AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಂಟಿಸಿ ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳಲಿದೆ.. ನಾಳಿನ ಬಜೆಟ್​ನಲ್ಲಿ ಬಿಎಂಟಿಸಿ ಪ್ರಯಾಣ ದರ ಏರಿಕೆ ಸಾಧ್ಯತೆ

ಇಂಧನ ದರ ಏರಿಕೆಯಾಗಿದ್ದು ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿದೆ. ಈ ಹಿನ್ನೆಲೆಯಲ್ಲಿ ಬಿಎಂಟಿಸಿ ಸಾರ್ವಕಾಲಿಕ ನಷ್ಟದಲ್ಲಿದೆ. ಹೀಗಾಗಿ ದರ ಏರಿಕೆ ಪ್ರಸ್ತಾವನೆಯನ್ನು BMTC ಸರ್ಕಾರದ ಮುಂದಿಟ್ಟಿದೆ.

ಬಿಎಂಟಿಸಿ ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳಲಿದೆ.. ನಾಳಿನ ಬಜೆಟ್​ನಲ್ಲಿ ಬಿಎಂಟಿಸಿ ಪ್ರಯಾಣ ದರ ಏರಿಕೆ ಸಾಧ್ಯತೆ
ಬಿಎಂಟಿಸಿ ಬಸ್
ಆಯೇಷಾ ಬಾನು
| Edited By: |

Updated on:Mar 07, 2021 | 3:48 PM

Share

ಬೆಂಗಳೂರು: ಮಾರ್ಚ್ 08ಕ್ಕೆ ಕರ್ನಾಟಕ ಬಜೆಟ್ ಮಂಡನೆಯಾಗಲಿದೆ. ಹೀಗಾಗಿ ಬಹಳಷ್ಟು ನಿರೀಕ್ಷೆಗಳು ಸಾಮಾನ್ಯ. ಆದ್ರೆ ಈ ಬಾರಿ ಬಜೆಟ್​ನಲ್ಲಿ ಸಿಹಿಗಿಂತ ಕಹಿಯೇ ಜಾಸ್ತಿ ಇದೆ. ಬಿಎಂಟಿಸಿ ಪ್ರಯಾಣಿಕರು ಬಜೆಟ್ ಶಾಕ್​ಗೆ ಸಿದ್ಧರಾಗಿರಬೇಕು. ಏಕೆಂದರೆ ಬಜೆಟ್​ನಲ್ಲಿ BMTC ದರ ಏರಿಕೆ ಘೋಷಣೆ ಬಹುತೇಕ ಪಕ್ಕ ಆಗಿದೆ. ಇಂಧನ ದರ ಏರಿಕೆಯಾಗಿದ್ದು ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿದೆ. ಈ ಹಿನ್ನೆಲೆಯಲ್ಲಿ ಬಿಎಂಟಿಸಿ ಸಾರ್ವಕಾಲಿಕ ನಷ್ಟದಲ್ಲಿದೆ. ಹೀಗಾಗಿ ದರ ಏರಿಕೆ ಪ್ರಸ್ತಾವನೆಯನ್ನು BMTC ಸರ್ಕಾರದ ಮುಂದಿಟ್ಟಿದೆ. ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಿಸುವುದು ಅನಿವಾರ್ಯವಾಗಿದೆ ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ.ಶಿಖಾ ತಿಳಿಸಿದ್ದಾರೆ.

ರಾಜ್ಯ ಬಜೆಟ್‌ನಲ್ಲಿ ನಿರ್ಧಾರ ಹೊರಬರುವ ನಿರೀಕ್ಷೆ ಇದೆ. ಕಳೆದ ಬಾರಿ ಬೇರೆ ನಿಗಮಗಳು ದರ ಏರಿಕೆ ಮಾಡಿದ್ದವು. ಆಗ ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳ ಮಾಡಿಲ್ಲ. ಆಗಿನ ಡೀಸೆಲ್ ದರಕ್ಕೂ ಈಗಿನ ದರಕ್ಕೂ ₹30 ಹೆಚ್ಚಾಗಿದೆ. ಕೊರೊನಾ ಹಿನ್ನೆಲೆ ಪ್ರಯಾಣಿಕರ ಕೊರತೆ ಕೂಡ ಇದೆ. ಸುಮಾರು 10 ಲಕ್ಷ ಪ್ರಯಾಣಿಕರು ಕಡಿಮೆಯಾಗಿದ್ದಾರೆ. ಹೀಗಾಗಿ BMTC ಬಸ್ ಪ್ರಯಾಣ ದರ ಹೆಚ್ಚಳ ಅನಿವಾರ್ಯವಾಗಿದೆ. ಶೇ.18ರಿಂದ 20ರವರೆಗೆ ದರ ಏರಿಕೆಗೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ.ಶಿಖಾ ತಿಳಿಸಿದ್ದಾರೆ.

ಇನ್ನು ಕೋಟ್ಯಾಂತರ ಜನರನ್ನು ಹೊತ್ತು ಸಾಗುವ BMTC ನಷ್ಟದಲ್ಲಿದೆ. ಸಾಲದಲ್ಲಿ ಮುಳುಗಿದೆ. ಆದರೆ ಸಚಿವ ಲಕ್ಷ್ಮಣ ಸವದಿ ಮಾತ್ರ ಈ ಬಗ್ಗೆ ತಲೆನೇ ಕೆಡಿಸಿಕೊಳ್ಳುತ್ತಿಲ್ಲ. ಸಂಸ್ಥೆಯ ನೆರವಿಗೆ ನಿಲ್ಲುತ್ತಿಲ್ಲ. ಈ ಬಗ್ಗೆ ಸಿಬ್ಬಂದಿ ಅಸಮಾಧಾನ ಹೊರ ಹಾಕಿದ್ದು ಅಧಿಕಾರಿಗಳು ಸಾಲಕ್ಕಾಗಿ ಬ್ಯಾಂಕ್​ಗಳ ಮೊರೆ ಹೋಗಿದ್ದಾರೆ.

ಸಾಲಕ್ಕಾಗಿ ಬ್ಯಾಂಕ್​ಗಳ ಹುಡುಕಾಟ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ನಷ್ಟದಿಂದ ಅಕ್ಷರಶಃ ಮುಳುಗಿದ ಹಡಗಿನಂತಾಗಿದೆ. ಸಚಿವ ಲಕ್ಷ್ಮಣ ಸವದಿ ಪ್ರಮಾಣಿಕವಾಗಿ ಕೆಲಸ ಮಾಡಿದ್ದರೆ ಬಿಎಂಟಿಸಿಗೆ ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ. ಸಚಿವರ ನಿರ್ಲಕ್ಷ್ಯ ಹಾಗೂ ಅಧಿಕಾರಗಳ ಅನಗತ್ಯ ನಿರ್ಧಾರದಿಂದ ಬಿಎಂಟಿಸಿ ಬರ್ಬಾದ್ ಆಗ್ತಿದೆ. ನೌಕರರಿಗೆ ಸಂಬಳ, ಬ್ಯಾಟರಿ, ಡೀಸೆಲ್ ಖರೀದಿ ಮಾಡಲು ಬಿಎಂಟಿಸಿ ಬಳಿ ಹಣವಿಲ್ಲವಂತೆ. ಸಾಲಕ್ಕಾಗಿ ಬಿಎಂಟಿಸಿ ಬಸ್, ಡಿಪೋ, ಟಿಟಿಎಂಸಿಗಳನ್ನ ಅಡಮಾನ ಇಡಲು ಬಿಎಂಟಿಸಿ ಅಧಿಕಾರಿಗಳು ಮುಂದಾಗಿದ್ದಾರೆ. ಆರ್ಥಿಕ ಸಂಕಷ್ಟದಿಂದ 230 ಕೋಟಿ ಸಾಲ ಪಡೆಯಲು ಬ್ಯಾಂಕ್​ಗಳಿಗೆ ಹುಡುಕಾಟ ನಡೆಸುತ್ತಿದ್ದಾರೆ.

ಕಡಿಮೆ ಬಡ್ಡಿದರಲ್ಲಿ ಸಾಲ ನೀಡುವ ಬ್ಯಾಂಕ್​ಗಳ ಬಾಗಿಲು ತಟ್ಟಲು ಮುಂದಾಗಿದ್ದಾರೆ. ನಮ್ಮ ಷರತ್ತುಗಳ ಅನ್ವಯ ಆಸಕ್ತ ರಾಷ್ಟ್ರೀಕೃತ ಬ್ಯಾಂಕುಗಳು ಹಾಗೂ ಶೆಡ್ಯೂಲ್ಡ್ ಕಮರ್ಷಿಯಲ್ ಬ್ಯಾಂಕ್​ಗಳು ಟೆಂಡರ್​ನಲ್ಲಿ ಭಾಗವಹಿಸಿ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡುವಂತೆ BMTC ಅಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.

ನಷ್ಟದ ಸುಳಿಯಲಿ ಬಿಎಂಟಿಸಿ 2012-13: 147 ಕೋಟಿ ನಷ್ಟ 2013-14: 147 ಕೋಟಿ ನಷ್ಟ 2014-15: 64 ಕೋಟಿ ನಷ್ಟ 2015-16: 13 ಕೋಟಿ ನಷ್ಟ 2016-17: 260 ಕೋಟಿ ನಷ್ಟ 2017-18: 216 ಕೋಟಿ ನಷ್ಟ 2018-19: 300 ಕೋಟಿ ನಷ್ಟ 2019-2020: 500 ಕೋಟಿ ನಷ್ಟ

ಇದನ್ನೂ ಓದಿ: ತುಂಬಿದ ಬಿಎಂಟಿಸಿ ಬಸ್​ಗಳಲ್ಲಿ ಟಿಕೆಟ್ ಪಡೆಯದಿದ್ದರೆ ಪ್ರಯಾಣಿಕರೇ ಹೊಣೆ: ಕಂಡಕ್ಟರ್​ಗೆ ಇಲ್ಲ ದಂಡ

Published On - 1:10 pm, Sun, 7 March 21

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್