Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರ್ ಶೋ ಹೊತ್ತಲ್ಲಿ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ!

ಈಗಾಗಲೇ ದೇಶದಾದ್ಯಂತ ಹಲವು ವಿಮಾನ ನಿಲ್ದಾಣಗ, ಪ್ರತಿಷ್ಠಿತ ಶಾಲೆ, ಹೋಟೆಲ್​​ಗಳಿಗೆ ಬಾಂಬ್‌ ಬೆದರಿಕೆ ಕರೆಗಳು ಬಂದಿವೆ. ಇನ್ನು ಇದೀಗ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಬಾಂಬ್‌ ಬೆದರಿಕೆ ಇಮೇಲ್ ಬಂದಿದೆ. ಏರ್​ ಶೋ ನಡೆಯುವ ಸಂದರ್ಭದಲ್ಲೇ ಈ ಬೆದರಿಕೆ ಬಂದಿದ್ದು, ಆತಂಕಕ್ಕೆ ಕಾರಣವಾಗಿದೆ. ಈ ಸಂಬಂಧ ಬೆಂಗಳೂರು ಏರ್ ಪೋರ್ಟ್ ಪೊಲೀಸರು ಬೆದರಿಕೆ ಬಂದಿರುವ ಇಮೇಲ್ ಮೂಲ ಪತ್ತೆ ಹಚ್ಚಿದ್ದು, ತನಿಖೆ ಚುರುಕುಗೊಳಿಸಿದ್ದಾರೆ.

ಏರ್ ಶೋ ಹೊತ್ತಲ್ಲಿ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ!
Bengaluru Airport
Follow us
Shivaprasad
| Updated By: ರಮೇಶ್ ಬಿ. ಜವಳಗೇರಾ

Updated on:Feb 11, 2025 | 9:01 PM

ಬೆಂಗಳೂರು, (ಫೆಬ್ರವರಿ 11): ಏರ್​ ಶೋ ನಡೆಯುತ್ತಿರುವ ಸಂದರ್ಭದಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಬಂದಿದೆ. ದುಷ್ಕರ್ಮಿಗಳು ಫೆಬ್ರವರಿ 8ರಂದು ಇಮೇಲ್ ಮುಖಾಂತರ ಬಾಂಬ್ ಬೆದರಿಕೆ ಹಾಕಿದ್ದಾರೆ. mahanteshs6699@proton.mi ಎನ್ನುವ ಐಡಿಯಿಂದ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದು, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿಗೆ ಪತ್ರ ಬರೆದಿದ್ದೇನೆ. ಆ ನನ್ನ ಪತ್ರಕ್ಕೆ ಪ್ರತಿಕ್ರಿಯೆ ಬರದಿದ್ದರೆ ಡ್ರೋನ್ ಬಾಂಬ್ ದಾಳಿ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ.

ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿದ್ದೇನೆ. ನಾನು ಪತ್ರ ಬರೆದು ಅವರಿಂದ ಪ್ರತಿಕ್ರಿಯೆ ಕೋರಿದ್ದೇನೆ. ನನ್ನ ಪತ್ರಕ್ಕೆ ಪ್ರತಿಕ್ರಿಯೆ ಬರದಿದ್ರೆ ಬೆಂಗಳೂರು, ಚೆನ್ನೈ, ಕೇರಳದಿಂದ ಬರುವ ಫ್ಲೈಟ್​​ಗಳ ಮೇಲೆ ಡ್ರೋನ್ ಬಾಂಬ್ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

ಈ ಸಂಬಂಧ ಬೆಂಗಳೂರು ಏರ್​ಪೋರ್ಟ್​ ಪೊಲೀಸ್​ ಠಾಣೆಯಲ್ಲಿ BNS ಕಾಯ್ದೆ ಸೆಕ್ಷನ್ 125, 351, 353ರ ಅಡಿಯಲ್ಲಿ ಎಫ್​ಐಆರ್ ದಾಖಲಾಗಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ. ಇನ್ನು ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಏರ್​ಪೋರ್ಟ್​ಗೆ ಭದ್ರತೆ ಹೆಚ್ಚಿಸಲಾಗಿದೆ.

ಸದ್ಯ ಬೆಂಗಳೂರಿನ ಅರಮನೆ ಮೈದಾನದಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯುತ್ತಿದ್ದರೆ, ಅತ್ತ ಯಲಹಂಕ ವಾಯುನೆಲೆಯಲ್ಲಿ ಏರ್​ ಶೋ ನಡೆಯುತ್ತಿದೆ. ಈ ಎರಡು ಇವೆಂಟ್​ಗೆ ಹಲವಾರು ಅಂತಾರಾಷ್ಟ್ರೀಯ ಪ್ರತಿನಿಧಿಗಳು, ರಕ್ಷಣಾ ಕಂಪನಿಗಳು ಮತ್ತು ವಾಯುಯಾನ ತಜ್ಞರು ಆಗಮಿಸಿದ್ದಾರೆ. ಇದರ ಮಧ್ಯ ಈಗ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದರಿಂದ ಯಲಹಂಕ ವಾಯುನೆಲೆ ಸುತ್ತಾಮುತ್ತ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

ಯಲಹಂಕ ವಾಯುನೆಲೆ ಬಳಿ ಹೆಚ್ಚುವರಿ ಭದ್ರತಾ ಸಿಬ್ಬಂದಿ, ಡ್ರೋನ್ ಮೇಲ್ವಿಚಾರಣೆ ಮತ್ತು ಪ್ರಮುಖ ಪ್ರವೇಶ ದ್ವಾರಗಳಲ್ಲಿ ತಪಾಸಣೆಯೊಂದಿಗೆ ಕಣ್ಗಾವಲು ಇಟ್ಟಿದ್ದು, ಏರ್ ಶೋ ಪ್ರದರ್ಶನ ವೇಳೆ ಯಾವುದೇ ಅಡೆತಡೆಗಳಿಲ್ಲದೆ ಸರಾಗವಾಗಿ ನಡೆಯುವಂತೆ ಅಧಿಕಾರಿಗಳು ನೋಡಿಕೊಂಡಿದ್ದಾರೆ.

Published On - 8:52 pm, Tue, 11 February 25