ಸಾರಿಗೆ ನೌಕರರ ಅಮಾನತು ವಿಚಾರ: ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದೇನು?

ಅಮಾನತು ಕುರಿತಂತೆ ಒಕ್ಕೂಟವು ಮಾಹಿತಿ ಕಲೆ ಹಾಕಲಾಗುತ್ತಿದೆ. ಅಮಾನತು ಮಾಡಲು ಕಾರಣ ಏನು ಅನ್ನೋದನ್ನ ತಿಳಿದುಕೊಂಡು ನಂತರ ಸಂಬಂಧಪಟ್ಟವರ ಜೊತೆ ಮಾತುಕತೆ ನಡೆಸಲಾಗುವುದು ಎಂದು ಸಾರಿಗೆ ಸಿಬ್ಬಂದಿ ಸರ್ಕಾರಿ ನೌಕರರಾಗುವ ಹೋರಾಟ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್​ ಹೇಳಿಕೆ ನೀಡಿದ್ದಾರೆ.

ಸಾರಿಗೆ ನೌಕರರ ಅಮಾನತು ವಿಚಾರ: ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದೇನು?
ಸಾಂದರ್ಭಿಕ ಚಿತ್ರ
Follow us
Skanda
| Updated By: ಸಾಧು ಶ್ರೀನಾಥ್​

Updated on: Dec 18, 2020 | 3:05 PM

ಬೆಂಗಳೂರು: ಸಾರಿಗೆ ನೌಕರರ ಹೋರಾಟವನ್ನು ಹತ್ತಿಕ್ಕಲು ಸರ್ಕಾರ ಪ್ರಯತ್ನಿಸಿತು. ಆದರೆ, ಅದನ್ನು ನಾವು ಈಗಾಗಲೇ ಒಂದು ಹಂತಕ್ಕೆ ತೆಗೆದುಕೊಂಡು ಹೋಗಿದ್ದೇವೆ. ಈಗ 40 ರಿಂದ 50 ಜನ ನೌಕರರನ್ನು ಅಮಾನತು ಮಾಡಲಾಗಿದೆ ಎಂಬ ಮಾಹಿತಿ ಸಿಕ್ಕಿದೆ. ಅಮಾನತು ಕುರಿತಂತೆ ಒಕ್ಕೂಟವು ಮಾಹಿತಿ ಕಲೆ ಹಾಕಲಾಗುತ್ತಿದೆ. ಅಮಾನತು ಮಾಡಲು ಕಾರಣ ಏನು ಅನ್ನೋದನ್ನ ತಿಳಿದುಕೊಂಡು ನಂತರ ಸಂಬಂಧಪಟ್ಟವರ ಜೊತೆ ಮಾತುಕತೆ ನಡೆಸಲಾಗುವುದು ಎಂದು ಸಾರಿಗೆ ಸಿಬ್ಬಂದಿ ಸರ್ಕಾರಿ ನೌಕರರಾಗುವ ಹೋರಾಟ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್​ ಹೇಳಿಕೆ ನೀಡಿದ್ದಾರೆ.

ವೇತನ ಕಡಿತ, ಕೇಸ್ ದಾಖಲು ವಿಚಾರ ಕುರಿತಂತೆ ಸಂಬಂಧಿಸಿದ ಇಲಾಖೆಯೊಂದಿಗೆ ಮಾತುಕತೆ ನಡೆಸಲಾಗುವುದು. ಸಾರಿಗೆ ಹೋರಾಟವನ್ನು ಹತ್ತಿಕುವ ಯೋಚನೆ ಇತ್ತು ಆದರೆ ನಾವು ಅದನ್ನು ಒಂದು ಹಂತಕ್ಕೆ ತೆಗೆದುಕೊಂಡು ಹೋದೆವು. ನಾನು ರೇಣುಕಾಚಾರ್ಯ ಹೇಳಿಕೆಗೆ ರಿಯಾಕ್ಟ್ ಮಾಡುವುದಿಲ್ಲ. ಸರ್ಕಾರ ನನ್ನ ಮೇಲೆ‌ ಮುಗಿಬೀಳೋಕೆ ನಿರ್ದೇಶನ ಕೊಟ್ಟಿದೆ. ಅದರಲ್ಲಿ ರೇಣುಕಾಚಾರ್ಯ ಕೂಡ ಒಬ್ಬರು ಎನ್ನುವುದು ಗೊತ್ತಿರುವ ವಿಚಾರ ಎಂದು ಹೇಳಿದರು.

ನಾನು ಯಾರಿಗೂ ಹೆದರಬೇಕಾದ ಅಗತ್ಯವಿಲ್ಲ. ನನ್ನ ಮೇಲೆ ಮಾಡಿರುವ ಆರೋಪಕ್ಕೆ ಕುರಿತಂತೆ ದಾಖಲೆ‌ ಬಿಡುಗಡೆ ಮಾಡಲಿ. ನನ್ನ ಆಸ್ತಿಪಾಸ್ತಿಯನ್ನು ಸರ್ಕಾರ ಪರಿಶೀಲನೆ ಮಾಡಲಿ. ಅಗತ್ಯವಿದ್ದರೆ ಮುಟ್ಟುಗೋಲು ಹಾಕಿಕೊಳ್ಳಲಿ. ಸರ್ಕಾರ ಅವರದ್ದೇ ಆಗಿದೆ, ಅವರೇ ತನಿಖೆ ನಡೆಸಲಿ ಅಂತಾ ಸವಾಲೆಸೆದರು.

ಸರ್ಕಾರಕ್ಕೆ ಮತ್ತೆ ಎಲ್ಲಿ ಹೋರಾಟ ಶುರುವಾಗುತ್ತೋ ಎಂಬ ಆತಂಕ ಇದೆ. ಹಾಗಾಗಿ ಅವರು ಬಾಯಿ ಮುಚ್ಚಿಸಲು ಶ್ರಮ ಪಡುತ್ತಿದ್ದಾರೆ. ಅವರು ಏನೇ ಮಾಡಿದರೂ ಹೆದರುವುದಿಲ್ಲ. ಬೇಕಿದ್ದರೆ ನನ್ನ ಆಸ್ತಿ ಯಾರದ್ದು, ಯಾರ ಹೆಸರಿನಲ್ಲಿ ಇದೆ ಎಂಬುದನ್ನು ನೋಡಲಿ ಎಂದು ಟಿವಿ9ಗೆ ಪ್ರತಿಕ್ರಿಯಿಸಿದ್ದಾರೆ.

ಮುಷ್ಕರದ ಬಿಸಿ ಆರುತ್ತಿದ್ದಂತೆ.. ಸಾರಿಗೆ ನೌಕರರು ಅಮಾನತು: ನೌಕರರು ಫುಲ್ ಗರಂ, ಮತ್ತೆ ಹೋರಾಟದ ಎಚ್ಚರಿಕೆ

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?