AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ಮೈದಾನದ ಗೇಟ್‌ ಬಿದ್ದು ಬಾಲಕ ಸಾವು ಕೇಸ್​: ಓರ್ವ ಅಧಿಕಾರಿ ಅಮಾನತು

ಬಿಬಿಎಂಪಿ ಮೈದಾನದ ಗೇಟ್‌ ಬಿದ್ದು ಬಾಲಕ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಓರ್ವ ಅಧಿಕಾರಿಯ ತಲೆದಂಡವಾಗಿದೆ. ಸಹಾಯಕ ಅಭಿಯಂತರ ಟಿ.ಶ್ರೀನಿವಾಸ ರಾಜುರನ್ನು ಕರ್ತವ್ಯ ನಿರ್ಲಕ್ಷ್ಯ ಆರೋಪದಡಿ ಅಮಾನತು ಮಾಡ ಬಿಬಿಎಂಪಿ ಅಡಳಿತ ವಿಭಾಗದ ಉಪ ಆಯುಕ್ತರಿಂದ ಆದೇಶ ಹೊರಡಿಸಲಾಗಿದೆ.

ಬಿಬಿಎಂಪಿ ಮೈದಾನದ ಗೇಟ್‌ ಬಿದ್ದು ಬಾಲಕ ಸಾವು ಕೇಸ್​: ಓರ್ವ ಅಧಿಕಾರಿ ಅಮಾನತು
ಬಿಬಿಎಂಪಿ ಮೈದಾನದ ಗೇಟ್‌ ಬಿದ್ದು ಬಾಲಕ ಸಾವು ಕೇಸ್​: ಓರ್ವ ಅಧಿಕಾರಿ ಅಮಾನತು
ಶಾಂತಮೂರ್ತಿ
| Edited By: |

Updated on: Sep 23, 2024 | 11:08 PM

Share

ಬೆಂಗಳೂರು, ಸೆಪ್ಟೆಂಬರ್​ 23: ಬಿಬಿಎಂಪಿ (bbmp) ಮೈದಾನದ ಗೇಟ್‌ ಬಿದ್ದು ಬಾಲಕ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಹಾಯಕ ಅಭಿಯಂತರ ಟಿ.ಶ್ರೀನಿವಾಸ ರಾಜು ಅಮಾನತು ಮಾಡಿ ಬಿಬಿಎಂಪಿ ಅಡಳಿತ ವಿಭಾಗದ ಉಪ ಆಯುಕ್ತರಿಂದ ಆದೇಶ ಹೊರಡಿಸಲಾಗಿದೆ. ಗೇಟ್‌ನ ಸಾಮರ್ಥ್ಯಕ್ಕೆ ತಕ್ಕಂತೆ ಕೀಲುಗಳನ್ನು ಅಳವಡಿಸದಿರುವುದು, ಸರಿಯಾದ ಸಮಯಕ್ಕೆ ನಿರ್ವಹಣೆ ಮಾಡದ ಆರೋಪದಡಿ ಸಸ್ಪೆಂಡ್ ಮಾಡಲಾಗಿದೆ.

2022ರಲ್ಲಿ ದತ್ತಾತ್ರೇಯ ವಾರ್ಡ್‌ನ ಎಇ ಆಗಿದ್ದ ಶ್ರೀನಿವಾಸ ರಾಜು, ಪ್ರಸ್ತುತ ರಾಜಾಜಿನಗರ ವಾರ್ಡ್‌ನ ಎಇ ಆಗಿದ್ದರು. ಘಟನೆ ಬಗ್ಗೆ ಮೂರು ದಿನಗಳಲ್ಲಿ ನೋಟಿಸ್‌ಗೆ ಸೂಕ್ತ ಉತ್ತರ ನೀಡುವಂತೆ ಇಇ ವೆಂಕಟೇಶ್‌ಗೆ ಸೂಚಿಸಲಾಗಿದೆ.

ಇದನ್ನೂ ಓದಿ: ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್ ಗುಂಡೂರಾವ್

ನಿನ್ನೆ ಘಟನೆ ನಡೆದ ಬಳಿಕ ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್ ಬಾಲಕನ ಪೋಷಕರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ್ದ ಅವರು, ಸಂಬಂಧಪಟ್ಟವರಿಂದ ವರದಿ ತರಿಸಿಕೊಳುತ್ತೇವೆ ಮತ್ತು ಈ ಬಗ್ಗೆ ತನಿಖೆ ಮಾಡುತ್ತೇವೆ ಎಂದು ಹೇಳಿದ್ದರು.

ಬಿಬಿಎಂಪಿ ಐದು ಲಕ್ಷ ರೂ., ಗಾಂಧಿನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ, ಐದು ಲಕ್ಷ ರೂ. ಒಟ್ಟು ನಿರಂಜನ ಕುಟುಂಬಕ್ಕೆ ದಿನೇಶ್ ಗುಂಡುರಾವ್ ಹತ್ತು ಲಕ್ಷ ರೂ ಪರಿಹಾರ ಘೋಷಣೆ ಮಾಡಿದ್ದಾರೆ.

ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ 10 ವರ್ಷದ ಬಾಲಕ ನಿರಂಜನ್ ಮೃತಪಟ್ಟಿದ್ದಾನೆ. ನಿನ್ನೆ ಸಂಜೆ 4 ಘಂಟೆ ಸುಮಾರಿಗೆ ಗಾಂಧಿನಗರ ವಿಧಾನಸಭಾ ಕ್ಷೇತ್ರದ ರಾಜಾಶಂಕರ್ ಆಟದ ಮೈದಾನದಲ್ಲಿ, ಕಬ್ಬಿಣದ ಗೇಟ್ ಬಾಲಕನ ತಲೆ ಮೇಲೆ ಬಿದ್ದು ಮೃತಪಟ್ಟಿದ್ದಾನೆ. ಗದಗ ಮೂಲದವರಾಗಿರುವ ಮೃತ ನಿರಂಜನ್ ಪೋಷಕರು ಬೆಂಗಳೂರಿನಲ್ಲಿ ಪ್ಯಾಲೇಸ್ ಗುಟ್ಟಹಳ್ಳಿಯ ವಿವೇಕಾನಂದ ಬ್ಲಾಕ್​ನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು.

ಬಾಲಕನ ಕಣ್ಣುಗಳು ದಾನ 

ಗಾರೆ ಕೆಲಸ, ಆಟೋ ಚಾಲನೆ ಮಾಡಿ ಮಕ್ಕಳನ್ನು ಓದಿಸುತ್ತಿದ್ದರು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮುಗಿಸಿ, ಮೃತ ನಿರಂಜನ್​ನ ಎರಡು ಕಣ್ಣುಗಳನ್ನ ತಂದೆ ದಾನ ಮಾಡಿದ್ದಾರೆ.  ಲಯನ್ಸ್ ಇಂಟರ್ ನ್ಯಾಷನಲ್​ ಐ ಬ್ಯಾಂಕ್​ಗೆ ಕಣ್ಣುಗಳನ್ನ ದಾನ ಮಾಡಿ ಸಾರ್ಥಕತೆ ಮೆರೆದಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಬಿಬಿಎಂಪಿ ಮೈದಾನದ ಗೇಟ್​ ಬಿದ್ದು 7 ವರ್ಷದ ಮಗು ಸಾವು

ಮರಣೋತ್ತರ ಪರೀಕ್ಷೆ ಮುಗಿದ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಿಂದ ಮನೆಗೆ ಮೃತದೇಹವನ್ನ ಶಿಫ್ಟ್ ಮಾಡಲಾಗಿತ್ತು. ಬಿಬಿಎಂಪಿ ನಿರ್ಲಕ್ಷ್ಯವೇ ಬಾಲಕನ ಸಾವಿಗೆ ಕಾರಣ ಆಗಿದ್ರೂ, ಈ ವರೆಗೂ ಮೃತ ಬಾಲಕನ ಕುಟುಂಬವನ್ನ ಬಿಬಿಎಂಪಿ ಅಧಿಕಾರಿಗಳು ಭೇಟಿ ನೀಡಿ ಸಾಂತ್ವನವನ್ನು ಹೇಳಿಲ್ಲವಂತೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ