ಬೆಂಗಳೂರು ಸಂಚಾರ ವ್ಯವಸ್ಥೆ ಜೀವನಾಡಿಯಾದ ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಶಿಫಾರಸು!
BMTC Bus Fare: ಕೊರೊನಾ ಕಾಟದಿಂದ ಜಾರಿಗೊಳಿಸಿದ್ದ ಲಾಕ್ಡೌನ್ ಮಾರ್ಗಸೂಚಿಯನ್ನು ತೆಗೆದು ಅನ್‌ಲಾಕ್ ಮಾಡಿರುವ ಬೆನ್ನಲ್ಲೇ ಬೆಂಗಳೂರು ಸಂಚಾರ ವ್ಯವಸ್ಥೆಯ ಜೀವನಾಡಿಯಾದ ಬಿಎಂಟಿಸಿ ಬಸ್ ಪ್ರಯಾಣಿಕರಿಗೆ ಶಾಕ್ ಕಾದಿದೆ. ಬಿಎಂಟಿಸಿ ಬಸ್ ಟಿಕೆಟ್ ದರ ಹೆಚ್ಚಳದ ಬಗ್ಗೆ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ. ಶಿಖಾ ಸುಳಿವು ನೀಡಿದ್ದಾರೆ.
ಬೆಂಗಳೂರು: ಕೊರೊನಾ ಕಾಟದಿಂದ ಜಾರಿಗೊಳಿಸಿದ್ದ ಲಾಕ್ಡೌನ್ ಮಾರ್ಗಸೂಚಿಯನ್ನು ತೆಗೆದು ಅನ್‌ಲಾಕ್ ಮಾಡಿರುವ ಬೆನ್ನಲ್ಲೇ ಬೆಂಗಳೂರು ಸಂಚಾರ ವ್ಯವಸ್ಥೆಯ ಜೀವನಾಡಿಯಾದ ಬಿಎಂಟಿಸಿ ಬಸ್ ಪ್ರಯಾಣಿಕರಿಗೆ ಶಾಕ್ ಕಾದಿದೆ. ಬಿಎಂಟಿಸಿ ಬಸ್ ಟಿಕೆಟ್ ದರ ಹೆಚ್ಚಳದ ಬಗ್ಗೆ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ. ಶಿಖಾ ಸುಳಿವು ನೀಡಿದ್ದಾರೆ.
ಬಸ್ ಟಿಕೆಟ್ ದರ ಹೆಚ್ಚಳ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುವ ಬಿಎಂಟಿಸಿ, ಶೇಕಡಾ 20ರಷ್ಟು ದರ ಹೆಚ್ಚಳ ಮಾಡುವಂತೆ ಈ ಹಿಂದೆಯೇ ಪ್ರಸ್ತಾವಿಸಲಾಗಿದೆ. ಶೇ 20 ರಷ್ಟು ಹೆಚ್ಚಳ ಮಾಡುವಂತೆ ಕಳೆದ ಜನವರಿಯಲ್ಲಿ ಪ್ರಸ್ತಾವನೆ ಸಲ್ಲಿಕೆ ಮಾಡಲಾಗಿತ್ತು. ಈ ವಾರದಲ್ಲಿ ಸರ್ಕಾರಕ್ಕೆ ಮತ್ತೊಂದು ಪ್ರಸ್ತಾವನೆ ಸಲ್ಲಿಸ್ತೇವೆ ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ.ಶಿಖಾ ಹೇಳಿದ್ದಾರೆ.
ಲಾಕ್‌ಡೌನ್‌ನಿಂದ ಭಾರೀ ನಷ್ಟವುಂಟಾಗಿರುವ ಹಿನ್ನೆಲೆಯಲ್ಲಿ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಅನ್‌ಲಾಕ್ ಆದ ಬಳಿಕ ಎಲ್ಲಾ ಬಸ್ಗಳ ಕಾರ್ಯಾಚರಣೆಯಿಂದ ನಿರ್ವಹಣೆ ವೆಚ್ಚ ಇನ್ನಷ್ಟು ಹೆಚ್ಚಳವಾಗಲಿದೆ. ಹೀಗಾಗಿ ದರ ಏರಿಕೆ ಅನಿವಾರ್ಯವಾಗಿದೆ. ಟಿಕೆಟ್ ದರ ಏರಿಕೆ ಬಗ್ಗೆ ಸರ್ಕಾರದ ಗಮನಕ್ಕೆ ತರುತ್ತೇವೆ ಎಂದು ಶಿಖಾ ತಿಳಿಸಿದ್ದಾರೆ.
ಸಾರ್ವಜನಿಕರ ಅನುಕೂಲಕ್ಕಾಗಿ ಬಸ್ಸುಗಳನ್ನು ಬೆಳಗ್ಗೆ 5 ರಿಂದ ರಾತ್ರಿ 9 ಗಂಟೆವರೆಗೆ ಕಾರ್ಯಾಚರಣೆ ಮಾಡಲಾಗುವುದು ಹಾಗೂ ಜನದಟ್ಟನೆ ಅನುಗುಣವಾಗಿ ಸಾರಿಗೆ ಸೇವೆಯನ್ನು ಹೆಚ್ಚಿಸಲಾಗುವುದು.ಸಾರ್ವಜನಿಕ ಪ್ರಯಾಣಿಕರು ಬಸ್ಸಿನ ಆಸನಗಳ ಸಾಮರ್ಥ್ಯದಷ್ಟು ಪ್ರಯಾಣಿಸಬಹುದು.ಬಸ್ಸಿನಲ್ಲಿ ಮುಖಗವಸು ಧರಿಸುವುದು, ಸಾಮಾಜಿಕ ಅಂತರವನ್ನು ಪಾಲಿಸುವುದು ಕಡ್ಡಾಯ. pic.twitter.com/N9Udo78r9r
— BMTC (@BMTC_BENGALURU) July 4, 2021
(BMTC Bus Fare tobe increased as government service unlock after coronavirus slows down says md shikha)
ನಾಳೆಯ ಮುಷ್ಕರದಲ್ಲಿ ಏನೇ ನಡೆದರೂ ಕೋಡಿಹಳ್ಳಿ ಚಂದ್ರಶೇಖರ ಹೊಣೆ; ಬಿಎಂಟಿಸಿ ಎಂಡಿ ಶಿಖಾಗೆ ದೂರು