ಪೊಲೀಸ್ ಭದ್ರತೆಯಲ್ಲಿ BMTC ಬಸ್ ಸಂಚಾರ: ಮೆಜೆಸ್ಟಿಕ್‌ಗೆ ಆಗಮಿಸಿದ 2 ಬಸ್‌ಗಳು
ಈ ನಡುವೆ, ಪೊಲೀಸ್ ಭದ್ರತೆಯಲ್ಲಿ ಬಿಎಂಟಿಸಿ ಬಸ್ ಸಂಚಾರಕ್ಕೆ ಸಿದ್ಧತೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ಈ ನಿಟ್ಟಿನಲ್ಲಿ, ಮೆಜೆಸ್ಟಿಕ್‌ಗೆ ಎರಡು ಬಿಎಂಟಿಸಿ ಬಸ್‌ಗಳು ಸಹ ಆಗಮಿಸಿದೆ.
ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ 2ನೇ ದಿನಕ್ಕೆ ಕಾಲಿಟ್ಟಿದೆ. ಹಾಗಾಗಿ, ನಗರದಲ್ಲಿ ಸಹ BMTC ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.
ಈ ನಡುವೆ, ಪೊಲೀಸ್ ಭದ್ರತೆಯಲ್ಲಿ ಬಿಎಂಟಿಸಿ ಬಸ್ ಸಂಚಾರಕ್ಕೆ ಸಿದ್ಧತೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ಈ ನಿಟ್ಟಿನಲ್ಲಿ, ಮೆಜೆಸ್ಟಿಕ್‌ಗೆ ಎರಡು ಬಿಎಂಟಿಸಿ ಬಸ್‌ಗಳು ಸಹ ಆಗಮಿಸಿದೆ.
ಕೆಂಪೇಗೌಡ ಬಸ್ ನಿಲ್ದಾಣದಲ್ಲಿರುವ ಪೊಲೀಸ್ ಇಲಾಖೆಯ ಸಿಬ್ಬಂದಿಗೆ ಅಲರ್ಟ್ ಮೆಸೇಜ್ ಕಳುಹಿಸಲಾಗಿದ್ದು ಬಸ್ ಸೇವೆಗೆ ಭದ್ರತೆ ಒದಗಿಸಲು ಸೂಚನೆ ನೀಡಲಾಗಿದೆ. ಜೊತೆಗೆ, ಕೆಲವು ಡಿಪೋಗಳಿಂದ ಬಸ್ ಸಂಚಾರ ಪ್ರಾರಂಭಿಸುವ ಸಾಧ್ಯತೆವಿರುವ ಹಿನ್ನೆಲೆಯಲ್ಲಿ ಪೊಲೀಸ್ ಸಿಬ್ಬಂದಿಗೆ ಬಸ್ ನಿಲ್ದಾಣಗಳಲ್ಲಿ ಅಲರ್ಟ್ ಆಗಿರುವಂತೆ ಸೂಚನೆ ನೀಡಲಾಗಿದೆ. ಸದ್ಯ, ಕೆಂಪೇಗೌಡ ಬಸ್ ನಿಲ್ದಾಣ ಸೇರಿದಂತೆ ಶಿವಾಜಿನಗರ ಬಸ್ ನಿಲ್ದಾಣಕ್ಕೂ BMTC ಬಸ್ ಆಗಮಿಸುವ ಸಾಧ್ಯತೆಯಿದೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ 4 ವಾಯುವಜ್ರ ಬಸ್‌ಗಳು ಇತ್ತ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಹ ನಾಲ್ಕು ವಾಯುವಜ್ರ ಬಸ್‌ಗಳು ಆಗಮಿಸಿದೆ ಎಂದು ಹೇಳಲಾಗಿದೆ. ಪ್ರತಿನಿತ್ಯ 50 ಬಸ್‌ಗಳು 340 ಟ್ರಿಪ್ ಸಂಚಾರ ಮಾಡ್ತಿದ್ದವು. ಆದರೆ ಇಂದು 4 ಬಸ್‌ಗಳು ಮಾತ್ರ KIABಗೆ ಆಗಮಿಸಿದೆ. 9 ಗಂಟೆ ನಂತರ ಎಲ್ಲ ಬಸ್‌ಗಳ ಸಂಚಾರ ನಿಲ್ಲಿಸುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.
ರಾಜ್ಯದಲ್ಲಿ 2ನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ: ಡಿಪೋಗಳಿಂದ ಹೊರಬಾರದ ಬಸ್‌ಗಳು
Published On - 7:44 am, Sat, 12 December 20