ಆಯುಧಪೂಜೆಗೆ ಕಾಸಿಲ್ಲ! ಬಿಎಂಟಿಸಿ ಬಸ್ ಪೂಜೆಗೆ ಕೊಟ್ಟಿದ್ದು ಚಿಲ್ರೆ, ಚಿಲ್ಲರೆ!!

ಬೆಂಗಳೂರು: ರಾಜ್ಯ ಸರ್ಕಾರ ಬರ್ಬಾದ್ ಆಗಿರೋದು ನಿಜಾನಾ..? ಆಯುಧಪೂಜೆ ಮಾಡೋಕೂ ಸರ್ಕಾರದ ಬಳಿ ದುಡ್ಡಿಲ್ವಾ? ಬಿಎಂಟಿಸಿ ಬಸ್ ಪೂಜೆಗೆ ಚಿಲ್ಲರೆ ಕಾಸು ನೀಡಿದೆ. ಹೀಗಾಗಿ ಆಯುಧ ಪೂಜೆಗೂ ಆರ್ಥಿಕ ಹೊಡೆತ ಬಿತ್ತಾ? ಎಂಬ ಅನುಮಾನ ಇದೀಗ ಬಿಎಂಟಿಸಿ ಸಿಬ್ಬಂದಿಗೆ ಕಾಡುತ್ತಿದೆ. ಬಿಎಂಟಿಸಿ ಸಂಸ್ಥೆಯ ಚಾಲಕ ಹಾಗು ನಿರ್ವಾಹಕರಿಗೆ ಆಯುಧ ಪೂಜೆ ಮಾಡಿ ಎಂದು ಬಿಡಿಗಾಸು ನೀಡಿದೆ. ಇಲಾಖೆಯ ಕಾರು, ಜೀಪುಗಳಿಗೆ 40 ರೂಪಾಯಿ, ಕರೋನಾ ಹಾಗೂ ವೋಲ್ವೋ ಬಸ್​ಗೆ ಕೇವಲ 100 ರೂಪಾಯಿ ಬಿಡುಗಡೆ ಮಾಡಿದೆ. ಅಲ್ಲದೆ […]

ಆಯುಧಪೂಜೆಗೆ ಕಾಸಿಲ್ಲ! ಬಿಎಂಟಿಸಿ ಬಸ್ ಪೂಜೆಗೆ ಕೊಟ್ಟಿದ್ದು ಚಿಲ್ರೆ, ಚಿಲ್ಲರೆ!!
Follow us
ಸಾಧು ಶ್ರೀನಾಥ್​
|

Updated on:Oct 05, 2019 | 2:41 PM

ಬೆಂಗಳೂರು: ರಾಜ್ಯ ಸರ್ಕಾರ ಬರ್ಬಾದ್ ಆಗಿರೋದು ನಿಜಾನಾ..? ಆಯುಧಪೂಜೆ ಮಾಡೋಕೂ ಸರ್ಕಾರದ ಬಳಿ ದುಡ್ಡಿಲ್ವಾ? ಬಿಎಂಟಿಸಿ ಬಸ್ ಪೂಜೆಗೆ ಚಿಲ್ಲರೆ ಕಾಸು ನೀಡಿದೆ. ಹೀಗಾಗಿ ಆಯುಧ ಪೂಜೆಗೂ ಆರ್ಥಿಕ ಹೊಡೆತ ಬಿತ್ತಾ? ಎಂಬ ಅನುಮಾನ ಇದೀಗ ಬಿಎಂಟಿಸಿ ಸಿಬ್ಬಂದಿಗೆ ಕಾಡುತ್ತಿದೆ.

ಬಿಎಂಟಿಸಿ ಸಂಸ್ಥೆಯ ಚಾಲಕ ಹಾಗು ನಿರ್ವಾಹಕರಿಗೆ ಆಯುಧ ಪೂಜೆ ಮಾಡಿ ಎಂದು ಬಿಡಿಗಾಸು ನೀಡಿದೆ. ಇಲಾಖೆಯ ಕಾರು, ಜೀಪುಗಳಿಗೆ 40 ರೂಪಾಯಿ, ಕರೋನಾ ಹಾಗೂ ವೋಲ್ವೋ ಬಸ್​ಗೆ ಕೇವಲ 100 ರೂಪಾಯಿ ಬಿಡುಗಡೆ ಮಾಡಿದೆ. ಅಲ್ಲದೆ ಈ ಹಣದಲ್ಲೇ ಕಚೇರಿ ಆವರಣ ಕ್ಲೀನ್ ಮಾಡಿ, ಶ್ರದ್ಧೆ ಭಕ್ತಿಯಿಂದ ಆಯುಧ ಪೂಜೆ ಮಾಡಿ ಅಂತ ತನ್ನ ಸಿಬ್ಬಂದಿಗೆ ಹೇಳಿದೆ.

ಇಂದಿನ ದಿನದಲ್ಲಿ ಬೂದುಗುಂಬಳಕಾಯಿಗೇ 40 ರೂಪಾಯಿಗಿಂತ ಹೆಚ್ಚು ನೀಡಬೇಕಾಗಿದೆ. ಆದ್ರೆ, ಬಿಎಂಟಿಟಿಸಿ ಬಿಡುಗಡೆ ಮಾಡಿರುವ ಪುಡಿಗಾಸಿನಲ್ಲಿ ಹೇಗೆ ಆಯುಧ ಪೂಜೆ ಮಾಡೋಕಾಗುತ್ತೆ? ವರ್ಷಕ್ಕೊಮ್ಮೆ ಮಾಡುವ ಆಯುಧ ಪೂಜೆಗೆ ಇಷ್ಟು ಕಡಿಮೆ ಹಣ ನೀಡಿದ್ರೆ ಹೇಗೆ? ನೀವು ಕೊಟ್ಟ ಹಣದಲ್ಲಿ ಆರು ನಿಂಬೆಹಣ್ಣು ಕೂಡಾ ಬರೋದಿಲ್ಲ. ಕೊಡೋದಾದ್ರೆ ಹೆಚ್ಚಿನ ಹಣ ನೀಡಿ ಇಲ್ಲದಿದ್ರೆ ನಿಮ್ಮ ಹಣ ಬೇಡ ಎಂದು ಚಾಲಕ ಹಾಗು ನಿರ್ವಾಹಕರು ಬಿಎಂಟಿಸಿ ಸಂಸ್ಥೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 2:19 pm, Sat, 5 October 19

ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ