TV9 Kannada News Live: ಚೀನಾ ಅಧ್ಯಕ್ಷ ಕ್ಸಿ ಜಿನ್​​ಪಿಂಗ್ ಭಾರತ ಭೇಟಿ ಫಿಕ್ಸ್; ಇಂದಿನ ಪ್ರಮುಖ ವಿದ್ಯಮಾನಗಳ ಅಪ್​ಡೇಟ್

Karnataka News Today Live Updates: ಸಚಿವ ಸತೀಶ್ ಜಾರಕಿಹೊಳಿ ಮನೆಗಳ ಮೇಲೆ ಜಾರಿ ನಿರ್ದೇಶನಾಲಯ ನಡೆಸಿರುವ ದಾಳಿ ಮತ್ತು ಶೋಧಕಾರ್ಯ ಗುರುವಾರ ಸಹ ಮುಂದುವರೆದಿದೆ. ಮತ್ತೊಂದಡೆ, ಬಿಜೆಪಿ ಹಮ್ಮಿಕೊಂಡಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆ ಇಂದು ಸಮರೋಪಗೊಳ್ಳಲಿದೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸರ್ಕಾರಕ್ಕೆ ನೂರು ದಿನ ತುಂಬಿದೆ. ಇವುಗಳು ಸೇರಿದಂತೆ ಕರ್ನಾಟಕದ, ದೇಶದ ಹಾಗೂ ವಿಶ್ವದ ಪ್ರಮುಖ ವಿದ್ಯಮಾನಗಳ ಕ್ಷಣ ಕ್ಷಣದ ಅಪ್ಡೇಟ್ ಇಲ್ಲಿದೆ.

TV9 Kannada News Live: ಚೀನಾ ಅಧ್ಯಕ್ಷ ಕ್ಸಿ ಜಿನ್​​ಪಿಂಗ್ ಭಾರತ ಭೇಟಿ ಫಿಕ್ಸ್; ಇಂದಿನ ಪ್ರಮುಖ ವಿದ್ಯಮಾನಗಳ ಅಪ್​ಡೇಟ್
ರಾಜ್ಯದ ಪ್ರಮುಖ ವಿದ್ಯಮಾನಗಳ ಅಪ್​ಡೇಟ್
Image Credit source: tv9

Updated on: Sep 10, 2026 | 10:08 AM

LIVE NEWS & UPDATES

  • 10 Sep 2026 10:06 AM (IST)

    ಸೆಪ್ಟೆಂಬರ್ 12ಕ್ಕೆ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಭೇಟಿ

    ಭಾರತದ ಆತಿಥ್ಯದಲ್ಲಿ ಸೆಪ್ಟೆಂಬರ್ 12 ಮತ್ತು 13ರಂದು ನವದೆಹಲಿಯಲ್ಲಿ ನಡೆಯಲಿರುವ 18ನೇ ಬ್ರಿಕ್ಸ್ (BRICS) ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಉನ್ನತ ಮಟ್ಟದ ಶೃಂಗಸಭೆಯ ಅಂಗವಾಗಿ, ಸೆಪ್ಟೆಂಬರ್ 12ರಂದು ಪ್ರಧಾನಿ ಮೋದಿ ಹಾಗೂ ಕ್ಸಿ ಜಿನ್‌ಪಿಂಗ್ ಅವರು ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಈ ವೇಳೆ ಉಭಯ ನಾಯಕರು ದ್ವಿಪಕ್ಷೀಯ ಬಾಂಧವ್ಯ, ಗಡಿ ವಿವಾದ ಹಾಗೂ ಜಾಗತಿಕ ವಿದ್ಯಮಾನಗಳು ಸೇರಿದಂತೆ ಹಲವು ಪ್ರಮುಖ ವಿಚಾರಗಳ ಕುರಿತು ಚರ್ಚಿಸುವ ಸಾಧ್ಯತೆಯಿದೆ.

  • 10 Sep 2026 09:28 AM (IST)

    ಹಾರ್ದಿಕ್ ಪಾಂಡ್ಯ ಭಾರತ ಎ ತಂಡಕ್ಕೆ ಆಯ್ಕೆಯಾಗಿದ್ದಕ್ಕೆ ಕಾರಣ ಇಲ್ಲಿದೆ

    ಸೆಪ್ಟೆಂಬರ್ 22 ರಿಂದ ಭಾರತ ‘ಎ’ ಮತ್ತು ಆಸ್ಟ್ರೇಲಿಯಾ ‘ಎ’ ನಡುವಿನ ಸರಣಿಯು ಆರಂಭವಾಗಲಿದ್ದು, ಟೀಮ್ ಇಂಡಿಯಾದ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ ಕಾಣಿಸಿಕೊಳ್ಳಲಿದ್ದಾರೆ. ಪಾಂಡ್ಯರನ್ನು ಎ ತಂಡಕ್ಕೆ ಆಯ್ಕೆ ಮಾಡಿದ್ದರ ಕಾರಣ ಏನೆಂಬುದನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

  • 10 Sep 2026 09:25 AM (IST)

    ಆಕಾಶದಲ್ಲೇ ತಪ್ಪಿದ ಮಹಾ ದುರಂತ

    ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಪ್ರಯಾಣಿಸುತ್ತಿದ್ದ ವಿಮಾನಕ್ಕೆ ರಷ್ಯಾದ ಡ್ರೋನ್ ಅಪ್ಪಳಿಸುವುದು ಕೂದಲೆಳೆ ಅಂತರದಲ್ಲಿ ತಪ್ಪಿದೆ.

  • 10 Sep 2026 09:23 AM (IST)

    ಏರ್‌ಪೋರ್ಟ್, ಎಲೆಕ್ಟ್ರಾನಿಕ್ಸ್ ಸಿಟಿ ಫ್ಲೈಓವರ್‌ನಲ್ಲಿ ಬೈಕ್ ನಿಷೇಧ ನಿರ್ಧಾರ ಸದ್ಯಕ್ಕೆ ತಡೆ

    ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಎಲೆಕ್ಟ್ರಾನಿಕ್ಸ್ ಸಿಟಿ ಮೇಲ್ಸೇತುವೆಗಳಲ್ಲಿ ದ್ವಿಚಕ್ರ ವಾಹನ, ಆಟೋರಿಕ್ಷಾ ಸಂಚಾರ ನಿಷೇಧ ನಿರ್ಧಾರವನ್ನು ಸರ್ಕಾರ ಸದ್ಯಕ್ಕೆ ಮುಂದೂಡಿದೆ. ಮತ್ತಷ್ಟು ಓದಲು ಇಲ್ಲಿ ಕ್ಲಿಕ್ ಮಾಡಿ

  • 10 Sep 2026 09:21 AM (IST)

    ಕಲಬುರಗಿ‌ ಜಿಲ್ಲಾ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ

    ಕಲಬುರಗಿ ಪೊಲೀಸ್ ಆಯುಕ್ತ ಡಾ.ಶರಣಪ್ಪ ನೇತೃತ್ವದಲ್ಲಿ‌ ಕಲಬುರಗಿ‌ ಜಿಲ್ಲಾ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ, ಓರ್ವ ಕೈದಿ ಬಳಿ ಒಂದು ಮೊಬೈಲ್ ಪತ್ತೆಯಾಗಿದೆ. ಕಲಬುರಗಿ ಜೈಲಿನ ಬ್ಯಾರಕ್​ ನಂ.6ರಲ್ಲಿ ಮೊಬೈಲ್ ಪತ್ತೆಯಾಗಿದೆ. ಈ ಸಂಬಂಧ ಫರಹತಬಾದ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

  • 10 Sep 2026 09:18 AM (IST)

    ಮೈಸೂರು ದಸರಾ ಜಂಬೂಸವಾರಿಗೆ ಸ್ಯಾಂಡಲ್‌ವುಡ್ ಕಳೆ

    ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ರ ಜಂಬೂಸವಾರಿ ಮೆರವಣಿಗೆಯಲ್ಲಿ ಈ ಬಾರಿ ಸ್ಯಾಂಡಲ್‌ವುಡ್ ನಟ-ನಟಿಯರು ಭಾಗವಹಿಸುವ ಮೂಲಕ ವಿಶೇಷ ರಂಗು ತರಲಿದ್ದಾರೆ. ಕನ್ನಡ ಚಿತ್ರರಂಗದ 93 ವರ್ಷಗಳ ಸುವರ್ಣ ಇತಿಹಾಸವನ್ನು ಸಾರುವ ವಿಶೇಷ ಸ್ತಬ್ಧಚಿತ್ರದೊಂದಿಗೆ, ಡಾ. ರಾಜ್‌ಕುಮಾರ್, ಡಾ. ವಿಷ್ಣುವರ್ಧನ್, ಅಂಬರೀಶ್ ಹಾಗೂ ಪುನೀತ್ ರಾಜ್‌ಕುಮಾರ್ ಅವರನ್ನು ಸ್ಮರಿಸುವ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಮೆರವಣಿಗೆಯಲ್ಲಿ ನಟರಾದ ಯಶ್, ಶಿವರಾಜ್‌ಕುಮಾರ್, ರಿಷಬ್ ಶೆಟ್ಟಿ, ರಕ್ಷಿತ್ ಶೆಟ್ಟಿ, ಕಿಚ್ಚ ಸುದೀಪ್, ರವಿಚಂದ್ರನ್ ಹಾಗೂ ನಟಿಯರಾದ ಉಮಾಶ್ರೀ, ರಚಿತಾ ರಾಮ್, ಸಪ್ತಮಿ ಗೌಡ, ರುಕ್ಮಿಣಿ ವಸಂತ್ ಸೇರಿದಂತೆ ಸುಮಾರು 30 ಪ್ರಮುಖ ಸ್ಟಾರ್ ಕಲಾವಿದರಿಗೆ ಆಹ್ವಾನ ನೀಡಲಾಗಿದೆ. ಜನದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ಸ್ಯಾಂಡಲ್‌ವುಡ್ ತಾರೆಯರು ತೆರೆದ ‘ಅಂಬಾರಿ’ ಬಸ್‌ನಲ್ಲಿ ಮೈಸೂರು ಅರಮನೆಯಿಂದ ಕೆ.ಆರ್. ಸರ್ಕಲ್‌ವರೆಗೆ ಮಾತ್ರ ಸಾಗಲಿದ್ದಾರೆ.

  • 10 Sep 2026 09:17 AM (IST)

    ಬಳ್ಳಾರಿಯಲ್ಲಿ ಇಂದು ‘ಬಳ್ಳಾರಿ ಚಲೋ’ ಬೃಹತ್ ಸಮಾರೋಪ ಸಮಾರಂಭ

    ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿದ್ದ ‘ಬಳ್ಳಾರಿ ಚಲೋ’ ಪಾದಯಾತ್ರೆಯು ಇಂದು ನಿರ್ಣಾಯಕ ಘಟ್ಟಕ್ಕೆ ತಲುಪಿದ್ದು, ನಗರದ ಹಳೆ ಮುನ್ಸಿಪಲ್ ಮೈದಾನದಲ್ಲಿ ಸಂಜೆ 5 ಗಂಟೆಗೆ ಬೃಹತ್ ಸಮಾರೋಪ ಸಮಾರಂಭ ನಡೆಯಲಿದೆ. ಈ ಐತಿಹಾಸಿಕ ಸಮಾವೇಶಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ ಹಾಗೂ ವಿ. ಸೋಮಣ್ಣ, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಮತ್ತು ಡಿ.ವಿ. ಸದಾನಂದಗೌಡ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸೇರಿದಂತೆ ಹಲವು ಹಿರಿಯ ನಾಯಕರು ಭಾಗವಹಿಸಲಿದ್ದಾರೆ. ಜೊತೆಗೆ ಪ್ರಮುಖ ಮುಖಂಡರಾದ ಛಲವಾದಿ ನಾರಾಯಣಸ್ವಾಮಿ, ಗೋವಿಂದ ಕಾರಜೋಳ, ಬಿ. ಶ್ರೀರಾಮುಲು, ಜಿ. ಜನಾರ್ದನ ರೆಡ್ಡಿ, ಸಿ.ಸಿ. ಪಾಟೀಲ್, ಮುರುಗೇಶ್ ನಿರಾಣಿ, ಎನ್. ರವಿಕುಮಾರ್ ಹಾಗೂ ಎಂ.ಪಿ. ರೇಣುಕಾಚಾರ್ಯ ಸೇರಿದಂತೆ ಘಟಾನುಘಟಿ ನಾಯಕರ ದಂಡೇ ಈ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು, ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

  • 10 Sep 2026 09:14 AM (IST)

    ಜನರಿಗೆ ಭರಪೂರ ಕೊಡುಗೆ ಕೊಟ್ಟ ಡಿಕೆಶಿ ಸರ್ಕಾರ

    ಬುಧವಾರ ನಡೆದ ಸಂಪುಟ ಸಭೆಯಲ್ಲಿ ರಾಜ್ಯದ ಜನರಿಗೆ ಡಿಕೆ ಶಿವಕುಮಾರ್ ಸರ್ಕಾರ ಭರ್ಜರಿ ಕೊಡುಗೆಗಳನ್ನು ಘೋಷಿಸಿದೆ. ವಿವರ ಓದಲು ಇಲ್ಲಿ ಕ್ಲಿಕ್ ಮಾಡಿ

  • 10 Sep 2026 09:14 AM (IST)

    ಭೀಕರ ಪ್ರವಾಹದ ಬಳಿಕ ನೇಪಾಳಕ್ಕೆ ಭಾರತದಿಂದ ನೆರವಿನ ಹಸ್ತ

    ಭೀಕರ ಪ್ರವಾಹದ ಬಳಿಕ ನೇಪಾಳಕ್ಕೆ ಭಾರತದಿಂದ ನೆರವಿನ ಹಸ್ತ ಮುಂದುವರಿಕೆ ಮಾಡಲಾಗಿದೆ. ಇದೀಗ 35 ಟನ್ ಪರಿಹಾರ ಕಳುಹಿಸಲಾಗಿದೆ. ರಕ್ಷಣಾ ಸಾಮಗ್ರಿಗಳ 8ನೇ ಕಂತು ನೇಪಾಳಕ್ಕೆ ರವಾನಿಸಲಾಗಿದೆ. ಭಾರತೀಯ ವಾಯುಪಡೆ ವಿಮಾನದಲ್ಲಿ ಸಾಮಗ್ರಿಗಳನ್ನು ಕಾಠ್ಮಂಡುಗೆ ಕಳುಹಿಸಲಾಗಿದೆ.

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನಿವಾಸಿಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ವಿದೇಶಗಳಲ್ಲಿ ಹಣ ಹೂಡಿಕೆ ಸಂಬಂಧ ನಡೆಸಿರುವ ದಾಳಿ ಹಾಗೂ ಶೋಧ ಕಾರ್ಯಾಚರಣೆ ಗುರುವಾರ ಕೂಡ ಮುಂದುವರಿದಿದೆ. ಬೆಂಗಳೂರು, ಬೆಳಗಾವಿ ಸೇರಿದಂತೆ ಸುಮಾರು 18 ಕಡೆ ದಾಳಿ ನಡೆಸಿದ ಇಡೀ ಅಧಿಕಾರಿಗಳು ಬುಧವಾರ ತಡರಾತ್ರಿ ಎರಡು ಗಂಟೆವರೆಗೆ ಶೋಧ ಕಾರ್ಯ ನಡೆಸಿದ್ದರು. ಇದೀಗ ಗುರುವಾರ ಬೆಳಗ್ಗೆ ಸಹಶೋಧ ಕಾರ್ಯ ಮುಂದುವರಿಸಲಾಗಿದೆ. ಮತ್ತೊಂದೆಡೆ, ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಹಲವು ಆರೋಪಗಳನ್ನು ಮಾಡಿ ‘ಬಳ್ಳಾರಿ ಚಲೋ’ ಪಾದಯಾತ್ರೆ ಹಮ್ಮಿಕೊಂಡಿರುವ ಬಿಜೆಪಿ ಇಂದು ಸಮಾರೋಪದತ್ತ ಹೆಜ್ಜೆ ಹಾಕುತ್ತಿದೆ. ಈ ಮಧ್ಯೆ ಅಧಿಕಾರ ಹಸ್ತಾಂತರದ ನಂತರ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಿ 100 ದಿನಗಳು ಸಂದಿವೆ. ಈ ಹಿನ್ನೆಲೆಯಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಜನತೆಗೆ ಹಲವು ಕೊಡುಗೆಗಳನ್ನು ಘೋಷಿಸಲಾಗಿತ್ತು. 100ನೇ ದಿನದ ಸಂಭ್ರಮದ ಆಚರಣೆಗೂ ಡಿಕೆಶಿ ಸರ್ಕಾರ ಸಿದ್ಧತೆ ಮಾಡಿಕೊಂಡಿದೆ. ಇವಿಷ್ಟರ ಜೊತೆಗೆ ಕರ್ನಾಟಕದ, ದೇಶಕ್ಕೆ ಸಂಬಂಧಿಸಿದ ಮತ್ತು ಅಂತರರಾಷ್ಟ್ರೀಯ ಬೆಳವಣಿಗೆಗಳ ಪ್ರಮುಖ ಅಪ್ಡೇಟ್ ಇಲ್ಲಿ ಲಭ್ಯ.

Published On - 9:03 am, Thu, 10 September 26

Loading...
Unable to load recommendations.
Follow Us