ಬೆಂಗಳೂರು: ನನ್ನ ಸೋಲಿಗೆ ಸಂಸದ ಬಿಎನ್.ಬಚ್ಚೇಗೌಡರೇ ಕಾರಣ ಎಂದು ಸಿಎಂ ಬಿಎಸ್‌ಯಡಿಯೂರಪ್ಪಗೆ ಎಂಟಿಬಿ ನಾಗರಾಜ್ ದೂರು ನೀಡಿದ್ದಾರೆ. ನಿನ್ನೆ ಉಪಚುನಾವಣೆಯಲ್ಲಿ ಸೋಲನುಭವಿಸಿದ ಮೇಲೆ ಇಂದು ಹೊಸಕೋಟೆ ಕ್ಷೇತ್ರದ ಪರಾಜಿತ BJP ಅಭ್ಯರ್ಥಿ ಎಂಟಿಬಿ ನಾಗರಾಜ್ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿನ ಸಿಎಂ ನಿವಾಸ ನಿವಾಸಕ್ಕೆ ಭೇಟಿ ನೀಡಿದ್ರು. ಸಿಎಂ ಯಡಿಯೂರಪ್ಪ ಜೊತೆ ಮಾತನಾಡಿದ ಅವರು ತಮ್ಮ ಸೋಲಿಗೆ ಬಿ.ಎನ್.ಬಚ್ಚೇಗೌಡರೇ ಕಾರಣ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಬಿಎನ್.ಬಚ್ಚೇಗೌಡರು ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುವ ಬದಲು, ಸ್ವಹಿತಾಸಕ್ತಿಯಿಂದ ತಮ್ಮ ಪುತ್ರನಿಗೆ ಬೆಂಬಲ ನೀಡಿದ್ದಾರೆ. ಹೀಗಾಗಿ ಅವರ ವಿರುದ್ಧ ನೀವು ಶಿಸ್ತುಕ್ರಮ ಕೈಗೊಳ್ಳಲೇಬೇಕು ಎಂದು ಎಂಟಿಬಿ ಪಟ್ಟು ಹಿಡಿದಿದ್ದಾರೆ. ಕೇವಲ ಐದೇ ನಿಮಿಷದಲ್ಲಿ ದೂರು ನೀಡಿ ವಾಪಸ್ ತೆರಳಿದ್ದಾರೆ. ಅಷ್ಟೇ ಅಲ್ಲದೆ ನಿನ್ನೆ ಸುದ್ದಿಗೋಷ್ಠಿಯಲ್ಲೂ ಇದೇ ವಿಚಾರಕ್ಕೆ ಸಂಬಂಧಿಸಿ ಎಂಟಿಬಿ ಬಚ್ಚೇಗೌಡ ವಿರುದ್ಧ ನೇರ ಆರೋಪ ಮಾಡಿದ್ದರು.
Published On - 10:26 am, Tue, 10 December 19