AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ; ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಇಬ್ಬರು ಶಂಕಿತರು ವಶಕ್ಕೆ

ಲ್ಯಾಂಡ್ ಮಾಡಬೇಡಿ, ವಿಮಾನದಲ್ಲಿ ಬಾಂಬ್ ಇದೆ ಎಂಬ ಬೆದರಿಕೆ ಸಂದೇಶವಿರುವ ಟಿಶ್ಯೂಪೇಪರ್ ಇಂಡಿಗೋ ವಿಮಾನದ ಶೌಚಾಲಯದಲ್ಲಿ ಪತ್ತೆಯಾಗಿದ್ದು, ಒಂದೆರಡುಗಂಟೆಗಳ ಕಾಲ ಭದ್ರತಾ ಸಿಬ್ಬಂದಿಗಳಿಂದ ಪ್ರಯಾಣಿಕರ ಪರಿಶೀಲನೆ, ಬಾಂಬ್ ಶೋಧಕಾರ್ಯ ನಡೆಯಿತು.

ವಿಮಾನದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ; ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಇಬ್ಬರು ಶಂಕಿತರು ವಶಕ್ಕೆ
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ
TV9 Web
| Edited By: Rakesh Nayak Manchi|

Updated on:Aug 09, 2022 | 12:02 PM

Share

ಬೆಂಗಳೂರು: ‘ಲ್ಯಾಂಡ್ ಮಾಡಬೇಡಿ, ಈ ವಿಮಾನದಲ್ಲಿ ಬಾಂಬ್ ಇದೆ’  ಎಂಬ ಬೆದರಿಕೆಯ ಸಂದೇಶವನ್ನು ಬರೆದ ಟಿಶ್ಯೂ ಪೇಪರ್ ಜೈಪುರ-ಬೆಂಗಳೂರು ಇಂಡಿಗೋ ವಿಮಾನದ ಶೌಚಾಯಲಯದಲ್ಲಿ ಪತ್ತೆಯಾಗಿದೆ. ಮಾಹಿತಿ ಪಡೆದ ಬಾಂಬ್ ಸ್ಕ್ವಾಡ್ ಮತ್ತು ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ ಸಿಬ್ಬಂದಿ ಇಂಡಿಗೋ ವಿಮಾನದಲ್ಲಿ ಶೋಧ ನಡೆಸಿದ್ದಲ್ಲದೆ ಪ್ರಯಾಣಿಕರನ್ನು ತಪಾಸಣೆ ನಡೆಸಿದರು. 174 ಪ್ರಯಾಣಿಕರ ಬ್ಯಾಗ್​ಗಳನ್ನು ಪರಿಶೀಲನೆ ನಡೆಸಲಾಗಿದೆ. ಮಾತ್ರವಲ್ಲದೆ ಅಷ್ಟೂ ಪ್ರಯಾಣಿಕರ ಮತ್ತು 12 ಸಿಬ್ಬಂದಿಗಳ ಕೈಬರಹ ಪರೀಕ್ಷೆ ನಡೆಸಲಾಗಿಯಿತು. ಅದರಂತೆ ಇಬ್ಬರು ಪ್ರಯಾಣಿಕರನ್ನು ಶಂಕಿತರು ಎಂದು ಗುರುತಿಸಲಾಯಿತು. ಘಟನೆಯಿಂದಾಗಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

ವಿಮಾನದ ಸಿಬ್ಬಂದಿಯೊಬ್ಬರು ಹಿಂಭಾಗದ ಶೌಚಾಲಯದ ನೆಲದ ಮೇಲೆ ಹರಿದ ಟಿಶ್ಯೂ ಪೇಪರ್ ಅನ್ನು ನೋಡಿದರು. ಅದರಲ್ಲಿ ಬೆದರಿಕೆ ಸಂದೇಶವಿರುವುದನ್ನು ನೋಡಿದ ಸಿಬ್ಬಂದಿ ಕ್ಯಾಪ್ಟನ್‌ಗೆ ಮಾಹಿತಿ ನೀಡಿದರು. ಕೂಡಲೇ ಎಚ್ಚೆತ್ತ ಕ್ಯಾಪ್ಟನ್, ಏರ್ ಟ್ರಾಫಿಕ್ ಕಂಟ್ರೋಲ್‌ಗೆ ಎಚ್ಚರಿಕೆ ನೀಡಿದರು. ಅದರಂತೆ ಸಿಐಎಸ್ಎಫ್ ತಂಡ ಕೆಲವೇ ನಿಮಿಷಗಳಲ್ಲಿ ಪರಿಶೀಲನೆಗೆ ಸಜ್ಜಾಯಿತು.

ಪ್ರಯಾಣಿಕರು ಭೀತಿಗೆ ಒಳಗಾಗಬಾರದು ಎಂದು ಯಾವುದೇ ಮಾಹಿತಿಯನ್ನು ನೀಡದೆ ವಿಮಾನವನ್ನು ಕಾರ್ಗೋ ಟರ್ಮಿನಲ್ ಬಳಿಯ ಪ್ರತ್ಯೇಕ ಕೊಲ್ಲಿಗೆ ಕೊಂಡೊಯ್ಯಲಾಯಿತು. ನಂತರ ಪ್ರಯಾಣಿಕರನ್ನು ಟರ್ಮಿನಲ್​ಗೆ ಕರೆದೊಯ್ಯಲಾಯಿತು. ನಂತರ ಪ್ರಯಾಣಿಕರ ಬ್ಯಾಗ್‌ಗಳನ್ನು ವಿಮಾನದಿಂದ ಹೊರತೆಗೆದು ಲೋಹದ ಶೋಧಕಗಳೊಂದಿಗೆ ಪರಿಶೀಲಿಸಲಾಯಿತು. ಸುಮಾರು 1 ಗಂಟೆಗಳ ಕಾಲ ನಡೆದ ಶೋಧಕಾರ್ಯ ನಂತರ ಇದು ಸುಳ್ಳು ಬೆದರಿಕೆ ಎಂದು ಘೋಷಿಸಲಾಯಿತು.

ಶಂಕಿತರನ್ನು ಪತ್ತೆಹಚ್ಚುವ ನಿಟ್ಟಿನಲ್ಲಿ ಸಿಐಎಸ್ಎಫ್ ತಂಡವು ಪ್ರಯಾಣಿಕರ ಕೈಬರಹವನ್ನು ಪರೀಕ್ಷೆ ನಡೆಸಿದ್ದು, ಹಿಂದಿಯಲ್ಲಿ ಬರೆಯಲು ಬರದವರನ್ನು ಪರೀಕ್ಷೆಯಿಂದ ಹೊರಗಿಡಲಾಯಿತು. ನಂತರ ಇಪ್ಪತ್ತು ಜನರನ್ನು ಶಾರ್ಟ್‌ಲಿಸ್ಟ್ ಮಾಡಿ ಪರೀಕ್ಷೆ ನಡೆಸಲಾಗಿದ್ದು, ಅಂತಿಮವಾಗಿ ಇಬ್ಬರು ಶಂಕಿತರನ್ನು ಪತ್ತೆಹಚ್ಚಿ ಬರವಣಿಗೆ ಬಗ್ಗೆ ಪ್ರಶ್ನಿಸಲಾಯಿತು. ಎರಡು ಗಂಟೆಗಳ ವಿಳಂಬದ ನಂತರ ಎಲ್ಲಾ ಪ್ರಯಾಣಿಕರನ್ನು ಮನೆಗೆ ಹೋಗಲು ಅನುಮತಿಸಲಾಯಿತು. ಇಬ್ಬರು ಶಂಕಿತರ ತನಿಖೆ ಮುಂದುವರಿದಿದೆ.

ಜೈಪುರದಿಂದ ಇಂಡಿಗೋ ವಿಮಾನ 6E-556 ಭಾನುವಾರ ರಾತ್ರಿ 9.26 ಕ್ಕೆ KIA ಗೆ ಆಗಮಿಸಿದ ವಿಮಾನದಲ್ಲಿ ಈ ಬೆದರಿಕೆ ಸಂದೇಶ ಪತ್ತೆಯಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. “ನೀಲಿ ಶಾಯಿಯಲ್ಲಿ ‘ವಿಮಾನವನ್ನು ಲ್ಯಾಂಡ್ ಮಾಡಬೇಡಿ, ಈ ವಿಮಾನದಲ್ಲಿ ಬಾಂಬ್ ಇದೆ’ ಎಂದು ಬರೆದಿರುವ ಟಿಶ್ಯೂ ಪೇಪರ್ ಪತ್ತೆಯಾಗಿರುವುದಾಗಿ ಈಶಾನ್ಯ ವಿಭಾಗದ ಉಪ ಪೊಲೀಸ್ ಆಯುಕ್ತ ಅನೂಪ್ ಎ ಶೆಟ್ಟಿ ಹೇಳಿದ್ದಾರೆ. ಬೆದರಿಕೆ ಸಂಬಂಧ ಈವರೆಗೆ ಯಾರನ್ನೂ ಬಂಧಿಸಲಾಗಿಲ್ಲ ಎಂದು ತಿಳಿಸಿದ್ದಾರೆ.

ಮತ್ತಷ್ಟು ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:02 pm, Tue, 9 August 22

Follow Us
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ