AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಂಟಿಸಿ ಕಂಡಕ್ಟರ್​, ಚಾಲಕರ ಮೇಲೆ ಹಲ್ಲೆ: ಸೂಕ್ತ ಕ್ರಮಕ್ಕಾಗಿ ಆಯುಕ್ತರಿಗೆ ರಾಮಲಿಂಗಾರೆಡ್ಡಿ ಪತ್ರ

ಬಿಎಂಟಿಸಿ ಬಸ್ ಚಾಲಕರು ಮತ್ತು ಸಿಬ್ಬಂದಿಗಳ ಮೇಲೆ ನಡೆಯುತ್ತಿರುವ ಹಲ್ಲೆ ಪ್ರಕರಣಗಳ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆತಂಕ ವ್ಯಕ್ತಪಡಿಸಿದ್ದಾರೆ. ಎರಡು ತಿಂಗಳಲ್ಲಿ ನಾಲ್ಕು ಪ್ರಕರಣಗಳು ವರದಿಯಾಗಿವೆ. ಹಲ್ಲೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಬಿಎಂಟಿಸಿ ಎಂಡಿ ರಾಮಚಂದ್ರನ್ ಕೂಡ ಪೊಲೀಸ್ ಆಯುಕ್ತರನ್ನು ಭೇಟಿಯಾಗಿ ಮನವಿ ಮಾಡಿದ್ದಾರೆ.

ಬಿಎಂಟಿಸಿ ಕಂಡಕ್ಟರ್​, ಚಾಲಕರ ಮೇಲೆ ಹಲ್ಲೆ: ಸೂಕ್ತ ಕ್ರಮಕ್ಕಾಗಿ ಆಯುಕ್ತರಿಗೆ ರಾಮಲಿಂಗಾರೆಡ್ಡಿ ಪತ್ರ
ಬಿಎಂಟಿಸಿ ಕಂಡಕ್ಟರ್​, ಚಾಲಕರ ಮೇಲೆ ಹಲ್ಲೆ: ಸೂಕ್ತ ಕ್ರಮಕ್ಕಾಗಿ ಆಯುಕ್ತರಿಗೆ ರಾಮಲಿಂಗಾರೆಡ್ಡಿ ಪತ್ರ
ಪ್ರಸನ್ನ ಗಾಂವ್ಕರ್​
| Updated By: ಗಂಗಾಧರ​ ಬ. ಸಾಬೋಜಿ|

Updated on: Oct 28, 2024 | 3:12 PM

Share

ಬೆಂಗಳೂರು, ಅಕ್ಟೋಬರ್​ 28: ಕರ್ತವ್ಯ ನಿರಂತ ಬಿಎಂಟಿಸಿ (BMTC) ಚಾಲಕರು ಹಾಗೂ ನಿರ್ವಾಹಕರ ಮೇಲೆ‌ ಸಾರ್ವಜನಿಕರಿಂದ ಹಲ್ಲೆ ಪ್ರಕರಣಗಳು ನಗರದಲ್ಲಿ ಹೆಚ್ಚಳವಾಗುತ್ತಿವೆ. ಎರಡೇ ತಿಂಗಳಲ್ಲಿ ನಾಲ್ಕು ಘಟನೆಗಳು ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ. ಹಾಗಾಗಿ ಹಲ್ಲೆ ಮಾಡಿದವ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರಿಗೆ ಪತ್ರ ಬರೆದಿದ್ದಾರೆ.

ನಿನ್ನೆ ಪ್ರಕರಣಗಳ ಮಾಹಿತಿ ಪಡೆದುಕೊಂಡಿದ್ದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಕೇಸ್ ಮಾಡುವುದು ಮುಖ್ಯವಲ್ಲ, ಶಿಕ್ಷೆ ಆಗಬೇಕು. ಹಾಗಾಗಿ ಬೆಂಗಳೂರು ನಗರ ಪೊಲೀಸ್​ ಕಮಿಷನರ್​​ಗೆ ಪತ್ರ ಬರೆಯುತ್ತೇನೆ ಎಂದು ಹೇಳಿದ್ದರು. ಅದರ ಬೆನ್ನೆಲ್ಲೇ ಇದೀಗ ಪತ್ರ ಬರೆದಿದ್ದಾರೆ.

ಸಚಿವ ರಾಮಲಿಂಗಾರೆಡ್ಡಿ ಪತ್ರದಲ್ಲಿ ಏನಿದೆ?

ಇತ್ತೀಚಿನ ದಿನಗಳಲ್ಲಿ ಬಿಎಂಟಿಸಿ ಬಸ್​ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಚಾಲನಾ ಸಿಬ್ಬಂದಿಗಳ ಮೇಲೆ ಸಾರ್ವಜನಿಕ ಪ್ರಯಾಣಿಕರು ಕ್ಷುಲ್ಲಕ, ವಿನಾ ಕಾರಣ ಹಲ್ಲೆ ಮಾಡುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ.

ಇದನ್ನೂ ಓದಿ: BMTC ಚಾಲಕ, ನಿರ್ವಾಹಕರ ಮೇಲಿನ ಹಲ್ಲೆ ಕೇಸ್ ಹೆಚ್ಚಳ​: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳುವುದೇನು?

ಬಿಎಂಟಿಸಿ ಬಸ್​ಗಳು ಬೆಂಗಳೂರು ನಗರದ ಜೀವ ನಾಡಿ. ಆ ಬಸ್​​ಗಳಲ್ಲಿ ಕರ್ತವ್ಯ ನಿರ್ವಹಿಸುವ ನಮ್ಮ ಸಾರಿಗೆ ಸಂಸ್ಥೆಯ ಸಿಬ್ಬಂದಿಗಳು ಹಗಲಿರುಳು ಶ್ರಮವಹಿಸಿ ದುಡಿದು, ಸಾರ್ವಜನಿಕರಿಗೆ ಉತ್ತಮ ಸಾರಿಗೆ ಸೇವೆ ಒದಗಿಸುತ್ತಿದ್ದಾರೆ. ಆದರೆ ಕಳೆದೊಂದು ತಿಂಗಳಿನಲ್ಲಿ ನಮ್ಮ ಚಾಲನಾ ಸಿಬ್ಬಂದಿಗಳ ಮೇಲೆ ನಡೆದ ಹಲ್ಲೆ ಪ್ರಕರಣಗಳು ಸಿಬ್ಬಂದಿಗಳು ನಿರಾತಂಕವಾಗಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಗದೆ ಭೀತಿಯನ್ನುಂಟು ಮಾಡಿದೆ ಎಂದಿದ್ದಾರೆ.

ಈ ರೀತಿಯ ಪ್ರಕರಣಗಳು ಮರುಕಳಿಸುವುದರಿಂದ ಸಂಸ್ಥೆಯ ನೌಕರರು ನಿರ್ಭೀತಿಯಿಂದ ಕರ್ತವ್ಯ ನಿರ್ವಹಿಸಲು ಸಾಧ್ಯವಾಗದ ವಾತಾವರಣ ನಿರ್ಮಾಣವಾಗುತ್ತಿರುವುದು ಖೇದಕರ. ಆದ್ದರಿಂದ ಈ ಬಗ್ಗೆ ತಾವು ಗಮನಹರಿಸಿ, ಇಂತಹ ಪ್ರಕರಣಗಳಲ್ಲಿ ತಪ್ಪು ಎಸಗಿರುವ ವ್ಯಕ್ತಿಗಳ ಮೇಲೆ ಕಠಿಣ ಕ್ರಮ ಜರುಗಿಸಿ, ಮುಂದಿನ ದಿನಗಳಲ್ಲಿ ಈ ರೀತಿಯ ಪ್ರಕರಣಗಳು ನಡೆಯದಂತೆ ನಗರದ ಪೋಲಿಸ್ ಠಾಣೆಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಿ, ಸಾರಿಗೆ ಸಿಬ್ಬಂದಿಗಳು ಒತ್ತಡ ಮುಕ್ತವಾಗಿ ಕರ್ತವ್ಯ ನಿರ್ವಹಿಸಲು ಅನುವು ಮಾಡಿಕೊಡುವಂತೆ ಮನವಿ ಮಾಡಿದ್ದಾರೆ. ಹಲ್ಲೆ ನಡೆದಿರುವ ದಿನಾಂಕ ಹಾಗೂ ಪ್ರಕರಣ ನಡೆದ ಸ್ಥಳ, ಘಟನೆಗಳ ಬಗ್ಗೆ ಪತ್ರದಲ್ಲಿ ಸಚಿವ ರಾಮಲಿಂಗಾರೆಡ್ಡಿ ಉಲ್ಲೇಖಿಸಿದ್ದಾರೆ.

ಬಿ.ದಯಾನಂದ್​​ರನ್ನು ಭೇಟಿಯಾದ ಬಿಎಂಟಿಸಿ ಎಂಡಿ ರಾಮಚಂದ್ರನ್

ಸಚಿವ ರಾಮಲಿಂಗಾರೆಡ್ಡಿ ಪತ್ರ ಬರೆದಿದ್ದರೆ, ಇತ್ತ ಬಿಎಂಟಿಸಿ ಎಂಡಿ ರಾಮಚಂದ್ರನ್​ ಅವರು ಬೆಂಗಳೂರು ಪೊಲೀಸ್​ ಕಮಿಷನರ್ ಬಿ.ದಯಾನಂದ್​​ರನ್ನು​ ಭೇಟಿಯಾಗಿದ್ದಾರೆ. ಹಲ್ಲೆ ಮಾಡಿದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಬಿಎಂಟಿಸಿ ಬಸ್​ ನಿರ್ವಾಹಕ, ಚಾಲಕನ ಮೇಲೆ ಹಲ್ಲೆ, ಎಫ್ಐಆರ್ ದಾಖಲು

ಹಲ್ಲೆ ವಿಚಾರವಾಗಿ ಕೆಲವು ಠಾಣೆಗಳಲ್ಲಿ ಎಫ್​ಐಆರ್​ ದಾಖಲಾಗಿದೆ. ಆದಷ್ಟು ಬೇಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ. ಸೂಕ್ತ ಕ್ರಮ ಕೈಗೊಳ್ಳಲು ತನಿಖಾಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಎಫ್​ಐಆರ್​ ಕಾಪಿಗಳ ಸಮೇತ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..