ತ್ಯಾಜ್ಯ ಸಮಸ್ಯೆಗೆ ಶೀಘ್ರವೇ ಪರಿಹಾರ ನೀಡ್ತೇವೆ ಎಂದು ಬೆಂಗಳೂರಿನಲ್ಲಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
‘ನಮ್ಮ ಮೆಟ್ರೋ’ ಮೊದಲ ಹಂತ ಈಗಾಗಲೇ ಚಾಲ್ತಿಯಲ್ಲಿದ್ದು, 2ನೇ ಹಂತದ ಕಾಮಗಾರಿ ನಡೆಯುತ್ತಿದೆ. ಇದೀಗ ಕೆಂಪೇಗೌಡ ವಿಮಾನ ನಿಲ್ದಾಣದವರೆಗೂ ನಮ್ಮ ಮೆಟ್ರೋ ವಿಸ್ತರಣೆಯಿಂದ ವಾಹನ ಸಂಚಾರ ದಟ್ಟಣೆ ಕಡಿಮೆಯಾಗಲಿದೆ. ಏರ್ಪೋರ್ಟ್ಗೆ ತಲುಪುವವರು ಟ್ರಾಫಿಕ್ ಕಿರಿಕಿರಿಯಿಲ್ಲದೆ ಮೆಟ್ರೋ ಮೂಲಕವೇ ಸುಗಮವಾಗಿ ಹೋಗಬಹುದಾಗಿದೆ.
Published On - 1:36 pm, Mon, 16 September 19