ದೇವನಹಳ್ಳಿ:ಇಂದು ನಾಡಿನೆಲ್ಲೆಡೆ ಷಷ್ಠಿ ಆಚರಿಸುತ್ತಿದ್ದು, ಈ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯದಲ್ಲಿ ಬ್ರಹ್ಮರಥೋತ್ಸವ ನಡೆಯುತ್ತಿದೆ. ಇದೇ ಮೊದಲ ಬಾರಿಗೆ ಸರಳವಾಗಿ ಬ್ರಹ್ಮರಥೋತ್ಸವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ದೇವಸ್ಥಾನದಲ್ಲಿ ನಡೆಸಲಾಗುತ್ತಿದೆ.
ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯದಲ್ಲಿ ಬ್ರಹ್ಮರಥೋತ್ಸವದ ಹಿನ್ನೆಲೆಯಲ್ಲಿ ದೇವಸ್ಥಾನದ ಆವರಣದಲ್ಲಿ ಚಿಕ್ಕ ರಥದಲ್ಲಿ ರಥೋತ್ಸವ ನಡೆಯುತ್ತಿದ್ದು, ದೇವಸ್ಥಾನದ ಸಿಬ್ಬಂದಿ ಅಧಿಕಾರಿಗಳು ಮತ್ತು ಕೆಲ ಗಣ್ಯರಿಗೆ ಮಾತ್ರ ರಥೋತ್ಸವದಲ್ಲಿ ಭಾಗಿಯಾಗಲು ಅವಕಾಶ ನೀಡಲಾಗಿದೆ. ಇನ್ನು ಎಂದಿನಂತೆ ಬೆಳಗಿನಿಂದ ವಿಶೇಷ ಪೂಜಾ ಕೈಂಕರ್ಯಗಳು ಆರಂಭವಾಗಿದ್ದು, 11:30 ಕ್ಕೆ ನಡೆಯಲಿರುವ ರಥೋತ್ಸವದ ನಂತರ ದೇವರ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ನೀಡಲು ವ್ಯವಸ್ಥೆ ಮಾಡಲಾಗಿದೆ.
ಚಂಪಾಷಷ್ಠಿ: ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ಭಕ್ತರ ಮಹಾಪೂರ