TV9 Kannada News highlights: ED ಪರಿಶೀಲನೆ ಅಂತ್ಯ ಬೆನ್ನಲ್ಲೇ ಸಚಿವ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Karnataka News Today Live Updates: ಸಚಿವ ಸತೀಶ್ ಜಾರಕಿಹೊಳಿ ಮನೆಗಳ ಮೇಲೆ ಜಾರಿ ನಿರ್ದೇಶನಾಲಯ ನಡೆಸಿರುವ ದಾಳಿ ಮತ್ತು ಶೋಧಕಾರ್ಯ ಗುರುವಾರ ಸಹ ಮುಂದುವರೆದಿದೆ. ಮತ್ತೊಂದಡೆ, ಬಿಜೆಪಿ ಹಮ್ಮಿಕೊಂಡಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆ ಇಂದು ಸಮರೋಪಗೊಳ್ಳಲಿದೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸರ್ಕಾರಕ್ಕೆ ನೂರು ದಿನ ತುಂಬಿದೆ. ಇವುಗಳು ಸೇರಿದಂತೆ ಕರ್ನಾಟಕದ, ದೇಶದ ಹಾಗೂ ವಿಶ್ವದ ಪ್ರಮುಖ ವಿದ್ಯಮಾನಗಳ ಕ್ಷಣ ಕ್ಷಣದ ಅಪ್ಡೇಟ್ ಇಲ್ಲಿದೆ.

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನಿವಾಸಿಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ವಿದೇಶಗಳಲ್ಲಿ ಹಣ ಹೂಡಿಕೆ ಸಂಬಂಧ ನಡೆಸಿರುವ ದಾಳಿ ಹಾಗೂ ಶೋಧ ಕಾರ್ಯಾಚರಣೆ ಗುರುವಾರ ಕೂಡ ಮುಂದುವರಿದಿದೆ. ಬೆಂಗಳೂರು, ಬೆಳಗಾವಿ ಸೇರಿದಂತೆ ಸುಮಾರು 18 ಕಡೆ ದಾಳಿ ನಡೆಸಿದ ಇಡೀ ಅಧಿಕಾರಿಗಳು ಬುಧವಾರ ತಡರಾತ್ರಿ ಎರಡು ಗಂಟೆವರೆಗೆ ಶೋಧ ಕಾರ್ಯ ನಡೆಸಿದ್ದರು. ಇದೀಗ ಗುರುವಾರ ಬೆಳಗ್ಗೆ ಸಹಶೋಧ ಕಾರ್ಯ ಮುಂದುವರಿಸಲಾಗಿದೆ. ಮತ್ತೊಂದೆಡೆ, ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಹಲವು ಆರೋಪಗಳನ್ನು ಮಾಡಿ ‘ಬಳ್ಳಾರಿ ಚಲೋ’ ಪಾದಯಾತ್ರೆ ಹಮ್ಮಿಕೊಂಡಿರುವ ಬಿಜೆಪಿ ಇಂದು ಸಮಾರೋಪದತ್ತ ಹೆಜ್ಜೆ ಹಾಕುತ್ತಿದೆ. ಈ ಮಧ್ಯೆ ಅಧಿಕಾರ ಹಸ್ತಾಂತರದ ನಂತರ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಿ 100 ದಿನಗಳು ಸಂದಿವೆ. ಈ ಹಿನ್ನೆಲೆಯಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಜನತೆಗೆ ಹಲವು ಕೊಡುಗೆಗಳನ್ನು ಘೋಷಿಸಲಾಗಿತ್ತು. 100ನೇ ದಿನದ ಸಂಭ್ರಮದ ಆಚರಣೆಗೂ ಡಿಕೆಶಿ ಸರ್ಕಾರ ಸಿದ್ಧತೆ ಮಾಡಿಕೊಂಡಿದೆ. ಇವಿಷ್ಟರ ಜೊತೆಗೆ ಕರ್ನಾಟಕದ, ದೇಶಕ್ಕೆ ಸಂಬಂಧಿಸಿದ ಮತ್ತು ಅಂತರರಾಷ್ಟ್ರೀಯ ಬೆಳವಣಿಗೆಗಳ ಪ್ರಮುಖ ಅಪ್ಡೇಟ್ ಇಲ್ಲಿ ಲಭ್ಯ.
LIVE NEWS & UPDATES
-
ಹೂಡಿಕೆ ವಿಚಾರವಾಗಿ FEMA ಕಾಯ್ದೆ ಬಗ್ಗೆ ಪರಿಶೀಲನೆ
ಇದರ ಹಿಂದೆ ರಾಜಕೀಯ ಇದ್ಯಾ ಅಂತ ವಾಸನೆ ಬರುತ್ತಿದೆ, ನಗದು ಸಿಕ್ಕಿರೋದು ನಮ್ಮದು ಅಂತೇ ಹೇಳಿದ್ದೇವೆ. ಕಾನೂನಿನ ಪ್ರಕಾರ ಅದನ್ನ ಕ್ಲೈಮ್ ಮಾಡುತ್ತೇನೆ. ಮುಖ್ಯವಾಗಿ ಹೂಡಿಕೆ ವಿಚಾರ FEMA ಕಾಯ್ದೆ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ನಮ್ಮ ಪಕ್ಷದವರ ಮೇಲೆ ದಾಳಿ ಮಾಡುತ್ತಾರೆ ಅಂತ ಗೊತ್ತಾಗಿತ್ತು. ಆದರೆ ಇಡಿ ನನಗೆ ಮೊದಲು ಬಂದಿದೆ. ಬಿಜೆಪಿಯರ ಮೇಲೆ ದಾಳಿ ಆಗದೇ ಇರೋದು ಪ್ರಶ್ನೆ. ಸಣ್ಣಪುಟ್ಟ ತಪ್ಪು ಮಾಡಿರಬಹುದು ಮಾಡಿಲ್ಲ ಅಂತ ಹೇಳಲ್ಲ. ಇಡಿಯವರು ನ್ಯಾಯಯುತವಾಗಿ ತನಿಖೆ ಮಾಡುತ್ತಾರೆ ಎನ್ನುವ ನಂಬಿಕೆ ಇದೆ. ನಾಗೇಂದ್ರ ಆಯಿತು ಈಗ ನಮ್ಮದು. ಸಮುದಾಯದ ಟಾರ್ಗೆಟ್ ಆಗಿದ್ಯಾ ಅನ್ನೋ ಆತಂಕವೂ ಜನರಿಗೆ ಇದೆ. ನಾಳೆ ಸಾದ್ಯವಾದ್ರೆ ಸಿಎಂ ಭೇಟಿ ಮಾಡುತ್ತೇನೆ ಎಂದು ತಿಳಿಸಿದರು.
-
ಇದು ಇಡಿ ದಾಳಿ ಅಲ್ಲ ಪರಿಶೀಲನೆ ಅಷ್ಟೇ
ನಮ್ಮನ್ನ ಏನ್ ಕೇಳಿದ್ದಾರೆ ಅದನ್ನ ಹೇಳಿದ್ದೇನೆ. ಏನಾದ್ರೂ ಅನುಮಾನ ಇದ್ರೆ ನೋಟಿಸ್ ಕೊಡಿ ಮಾಹಿತಿ ಕೊಡ್ತಿನಿ ಅಂದಿದ್ದೇನೆ ಇದು ಇಡಿ ದಾಳಿ ಅಲ್ಲ ಪರಿಶೀಲನೆ ಅಷ್ಟೇ. ನಮ್ಮ ಕಡೆಯಿಂದನೂ ಕೆಲವು ದಾಖಲೆ ಪಡೆದಿದ್ದಾರೆ. ಅವರು ವಿದೇಶದಲ್ಲಿ ಹೂಡಿಕೆ ಮಾಡಿದ್ದೀರಿ ಅಂದಿದ್ದಾರೆ. ನಾವು ಮಾಡುವ ಹಂತದಲ್ಲಿ ಇದೀವಿ ಅಂತ ಹೇಳಿದ್ದೇವೆ ಎಂದು ಸ್ಪಷ್ಟಪಡಿಸಿದರು.
-
-
ಇಡಿ ದಾಳಿಗೆ ಕಾರಣ ಕಂಡು ಹಿಡಿಯೋಕೆ ಆಗಲ್ಲ
ಇಡಿ ದಾಳಿ ಅಂತ್ಯ ಬೆನ್ನಲ್ಲೇ ಬೆಂಗಳೂರಿನ ಸರ್ಕಾರಿ ನಿವಾಸದಲ್ಲಿ ಸತೀಶ್ ಜಾರಕಿಹೊಳಿ ಸುದ್ದಿಗೋಷ್ಠಿ ನಡೆಸಿದ್ದು, ಇಡಿ ದಾಳಿಗೆ ಕಾರಣ ಕಂಡು ಹಿಡಿಯೋಕೆ ಆಗಲ್ಲ. ರಾಜಕೀಯ ಇರಬಹುದು, ಅವರದ್ದೆ ಸೋರ್ಸ್ ಇಂದ ಬಂದಿರಬಹುದು. ನೋಟಿಸ್ ಕೊಟ್ಟು ಮಾಹಿತಿ ಪಡೆಯಬಹುದಿತ್ತು. ಬೇರೆ ಬೇರೆ ಈ ರೀತಿ ಕೆಲಸ ಮಾಡೋರು ತುಂಬಾ ದೊಡ್ಡ ಕುಳ ಇದ್ದಾರೆ. ಅವರನ್ನ ಬಿಟ್ಟು ನಮ್ಮ ಕಡೆ ಬಂದಿದ್ದು ಚರ್ಚೆ ವಿಚಾರ ಎಂದು ಹೇಳಿದರು.
-
ಮನೆಯಲ್ಲಿ ಸಿಕ್ಕ ನಗದು ಸಂಬಂಧ ದಾಖಲಾತಿ ನೀಡುತ್ತೇವೆ
ಇಡಿ ಅಧಿಕಾರಿಗಳು ಕೇಳುವ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡ್ತೇವೆ. ಇಡಿ ದಾಳಿ ವೇಳೆ ಸಿಕ್ಕ ನಗದು ನಮ್ಮದೇ ಎಂದು ಹೇಳಿದ್ದೇವೆ. ಮನೆಯಲ್ಲಿ ಸಿಕ್ಕ ನಗದು, ದಾಖಲೆಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಮನೆಯಲ್ಲಿ ಸಿಕ್ಕ ನಗದು ಸಂಬಂಧ ದಾಖಲಾತಿ ನೀಡುತ್ತೇವೆ. ದೇಶಾದ್ಯಂತ ಕಾಂಗ್ರೆಸ್ ನಾಯಕರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಪ್ರತಿಭಟನೆ ನಡೆಸುವವರನ್ನು ಬೇಡ ಅಂತಾ ನಾವು ಹೇಳಲು ಆಗಲ್ಲ ಎಂದರು.
-
ಇಡಿ ದಾಳಿ ವೇಳೆ ಸಿಕ್ಕ ನಗದು ನಮ್ಮದೇ ಎಂದ ಸತೀಶ್ ಜಾರಕಿಹೊಳಿ
ಇಡಿ ಅಧಿಕಾರಿಗಳು ಕೇಳುವ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡ್ತೇವೆ. ಇಡಿ ದಾಳಿ ವೇಳೆ ಸಿಕ್ಕ ನಗದು ನಮ್ಮದೇ ಎಂದು ಹೇಳಿದ್ದೇವೆ. ಮನೆಯಲ್ಲಿ ಸಿಕ್ಕ ನಗದು, ದಾಖಲೆಗಳನ್ನು ತೆಗೆದುಕೊಂಡು ಹೋಗಿದ್ದು, ದಾಖಲಾತಿ ನೀಡುತ್ತೇವೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
-
-
ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಸುದ್ದಿಗೋಷ್ಠಿ
ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಸುದ್ದಿಗೋಷ್ಠಿ ಲೈವ್ ನೋಡಿ
-
ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ನಡೆದಿದ್ದ ಇಡಿ ದಾಳಿ ಅಂತ್ಯ
ಸಚಿವ ಸತೀಶ್ ಜಾರಕಿಹೊಳಿ ಅವರ ಬೆಳಗಾವಿ ನಿವಾಸದ ಮೇಲೆ ನಡೆದಿದ್ದ ಇಡಿ ದಾಳಿ ಅಂತ್ಯವಾಗಿದೆ. ನಿನ್ನೆ ಸೆಪ್ಟೆಂಬರ್ 10 ಬೆಳಗ್ಗೆ ಆರು ಗಂಟೆಗೆ ಮನೆಗೆ ಎಂಟ್ರಿಯಾಗಿದ್ದ ಇಡಿ ಅಧಿಕಾರಿಗಳು ಸತತ ಸತತ 36ಗಂಟೆಗಳ ಶೋಧ ನಡೆಸಿದ್ದಾರೆ. ಇನ್ನು ದಾಳಿ ವೇಳೆ ಸಿಕ್ಕ ಹಣವನ್ನು ಬ್ಯಾಂಕ್ಗೆ ರವಾನಿಸಲಾಗಿದ್ದು, ಕೆಲ ದಾಖಲೆಗಳನ್ನು ತೆಗೆದುಕೊಂಡು ತೆರಳಿದ್ದಾರೆ. ಅಲ್ಲದೇ ವಿಚಾರಣೆಗೆ ಕರೆದಾಗ ಬರುವಂತೆ ಸೂಚನೆ ನೀಡಿದ್ದಾರೆ.
-
ಈ ಮೈದಾನದಲ್ಲಿ ಬಿಜೆಪಿ ಸಮಾವೇಶ ನಡೆಸಲು 15 ವರ್ಷಗಳು ಬೇಕಾಯಿತು
ಬಳ್ಳಾರಿ ಪಾದಯಾತ್ರೆ ಸಮಾವೇಶದಲ್ಲಿ ಮಾತನಾಡಿದ ವಿಜಯೇಂದ್ರ, ಈ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಬಿಜೆಪಿ ಸಮಾವೇಶ ನಡೆಸಲು 15 ವರ್ಷಗಳು ಬೇಕಾಯಿತು. ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಸಮಾವೇಶಕ್ಕೆ ಅನುಮತಿ ನೀಡಿರಲಿಲ್ಲ. ಈಗ ನಮ್ಮ ಪ್ರತಿಭಟನೆಗೆ ಮಣಿದು ಸಮಾವೇಶಕ್ಕೆ ಅನುಮತಿ ನೀಡಿದ್ದಾರೆ ಎಂದರು.
-
ವಿಜಯೇಂದ್ರಗೆ ಪೇಟ, ಹಾರ, ಶಾಲು ಹಾಕಿ, ನೇಗಿಲು ನೀಡಿ ಸನ್ಮಾನ
ಬಿಜೆಪಿ ಹಮ್ಮಿಕೊಂಡಿದ್ದ ಬಳ್ಳಾರಿ ಚಲೋ ಪಾದಯಾತ್ರೆ ಯಶಸ್ವಿ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೆ ವಿಜಯೇಂದ್ರಗೆ ಪೇಟ, ಹಾರ, ಶಾಲು ಹಾಕಿ, ನೇಗಿಲು ನೀಡಿ ಸನ್ಮಾನಿಸಲಾಯ್ತು. ಬಳ್ಳಾರಿಯ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಬೃಹತ್ ಸಮಾವೇಶದಲ್ಲಿ ಕೇಂದ್ರ ಸಚಿವ ಜೋಶಿ, ಬಿಎಸ್‌ವೈ, ಬೊಮ್ಮಾಯಿ ಸೇರಿ ಗಣ್ಯರು ಸನ್ಮಾನಿಸಿದರು.
-
ಸರ್ಕಾರಿ ಆಸ್ಪತ್ರೆಗಳ ಎಕ್ಸ್‌ರೇ ಸೇವೆಗೆ AI ಡಿಜಿಟಲ್ ಟಚ್
ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಎಕ್ಸ್‌ರೇ ಸೇವೆಗೆ AI ಡಿಜಿಟಲ್ ಟಚ್ ನೀಡಲಾಗಿದೆ. AI ನೆರವಿನಿಂದ ರೋಗ ಪತ್ತೆಗೆ ಹೊಸ ವ್ಯವಸ್ಥೆ ಕಂಡುಹಿಡಿಯಲಾಗಿದ್ದು, 162 ಎಕ್ಸ್‌ರೇ ಯಂತ್ರಗಳು ಡಿಜಿಟಲ್ ರೇಡಿಯಾಲಜಿಗೆ 162 ಎಕ್ಸ್‌ರೇ ಯಂತ್ರಗಳ ಡಿಜಿಟಲೀಕರಣಕ್ಕೆ ಸರ್ಕಾರ ಗ್ರೀನ್‌ಸಿಗ್ನಲ್ ನೀಡಿದೆ. ಯೋಜನೆಗೆ 40.5 ಕೋಟಿ ರೂಪಾಯಿ ಅನುದಾನ ಮೀಸಲಿಟ್ಟಿದೆ. 300 mA, 500 mA ಎಕ್ಸ್‌ರೇ ಯಂತ್ರಗಳು DR ವ್ಯವಸ್ಥೆಗೆ ಅಪ್‌ಗ್ರೇಡ್ AI ಮೂಲಕ ಎಕ್ಸ್‌ರೇ ವಿಶ್ಲೇಷಣೆಗೂ ವ್ಯವಸ್ಥೆ ಇದೆ. KDRM ಹಂತ-1 ಅಡಿಯಲ್ಲಿ ಈ ಯೋಜನೆ ಜಾರಿ.
-
ಬಿಜೆಪಿಯ ಬಳ್ಳಾರಿ ಪಾದಯಾತ್ರೆಯ ಸಮಾರೋಪ ಸಮಾರಂಭ ಶುರು
ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಬಿಜೆಪಿ ಕೈಗೊಂಡಿದ್ದ ಬಳ್ಳಾರಿ ಪಾದಯಾತ್ರೆ ಅಂತ್ಯವಾಗಿದ್ದು, ಬಳ್ಳಾರಿಯ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಬೃಹತ್ ಸಮಾವೇಶ ಶುರುವಾಗಿದೆ. ಪಾದಯಾತ್ರೆ ಮೂಲಕ ಬಂದು ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ, ಛಲವಾದಿ ನಾರಾಯಣಸ್ವಾಮಿ, ಶ್ರೀರಾಮುಲು, ಸಿ.ಟಿ.ರವಿ, ರಾಜುಗೌಡ ಅವರು ವೇದಿಕೆ ಮೇಲಿದ್ದ ಬಿಜೆಪಿ ಶಾಸಕರ ಬಳಿ ಹೋಗಿ ಕೈಕೊಟ್ಟು ಮಾತನಾಡಿಸಿದರು.
-
ಬಿಜೆಪಿಯ ಬಳ್ಳಾರಿ ಪಾದಯಾತ್ರೆ ಅಂತ್ಯ
ಸರ್ಕಾರದ ವೈಫಲ್ಯಗಳನ್ನ ಖಂಡಿಸಿ ಬಿಜೆಪಿ ನಡೆಸುತ್ತಿರುವ ಬಳ್ಳಾರಿ ಚಲೋ ಪಾದಯಾತ್ರೆ ಅಂತ್ಯವಾಗಿದೆ. ಬಿವೈ ವಿಜಯೇಂದ್ರ ನೇತೃತ್ವದಲ್ಲಿ ನಡೆದ ಪಾದಯಾತ್ರೆ ಸಮಾರೋಪ ಸಮಾರಂಭ ನಡೆಯುವ ಮುನ್ಸಿಪಲ್ ಮೈದಾನ ತಲುಪಿದೆ. ರಾಯಚೂರಿನ ಲಿಂಗಸ್ಗೂರಿನಿಂದ ಬಳ್ಳಾರಿ ವರೆಗೆ ನಡೆದ ಒಟ್ಟು 175 ಕಿಮೀ ಪಾದಯಾತ್ರೆ ಅಂತ್ಯವಾದಂತಾಗಿದ್ದು, ಇನ್ನೇನು ಕೆಲವೇ ಕ್ಷಣಗಳಲ್ಲಿ ಸಮಾರೋಪ ಸಮಾರಂಭ ಆರಂಭವಾಗಲಿದೆ.
-
ಬೆಂಗಳೂರಿನಿಂದ ನವದೆಹಲಿಗೆ ತೆರಳಿದ ಸಿದ್ದರಾಮಯ್ಯ
ಡಿಕೆ ಶಿವಕುಮಾರ್ ಸರ್ಕಾರದ 100 ದಿನಗಳ ಕಾರ್ಯಕ್ರಮ ಮುಗಿಸಿಕೊಂಡು ಮಾಜಿ ಸಿಎಂ ಸಿದ್ದರಾಮಯ್ಯ ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ. ಹೈಕಮಾಂಡ್ ಬುಲಾವ್ ಮೇರೆಗೆ ಇಂದು (ಸೆಪ್ಟೆಂಬರ್ 10) ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಂಡಿಗೋ 6E 6039 ವಿಮಾನದಲ್ಲಿ ದೆಹಲಿಗೆ ತೆರಳಿದರು. ಆದ್ರೆ, ವಿಮಾನ ಹತ್ತುವ ಮುನ್ನ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ತೆರಳಿದ್ದಾರೆ.
-
ಭಾರತಕ್ಕೆ ಆಗಮಿಸಲಿರುವ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್
ಪ್ರಧಾನಿ ಮೋದಿ ಆಹ್ವಾನದ ಮೇರೆಗೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12, 13ರಂದು ನವದೆಹಲಿಯಲ್ಲಿ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ನಡೆಯಲಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಈ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗಿಯಾಗಲು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಭಾರತಕ್ಕೆ ಆಗಮಿಸಲಿದ್ದಾರೆ. ಉಭಯ ರಾಷ್ಟ್ರಗಳ ಸಂಬಂಧದ ದೃಷ್ಟಿಯಿಂದ ಈ ಭೇಟಿ ಮಹತ್ವ ಪಡೆದುಕೊಂಡಿದ್ದು, ಬ್ರಿಕ್ಸ್ ಶೃಂಗಸಭೆಯಲ್ಲಿ ಜಾಗತಿಕ ರಾಜಕೀಯ, ಆರ್ಥಿಕತೆ ಸೇರಿದಂತೆ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.
-
ಡಿ.ಕೆ.ಶಿವಕುಮಾರ್ ಸಿಎಂ ಆದ ಬಳಿಕ ಮೊದಲ ಜಿಬಿಎ ಸಭೆ
ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಜಿಬಿಎ ಸಭೆ ನಡೆಸುತ್ತಿದ್ದಾರೆ. ಜಿಬಿಎ ಕೌನ್ಸಿಲ್ ಹಾಲ್‌ನಲ್ಲಿ ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಸಭೆಗೆ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣಭೈರೇಗೌಡ, ಮಾಜಿ ಸಚಿವರಾದ ಭೈರತಿ ಬಸವರಾಜು, ಎಸ್.ಟಿ.ಸೋಮಶೇಖರ್, ಡಾ.ಸಿ.ಎನ್.ಅಶ್ವತ್ಥ್ ನಾರಾಯಣ, ಶಾಸಕ ಗೋಪಾಲಯ್ಯ ಆಗಮಿಸಿದ್ದಾರೆ.
-
ಕಳೆದ ನಾಲ್ಕು ಗಂಟೆಯಿಂದ ಸಿಎ ಗಳಿಗೆ ಡ್ರೀಲ್
ಬೆಂಗಳೂರಿನಲ್ಲಿ ಮಾತ್ರವಲ್ಲದೇ ಇತ್ತ ಬೆಳಗಾವಿಯ ಗೋಕಾಕ್ ನಿವಾಸದಲ್ಲೂ ಸಹ ಇಡಿ ಅಧಿಕಾರಿಗಳ ಶೋಧ ಮುಂದುವರಿದಿದ್ದು, ಕಳೆದ ನಾಲ್ಕು ಗಂಟೆಗಳಿಂದ ಸಿಎ ಗಳನ್ನ ವಿಚಾರಣೆ ನಡೆಸಿದ್ದಾರೆ. ಚಿನ್ನ ಬೆಳ್ಳಿ ಕೂಡ ಪತ್ತೆ, ಅದರ ಮೌಲ್ಯ ತಿಳಿದುಕೊಳ್ಳುತ್ತಿದ್ದಾರೆ. ಜೊತೆಗೆ ಹಣ, ದಾಖಲೆ ಸಾಗಿಸಲು ಎರಡು ಟ್ರಂಕ್ ತರಿಸಿಕೊಂಡಿದ್ದಾರೆ. ಅಲ್ಲದೇ ಲೆಕ್ಕ ಪರಿಶೋಧಕರಿಂದ ವಿದೇಶದಲ್ಲಿ ಹೂಡಿಕೆ ಕುರಿತು ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.
-
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮುಂದುವರಿದ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಇಡಿ ಶೋಧ ಮುಂದುವರಿದಿದೆ. ನಿನ್ನೆ (ಸೆಪ್ಟೆಂಬರ್ 09) ಬೆಳಗ್ಗೆಯಿಂದಲೂ ಈವರೆಗೂ ಬೆಂಗಳೂರಿನ ಸರ್ಕಾರಿ ನಿವಾಸದಲ್ಲಿ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಹೂಡಿಕೆಗೆ ಸಂಬಂಧಿಸಿದ ದಾಖಲೆ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಬ್ಯಾಂಕ್ ದಾಖಲೆಗಳನ್ನು 5ಕ್ಕೂ ಹೆಚ್ಚು ಇಡಿ ಅಧಿಕಾರಿಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಇನ್ನೊಂದೆಡೆ ಸಿಕ್ಕಿರುವ ದಾಖಲೆಗಳನ್ನು ಸತೀಶ್ ಮುಂದಿಟ್ಟು ಮಾಹಿತಿ ಸಂಗ್ರಹಿಸುತ್ತಿದ್ದಾರೆ.
-
ದರ್ಶನ್ ಕೇಸ್: ಸೆ.16ಕ್ಕೆ ವಿಚಾರಣೆ ಮುಂದೂಡಿಕೆ
ದರ್ಶನ್ & ಗ್ಯಾಂಗ್ನಿಂದ ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಖುದ್ದು ಹಾಜರಿಗೆ ನಿರ್ದೇಶನ ಕೋರಿದ್ದ ದರ್ಶನ್ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಸೆ.16ಕ್ಕೆ ಮುಂದೂಡಿದೆ. ಆದ್ರೆ, ಸೌಹಾರ್ದಯುತವಾಗಿ ಟ್ರಯಲ್ ಮುಗಿಸಬೇಕೆಂದು ಜಡ್ಜ್ ಸಲಹೆ ನೀಡಿದ್ದಾರೆ. ಎರಡೂ ಕಡೆ ವಕೀಲರು ಚರ್ಚಿಸಿ ಒಂದು ತೀರ್ಮಾನಕ್ಕೆ ಬನ್ನಿ. ಪ್ರತಿ ವಿಚಾರಣೆ ದಿನದಂತೆ ಆರೋಪಿಗಳ ಖುದ್ದು ಹಾಜರಿ ಅಗತ್ಯವಿಲ್ಲ ಎಂದು ನ್ಯಾ.ವಿ.ಶ್ರೀಶಾನಂದ ಅವರಿರುವ ಹೈಕೋರ್ಟ್ ಪೀಠ ಹೇಳಿದೆ.
-
ರಾಜ್ಯದಲ್ಲಿ ವಂದೇ ಮಾತರಂ 2 ಚರಣ ಗಾಯನ
ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ದೇಶ ಭಕ್ತಿಗೀತೆ ‘ವಂದೇ ಮಾತರಂ’ನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ಕರ್ನಾಟಕ ಸರ್ಕಾರ ಸ್ಪಷ್ಟ ಆದೇಶ ಹೊರಡಿಸಿದೆ. ಕೇಂದ್ರ ಸರ್ಕಾರವು ಇತ್ತೀಚೆಗೆ ಎಲ್ಲಾ ಆರು ಚರಣಗಳನ್ನು ಕಡ್ಡಾಯಗೊಳಿಸಲು ಮುಂದಾಗಿದ್ದರೂ, ರಾಜ್ಯ ಸರ್ಕಾರ ತನ್ನ ಹಳೆಯ ನಿರ್ಧಾರಕ್ಕೇ ಬದ್ಧವಾಗಿದೆ. ಆದರೆ, ಮಾನ್ಯ ರಾಷ್ಟ್ರಪತಿಗಳು, ಉಪ ರಾಷ್ಟ್ರಪತಿಗಳು, ಪ್ರಧಾನಮಂತ್ರಿಗಳು ಹಾಗೂ ರಾಜ್ಯಪಾಲರು ಭಾಗವಹಿಸುವ ಉನ್ನತ ಮಟ್ಟದ ಕಾರ್ಯಕ್ರಮಗಳಲ್ಲಿ ಮಾತ್ರ ಪೂರ್ಣ ಪ್ರಮಾಣದ ಆರು ಚರಣಗಳನ್ನು ಹಾಡಲು ವಿನಾಯಿತಿ ನೀಡಲಾಗಿದ್ದು, ಸಾಮಾನ್ಯ ರಾಜ್ಯ ಸರ್ಕಾರಿ ಸಭೆ-ಸಮಾರಂಭಗಳಲ್ಲಿ ಮೊದಲ ಎರಡು ಚರಣ ಗಾಯನಕ್ಕೆ ಮಾತ್ರ ಸೂಚಿಸಲಾಗಿದೆ.
-
ಬಿಹಾರದಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿತ
ಬಿಹಾರದ ವೈಶಾಲಿ ಜಿಲ್ಲೆಯ ಜಲಾಲ್ ಪೂರ ಗ್ರಾಮದ ಬಳಿ ನಿರ್ಮಾಣ ಹಂತದಲ್ಲಿದ್ದ ಬೃಹತ್ ಸೇತುವೆಯ ಒಂದು ಭಾಗ ಏಕಾಏಕಿ ಕುಸಿದುಬಿದ್ದು, ಏಳು ಜನ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೇಂದ್ರ ಸರ್ಕಾರದ ಪ್ರತಿಷ್ಠಿತ ‘ಭಾರತ್‌ಮಾಲಾ’ ಯೋಜನೆಯಡಿ ಛಾಪ್ರಾ-ಸೋನ್ ಪೂರ್-ವೈಶಾಲಿ ಮಾರ್ಗದಲ್ಲಿ ಈ ಸೇತುವೆ ನಿರ್ಮಿಸಲಾಗುತ್ತಿತ್ತು. ಘಟನೆ ಸಂಭವಿಸುತ್ತಿದ್ದಂತೆ ಸ್ಥಳೀಯರು ಹಾಗೂ ಅಧಿಕಾರಿಗಳು ತಕ್ಷಣವೇ ಕಾರ್ಯಾಚರಣೆ ನಡೆಸಿ, ಗಾಯಾಳು ಕಾರ್ಮಿಕರನ್ನು ರಕ್ಷಿಸಿ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.
-
ಕೋಲಾರ ಕಾಂಗ್ರೆಸ್ ಅಧ್ಯಕ್ಷರಾಗಿ ಮೇಕಲ ನಾರಾಯಣಸ್ವಾಮಿ
ಕೋಲಾರ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಜಿ.ಪಂ. ಮಾಜಿ ಸದಸ್ಯ ಮೇಕಲ ನಾರಾಯಣಸ್ವಾಮಿ ಅವರನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ನಾರಾಯಣಸ್ವಾಮಿ ಅವರು ಶ್ರೀನಿವಾಸಪುರದ ಮಾಜಿ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ಅವರ ಆಪ್ತ ಬೆಂಬಲಿಗರಾಗಿದ್ದಾರೆ. ಕೋಲಾರ ಜಿಲ್ಲಾ ಕಾಂಗ್ರೆಸ್‌ನಲ್ಲಿ ನಿರಂತರವಾಗಿ ನಡೆಯುತ್ತಿದ್ದ ಬಣ ರಾಜಕೀಯದ ನಡುವೆ ಈ ಬಾರಿ ಅಧ್ಯಕ್ಷ ಸ್ಥಾನವು ರಮೇಶ್ ಕುಮಾರ್ ಬಣದ ಪಾಲಾಗಿದೆ. ಕಳೆದ ಅವಧಿಯಲ್ಲಿ ಕೆ.ಹೆಚ್. ಮುನಿಯಪ್ಪ ಬೆಂಬಲಿತ ಲಕ್ಷ್ಮೀನಾರಾಯಣ್ ಅವರು ಜಿಲ್ಲಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.
-
ಯಾವುದೇ ಕಾರಣಕ್ಕೂ ಯೋಜನೆಗಳು ನಿಲ್ಲುವುದಿಲ್ಲ ಎಂದ ಸಿಎಂ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದ್ದಾರೆ. ‘ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳ ಸಂಪೂರ್ಣ ಮಾಹಿತಿಯನ್ನು ಜನರ ಮುಂದಿಟ್ಟ ಅವರು, ಕರ್ನಾಟಕದ ಈ ಗ್ಯಾರಂಟಿ ಮಾದರಿಯು ಇಡೀ ದೇಶಕ್ಕೇ ಮಾದರಿಯಾಗಿದ್ದು, ಇತರ ರಾಜ್ಯಗಳು ಹಾಗೂ ದೇಶಗಳು ಇದನ್ನು ಅನುಕರಿಸುತ್ತಿವೆ ಎಂದರು. ಇದೇ ವೇಳೆ ಸಾರಿಗೆ ಸಚಿವರಾಗಿದ್ದಾಗ ‘ಶಕ್ತಿ’ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೆ ತಂದಿದ್ದ ಹಾಲಿ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಅವರ ಸೇವೆಯನ್ನು ಸ್ಮರಿಸಿದ ಸಿಎಂ, ಇದೀಗ ಮಹಿಳೆಯರಿಗೆ ‘ಸ್ಮಾರ್ಟ್ ಕಾರ್ಡ್’ ವಿತರಿಸುವ ಹೊಣೆಯನ್ನು ಸಚಿವ ಸುರೇಶ್ ಅವರಿಗೆ ವಹಿಸಲಾಗಿದೆ ಎಂದು ತಿಳಿಸಿದರು. ಅಲ್ಲದೆ ಯುವಕರು ದೇಶದ ಅತಿ ದೊಡ್ಡ ಆಸ್ತಿಯಾಗಿದ್ದು, ಅವರ ಉದ್ಯೋಗ ಸೃಷ್ಟಿ ಹಾಗೂ ಆರ್ಥಿಕ ಭದ್ರತೆಗಾಗಿ ‘ಯುವನಿಧಿ’ ಯೋಜನೆಯನ್ನು ಸಮರ್ಥವಾಗಿ ಅನುಷ್ಠಾನಗೊಳಿಸಲಾಗಿದೆ ಎಂದು ಅಭಿಪ್ರಾಯಪಟ್ಟರು.
-
ಜೈಲಿನಲ್ಲಿ ಮೊಬೈಲ್ ಬಳಕೆ ಪ್ರಕರಣ: ಪ್ರಜ್ವಲ್ ರೇವಣ್ಣಗೆ ನ್ಯಾಯಾಂಗ ಬಂಧನ
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಬ್ಯಾರಕ್‌ನಲ್ಲಿ ಅಕ್ರಮವಾಗಿ ಮೊಬೈಲ್ ಬಳಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಪ್ರತಾಪ್ ರಾಯ್ ಅವರನ್ನು 42ನೇ ಎಸಿಜೆಎಂ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದೆ. ಎರಡು ದಿನಗಳ ಪೊಲೀಸ್ ಕಸ್ಟಡಿ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಪೊಲೀಸರು ಆರೋಪಿಗಳನ್ನು ನ್ಯಾಯಾಧೀಶರಾದ ಸಂದೀಪ್ ಪಾಟೀಲ್ ಅವರ ಮುಂದೆ ಹಾಜರುಪಡಿಸಿದ್ದರು. ಎರಡು ದಿನಗಳ ಸುದೀರ್ಘ ವಿಚಾರಣೆಯ ವೇಳೆ ಪ್ರಜ್ವಲ್ ರೇವಣ್ಣ ಅವರು ತಮ್ಮ ತಂದೆ ಹೆಚ್.ಡಿ. ರೇವಣ್ಣ ಹಾಗೂ ತಾಯಿ ಭವಾನಿ ರೇವಣ್ಣ ಅವರಿಗೆ ಕರೆ ಮಾಡಿ ಮಾತನಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಆದರೆ, ತಾವು ಒಮ್ಮೆ ಮಾತ್ರ ಕರೆ ಮಾಡಿದ್ದಾಗಿ ವಿಚಾರಣೆ ವೇಳೆ ಪ್ರಜ್ವಲ್ ತಿಳಿಸಿದ್ದು, ಸದ್ಯ ನ್ಯಾಯಾಲಯ ಇಬ್ಬರೂ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
-
ಸಮ ಸಮಾಜ ನಿರ್ಮಾಣವೇ ನಮ್ಮ ಗುರಿ: ಮಾಜಿ ಸಿಎಂ ಸಿದ್ದರಾಮಯ್ಯ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಆಡಳಿತ 100 ದಿನ ಪೂರೈಸಿದ ಹಿನ್ನೆಲೆಯಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, “ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಸೆಪ್ಟೆಂಬರ್ 14ಕ್ಕೆ 3 ವರ್ಷ 4 ತಿಂಗಳು ಪೂರೈಸಲಿದ್ದು, ಸಿಎಂ ಡಿ.ಕೆ. ಶಿವಕುಮಾರ್ ಅವರ 100 ದಿನಗಳ ಆಡಳಿತಾವಧಿಯ ಸಾಧನೆಗಳನ್ನು ಒಳಗೊಂಡ ಕೈಪಿಡಿಯನ್ನು ಜನರ ಮುಂದಿಡಲಾಗಿದೆ” ಎಂದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವು ನೀಡಿದ ವಾಗ್ದಾನಗಳನ್ನು ಈಡೇರಿಸುವುದು ಅತ್ಯಂತ ಮುಖ್ಯವಾಗಿದ್ದು, 100 ದಿನಗಳಲ್ಲಿ ಸರಿಯಾದ ದಾರಿಯಲ್ಲಿ ಸಾಗಿದ್ದೇವೆಯೇ ಇಲ್ಲವೇ ಎಂಬುದನ್ನು ಜನರ ಮುಂದಿಡುವ ಜವಾಬ್ದಾರಿಯನ್ನು ಈ ಸರ್ಕಾರ ನಿಷ್ಠೆಯಿಂದ ನಿರ್ವಹಿಸುತ್ತಿದೆ ಎಂದು ಅವರು ಹೇಳಿದರು. ಸಮಾಜದಲ್ಲಿನ ಅಸಮಾನತೆಯನ್ನು ಹೋಗಲಾಡಿಸಿ ಸಮ ಸಮಾಜ ನಿರ್ಮಾಣ ಮಾಡದಿದ್ದರೆ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ನಡೆದುಕೊಂಡಂತಾಗುತ್ತದೆ ಎಂದ ಅವರು, ಕೃಷಿ ಕ್ಷೇತ್ರದಲ್ಲಿ ಉತ್ಪಾದನೆಯನ್ನು ಹೆಚ್ಚಿಸುವ ಜೊತೆಗೆ ಯಾವುದೇ ಸರ್ಕಾರ ಜನಸ್ನೇಹಿಯಾಗಿ ಹಾಗೂ ಅತ್ಯುತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಅಭಿಪ್ರಾಯಪಟ್ಟರು.
-
ಡಿಕೆಶಿ ಸರ್ಕಾರಕ್ಕೆ 100 ದಿನ: ‘ದೃಢ ಕರ್ನಾಟಕದ ಸಂಕಲ್ಪ’ ಕೈಪಿಡಿ ಬಿಡುಗಡೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರ 100 ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ವಿಶೇಷ ಸಂಭ್ರಮಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಸಂಭ್ರಮದ ಅಂಗವಾಗಿ ಸರ್ಕಾರದ ಸಾಧನೆಗಳು ಹಾಗೂ ಮುಂಬರುವ ಯೋಜನೆಗಳನ್ನೊಳಗೊಂಡ ‘ದೃಢ ಕರ್ನಾಟಕದ ಸಂಕಲ್ಪ’ ಎಂಬ ವಿಶೇಷ ಕೈಪಿಡಿಯನ್ನು ಬಿಡುಗಡೆ ಮಾಡಲಾಯಿತು.
-
ಸಿದ್ದರಾಮಯ್ಯ ಹಾದಿಯಲ್ಲೇ ಡಿಕೆ ಶಿವಕುಮಾರ್ ಆಡಳಿತ: ಪರಮೇಶ್ವರ್ ಬಣ್ಣನೆ
ಮಾಜಿ ಸಿಎಂ ಸಿದ್ದರಾಮಯ್ಯ ಅವರು ನೀಡಿದ ಭರವಸೆಯಂತೆ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದರು. ಇದೀಗ ಸಿಎಂ ಆಗಿ 100 ದಿನ ಪೂರೈಸಿರುವ ಡಿ.ಕೆ. ಶಿವಕುಮಾರ್ ಸಹ ಅದೇ ಹಾದಿಯಲ್ಲಿ ಸಾಗುತ್ತಿದ್ದು, ನಿನ್ನೆಯ ಸಂಪುಟ ಸಭೆಯಲ್ಲಿ ರೈತರಿಗಾಗಿ ‘ನೇಗಿಲ ಯೋಗಿ’ ಸೇರಿದಂತೆ ಹಲವು ಜನಪ್ರಿಯ ಯೋಜನೆಗಳನ್ನು ಘೋಷಿಸಿದ್ದಾರೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದರು.
-
ಸತೀಶ್ ಜಾರಕಿಹೊಳಿ ನಿವಾಸದ ಮೇಲಿನ ಇಡಿ ದಾಳಿ ಖಂಡಿಸಿ ಧಾರವಾಡದಲ್ಲಿ ಪ್ರತಿಭಟನೆ
ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸುತ್ತಿರುವ ದಾಳಿಯನ್ನು ಖಂಡಿಸಿ ಧಾರವಾಡದಲ್ಲಿ ವಿವಿಧ ದಲಿತಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ನಗರದ ಅಂಬೇಡ್ಕರ್ ಪ್ರತಿಮೆ ಹಾಗೂ ಆಲೂರು ವೆಂಕಟರಾವ್ ವೃತ್ತದಲ್ಲಿ ಜಮಾಯಿಸಿದ ನೂರಾರು ಕಾರ್ಯಕರ್ತರು, ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಬೃಹತ್ ಪ್ರತಿಭಟನೆ ನಡೆಸಿದರು.
-
ಅಮೆರಿಕದಲ್ಲೂ ಕರ್ನಾಟಕದ ‘ಶಕ್ತಿ’ ಯೋಜನೆಗೆ ಮೆಚ್ಚುಗೆ: ಪರಮೇಶ್ವರ್ ಹರ್ಷ
ಕರ್ನಾಟಕದ ಉಚಿತ ಬಸ್ ಪ್ರಯಾಣದ ‘ಶಕ್ತಿ’ ಯೋಜನೆ ಅಮೆರಿಕದಲ್ಲೂ ಮೆಚ್ಚುಗೆ ಗಳಿಸಿದ್ದು, ನ್ಯೂಯಾರ್ಕ್ ಮೇಯರ್ ಮಹಿಳೆಯರಿಗೆ ಶೇ.50 ರಷ್ಟು ದರ ಕಡಿತ ಮಾಡಿದ್ದಾರೆ ಎಂದು ಡಿಸಿಎಂ ಪರಮೇಶ್ವರ್ ಹೇಳಿದರು. ಇದೇ ವೇಳೆ ರಾಜ್ಯದಲ್ಲಿ ಖಾಲಿ ಇರುವ 72 ಸಾವಿರ ಹುದ್ದೆಗಳ ಭರ್ತಿ ಪ್ರಕ್ರಿಯೆ ನಡೆಯುತ್ತಿದ್ದು, ‘ಭಾರತ್ ಜೋಡೋ’ ಸಂಘ ಸ್ಥಾಪನೆ ಮಾಡಲಾಗಿದೆ ಎಂದು ಅವರು ವಿಧಾನಸೌಧದಲ್ಲಿ ಮಾಹಿತಿ ನೀಡಿದರು.
-
ಹುಬ್ಬಳ್ಳಿ: ಅಪಾರ್ಟ್‌ಮೆಂಟ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ
ಹುಬ್ಬಳ್ಳಿಯ ಅಕ್ಷಯ್ ಪಾರ್ಕ್‌ನಲ್ಲಿರುವ ಅಪಾರ್ಟ್‌ಮೆಂಟ್‌ನ ಪ್ಲ್ಯಾಟ್ ಒಂದರಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಹಠಾತ್ ಬೆಂಕಿ ಕಾಣಿಸಿಕೊಂಡಿದೆ. ಸ್ಥಳೀಯ ನಿವಾಸಿ ಶ್ರೀಕಾಂತ್ ಮೆಂಡಿಗೇರಿ ಅವರ ಪ್ಲ್ಯಾಟ್‌ನ ಮಲಗುವ ಕೋಣೆಯಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಂಪತಿ ಒಳಗೆ ಸಿಲುಕಿಕೊಂಡಿದ್ದರು. ತಕ್ಷಣವೇ ಕಾರ್ಯಪ್ರವೃತ್ತರಾದ ಸ್ಥಳೀಯರು ಬಾಗಿಲು ಮುರಿದು ದಂಪತಿಯನ್ನು ರಕ್ಷಿಸಿದ್ದಾರೆ. ಘಟನೆ ಗೋಕುಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
-
ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ: ಮೈಸೂರಿನಲ್ಲಿ ಕನ್ನಡಪರ ಹೋರಾಟಗಾರರಿಂದ ವಿನೂತನ ಪ್ರತಿಭಟನೆ
ತಮಿಳುನಾಡಿಗೆ ತಕ್ಷಣವೇ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಆದೇಶಿಸಿರುವುದನ್ನು ಖಂಡಿಸಿ ಮೈಸೂರಿನಲ್ಲಿ ಕನ್ನಡಪರ ಹೋರಾಟಗಾರರು ತಲೆ ಮೇಲೆ ಚಪ್ಪಡಿ ಕಲ್ಲು ಇಟ್ಟುಕೊಂಡು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ನಗರದ ಕಾಡಾ (CADA) ಕಚೇರಿ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು, ‘ಕಾವೇರಿ ನಮ್ಮದು, ನಮಗೆ ನ್ಯಾಯ ಬೇಕು’ ಎಂದು ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ ಘೋಷಣೆಗಳನ್ನು ಕೂಗಿದರು. ತಮಿಳುನಾಡಿಗೆ ಹರಿಸಲಾಗುತ್ತಿರುವ ನೀರನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಮತ್ತು ಕಾವೇರಿ ನದಿ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಮೇಕೆದಾಟು ಜಲಾಶಯ ಯೋಜನೆಯನ್ನು ತಕ್ಷಣವೇ ಅನುಷ್ಠಾನಕ್ಕೆ ತರಬೇಕು ಎಂದು ಕನ್ನಡಪರ ಸಂಘಟನೆಗಳ ನಾಯಕರು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.
-
ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ; ಬೃಹತ್ ಸಮಾವೇಶ
ಡಿಕೆ ಶಿವಕುಮಾರ್ ಸರ್ಕಾರಕ್ಕೆ ನೂರು ದಿನದ ಸಂಭ್ರಮ ಹಿನ್ನೆಲೆ ವಿಧಾನಸೌಧದ ಬ್ಯಾಂಕ್ವೆಟ್‌ಹಾಲ್‌ನಲ್ಲಿ ವಿಶೇಷ ಸಮಾರಂಭ ನಡೆಯುತ್ತಿದೆ. ‘ದೃಢ ಕರ್ನಾಟಕದ ಸಂಕಲ್ಪ, ಶತಕದ ಪಥ, ಪ್ರಗತಿ ರಥ’ ಧ್ಯೇಯವಾಕ್ಯದಡಿ ಕಾರ್ಯಕ್ರಮ ನಡೆಯುತ್ತಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಸಹ ಭಾಗಿಯಾಗಿದ್ದಾರೆ. ಸಿಎಂ ಡಿ.ಕೆ.ಶಿವಕುಮಾರ್, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿ ಕಾರ್ಯಕ್ರಮದ ವೇದಿಕೆ ಮೇಲೆ ಮೂವರು ಗಣ್ಯರಿಗೆ ಮಾತ್ರ ಅವಕಾಶ ನೀಡಲಾಗಿದೆ.
-
ಬಳ್ಳಾರಿ ಚಲೋ ಪಾದಯಾತ್ರೆ ಸಮಾರೋಪ, ಸಿದ್ಧವಾಗಿದೆ ಬೃಹತ್ ವೇದಿಕೆ
ಇಂದು ಬಳ್ಳಾರಿ ಚಲೋ ಬಿಜೆಪಿ ಪಾದಯಾತ್ರೆ ಸಮಾರೋಪ ಸಮಾರಂಭ ನಡೆಯಲಿದ್ದು, ಬಿಜೆಪಿ ಬಹಿರಂಗ ಸಮಾವೇಶಕ್ಕೆ ಬೃಹತ್ ವೇದಿಕೆ ಸಿದ್ಧವಾಗಿದೆ. ಬಳ್ಳಾರಿ ನಗರದ ಮುನ್ಸಿಪಲ್ ಮೈದಾನದಲ್ಲಿ ಸಮಾವೇಶ ನಡೆಯಲಿದೆ. ಬಿಜೆಪಿ ಸಮಾವೇಶದಲ್ಲಿ 50 ಸಾವಿರಕ್ಕೂ ಹೆಚ್ಚು ಜನರು ಭಾಗಿ ನಿರೀಕ್ಷೆ ಇದೆ. ಬಳ್ಳಾರಿಯಲ್ಲಿ ಭದ್ರತೆಗೆ 1,200ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ.
-
ಸೆಪ್ಟೆಂಬರ್ 12ಕ್ಕೆ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಭೇಟಿ
ಭಾರತದ ಆತಿಥ್ಯದಲ್ಲಿ ಸೆಪ್ಟೆಂಬರ್ 12 ಮತ್ತು 13ರಂದು ನವದೆಹಲಿಯಲ್ಲಿ ನಡೆಯಲಿರುವ 18ನೇ ಬ್ರಿಕ್ಸ್ (BRICS) ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಉನ್ನತ ಮಟ್ಟದ ಶೃಂಗಸಭೆಯ ಅಂಗವಾಗಿ, ಸೆಪ್ಟೆಂಬರ್ 12ರಂದು ಪ್ರಧಾನಿ ಮೋದಿ ಹಾಗೂ ಕ್ಸಿ ಜಿನ್‌ಪಿಂಗ್ ಅವರು ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಈ ವೇಳೆ ಉಭಯ ನಾಯಕರು ದ್ವಿಪಕ್ಷೀಯ ಬಾಂಧವ್ಯ, ಗಡಿ ವಿವಾದ ಹಾಗೂ ಜಾಗತಿಕ ವಿದ್ಯಮಾನಗಳು ಸೇರಿದಂತೆ ಹಲವು ಪ್ರಮುಖ ವಿಚಾರಗಳ ಕುರಿತು ಚರ್ಚಿಸುವ ಸಾಧ್ಯತೆಯಿದೆ.
-
ಹಾರ್ದಿಕ್ ಪಾಂಡ್ಯ ಭಾರತ ಎ ತಂಡಕ್ಕೆ ಆಯ್ಕೆಯಾಗಿದ್ದಕ್ಕೆ ಕಾರಣ ಇಲ್ಲಿದೆ
ಸೆಪ್ಟೆಂಬರ್ 22 ರಿಂದ ಭಾರತ ‘ಎ’ ಮತ್ತು ಆಸ್ಟ್ರೇಲಿಯಾ ‘ಎ’ ನಡುವಿನ ಸರಣಿಯು ಆರಂಭವಾಗಲಿದ್ದು, ಟೀಮ್ ಇಂಡಿಯಾದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಕಾಣಿಸಿಕೊಳ್ಳಲಿದ್ದಾರೆ. ಪಾಂಡ್ಯರನ್ನು ಎ ತಂಡಕ್ಕೆ ಆಯ್ಕೆ ಮಾಡಿದ್ದರ ಕಾರಣ ಏನೆಂಬುದನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ
-
ಆಕಾಶದಲ್ಲೇ ತಪ್ಪಿದ ಮಹಾ ದುರಂತ
ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಪ್ರಯಾಣಿಸುತ್ತಿದ್ದ ವಿಮಾನಕ್ಕೆ ರಷ್ಯಾದ ಡ್ರೋನ್ ಅಪ್ಪಳಿಸುವುದು ಕೂದಲೆಳೆ ಅಂತರದಲ್ಲಿ ತಪ್ಪಿದೆ.
ಆಕಾಶದಲ್ಲೇ ತಪ್ಪಿದ ಮಹಾ ದುರಂತ: ಝೆಲೆನ್ಸ್ಕಿ ವಿಮಾನಕ್ಕೆ ಅಪ್ಪಳಿಸಬೇಕಿದ್ದ ಡ್ರೋನ್ ಕೊನೆ ಕ್ಷಣದಲ್ಲಿ ಮಿಸ್#Russia #Ukrainehttps://t.co/dKRJda5NEP
— TV9 Kannada (@tv9kannada) September 10, 2026
-
ಏರ್‌ಪೋರ್ಟ್, ಎಲೆಕ್ಟ್ರಾನಿಕ್ಸ್ ಸಿಟಿ ಫ್ಲೈಓವರ್‌ನಲ್ಲಿ ಬೈಕ್ ನಿಷೇಧ ನಿರ್ಧಾರ ಸದ್ಯಕ್ಕೆ ತಡೆ
ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಎಲೆಕ್ಟ್ರಾನಿಕ್ಸ್ ಸಿಟಿ ಮೇಲ್ಸೇತುವೆಗಳಲ್ಲಿ ದ್ವಿಚಕ್ರ ವಾಹನ, ಆಟೋರಿಕ್ಷಾ ಸಂಚಾರ ನಿಷೇಧ ನಿರ್ಧಾರವನ್ನು ಸರ್ಕಾರ ಸದ್ಯಕ್ಕೆ ಮುಂದೂಡಿದೆ. ಮತ್ತಷ್ಟು ಓದಲು ಇಲ್ಲಿ ಕ್ಲಿಕ್ ಮಾಡಿ
-
ಕಲಬುರಗಿ ಜಿಲ್ಲಾ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ
ಕಲಬುರಗಿ ಪೊಲೀಸ್ ಆಯುಕ್ತ ಡಾ.ಶರಣಪ್ಪ ನೇತೃತ್ವದಲ್ಲಿ ಕಲಬುರಗಿ ಜಿಲ್ಲಾ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ, ಓರ್ವ ಕೈದಿ ಬಳಿ ಒಂದು ಮೊಬೈಲ್ ಪತ್ತೆಯಾಗಿದೆ. ಕಲಬುರಗಿ ಜೈಲಿನ ಬ್ಯಾರಕ್ ನಂ.6ರಲ್ಲಿ ಮೊಬೈಲ್ ಪತ್ತೆಯಾಗಿದೆ. ಈ ಸಂಬಂಧ ಫರಹತಬಾದ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.
-
ಮೈಸೂರು ದಸರಾ ಜಂಬೂಸವಾರಿಗೆ ಸ್ಯಾಂಡಲ್‌ವುಡ್ ಕಳೆ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ರ ಜಂಬೂಸವಾರಿ ಮೆರವಣಿಗೆಯಲ್ಲಿ ಈ ಬಾರಿ ಸ್ಯಾಂಡಲ್‌ವುಡ್ ನಟ-ನಟಿಯರು ಭಾಗವಹಿಸುವ ಮೂಲಕ ವಿಶೇಷ ರಂಗು ತರಲಿದ್ದಾರೆ. ಕನ್ನಡ ಚಿತ್ರರಂಗದ 93 ವರ್ಷಗಳ ಸುವರ್ಣ ಇತಿಹಾಸವನ್ನು ಸಾರುವ ವಿಶೇಷ ಸ್ತಬ್ಧಚಿತ್ರದೊಂದಿಗೆ, ಡಾ. ರಾಜ್‌ಕುಮಾರ್, ಡಾ. ವಿಷ್ಣುವರ್ಧನ್, ಅಂಬರೀಶ್ ಹಾಗೂ ಪುನೀತ್ ರಾಜ್‌ಕುಮಾರ್ ಅವರನ್ನು ಸ್ಮರಿಸುವ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಮೆರವಣಿಗೆಯಲ್ಲಿ ನಟರಾದ ಯಶ್, ಶಿವರಾಜ್‌ಕುಮಾರ್, ರಿಷಬ್ ಶೆಟ್ಟಿ, ರಕ್ಷಿತ್ ಶೆಟ್ಟಿ, ಕಿಚ್ಚ ಸುದೀಪ್, ರವಿಚಂದ್ರನ್ ಹಾಗೂ ನಟಿಯರಾದ ಉಮಾಶ್ರೀ, ರಚಿತಾ ರಾಮ್, ಸಪ್ತಮಿ ಗೌಡ, ರುಕ್ಮಿಣಿ ವಸಂತ್ ಸೇರಿದಂತೆ ಸುಮಾರು 30 ಪ್ರಮುಖ ಸ್ಟಾರ್ ಕಲಾವಿದರಿಗೆ ಆಹ್ವಾನ ನೀಡಲಾಗಿದೆ. ಜನದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ಸ್ಯಾಂಡಲ್‌ವುಡ್ ತಾರೆಯರು ತೆರೆದ ‘ಅಂಬಾರಿ’ ಬಸ್‌ನಲ್ಲಿ ಮೈಸೂರು ಅರಮನೆಯಿಂದ ಕೆ.ಆರ್. ಸರ್ಕಲ್‌ವರೆಗೆ ಮಾತ್ರ ಸಾಗಲಿದ್ದಾರೆ.
-
ಬಳ್ಳಾರಿಯಲ್ಲಿ ಇಂದು ‘ಬಳ್ಳಾರಿ ಚಲೋ’ ಬೃಹತ್ ಸಮಾರೋಪ ಸಮಾರಂಭ
ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿದ್ದ ‘ಬಳ್ಳಾರಿ ಚಲೋ’ ಪಾದಯಾತ್ರೆಯು ಇಂದು ನಿರ್ಣಾಯಕ ಘಟ್ಟಕ್ಕೆ ತಲುಪಿದ್ದು, ನಗರದ ಹಳೆ ಮುನ್ಸಿಪಲ್ ಮೈದಾನದಲ್ಲಿ ಸಂಜೆ 5 ಗಂಟೆಗೆ ಬೃಹತ್ ಸಮಾರೋಪ ಸಮಾರಂಭ ನಡೆಯಲಿದೆ. ಈ ಐತಿಹಾಸಿಕ ಸಮಾವೇಶಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ ಹಾಗೂ ವಿ. ಸೋಮಣ್ಣ, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಮತ್ತು ಡಿ.ವಿ. ಸದಾನಂದಗೌಡ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸೇರಿದಂತೆ ಹಲವು ಹಿರಿಯ ನಾಯಕರು ಭಾಗವಹಿಸಲಿದ್ದಾರೆ. ಜೊತೆಗೆ ಪ್ರಮುಖ ಮುಖಂಡರಾದ ಛಲವಾದಿ ನಾರಾಯಣಸ್ವಾಮಿ, ಗೋವಿಂದ ಕಾರಜೋಳ, ಬಿ. ಶ್ರೀರಾಮುಲು, ಜಿ. ಜನಾರ್ದನ ರೆಡ್ಡಿ, ಸಿ.ಸಿ. ಪಾಟೀಲ್, ಮುರುಗೇಶ್ ನಿರಾಣಿ, ಎನ್. ರವಿಕುಮಾರ್ ಹಾಗೂ ಎಂ.ಪಿ. ರೇಣುಕಾಚಾರ್ಯ ಸೇರಿದಂತೆ ಘಟಾನುಘಟಿ ನಾಯಕರ ದಂಡೇ ಈ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು, ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
-
ಜನರಿಗೆ ಭರಪೂರ ಕೊಡುಗೆ ಕೊಟ್ಟ ಡಿಕೆಶಿ ಸರ್ಕಾರ
ಬುಧವಾರ ನಡೆದ ಸಂಪುಟ ಸಭೆಯಲ್ಲಿ ರಾಜ್ಯದ ಜನರಿಗೆ ಡಿಕೆ ಶಿವಕುಮಾರ್ ಸರ್ಕಾರ ಭರ್ಜರಿ ಕೊಡುಗೆಗಳನ್ನು ಘೋಷಿಸಿದೆ. ವಿವರ ಓದಲು ಇಲ್ಲಿ ಕ್ಲಿಕ್ ಮಾಡಿ
-
ಭೀಕರ ಪ್ರವಾಹದ ಬಳಿಕ ನೇಪಾಳಕ್ಕೆ ಭಾರತದಿಂದ ನೆರವಿನ ಹಸ್ತ
ಭೀಕರ ಪ್ರವಾಹದ ಬಳಿಕ ನೇಪಾಳಕ್ಕೆ ಭಾರತದಿಂದ ನೆರವಿನ ಹಸ್ತ ಮುಂದುವರಿಕೆ ಮಾಡಲಾಗಿದೆ. ಇದೀಗ 35 ಟನ್ ಪರಿಹಾರ ಕಳುಹಿಸಲಾಗಿದೆ. ರಕ್ಷಣಾ ಸಾಮಗ್ರಿಗಳ 8ನೇ ಕಂತು ನೇಪಾಳಕ್ಕೆ ರವಾನಿಸಲಾಗಿದೆ. ಭಾರತೀಯ ವಾಯುಪಡೆ ವಿಮಾನದಲ್ಲಿ ಸಾಮಗ್ರಿಗಳನ್ನು ಕಾಠ್ಮಂಡುಗೆ ಕಳುಹಿಸಲಾಗಿದೆ.
Published On - Sep 10,2026 9:03 AM




