Breaking: ಬಿಎಂಟಿಸಿ ಬಸ್ ಹರಿದು ಪಾದಚಾರಿ ಮಹಿಳೆ ಸಾವು
ಬಿಎಂಟಿಸಿ ಬಸ್ ಹರಿದು ಪಾದಚಾರಿ ಮಹಿಳೆ ಸ್ಥಳದಲ್ಲೇ ಸಾವು. ಬೆಂಗಳೂರಿನ ನಾಗರಬಾವಿಯ ಖಾಸಗಿ ಹೋಟೆಲ್ ಬಳಿ ಈ ದುರಂತ ನಡೆದಿದೆ.
ಬೆಂಗಳೂರು: ಬಿಎಂಟಿಸಿ ಬಸ್ ಹರಿದು ಪಾದಚಾರಿ ಮಹಿಳೆ ಸ್ಥಳದಲ್ಲೇ ಸಾವು. ಬೆಂಗಳೂರಿನ ನಾಗರಬಾವಿಯ ಖಾಸಗಿ ಹೋಟೆಲ್ ಬಳಿ ಈ ದುರಂತ ನಡೆದಿದೆ. ರಸ್ತೆ ದಾಟುತ್ತಿದ್ದಾಗ ಸುಮಾರು 60 ವರ್ಷದ ಮಹಿಳೆ ದುರ್ಮರಣ ಹೊಂದಿದ್ದಾರೆ. ಇದೀಗ ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಬಿಎಂಟಿಸಿ ಬಸ್ ಗುದ್ದಿದ ಪರಿಣಾಮ ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ನಾಗರಬಾವಿ ಸರ್ಕಲ್ ಬಳಿ ಈ ಘಟನೆ ನಡೆದಿದೆ. ರಸ್ತೆ ದಾಟುವ ವೇಳೆ ಬಸ್ ಗುದ್ದಿದ ಹಿನ್ನೆಲೆ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ಮಹಿಳೆಯ ವಯಸ್ಸು ಅಂದಾಜು 55 ವಯಸ್ಸಿನವರಾಗಿದ್ದು. ಇಂದು ಸಂಜೆ 5:15ರ ಸುಮಾರಿಗೆ ಈ ಘಟನೆ ನಡೆದಿದೆ. ಮೃತದೇಹವನ್ನ ನಾಗರಬಾವಿಯ ಜಿಎಂ ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಮೃತ ಮಹಿಳೆ ಸಂತೋಷಿ ಎಂದು ಹೇಳಲಾಗಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದು ತನಿಖೆಯನ್ನು ನಡೆಸುತ್ತಿದ್ದಾರೆ.
Published On - 6:05 pm, Thu, 1 September 22