
ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕರ್ನಾಟಕದ ಜನತೆಗೆ 71ನೇ ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದ್ದಾರೆ. ಈ ಭಾಷೆಗೆ ಯಾವುದೇ ಗಡಿ ಇಲ್ಲ/ ಬ್ರಿಟೀಷರಿಗೆ ನಮ್ಮಮಾತೃಭಾಷೆ ಯಾವುದು ನಮೂದು ಮಾಡಿ ಅಂತಾ ಬಿಟ್ಟು ಹೋದ ಇತಿಹಾಸ ಇದೆ. ಎಲ್ಲಾ ಸರ್ಕಾರಿ ಕಚೇರಿಗಳ ಮೇಲೆ , ಖಾಸಗಿ ಕಚೇರಿಗಳ ಮೇಲೆ ಕನ್ನಡ ಬಾವುಟ ಹಾರಿಸಲು ಆದೇಶ ಹೊರಡಿಸಲು ಸಿದ್ಧತೆ ಮಾಡ್ಕೊಂಡಿದೇವೆ. ನಿನ್ನೆ ಮೊನ್ನೆ ಕೂಡ ಕಾನೂನು ತಜ್ಞರ ಜೊತೆ ಚರ್ಚೆ ಮಾಡಿದೇನೆ. ಈ ಅಧಿವೇಶನದಲ್ಲಿ ಕೆಲವು ವಿಚಾರಗಳನ್ನ ಮಂಡನೆ ಮಾಡ್ತೇವೆ. ನಮ್ಮ ಧ್ವಜವನ್ನು ನಾವು ಎಲ್ಲಾ ಕಡೆ ಬಳಸಲು ಬದ್ಧರಾಗಿರಬೇಕು. ಬೇರೆ ಯಾವ ರಾಜ್ಯದಲ್ಲೂ ಹೀಗೆ ಧ್ವಜ ಬಳಕೆ ಇಲ್ಲ. ಸಾರ್ವಜನಿಕ ಚರ್ಚೆ, ಶಾಸಕರ ಚರ್ಚೆಗೆ ಅವಕಾಶ ಮಾಡಿಕೊಡುತ್ತೇವೆ. ಜೊತೆಗೆ ಕೇಂದ್ರಕ್ಕೆ ನಿರ್ಣಯ ಕಳಿಸಿಕೊಡ್ತೇವೆ. ಇಡೀ ವಿಶ್ವದಲ್ಲಿರುವ ಕನ್ನಡಿಗರು ಸೇರಿದಂತೆ ಎಲ್ಲರಿಗೂ ಕರ್ನಾಟಕ ರಾಜ್ಯೋತ್ಸವದ ಶುಭಾಶಗಳು.
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ 71ನೇ ಕನ್ನಡ ಕನ್ನಡ ರಾಜ್ಯೋತ್ಸವ ನಡೆಯುತ್ತಿದ್ದು, ಸಿಎಂ ಡಿ.ಕೆ.ಶಿವಕುಮಾರ್ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸೇರಿ ಹಲವು ಗಣ್ಯರು ಉಪಸ್ಥಿತತಿದ್ದರು.
ನಾಡಿನಲ್ಲೆಡೆ ಕರ್ನಾಟಕ ರಾಜ್ಯೋತ್ಸವ ಸಡಗರ ಸಂಭ್ರಮ ಮನೆ ಮಾಡಿದೆ. ಆದ್ರೆ ಕಲಬುರಗಿಯಲ್ಲಿ ಪ್ರತ್ಯೇಕ ರಾಜ್ಯ ಕೂಗು ಕೇಳಿಬಂದಿದೆ. ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಇಂದು ಕಲಬುರಗಿಯ ಎಸ್ ವಿಪಿ ವೃತ್ತದಲ್ಲಿ ಧ್ವಜಾರೋಹಣಕ್ಕೆ ಮುಂದಾಗಿರುವ ಘಟನೆ ನಡೆದಿದೆ. ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಮತ್ತು 371(ಜೆ) ಕಲಂ ಸಮರ್ಪಕ ಜಾರಿಗೆ ಒತ್ತಾಯಿಸಿ ಸರ್ಧಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ಧ್ವಜಾರೋಹಣಕ್ಕೆ ತೆರಳುತ್ತಿದ್ದರು. ಈ ವೇಳೆ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಅಧ್ಯಕ್ಷ ಎಮ್ ಎಸ್ ಪಾಟೀಲ್ ಸೇರಿದಂತೆ 20 ಕ್ಕೂ ಅಧಿಕ ಹೋರಾಟಗಾರರನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಕುಂದಾನಗರಿ ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವ ಕಳೆಗಟ್ಟಿದ್ದು, ಮಧ್ಯರಾತ್ರಿಯಿಂದಲೇ ಸಂಭ್ರಮ ಮನೆ ಮಾಡಿದೆ. ಇನ್ನು ಎಂಇಎಸ್ ಪುಂಡರಿಂದ ಕರಾಳ ದಿನ ಹಿನ್ನೆಲೆಯಲ್ಲಿ ಮುಂಗಾಗ್ರತಾ ಕ್ರಮವಾಗಿ ಬೆಳಗಾವಿ ನಗರದಲ್ಲಿ 3000 ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಬೆಳಗಾವಿ ಪೊಲೀಸ್ ಕಮೀಷನರ್ ಪ್ರಕಾಶ್ ನಿಕ್ಕಂ ನೇತೃತ್ವದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು, ಇಬ್ಬರು ಡಿಸಿಪಿ, ಎಸಿಪಿ 6, ಪಿಐ 68, ಪಿಎಸ್ಐ ಮತ್ತು ಎಎಸ್ಐ 304, 1800 ಪೊಲೀಸ್ ಸಿಬ್ಬಂದಿ, 400 ಹೋಮ್ ಗಾರ್ಡ್ ಭದ್ರತೆಗೆ ನಿಯೋಜಿಸಲಾಗಿದೆ.
ಇಂದು ಮೂರನೇ ದಿನ ಹಾಸನಾಂಬೆ ದರ್ಶನಕ್ಕೆ ಭಕ್ತ ಸಾಗರವೇ ಹರಿದುಬರುತ್ತಿದೆ. ತಾಯಿ ದರ್ಶನಕ್ಕೆ ಭಕ್ತರು
ರಾತ್ರಿಯಿಂದಲೂ ಕಾದು ನಿಂತಿದ್ದಾರೆ. ಭಾನುವರ ಹಿನ್ನೆಲೆಯಲ್ಲಿ ಹಾಸನಕ್ಕೆ ಜನಸಾಗರವೇ ಹರಿದುಬಂದಿದ್ದು, ಕಿಲೋಮೀಟರ್ ಗಟ್ಟಲೆ ಭಕ್ತರ ದಂಡು ಸಲುಗಟ್ಟಿ ನಿಂತಿದೆ. ಧರ್ಮ ದರ್ಶನ, ಸಾವಿರ ರೂ ಟಿಕೇಟ್, ಮುನ್ನೂರು ರೂ ಟಿಕೇಟ್ ನ ಎಲ್ಲಾ ಸರತಿ ಸಾಲು ಭರ್ತಿಯಾಗಿ ಮುಂದೆ ಸಾಗಿವೆ
ಬೆಳಗಾವಿಯಲ್ಲಿ ಮಧ್ಯರಾತ್ರಿಯಿಂದಲೇ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುತ್ತಿದೆ. ಚನ್ನಮ್ಮ ವೃತ್ತದಲ್ಲಿ ಮೇಯರ್ ಪ್ರೀತಿ ಕೇಕ್ ಕತ್ತರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇನ್ನು ಕನ್ನಡಿಗರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡುತ್ತಿದ್ದಾರೆ.
ಹಾಸನಾಂಬ ದೇವಿ ಸಾರ್ವಜನಿಕ ದರ್ಶನಕ್ಕೆ ಮೂರನೇ ದಿನವಾದ ಇಂದು (ನವೆಂಬರ್ 01) ಭಕ್ತರು
ಸಾಗರೋಪಾದಿಯಲ್ಲಿ ಆಗಮಿಸಿದ್ದು, ಸಾರಿಗೆ ಬಸ್ ನಿಲ್ದಾಣದಲ್ಲಿ ಜನಜಂಗುಳಿಯಾಗಿದೆ. ಇನ್ನು ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸಿ ದೇವಿ ದರ್ಶನ ಪಡೆದು ವಾಪಾಸ್ ತಮ್ಮ ಊರುಗಳಿಗೆ ತೆರಳಲು ಬಸ್‌ಗಾಗಿ ಪರದಾಡುತ್ತಿದ್ದಾರೆ. ಹಾಸನ ಬಸ್ ನಿಲ್ದಾಣದಲ್ಲಿ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಮಹಿಳೆಯರು ಜಮಾಯಿಸಿದ್ದಾರೆ. ಹೀಗಾಗಿ ನೂಕು-ನುಗ್ಗಲು ಮಾಡಿಕೊಳ್ಳಬೇಡಿ ಎಂದು ಸಾರಿಗೆ ಇಲಾಖೆ ಅಧಿಕಾರಿಗಳು ಮೈಕ್ ಮೂಲಕ ಅನೌನ್ಸ್ ಮಾಡುತ್ತಿದ್ದಾರೆ.
ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಧರಣಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಎಂಎಸ್ಪಿ ದರ ನಿಗದಿ ಮಾಡುವಂತೆ ಈಗಾಗಲೇ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ರೈತರು ನೀಡಿದ್ದ ಡೆಡ್ಲೈನ್ ಮುಗಿದಿದ್ದು, ಪ್ರತಿಭಟನೆ ತೀವ್ರಗೊಳಿಸಲು ಮುಂದಾಗಿದ್ದಾರೆ. ಇಂದು ಮತ್ತೆ ಗುರ್ಲಾಪುರದಲ್ಲಿ ಜಮಾವಣೆಯಾಗುವ ರೈತ ಮುಖಂಡರು, ಮತ್ತೊಂದು ಸುತ್ತಿನ ಮಾತುಕತೆ ನಡೆಸಲಿದ್ದಾರೆ. ಅಲ್ಲದೇ ನಾಳೆ ಗುರ್ಲಾಪುರದಿಂದ ಜೈಲ್ ಭರೋ ಚಳವಳಿಗೆ ಕರೆ ನೀಡಲು ಚಿಂತನೆ ನಡೆಸಿದ್ದಾರೆ.
ಕರ್ನಾಟಕದಲ್ಲಿ ಎಲ್ಲೆಡೆ 71ನೇ ಕನ್ನಡ ರಾಜ್ಯೋತ್ಸವ ಸಂಭಮ ಮನೆ ಮಾಡಿದ್ದು,ಬೆಂಗಳೂರಿನಲ್ಲಿ ಕಂಠೀರವ ಸ್ಟೇಡಿಯಂನಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದ್ದು, ಬೆಳಗ್ಗೆ 9 ಗಂಟೆಗೆ ಸಿಎಂ ಡಿಕೆ ಶಿವಕುಮಾರ್ ಧ್ವಜಾರೋಹಣ ಮಾಡಿ ರಾಜ್ಯವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.
Breaking News Today Live Updates in Kannada: ಕರ್ನಾಟಕದಲ್ಲಿ ಎಲ್ಲೆಡೆ 71ನೇ ಕನ್ನಡ ರಾಜ್ಯೋತ್ಸವ ಸಂಭಮ ಮನೆ ಮಾಡಿದ್ದು, ಎಲ್ಲಾ ಸರ್ಕಾರಿ, ಖಾಸಗಿ ಕಚೇರಿ, ಸಂಘ ಸಂಸ್ಥೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುತ್ತಿದೆ. ಇನ್ನೊಂದೆಡೆ ಬೆಂಗಳೂರಿನಲ್ಲಿ ಕಂಠೀರವ ಸ್ಟೇಡಿಯಂನಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದ್ದು, ಸಿಎಂ ಡಿಕೆ ಶಿವಕುಮಾರ್ ಅವರು ಧ್ವಜಾರೋಹಣ ಮಾಡಿ ರಾಜ್ಯವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಇನ್ನು ರಾಜ್ಯೋತ್ಸವದ ಅಂಗವಾಗಿ ನಾಡಗೀತೆ ಗಾಯನ, ಪಥಸಂಚಲನ ಆಕರ್ಷಕವಾಗಿದೆ. ಮತ್ತೊಂದೆಡೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕಬ್ಬು ಬೆಳೆಗಾರರ ಧರಣಿ ತೀವ್ರ ಸ್ವರೂಪ ಪಡೆದುಕೊಂಡಿದೆ. ರಾಜ್ಯ ಸರ್ಕಾರ, ಕಾರ್ಖಾನೆ ಮಾಲೀಕರಿಂದ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ಇಂದು ಮತ್ತೆ ಗುರ್ಲಾಪುರದಲ್ಲಿ ಜಮಾವಣೆಯಾಗುವ ರೈತ ಮುಖಂಡರು, ನಾಳೆ ಗುರ್ಲಾಪುರದಿಂದ ಜೈಲ್ ಭರೋ ಚಳವಳಿಗೆ ಕರೆ ನೀಡಲು ಚಿಂತನೆ ನಡೆಸಿದ್ದಾರೆ. ಹೀಗೆ ರಾಷ್ಟ್ರೀಯ, ಅಂತಾರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.
Published On - 7:25 am, Sun, 1 November 26