Breaking News: ಭಾರತ್ ಜೋಡೋ ಯಾತ್ರೆಯ ನಡುವೆ ಡಿ.ಕೆ ಶಿವಕುಮಾರ್​ಗೆ ಇಡಿ ಸಮನ್ಸ್

ಭಾರತ್ ಜೋಡೋ ಯಾತ್ರೆಯ ನಡುವೆ ಜಾರಿ ನಿರ್ದೇಶನಾಲಯ ತಮಗೆ ಸಮನ್ಸ್ ನೀಡಿದೆ ಎಂದು ಕರ್ನಾಟಕ ಕಾಂಗ್ರೆಸ್ ಮುಖ್ಯಸ್ಥ ಡಿಕೆ ಶಿವಕುಮಾರ್ ಹೇಳಿದ್ದಾರೆ.

Breaking News: ಭಾರತ್ ಜೋಡೋ ಯಾತ್ರೆಯ ನಡುವೆ ಡಿ.ಕೆ ಶಿವಕುಮಾರ್​ಗೆ ಇಡಿ ಸಮನ್ಸ್
DK Shivakumar
Updated By: ಗಂಗಾಧರ​ ಬ. ಸಾಬೋಜಿ

Updated on: Sep 15, 2022 | 4:27 PM

ಬೆಂಗಳೂರು: ಭಾರತ್ ಜೋಡೋ ಯಾತ್ರೆ ಮತ್ತು ಅಧಿವೇಶನದ ನಡುವೆಯು ನನಗೆ ಮತ್ತೆ ಇಡಿ ಸಮನ್ಸ್ ನೀಡಿದ್ದಾರೆ. ನಾನು ಸಹಕರಿಸಲು ಸಿದ್ಧನಿದ್ದೇನೆ. ಆದರೆ ಈ ಸಮಯದಲ್ಲಿ ಸಮನ್ಸ್ ನೀಡಿರುವುದು ರಾಜಕೀಯ ಸಂಚು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ನನಗೆ ಕಿರುಕುಳ ನೀಡುತ್ತಿದ್ದಾರೆ ಸಾಂವಿಧಾನಿಕ ಮತ್ತು ರಾಜಕೀಯ ಕರ್ತವ್ಯ ನಿರ್ವಹಿಸಲು ಅಡ್ಡಿಯಾಗುತ್ತಿದೆ ಎಂದು ಡಿ.ಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ. ಈ ಹಿಂದೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್​ಗೆ ಆಗಸ್ಟ್ 2ರಂದು ಇಡಿ ಕೋರ್ಟ್​ನಿಂದ ಬಿಗ್​ ರಿಲೀಫ್​ ನೀಡಲಾಗಿತ್ತು.

ಕೇಂದ್ರದ ವಿರುದ್ಧ ರಣದೀಪ್​ಸಿಂಗ್ ಸುರ್ಜೇವಾಲ ಆಕ್ರೋಶ:

ಇಡಿ ನೋಟಿಸ್​ ವಿಚಾರವಾಗಿ ಕೇಂದ್ರದ ವಿರುದ್ಧ ರಣದೀಪ್​ಸಿಂಗ್ ಸುರ್ಜೇವಾಲ ಆಕ್ರೋಶ ವ್ಯಕ್ತಪಡಿಸಿದ್ದು, ಮೇಕೆದಾಟು ಯಾತ್ರೆ, ಆ.3ರ ರ್ಯಾಲಿ, ಆ.15ರ ಫ್ರೀಡಂಮಾರ್ಚ್​, 40% ಕಮಿಷನ್ ಹಗರಣ, ಬೆಂಗಳೂರು ಪ್ರವಾಹದ ವೈಫಲ್ಯ ಬಹಿರಂಗಪಡಿಸಿದ್ದು ಮೋದಿ ಸರ್ಕಾರವನ್ನು ಕೆರಳಿಸಿದೆ. ಬೊಮ್ಮಾಯಿ ಸರ್ಕಾರ ಕರ್ನಾಟಕವನ್ನು ಲೂಟಿ ಮಾಡುತ್ತಿದೆ. CM ಅಜಾಗರೂಕತೆಯಿಂದ ದಿನಕ್ಕೊಂದು ಹಗರಣ ಎಂದು ಕುಖ್ಯಾತಿ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಕಿಡಿ ಕಾರಿದ್ದಾರೆ.

ಹಿನ್ನೆಲೆ:

ಡಿ.ಕೆ.ಶಿವಕುಮಾರ್  ಅವರ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ  ಕೋರ್ಟ್‌ನಲ್ಲಿ ಮೇ 28 ವಿಚಾರಣೆ ನಡೆದಿತ್ತು. ನ್ಯಾಯಮೂರ್ತಿ ವಿಕಾಸ್‌ ದುಲ್‌ರವರ ಪೀಠದಲ್ಲಿ ವಿಚಾರಣೆ ನಡೆದಿದ್ದು. ವಾದವನ್ನು ಆಲಿಸಿದ ಇಡಿ ವಿಶೇಷ ನ್ಯಾಯಾಲಾಯ ವಿಚಾರಣೆಯನ್ನು ಮೇ 31ಕ್ಕೆ ವಿಚಾರಣೆ ಮುಂದೂಡಿದ್ದರು. ಇಂದು ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಾಲಯ ಡಿಕೆಶಿಗೆ ಸಮನ್ಸ್ ನೀಡಿದೆ.

2019ರಲ್ಲಿ ಅಕ್ರಮ ಹಣ ವರ್ಗಾವಣೆ ಕೇಸ್‌ನಲ್ಲಿ ಐಟಿ ಅಧಿಕಾರಿಗಳು  ಡಿ.ಕೆ.ಶಿ ಮನೆ ಮೇಲೆ ದಾಳಿ ಮಾಡಿದ್ದರು. ಈ ಸಂಬಂಧ ಎರಡೂವರೆ ವರ್ಷದ  ಬಳಿಕೆ ಆರೋಪ ಪಟ್ಟಿ ತಯಾರಿಸಿದ ಇಡಿ ಅಧಿಕಾರಿಗಳು ದೆಹಲಿಯ ವಿಶೇಷ ನ್ಯಾಯಾಲಯಗೆ ಆರೋಪ ಪಟ್ಟಿಯನ್ನು ಸಲ್ಲಿಸಿದ್ದರು.  2019ರಲ್ಲಿ ಡಿಕೆಶಿ ಹಾಗೂ ಆಪ್ತರ ನಿವಾಸಗಳ ಮೇಲೆ ಐಟಿ ದಾಳಿ ನಡೆದಿತ್ತು. ದಾಳಿ ವೇಳೆ 8 ಕೋಟಿ ರೂಪಾಯಿ ನಗದು ಪತ್ತೆಯಾಗಿತ್ತು. ಬಳಿಕ ಡಿಕೆಶಿ ವಿರುದ್ಧ ಪ್ರಕರಣ ಇಡಿಗೆ ವರ್ಗಾವಣೆಗೊಂಡಿತ್ತು. ಇಡಿ ಅಧಿಕಾರಿಗಳು ಡಿಕೆಶಿಯನ್ನು ಬಂಧಿಸಿ ವಿಚಾರಣೆ ನಡೆಸಿದರು.

ರಾಜದ್ಯ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 3:19 pm, Thu, 15 September 22