ನಿಟ್ಟುಸಿರು ಬಿಟ್ಟ ಮಂಗಳೂರು ಜನತೆ: ಕೊನೆಗೂ ಬಾಂಬ್​ ಸ್ಫೋಟಗೊಳಿಸಿದ ಬಾಂಬ್ ನಿಷ್ಕ್ರಿಯ ದಳ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ವಿಮಾನ ನಿಲ್ದಾಣದಲ್ಲಿ ಪತ್ತೆಯಾಗಿದ್ದ ಬಾಂಬ್​ ಅನ್ನು ಕೊನೆಗೂ ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ಸ್ಫೋಟಗೊಳಿಸಿದ್ದಾರೆ. ಮಂಗಳೂರು ಏರ್​ಪೋರ್ಟ್​ನಿಂದ 1 ಕಿ.ಮೀ. ದೂರದಲ್ಲಿರುವ ಕೆಂಜಾರು ಮೈದಾನದಲ್ಲಿ ಮರಳು ಚೀಲಗಳ ನಡುವೆ ಬಾಂಬ್​ ಇರಿಸಿ ಸ್ಫೋಟಿಸಿದ್ದಾರೆ. ಬೆಳಗ್ಗೆಯಿಂದ ಇದ್ದ ಆತಂಕ ದೂರವಾಗಿ ಮಂಗಳೂರು ಜನತೆ ನಿಟ್ಟುಸಿರು ಬಿಟ್ಟಿದ್ದಾರೆ. ನಿರ್ಜನ ಪ್ರದೇಶಕ್ಕೆ ರವಾನೆ: ಮರಳು ಚೀಲಗಳ ನಡುವೆ ದೊಡ್ಡ ಮಟ್ಟದ ಶಬ್ಧದೊಂದಿಗೆ ಬಾಂಬ್ ಸ್ಫೋಟಗೊಂಡಿದೆ. ಬೆಳಗ್ಗೆ 10 ಗಂಟೆ ಸುಮಾರಿಗೆ ವಿಮಾನ ನಿಲ್ದಾಣದ​ ಟಿಕೆಟ್ […]

ನಿಟ್ಟುಸಿರು ಬಿಟ್ಟ ಮಂಗಳೂರು ಜನತೆ: ಕೊನೆಗೂ ಬಾಂಬ್​ ಸ್ಫೋಟಗೊಳಿಸಿದ ಬಾಂಬ್ ನಿಷ್ಕ್ರಿಯ ದಳ
Follow us
ಸಾಧು ಶ್ರೀನಾಥ್​
|

Updated on:Jan 20, 2020 | 6:35 PM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ವಿಮಾನ ನಿಲ್ದಾಣದಲ್ಲಿ ಪತ್ತೆಯಾಗಿದ್ದ ಬಾಂಬ್​ ಅನ್ನು ಕೊನೆಗೂ ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ಸ್ಫೋಟಗೊಳಿಸಿದ್ದಾರೆ. ಮಂಗಳೂರು ಏರ್​ಪೋರ್ಟ್​ನಿಂದ 1 ಕಿ.ಮೀ. ದೂರದಲ್ಲಿರುವ ಕೆಂಜಾರು ಮೈದಾನದಲ್ಲಿ ಮರಳು ಚೀಲಗಳ ನಡುವೆ ಬಾಂಬ್​ ಇರಿಸಿ ಸ್ಫೋಟಿಸಿದ್ದಾರೆ. ಬೆಳಗ್ಗೆಯಿಂದ ಇದ್ದ ಆತಂಕ ದೂರವಾಗಿ ಮಂಗಳೂರು ಜನತೆ ನಿಟ್ಟುಸಿರು ಬಿಟ್ಟಿದ್ದಾರೆ.

ನಿರ್ಜನ ಪ್ರದೇಶಕ್ಕೆ ರವಾನೆ: ಮರಳು ಚೀಲಗಳ ನಡುವೆ ದೊಡ್ಡ ಮಟ್ಟದ ಶಬ್ಧದೊಂದಿಗೆ ಬಾಂಬ್ ಸ್ಫೋಟಗೊಂಡಿದೆ. ಬೆಳಗ್ಗೆ 10 ಗಂಟೆ ಸುಮಾರಿಗೆ ವಿಮಾನ ನಿಲ್ದಾಣದ​ ಟಿಕೆಟ್ ಕೌಂಟರ್​ ಬಳಿ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿತ್ತು. ಈ ಬಗ್ಗೆ ಭದ್ರತಾ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಬ್ಯಾಗ್ ಪರಿಶೀಲಿಸಿದಾಗ ಬಾಂಬ್​ ಇರುವುದು ಖಚಿತವಾಗಿತ್ತು. ಬಳಿಕ ಬಾಂಬ್​ ಇದ್ದ ಬ್ಯಾಗ್​ ಅನ್ನು ಸುರಕ್ಷತಾ ವಾಹನದಲ್ಲಿ ಇರಿಸಲಾಗಿತ್ತು. ಬಾಂಬ್​ ಪ್ರತಿರೋಧಕ ವಾಹನದಲ್ಲಿ ಬೇರೆಡೆಗೆ ಶಿಫ್ಟ್ ಮಾಡಲಾಯಿತು.

ಕೆಂಜಾರು ಮೈದಾನದಲ್ಲಿ ಸ್ಫೋಟ: ಮಂಗಳೂರು ​ಏರ್​ಪೋರ್ಟ್​ನಿಂದ 1 ಕಿ.ಮೀ. ದೂರದಲ್ಲಿರುವ ಕೆಂಜಾರು ಮೈದಾನಕ್ಕೆ ಬಾಂಬ್​ ಸ್ಥಳಾಂತರ ಮಾಡಲಾಗಿತ್ತು. ಕೊನೆಗೆ ಸಂಜೆ 5.37ಕ್ಕೆ ಬಾಂಬ್​ ಅನ್ನು ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಸ್ಫೋಟಿಸಿದ್ದಾರೆ. ಇದರಿಂದ ಮಂಗಳೂರು ಜನತೆ ನಿಟ್ಟುಸಿರು ಬಿಟ್ಟಿದ್ದಾರೆ.

Published On - 6:21 pm, Mon, 20 January 20

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?