ಬೆಂಗಳೂರಿನಲ್ಲೊಂದು ಲವ್ ಸೆಕ್ಸ್ ದೋಖಾ: ಮದ್ವೆಯಾಗುವುದಾಗಿ ನಂಬಿಸಿ ಟೆಕ್ಕಿ ಯುವತಿಗೆ ಕೈಕೊಟ್ಟ ಯುವಕ

ಬೆಂಗಳೂರಲ್ಲೊಂದು ಲವ್ ಸೆಕ್ಸ್ ದೋಖಾ ಪ್ರಕರಣ ಬೆಳಕಿಗೆ ಬಂದಿದೆ. ಮದುವೆ ಆಗುವುದಾಗಿ ನಂಬಿಸಿ ಟೆಕ್ಕಿ ಯುವತಿಗೆ ಯುವಕ ವಂಚನೆ ಮಾಡಿರುವಂತಹ ಘಟನೆ ಬಂಡೇಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮದುವೆ ಆಗುವಂತೆ ಯುವತಿ ಕೇಳಿದ್ದಕ್ಕೆ ಆದಿತ್ಯ ಸಿಂಗ್​​ ನಿರಾಕರಿಸಿದ್ದು, ಯುವತಿ ಮೇಲೆ ಹಲ್ಲೆ, ಚಾಕುವಿನಿಂದ ಇರಿದು ಗೋಡೆಗೆ ತಲೆ ಚಚ್ಚಿದ ಆರೋಪ ಮಾಡಲಾಗಿದೆ.

ಬೆಂಗಳೂರಿನಲ್ಲೊಂದು ಲವ್ ಸೆಕ್ಸ್ ದೋಖಾ: ಮದ್ವೆಯಾಗುವುದಾಗಿ ನಂಬಿಸಿ ಟೆಕ್ಕಿ ಯುವತಿಗೆ ಕೈಕೊಟ್ಟ ಯುವಕ
ಟೆಕ್ಕಿ ಯುವತಿ, ಆದಿತ್ಯ ಸಿಂಗ್
Follow us
Shivaprasad
| Updated By: ಗಂಗಾಧರ​ ಬ. ಸಾಬೋಜಿ

Updated on: Apr 14, 2024 | 4:55 PM

ಬೆಂಗಳೂರು, ಏಪ್ರಿಲ್​ 14: ಮದುವೆ ಆಗುವುದಾಗಿ ನಂಬಿಸಿ ಟೆಕ್ಕಿ ಯುವತಿಗೆ ಯುವಕ ವಂಚನೆ (Fraud) ಮಾಡಿರುವಂತಹ ಘಟನೆ ಬಂಡೇಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆ ಮೂಲಕ ನಗರದಲ್ಲೊಂದು ಲವ್ ಸೆಕ್ಸ್ ದೋಖಾ ಪ್ರಕರಣ ಬೆಳಕಿಗೆ ಬಂದಿದೆ. ಖಾಸಗಿ ಕಂಪನಿಯೊಂದರಲ್ಲಿ ಟೆಕ್ಕಿಯಾದ್ದ 27 ವರ್ಷದ ಯುವತಿಗೆ ಆದಿತ್ಯ ಸಿಂಗ್ ಎಂಬಾತ ವಂಚಿಸಿದ್ದಾನೆ. ಜಿಮ್​ನಲ್ಲಿ ಯುವತಿಗೆ ಆದಿತ್ಯ ಸಿಂಗ್ ಪರಿಚಯ ಆಗಿದ್ದ. ಬಳಿಕ ಲಿವಿಂಗ್ ರಿಲೇಷನ್​ಶಿಪ್​​ನಲ್ಲಿದ್ದರು.

ಮದುವೆ ಆಗುವಂತೆ ಯುವತಿ ಕೇಳಿದ್ದಕ್ಕೆ ಆದಿತ್ಯ ಸಿಂಗ್​​ ನಿರಾಕರಿಸಿದ್ದು, ಯುವತಿ ಮೇಲೆ ಹಲ್ಲೆ, ಚಾಕುವಿನಿಂದ ಇರಿದು ಗೋಡೆಗೆ ತಲೆ ಚಚ್ಚಿದ ಆರೋಪ ಮಾಡಲಾಗಿದೆ. ಸದ್ಯ ಬಂಡೇಪಾಳ್ಯ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.

ಮಗು ಮಾಡಿಕೊಳ್ಳುವ ವಿಚಾರಕ್ಕೆ ಗಲಾಟೆ, ಪತ್ನಿಯ ಕೊಲೆ: ಪತಿ ಅರೆಸ್ಟ್

ಮಗು ಮಾಡಿಕೊಳ್ಳುವ ವಿಚಾರಕ್ಕೆ ಗಂಡ ಹೆಂಡತಿ‌ ನಡುವೆ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವಂತಹ ಘಟನೆ ಬೆಂಗಳೂರಿನ HAL ಠಾಣಾ ವ್ಯಾಪ್ತಿಯ ಅನ್ನಸಂದ್ರದಲ್ಲಿ ನಡೆದಿದೆ. ಏ.12ರಂದು ಪತಿ ನವೀನ್​ನಿಂದಲೇ ಪತ್ನಿ ಗಿರಿಜಾ(30) ಕೊಲೆ ಮಾಡಲಾಗಿದೆ.

ಇದನ್ನೂ ಓದಿ: ಪ್ರತಿಷ್ಟಿತ ವಿಲ್ಲಾದಲ್ಲಿ ಕೆಲಸ ಮಾಡ್ತಿದ್ದ ಯುವಕ ಸಾವು; ಮನೆ ಮಗನನ್ನ ಕಳೆದುಕೊಂಡು ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಎಂಟು ತಿಂಗಳ ಹಿಂದೆಯಷ್ಟೇ ಗಿರಿಜಾ, ನವೀನ್ ಮದುವೆ ಆಗಿತ್ತು. ಗರ್ಭಪಾತ ಆಗಿದ್ದರಿಂದ ಸದ್ಯಕ್ಕೆ ಮಗು ಬೇಡ ಎಂದು ಗಿರಿಜಾ ಹೇಳಿದ್ದಾರೆ. ಸದ್ಯ ಆರೋಪಿ ನವೀನ್​ನನ್ನು HAL ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ದಾಖಲಾಗಿದೆ.

ವಿದ್ಯುತ್ ತಂತಿ ತಗುಲಿ ರೈತ ಸಾವು

ಯಾದಗಿರಿ: ವಡಗೇರ ತಾಲೂಕಿನ ಗೋಡಿಹಾಳ ಗ್ರಾಮದ ಬಳಿ ವಿದ್ಯುತ್ ಸ್ಪರ್ಶಿಸಿ ಹೊರಟೂರು ಗ್ರಾಮದ ರೈತ ಮರೆಪ್ಪ(43) ಎಂಬಾತ ಸಾವನ್ನಪ್ಪಿದ್ದಾನೆ. ಜಾನುವಾರುಗಳಿಗೆ ಮೇವು ತೆಗೆದುಕೊಂಡು ಹೋಗಲು ಗೋಡಿಹಾಳ ಗ್ರಾಮಕ್ಕೆ ಬಂದಿದ್ದ ವೇಳೆ ಈ ಅವಘಡ ಸಂಭವಿಸಿದೆ.

ಇದನ್ನೂ ಓದಿ: ತುಮಕೂರು: ಪ್ರೀತಿಸಿದವಳನ್ನೇ ಕೊಲೆ ಮಾಡಿದ ಪ್ರಿಯತಮ; ಆರೋಪಿ ಸಿಕ್ಕಿಬಿದ್ದಿದ್ದೇ ರೋಚಕ

ಸ್ಥಳಕ್ಕೆ‌ ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತ ರೈತನ ಕುಟುಂಬಕ್ಕೆ ವೈಯಕ್ತಿಕ ಆರ್ಥಿಕ ನೆರವು ನೀಡಿದರು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್