ಬೆಂಗಳೂರು ಸಂಚಾರ ವ್ಯವಸ್ಥೆ ಜೀವನಾಡಿಯಾದ ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಶಿಫಾರಸು!

BMTC Bus Fare: ಕೊರೊನಾ ಕಾಟದಿಂದ ಜಾರಿಗೊಳಿಸಿದ್ದ ಲಾಕ್​ಡೌನ್​ ಮಾರ್ಗಸೂಚಿಯನ್ನು ತೆಗೆದು ಅನ್‌ಲಾಕ್ ಮಾಡಿರುವ ಬೆನ್ನಲ್ಲೇ ಬೆಂಗಳೂರು ಸಂಚಾರ ವ್ಯವಸ್ಥೆಯ ಜೀವನಾಡಿಯಾದ ಬಿಎಂಟಿಸಿ ಬಸ್ ಪ್ರಯಾಣಿಕರಿಗೆ ಶಾಕ್ ಕಾದಿದೆ. ಬಿಎಂಟಿಸಿ ಬಸ್ ಟಿಕೆಟ್ ದರ ಹೆಚ್ಚಳದ ಬಗ್ಗೆ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ. ಶಿಖಾ ಸುಳಿವು ನೀಡಿದ್ದಾರೆ.

ಬೆಂಗಳೂರು ಸಂಚಾರ ವ್ಯವಸ್ಥೆ ಜೀವನಾಡಿಯಾದ ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಶಿಫಾರಸು!
ಬೆಂಗಳೂರು ಸಂಚಾರ ವ್ಯವಸ್ಥೆ ಜೀವನಾಡಿಯಾದ ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಶಿಫಾರಸು!
Edited By: ಸಾಧು ಶ್ರೀನಾಥ್​

Updated on: Jul 05, 2021 | 1:43 PM

ಬೆಂಗಳೂರು: ಕೊರೊನಾ ಕಾಟದಿಂದ ಜಾರಿಗೊಳಿಸಿದ್ದ ಲಾಕ್​ಡೌನ್​ ಮಾರ್ಗಸೂಚಿಯನ್ನು ತೆಗೆದು ಅನ್‌ಲಾಕ್ ಮಾಡಿರುವ ಬೆನ್ನಲ್ಲೇ ಬೆಂಗಳೂರು ಸಂಚಾರ ವ್ಯವಸ್ಥೆಯ ಜೀವನಾಡಿಯಾದ ಬಿಎಂಟಿಸಿ ಬಸ್ ಪ್ರಯಾಣಿಕರಿಗೆ ಶಾಕ್ ಕಾದಿದೆ. ಬಿಎಂಟಿಸಿ ಬಸ್ ಟಿಕೆಟ್ ದರ ಹೆಚ್ಚಳದ ಬಗ್ಗೆ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ. ಶಿಖಾ ಸುಳಿವು ನೀಡಿದ್ದಾರೆ.

ಬಸ್ ಟಿಕೆಟ್ ದರ ಹೆಚ್ಚಳ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುವ ಬಿಎಂಟಿಸಿ, ಶೇಕಡಾ 20ರಷ್ಟು ದರ ಹೆಚ್ಚಳ ಮಾಡುವಂತೆ ಈ ಹಿಂದೆಯೇ ಪ್ರಸ್ತಾವಿಸಲಾಗಿದೆ. ಶೇ 20 ರಷ್ಟು ಹೆಚ್ಚಳ ಮಾಡುವಂತೆ ಕಳೆದ ಜನವರಿಯಲ್ಲಿ ಪ್ರಸ್ತಾವನೆ ಸಲ್ಲಿಕೆ ಮಾಡಲಾಗಿತ್ತು. ಈ ವಾರದಲ್ಲಿ ಸರ್ಕಾರಕ್ಕೆ ಮತ್ತೊಂದು ಪ್ರಸ್ತಾವನೆ ಸಲ್ಲಿಸ್ತೇವೆ ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ.ಶಿಖಾ ಹೇಳಿದ್ದಾರೆ.

ಲಾಕ್‌ಡೌನ್‌ನಿಂದ ಭಾರೀ ನಷ್ಟವುಂಟಾಗಿರುವ ಹಿನ್ನೆಲೆಯಲ್ಲಿ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಅನ್​ಲಾಕ್ ಆದ ಬಳಿಕ ಎಲ್ಲಾ ಬಸ್​ಗಳ ಕಾರ್ಯಾಚರಣೆಯಿಂದ ನಿರ್ವಹಣೆ ವೆಚ್ಚ ಇನ್ನಷ್ಟು ಹೆಚ್ಚಳವಾಗಲಿದೆ. ಹೀಗಾಗಿ ದರ ಏರಿಕೆ ಅನಿವಾರ್ಯವಾಗಿದೆ. ಟಿಕೆಟ್ ದರ ಏರಿಕೆ ಬಗ್ಗೆ ಸರ್ಕಾರದ ಗಮನಕ್ಕೆ ತರುತ್ತೇವೆ ಎಂದು ಶಿಖಾ ತಿಳಿಸಿದ್ದಾರೆ.

(BMTC Bus Fare tobe increased as government service unlock after coronavirus slows down says md shikha)

ನಾಳೆಯ ಮುಷ್ಕರದಲ್ಲಿ ಏನೇ ನಡೆದರೂ ಕೋಡಿಹಳ್ಳಿ ಚಂದ್ರಶೇಖರ ಹೊಣೆ; ಬಿಎಂಟಿಸಿ ಎಂಡಿ ಶಿಖಾಗೆ ದೂರು

TV9 Web

TV9 Kannada

Read More
Loading...
Unable to load recommendations.
Follow Us