AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಠ್ಯ ಪರಿಷ್ಕರಣೆ ವಿಚಾರದಲ್ಲಿ ಬ್ರಾಹ್ಮಣ ಸಮುದಾಯವನ್ನು ಗುರಿಯಾಗಿಸಲಾಗುತ್ತಿದೆ: ರೋಹಿತ್ ಚಕ್ರತೀರ್ಥ

ಪಠ್ಯ ಪರಿಷ್ಕರಣೆ ವಿಚಾರದಲ್ಲಿ ಬ್ರಹ್ಮಣ ಸಮಾಜವನ್ನು ಗುರಿಯಾಗಿಸಲಾಗಿದೆ ಎಂದು ನಿರ್ಗಮಿತ ಪಠ್ಯ ಪರಿಷ್ಕರಣೆ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಹೇಳಿಕೆ ನೀಡಿದ್ದಾರೆ.

ಪಠ್ಯ ಪರಿಷ್ಕರಣೆ ವಿಚಾರದಲ್ಲಿ ಬ್ರಾಹ್ಮಣ ಸಮುದಾಯವನ್ನು ಗುರಿಯಾಗಿಸಲಾಗುತ್ತಿದೆ: ರೋಹಿತ್ ಚಕ್ರತೀರ್ಥ
ರೋಹಿತ್ ಚಕ್ರತೀರ್ಥ
TV9 Web
| Edited By: |

Updated on:Jun 04, 2022 | 2:50 PM

Share

ಬೆಂಗಳೂರು: ಪಠ್ಯ ಪರಿಷ್ಕರಣೆ ವಿಚಾರದಲ್ಲಿ ಒಂದು ಸಮುದಾಯವನ್ನು ಗುರಿಯಾಗಿಸಲಾಗುತ್ತಿದೆ ಎಂದು ನಿರ್ಗಮಿತ ಪಠ್ಯಪುಸ್ತಕ ಸಮಿತಿ (Textbook Revision Committee) ಅಧ್ಯಕ್ಷ ರೊಹಿತ್ ಚಕ್ರತೀರ್ಥ (Rohith Chakrathirtha) ಅವರು ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಒಕ್ಕಲಿಗರಿಗೆ, ಲಿಂಗಾಯತರಿಗೆ ಅವಮಾನ ಆಯ್ತು ಅಂತ ಹೇಳುತ್ತಿದ್ದಾರೆ. ಆದರೆ ಪಠ್ಯಪುಸ್ತಕ ಸಮಿತಿಯನ್ನ ಟಾರ್ಗೆಟ್ ಮಾಡುತ್ತಿರುವ ಜೊತೆಗೆ ಬ್ರಾಹ್ಮಣ ಸಮುದಾಯವನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಬ್ರಾಹ್ಮಣರ ಬಗ್ಗೆ ಅವಹೇಳನ ಪದಗಳನ್ನು ಬಳಕೆ ಮಾಡುತ್ತಿದ್ದಾರೆ. ನಾನು ಎಂದೂ ಬ್ರಾಹ್ಮಣ ಪರ, ಬ್ರಾಹ್ಮಣ ವಿರುದ್ಧ ಮಾತಾಡಿಲ್ಲ. ನಾನು ಬ್ರಾಹ್ಮಣ ಅಂತ ಸಿಂಪತಿ ತೆಗೆದುಕೊಂಡಿಲ್ಲ ಎಂದು ಸ್ಪಷ್ಟನೆ ನೀಡಿದರು.

ಇದನ್ನೂ ಓದಿ: ರೋಹಿತ್ ಚಕ್ರತೀರ್ಥ ಸಮಿತಿಯಿಂದ ಮತ್ತೊಂದು ಯಡವಟ್ಟು! 3, 4ನೇ ತರಗತಿ ಪುಸ್ತಕಗಳಲ್ಲಿದೆ ಒಂದೇ ಪದ್ಯ ​​ ರೋಹಿತ್ ಚಕ್ರತೀರ್ಥ ಸಮಿತಿ ಒಂದೇ ಪದ್ಯ ಎರಡೂ ತರಗತಿಗೆ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಸಿದ ರೋಹಿತ್ ಚಕ್ರತೀರ್ಥ ಅವರು, 1 ರಿಂದ 10ನೇ ತರಗತಿಯವರೆಗೆ ಮಾತ್ರ ಪರಿಷ್ಕರಣೆ ಮಾಡಿದ್ದೇವೆ. ಪ್ರಥಮ, ದ್ವೀತಿಯ, ತೃತೀಯ, ಭಾಷಾಗಳು ಮಾತ್ರ ಪರಿಷ್ಕರಣೆ ಮಾಡಿದ್ದೇವೆ. ಅದು ಬಿಟ್ಟರೆ ನಲಿಕಲಿ ಪಠ್ಯ ಪರಿಷ್ಕರಣೆ ನಮ್ಮ ಸಮಿತಿ ಮಾಡಿಲ್ಲ. ನಮ್ಮ ಸಮಿತಿ ಪಠ್ಯ ಪರಿಷ್ಕರಣೆಯಲ್ಲಿ ಯಾವುದೇ ತಪ್ಪು ಮತ್ತು ವಿಷಯವನ್ನು ಪುನಾರಾವರ್ತಿಸಿಲ್ಲ. ಇದು ಸುಳ್ಳು ಸುದ್ದಿ. ವಿಚಾರಗಳಲ್ಲಿ ಸುಳ್ಳು ಸುದ್ದಿಗಳು ಹಬ್ಬಸ್ತಿದ್ದಾರೆ ಎಂದರು.

ಇದನ್ನೂ ಓದಿ: Rohith Chakrathirtha: ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪರಿಷ್ಕರಣೆ ಸಮಿತಿ ವಿಸರ್ಜನೆ; ಸಿಎಂ ಹೇಳಿಕೆಯ ಒಳಾರ್ಥಗಳು ಹಲವು

ಪಠ್ಯ ಪರಿಷ್ಕರಣೆ ವಿಚಾರದಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಬಸವಣ್ಣ ವಿಚಾರವಾಗಿ ಪರಿಷ್ಕೃತ ಪಠ್ಯದಲ್ಲಿ ಬರಗೂರು ರಾಮಚಂದ್ರಪ್ಪ ಪುಸ್ತಕ ಬಂದಿತ್ತು. ಅದರಲ್ಲಿ ಇರುವ ಅಷ್ಟು ವಿಚಾರಗಳು ಹಾಗೆ ಉಳಿಸಿದ್ದೇವೆ. ಆದರೆ ಈಗ ನಮ್ಮ ವಿರುದ್ಧ ಹೋರಾಟ, ಆಂದೋಲನ ಮಾಡುತ್ತಿದ್ದಾರೆ. ಇವರು ಯಾರು ಕೂಡ ಬರಗೂರು ಸಮಿತಿ ಏನ್ ಮಾಡಿದ್ದರು ಅಂತ ನೋಡಲ್ಲ, ಕೇಳಲ್ಲ. ಈ ವಿಚಾರದ ಹಿಂದೆ ಕಾಣದ ಕೈಗಳು ಇವೆ. ಬರಗೂರು ಪಠ್ಯ ಪರಿಷ್ಕರಣೆ ಹಾಗೂ ನಮ್ಮ ಸಮಿತಿ ಮಾಡಿದ ಪಠ್ಯ ಪರಿಷ್ಕರಣೆ ಪುಸ್ತಕ ನೋಡಿದರೆ ಎಲ್ಲಾ ವಿವರಗಳು ಗೊತ್ತಾಗಲಿದೆ ಎಂದು ಹೇಳಿದರು.

ಇದನ್ನೂ ಓದಿ: ಪಠ್ಯಪುಸ್ತಕ ಪರಿಷ್ಕರಣೆ ಕುರಿತ ವರದಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ನೀಡುವೆ: ಬಿಸಿ ನಾಗೇಶ್

ರೋಹಿತ್ ಚಕ್ರತೀರ್ಥ ಅವರ ನೇತೃತ್ವದಲ್ಲಿ ಪಠ್ಯಪುಸ್ತಕ ಪರೀಷ್ಕರಣೆ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಸದ್ಯ ಪಠ್ಯ ಪರಿಷ್ಕರಣೆ ಸಮಿತಿ ಕಾರ್ಯ ಮುಗಿದಿರುವುದರಿಂದ ಕರ್ನಾಟಕ ಸರಕಾರವು ನಿನ್ನೆ ರೋಹಿತ್ ಚಕ್ರತೀರ್ಥ ಸಮಿತಿಯನ್ನು ವಿಸರ್ಜಿಸಿದೆ. ಅಷ್ಟೇ ಅಲ್ಲದೇ ಬಸವಣ್ಣನವರು ಕುರಿತಾದ ಗೊಂದಲ ಪರಿಹರಿಸಲು ಮತ್ತೊಂದು ಸಮಿತಿ ರಚಿಸಿ ಆ ಸಮಿತಿಯ ಮೂಲಕ ಪಾಠವನ್ನು ಪರಿಶೀಲಿಸುವ ಬಗ್ಗೆ ಮುಖ್ಯಮಂತ್ರಿಯವರು ಭರವಸೆ ನೀಡಿದ್ದಾರೆ.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:50 pm, Sat, 4 June 22

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ