ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ: BMTF ಇನ್ಸ್ಪೆಕ್ಟರ್ ವಿಕ್ಟರ್ ಸೈಮನ್ಗೆ ನ್ಯಾಯಾಂಗ ಬಂಧನ
BMTF ಇನ್ಸ್ಪೆಕ್ಟರ್ ವಿಕ್ಟರ್ ಸೈಮನ್ ಮನೆ ಮೇಲೆ ACB ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಶಕ್ಕೆ ಪಡೆಯಲಾಗಿದ್ದ ಅಧಿಕಾರಿಯನ್ನು ಇಂದು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ವಿಕ್ಟರ್ ಸೈಮನ್ರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿ ಕೋರ್ಟ್ ಆದೇಶ ನೀಡಿದೆ.

ACB ಕಚೇರಿ
ಬೆಂಗಳೂರು: BMTF ಇನ್ಸ್ಪೆಕ್ಟರ್ ವಿಕ್ಟರ್ ಸೈಮನ್ ಮನೆ ಮೇಲೆ ACB ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಶಕ್ಕೆ ಪಡೆಯಲಾಗಿದ್ದ ಅಧಿಕಾರಿಯನ್ನು ಇಂದು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ವಿಕ್ಟರ್ ಸೈಮನ್ರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿ ಕೋರ್ಟ್ ಆದೇಶ ನೀಡಿದೆ.
ಇಂದು ಸೈಮನ್ರನ್ನು ಎಸಿಬಿ ಅಧಿಕಾರಿಗಳು ಕೋರ್ಟ್ಗೆ ಹಾಜರುಪಡಿಸಿದ್ದರು. ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ್ರು. ಸೈಮನ್ ವಿರುದ್ಧ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪವಿದೆ. ಶೇ. 257.46ರಷ್ಟು ಆದಾಯಕ್ಕಿಂತ ಹೆಚ್ಚು ಆಸ್ತಿಗಳಿಕೆ ಆರೋಪವಿದೆ. ಈ ಹಿನ್ನೆಲೆಯಲ್ಲಿ ಮಾ.11ರಂದು ದಾಳಿ ನಡೆಸಿ ಎಸಿಬಿ ಸೈಮನ್ರನ್ನು ವಶಕ್ಕೆ ಪಡೆದಿತ್ತು.
ಇದನ್ನೂ ಓದಿ: ನಟೋರಿಯಸ್ ರೌಡಿಶೀಟರ್ ಸೈಕಲ್ ರವಿ ದಿಢೀರ್ ಪ್ರತ್ಯಕ್ಷ.. ವಕೀಲರೊಟ್ಟಿಗೆ ಪೊಲೀಸ್ ಠಾಣೆಗೆ ಭೇಟಿ!