AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ದೇವಸ್ಥಾನದ ಬ್ರಾಹ್ಮಣ ಸಮುದಾಯದ ಅರ್ಚಕ, ಅಡುಗೆ ಕೆಲಸದವರಿಗೆ ನೆರವು ನೀಡಲು ಮುಖ್ಯಮಂತ್ರಿಗಳಿಗೆ ಮನವಿ

ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪರನ್ನು ಭೇಟಿ ಮಾಡಿದ ಸಚ್ಚಿದಾನಂದ ಮೂರ್ತಿ ಮನವಿ ನೀಡಿದರು. ವೀರಶೈವ ಅಭಿವೃದ್ಧಿ ನಿಗಮದ ಅಧ್ಯಕ್ಷ ಪರಮಶಿವಯ್ಯ ಹಾಗೂ ಹಿರಿಯೂರು ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಉಪಸ್ಥಿತರಿದ್ದರು.

ಖಾಸಗಿ ದೇವಸ್ಥಾನದ ಬ್ರಾಹ್ಮಣ ಸಮುದಾಯದ ಅರ್ಚಕ, ಅಡುಗೆ ಕೆಲಸದವರಿಗೆ ನೆರವು ನೀಡಲು ಮುಖ್ಯಮಂತ್ರಿಗಳಿಗೆ ಮನವಿ
ಬಿಎಸ್ ಯಡಿಯೂರಪ್ಪಗೆ ಮನವಿ
TV9 Web
| Updated By: ganapathi bhat|

Updated on:Aug 14, 2021 | 12:50 PM

Share

ಬೆಂಗಳೂರು: ಬ್ರಾಹ್ಮಣ ಸಮುದಾಯದ ಖಾಸಗಿ ದೇವಸ್ಥಾನದ ಅರ್ಚಕರು, ಪುರೋಹಿತರು, ಅಡುಗೆ ಕೆಲಸದವರಿಗೆ ನೆರವು ನೀಡಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಇಂದು (ಜೂನ್ 1) ಮನವಿ ಸಲ್ಲಿಸಲಾಯಿತು. ಧನಸಹಾಯ, ದಿನಸಿ ಕಿಟ್ ಒದಗಿಸುವಂತೆ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪರನ್ನು ಭೇಟಿ ಮಾಡಿದ ಸಚ್ಚಿದಾನಂದ ಮೂರ್ತಿ ಮನವಿ ನೀಡಿದರು. ವೀರಶೈವ ಅಭಿವೃದ್ಧಿ ನಿಗಮದ ಅಧ್ಯಕ್ಷ ಪರಮಶಿವಯ್ಯ ಹಾಗೂ ಹಿರಿಯೂರು ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಉಪಸ್ಥಿತರಿದ್ದರು.

ಕೊರೊನಾ ಎರಡನೇ ಅಲೆಯಿಂದಾಗಿ ಅನೇಕ ಮಂದಿ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಲಾಕ್ಡೌನ್ನಿಂದ ಕೆಲಸ ಕಾರ್ಯಗಳಿಲ್ಲದೆ ಊಟಕ್ಕೂ ಪರದಾಡುವಂತ ಪರಿಸ್ಥಿತಿ ಎದುರಾಗಿದೆ. ಲಾಕ್‌ಡೌನ್‌ನಿಂದ ರಾಜ್ಯದ 35,000 ದೇಗುಲಗಳ ಅರ್ಚಕರು ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ.

ಕಳೆದ 2 ತಿಂಗಳಿಂದ ದೇಗುಲಗಳತ್ತ ಜನರು ಬರುತ್ತಿಲ್ಲ. ಆದ್ರೂ ಸಂಪ್ರದಾಯದಂತೆ ನಾವು ಪೂಜೆ ಸಲ್ಲಿಸುತ್ತಿದ್ದೇವೆ. ಇದರಿಂದ ಬಾರಿ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದೇವೆ. ನಮ್ಮ ಬಳಿ ಆಸ್ಪತ್ರೆಗಳಿಗೆ ಹೋಗುವುದಕ್ಕೂ ಹಣ ಇಲ್ಲ. ಕನಿಷ್ಠ ಆಹಾರ ಕಿಟ್‌ಗಳನ್ನು ಕೂಡ ಯಾರೂ ನೀಡ್ತಿಲ್ಲ. ಹಲವು ಬಾರಿ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದೇವೆ. ಆದರೆ ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದು ಈ ಮೊದಲು ಕೂಡ ಅರ್ಚಕರು ನೋವು ತೋಡಿಕೊಂಡಿದ್ದರು.

ಒಂದು ವರ್ಷಕ್ಕೆ 48 ಸಾವಿರ ರೂ. ಹಣ ನೀಡುತ್ತಾರೆ. ಇದರಿಂದ ನಾವು ಹೇಗೆ ಜೀವನ ಮಾಡೋದೆಂದು ಅರ್ಚಕರೊಬ್ಬರು ಪ್ರಶ್ನೆ ಮಾಡಿದ್ದರು. ನಮಗೂ ಸಿಎಂ ಪ್ಯಾಕೇಜ್ ಘೋಷಿಸಿದ್ದರೆ ಒಳ್ಳೆಯದು ಎಂದು ಅಖಿಲ ಕರ್ನಾಟಕ ಹಿಂದೂ ದೇಗುಲಗಳ ಅರ್ಚಕರ ಸಂಘದಿಂದ ಮನವಿ ಮಾಡಿಕೊಂಡಿದ್ದರು. ಅರ್ಚಕರ ಸಂಘದ ಮುಖ್ಯ ಕಾರ್ಯದರ್ಶಿ ಎಸ್.ಕೆ.ಎನ್‌ ಧೀಕ್ಷಿತ್ ಹಾಗೂ ಸಹ ಕಾರ್ಯದರ್ಶಿ ವೇದ ಬ್ರಹ್ಮಶ್ರೀ ಉಮೇಶ್ ಶರ್ಮಾ ಈಗಾಗಲೇ ಮುಜರಾಯಿ ಸಚಿವರು ಹಾಗೂ ಮುಖ್ಯಮಂತ್ರಿಗಳಿಗೆ ಪತ್ರವನ್ನೂ ಕೂಡಾ ಬರೆದು ಮನವಿ ಮಾಡಿಕೊಂಡಿದ್ದರು. ಆದರೆ ಇರುವರೆಗೂ ಯಾವುದೇ ಸ್ಪಷ್ಟನೆ ಸಿಕ್ಕಿಲ್ಲ. ಅರ್ಚಕರು ಸಂಕಷ್ಟದಲ್ಲಿದ್ದಾರೆ.

ಇದನ್ನೂ ಓದಿ: ಅನುದಾನ ರಹಿತ ಶಾಲಾ ಶಿಕ್ಷಕರಿಗೆ ಪ್ಯಾಕೇಜ್ ಘೋಷಣೆ ಕುರಿತು ಚರ್ಚೆ ನಡೆಸಿದ ಶಿಕ್ಷಣ ಸಚಿವ ಸುರೇಶ್ ಕುಮಾರ್

ಆಟೋ, ಟ್ಯಾಕ್ಸಿ, ಮ್ಯಾಕ್ಸಿ ಕ್ಯಾಬ್ ಚಾಲಕರು ಕರ್ನಾಟಕ ಸರ್ಕಾರದ ಕೋವಿಡ್ ಪ್ಯಾಕೇಜ್ ರೂ. 3000 ಪಡೆಯುವುದು ಹೇಗೆ?

Published On - 4:53 pm, Tue, 1 June 21

ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ