
Breaking News Today Live Updates in Kannada: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ವಿಡಿಯೋ ಅಪ್ಲೋಡ್ ಮಾಡಲು ಬಳಸಲಾದ ಮೊಬೈಲ್ ಫೋನ್ ದೆಹಲಿಯಲ್ಲಿರುವ ಹೆಚ್ಡಿಕೆ ನಿವಾಸದ ಬಳಿ ವಿನಿಮಯವಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ನೀಡಿದ್ದ ಹೇಳಿಕೆಯನ್ನು ಕುಮಾರಸ್ವಾಮಿ ಕಟುವಾಗಿ ಟೀಕಿಸಿದ್ದರು. “ನಾಳೆ ಪಿಕ್ಚರ್ ತೋರಿಸ್ತೀನಿ” ಎಂದು ನಿನ್ನೆ ಹೇಳಿದ್ದ ಹೆಚ್ಡಿಕೆ, ಇಂದು ಬೆಳಿಗ್ಗೆ 11 ಗಂಟೆಗೆ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಈ ವೇಳೆ ಪ್ರಮುಖ ದಾಖಲೆ ಬಿಡುಗಡೆ ಮಾಡುವ ಸಾಧ್ಯತೆಯಿದೆ. ಇನ್ನೊಂದೆಡೆ ಹಾಲಿನ ದರ ಏರಿಕೆಯ ಬೆನ್ನಲ್ಲೇ ಶಾಂತಿನಗರದ ‘ಉಡುಪಿ ಗ್ರ್ಯಾಂಡ್ ವೆಜ್’ ಹೋಟೆಲ್ನಲ್ಲಿ ಟೀ-ಕಾಫಿ ಬೆಲೆ ಬರೋಬ್ಬರಿ 5 ರೂಪಾಯಿ ಹೆಚ್ಚಳವಾಗಿದೆ. 15 ರೂಪಾಯಿ ಇದ್ದ ಮಿನಿ ಟೀ-ಕಾಫಿ ಈಗ 20 ರೂಪಾಯಿಗೆ ಹಾಗೂ 20 ರೂಪಾಯಿ ಇದ್ದ ಒಂದು ಕಪ್ ಟೀ-ಕಾಫಿ ದರ 25 ರೂಪಾಯಿಗೆ ಏರಿಕೆಯಾಗಿದ್ದು, ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಬಂಗಾಳಕೊಲ್ಲಿಯಲ್ಲಿ ತೀವ್ರಗೊಂಡ ‘ಮುರಾಸು’ ಚಂಡಮಾರುತ ಗಂಟೆಗೆ 100-120 ಕಿ.ಮೀ ವೇಗದಲ್ಲಿ ನೆಲ್ಲೂರು-ನರಸಾಪುರ ನಡುವೆ ಅಪ್ಪಳಿಸುವ ಸಾಧ್ಯತೆಯಿದೆ. ಪರಿಣಾಮವಾಗಿ ಆಂಧ್ರಪ್ರದೇಶ, ತಮಿಳುನಾಡು ಹಾಗೂ ಪುದುಚೇರಿಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದ್ದು, ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.
ಹಾಲು, ಮೊಸರಿನ ಬೆನ್ನಲ್ಲೇ ಕರ್ನಾಟಕದ ಜನತೆಗೆ ರಾಜ್ಯ ಸರ್ಕಾರ ಮತ್ತೊಂದು ದರ ಏರಿಕೆಯ ಶಾಕ್ ಕೊಟ್ಟಿದೆ. ಹಾಲಿನ ದರ ಏರಿಕೆ ಬೆನ್ನಲ್ಲೇ ಬಸ್ ಟಿಕೆಟ್ ಏರಿಕೆಗೆ ತೀರ್ಮಾನಿಸಲಾಗಿದ್ದು, ಬುಧವಾರ ಸರ್ಕಾರಿ ಬಸ್ಗಳಲ್ಲಿ ಪ್ರಯಾಣ ದರ ಹೆಚ್ಚಳವಾಗಲಿದೆ. ಈ ಸಂಬಂಧ ಬುಧವಾರ ಸಾರಿಗೆ ಸಚಿವ ಭೈರತಿ ಸುರೇಶ್, ಅಧಿಕಾರಿಗಳ ಜೊತೆ ಸಭೆ ಮಾಡಿ ಬಳಿಕ ಬಸ್ ಟಿಕೆಟ್ ದರ ಏರಿಗೆ ಬಗ್ಗೆ ಅಧಿಕೃತ ಘೋಷಣೆ ಮಾಡಲಿದ್ದಾರೆ.
ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡ ಅವರು ಜನಸಾಮಾನ್ಯರಂತೆ ಬಂದು ಹಾಸನಾಂಬೆ ದರ್ಶನ ಪಡೆದುಕೊಂಡಿದ್ದಾರೆ. ಹಾಸನ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದೆ 1 ಸಾವಿರ ರೂ. ಟಿಕೆಟ್ ಖರೀದಿಸಿ ಕುಟುಂಬ ಸಮೇತ ಆಗಮಿಸಿ ಹಾಸನಾಂಬೆ ದರ್ಶನ ಪಡೆದು ಸರಳತೆ ಮರೆದಿದ್ದಾರೆ.
ಕರ್ನಾಟಕದಲ್ಲಿ ನಂದಿನಿ ಹಾಲು, ಮೊಸರು ದರ ಏರಿಕೆಗೆ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಹಾಲಿನ 8 ರೂಪಾಯಿ ಪೈಕಿ 7 ರೂ. ರೈತರಿಗೆ 1 ರೂ.ಕೆಎಂಎಫ್ಗೆ ಓಕೆ. ಆದ್ರೆ, ಮೊಸರು ಲೀಟರ್ಗೆ 14 ರೂಪಾಯಿ ಹೆಚ್ಚಿಸಿದ್ಯಾಕೆ? ಈ ಹಣ ರೈತರಿಗೆ ಹೋಗುತ್ತಾ ಎಂದು ಪ್ರಶ್ನೆಗಳು ಉದ್ಭವಿಸಿವೆ. ಈ ಬಗ್ಗೆ ಸಾಮಾಜಿ ಜಾಲತಾಣಗಳಲ್ಲಿ ಭಾರೀ ಚರ್ಚೆ ಆಗುತ್ತಿದ್ದು, ಇದರ ಬೆನ್ನಲ್ಲೇ ಎಚ್ಚೆತ್ತ ಸಿಎಂ ಡಿಕೆ ಶಿವಕುಮಾರ್, ಏರಿಕೆ ಮಾಡಲಾಗಿದ್ದ ಮೊಸರಿ ಬೆಲೆಯಲ್ಲಿ ಕೊಂಚ ಇಳಿಕೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕರ್ನಾಟಕ ರಾಜ್ಯ ನೂತನ ಬಿಜೆಪಿ ಉಸ್ತುವಾರಿ ಹರೀಶ್ ದ್ವಿವೇದಿ ನೇತೃತ್ವದಲ್ಲಿ ಸಭೆ ಕೋರ್ ಕಮಿಟಿ ಸಭೆ ನಡೆದಿದೆ. ಉಸ್ತುವಾರಿಯಾಗಿ ನೇಮಕವಾದ ಬಳಿಕ ಮೊದಲ ಬಾರಿಗೆ ಕರ್ನಾಟಕ ಪ್ರವಾಸ ಕೈಗೊಂಡಿರುವ ಹರೀಶ್ ದ್ವಿವೇದಿ, ಇಂದು (ನವೆಂಬರ್ 02) ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಕೋರ್ ಕಮಿಟಿ ಸಭೆ ನಡೆಸಿದರು. ಈ ಸಭೆಯಲ್ಲಿ ವಿಜಯೇಂದ್ರ, ಬಿಎಸ್ವೈ ಸೇರಿ ಕೋರ್ ಕಮಿಟಿ ಸದಸ್ಯರು ಭಾಗಿಯಾಗಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯನವರು ದೆಹಲಿಯಲ್ಲಿ ಮತ್ತೊಮ್ಮೆ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದ್ದು, ಸುಮಾರು 45 ನಿಮಿಷಗಳ ಕಾಲ ರಾಜ್ಯ ರಾಜಕಾರಣ ಹಾಗೂ ಸ್ಟಿಂಗ್ ಪ್ರಕರಣದ ಬಗ್ಗೆಯೂ ಮಾತುಕತೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಆದ್ರೆ, ಸಿದ್ದರಾಮಯ್ಯನವರು ಮಾತ್ರ ಸ್ಟಿಂಗ್ ಆಪರೇಷನ್ ಬಗ್ಗೆ ಚರ್ಚೆಯನ್ನು ಅಲ್ಲಗಳೆದಿದ್ದಾರೆ. ರಾಹುಲ್ ಭೇಟಿ ಬಳಿಕ ಮಾತನಾಡಿದ ಸಿದ್ದರಾಮಯ್ಯ, ಪಕ್ಷದ ಬೆಳವಣಿಗೆಗಳು ಹಾಗೂ ರಾಜಕೀಯ ವಿದ್ಯಮಾನಗಳು, ಪಕ್ಷ ಸಂಘಟನೆ ಬಗ್ಗೆ ರಾಹುಲ್ ಗಾಂಧಿ ಜೊತೆ ಚರ್ಚೆ ಮಾಡಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ಪಾಂಗಳದ ಸೌಜನ್ಯಾ ಮೇಲೆ ಅತ್ಯಾಚಾರವೆಸಗಿ ಬರ್ಬರ ಕೊಲೆ ಪ್ರಕರಣದ ಮರು ತನಿಖೆ ಚುರುಕುಗೊಂಡಿದ್ದು, ಸೌಜನ್ಯಾ ಶವ ಸಿಕ್ಕ ಜಾಗ ಮಣ್ಣಸಂಕಕ್ಕೆ ಎಸ್ಐಟಿ ನೂತನ ಮುಖ್ಯಸ್ಥ ಚೇತನ್ ಸಿಂಗ್ ರಾಥೋಡ್ ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೇತ್ರಾವತಿ ಸ್ನಾನಘಟ್ಟ ಬಳಿಯಿರುವ ಮಣ್ಣಸಂಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಬ್ಬಿಗೆ ಬೆಂಬಲ ಬೆಲೆ ನಿಗದಿ ಮಾಡುವಂತೆ ಬೆಳಗಾವಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸರ್ಕಾರಕ್ಕೆ ಹಾಗೂ ಕಾರ್ಖಾನೆಗಳಿಗೆ ನೀಡಿದ್ದ ಗಡುವು ಮುಗಿದಿದೆ. ಇದರಿಂದ ಆಕ್ರೋಶಗೊಂಡಿರುವ ರೈತರು, ಗುರ್ಲಾಪುರಿಂದ ಹಿಂಡಲಗಾ ಜೈಲು ಬಾರೋ ಚಳವಳಿ ಆರಂಭಿಸಿದ್ದಾರೆ. ಇದರ ಮಧ್ಯೆ ಸಮೀಪ ಗ್ರಾಮದ ರೈತರು ಈಗಾಗಲೇ ಹಿಂಡಲಗಾ ಜೈಲಿಗೆ ಮುತ್ತಿಗೆ ಹಾಕಿದ್ದಾರೆ. ರೈತರನ್ನ ತಡೆಯಲು ಪೊಲೀಸರು ಯತ್ನಿಸಿದ್ದು, ಈ ವೇಳೆ ಈ ವೇಳೆ ರೈತರು ಪೊಲೀಸರ ನಡುವೆ ತಳ್ಳಾಟ ನೂಕಾಟ ನಡೆದಿದೆ.
ನಿನ್ನೆ ಅಷ್ಟೇ ಎಐಸಿಸಿ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಸಿದ್ದರಾಮಯ್ಯನವರು ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದ್ದರು. ಆದ್ರೆ, ರಾಜ್ಯ ರಾಜಕಾರಣ ಅಥವಾ ಸ್ಟಿಂಗ್ ಆಪರೇಷನ್ ವಿಚಾರವಾಗಿ ಮಾತುಕತೆಗೆ ಸಮಯವಿರಲಿಲ್ಲ. ಅಲ್ಲದೇ ಎಲ್ಲಾ ಮೈತ್ರಿ ನಾಯಕರು ಇದ್ದಿದ್ದರಿಂದ ಹೆಚ್ಚು ಮಾತುಕತೆ ಮಾಡಲು ಆಗಿಲ್ಲ. ಹೀಗಾಗಿ ಮತ್ತೊಮ್ಮೆ ಸಿದ್ದರಾಮಯ್ಯನವರು ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದ್ದಾರೆ. ಟೆನ್ ಜನ್ ಪಥ್ ರಸ್ತೆಯಲ್ಲಿರುವ ಸೋನಿಯಾ ಗಾಂಧಿ ನಿವಾಸದಲ್ಲಿ ಇಂದು (ನವೆಂಬರ್ 02) ಭೇಟಿ ಮಾಡಿದ್ದು, ಸ್ಟಿಂಗ್ ಹಾಗೂ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದು, ತೀವ್ರ ಕುತೂಹಲ ಮೂಡಿಸಿದೆ.
ದೀಪಾವಳಿಗೆ ದೆಹಲಿಯಲ್ಲಿ ಹಸಿರು ಪಟಾಕಿ ಸಿಡಿಸಲು ಸುಪ್ರೀಂ ಅಸ್ತು ಎಂದಿದೆ. ನವೆಂಬರ್ 7 ಮತ್ತು 8ರಂದು ಹಸಿರು ಪಟಾಕಿ ಬಳಕೆಗೆ ಸುಪ್ರೀಂಕೋರ್ಟ್ ಅನುಮತಿ ನೀಡಿದೆ. ದೆಹಲಿ-ಎನ್ಸಿಆರ್ ವ್ಯಾಪ್ತಿಗೆ ಅನ್ವಯವಾಗುವಂತೆ ಬೆಳಗ್ಗೆ 6ರಿಂದ 7ರವರೆಗೆ, ರಾತ್ರಿ 8ರಿಂದ 10ರವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಿ ನ್ಯಾಯಮೂರ್ತಿ ಎಂ.ಎಂ. ಸುಂದರೇಶ್ ಮತ್ತು ಪ್ರಸನ್ನ ಬಿ. ವರಾಳೆ ಪೀಠದಿಂದ ಆದೇಶ ಹೊರಡಿಸಿದೆ. ಆಸ್ಪತ್ರೆಗಳ ಸಮೀಪ ಪಟಾಕಿ ಸಿಡಿಸುವುದಕ್ಕೆ ನಿರ್ಬಂಧ. ಹಾಗೇ ನವೆಂಬರ್ 9ರಿಂದ ಮತ್ತೆ ಸಂಪೂರ್ಣ ನಿಷೇಧ ಜಾರಿಯಾಗುತ್ತೆ ಎಂದಿದೆ.
ಕರ್ನಾಟಕ ಬಿಜೆಪಿ ಉಸ್ತುವಾರಿಯಾಗಿ ನೇಮಕಗೊಂಡ ಬಳಿಕ ಇದೇ ಮೊದಲ ಬಾರಿಗೆ ಹರೀಶ್ ದ್ವಿವೇದಿ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ. ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಉಸ್ತುವಾರಿ ಹರೀಶ್ ದ್ವಿವೇದಿ ಅವರನ್ನು ಸ್ವಾಗತ ಮಾಡಲಾಯ್ತು. ಈ ವೇಳೆ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ರಾಜ್ಯ ಜೆಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿ ಹಲವರು ಉಪಸ್ಥಿತರಿದ್ದರು.
ಅಡ್ಡಂಡ ಕಾರ್ಯಪ್ಪ ವಿರುದ್ಧ ದೂರು ನೀಡಿದ್ದರೂ ಕ್ರಮಕೈಗೊಂಡಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರು, ಬೆಂಗಳೂರು ಪೊಲೀಸ್ ಕಮಿಷನರ್ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದು, ರಾಷ್ಟ್ರಪಿತ ಗಾಂಧೀಜಿ ಬಗ್ಗೆ ನಾಟಕದಲ್ಲಿ ಕೆಟ್ಟದಾಗಿ ಬಿಂಬಿಸಲಾಗಿದೆ. ದೂರು ನೀಡಿದ್ರೂ ಕ್ರಮಕೈಗೊಳ್ಳದ ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು. ಪ್ರತಿಭಟನೆ ಜೋರಾಗುತ್ತಿದ್ದಂತೆಯೇ ಪೊಲೀಸರು, ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕಬ್ಬಿಗೆ ಬೆಂಬಲ ಬೆಲೆ ನಿಗದಿ ಮಾಡುವಂತೆ ಬೆಳಗಾವಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ತೀವ್ರಗೊಂಡಿದ್ದು, ಕೊನೆ ಹಂತದ ಗುರ್ಲಾಪುರದಿಂದ ಜೈಲ್ ಬರೋ ಚಳವಳಿ ಹೊರಟ ಆರಂಭಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪುರದಿಂದ 80ಕಿಮೀ ದೂರದಲ್ಲಿರುವ ಬೆಳಗಾವಿಯ ಹಿಂಡಲಗಾ ಜೈಲಿಗೆ ಪಾದಯಾತ್ರೆ, ಬೈಕ್, ಟ್ರ್ಯಾಕ್ಟರ್ ಗಳಲ್ಲಿ ಹೊರಟ್ಟಿದ್ದಾರೆ.
ಸಿಎಂ ಡಿಕೆ ಶಿವಕುಮಾರ್ ಅವರು ಇದೇ ನವೆಂಬರ್ 5ರಂದು ತವರು ರಾಮನಗರಕ್ಕೆ ಭೇಟಿ ನೀಡಲಿದ್ದು, ಅಂದು ರಾಮನಗರದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಲಿದ್ದಾರೆ. ಹಾಗೇ ನಗರಸಭೆ ವತಿಯಿಂದ ನಿರ್ಮಿಸಿರುವ ಕೆಂಪೇಗೌಡ ಪ್ರತಿಮೆ ಅನಾವರಣಗೊಳಿಸಲಿದ್ದಾರೆ. ಇದೇ ವೇಳೆ ನಗರಸಭೆ ಸಭಾಂಗಣ ಲೋಕಾರ್ಪಣೆ, ಫುಡ್ ಸ್ಟ್ರೀಟ್, ಕ್ಲಾಕ್ ಟವರ್ ಉದ್ಘಾಟನೆ ಮಾಡಲಿದ್ದಾರೆ. ಹಾಗೇ 11 ಸಾವಿರ ಅಸಂಘಟಿತ ಕಾರ್ಮಿಕರಿಗೆ ಜೀವವಿಮೆ ಬಾಂಡ್ ವಿತರಿಸಲಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಸಚಿವರು ಹಾಗೂ ಕಾಂಗ್ರೆಸ್ ನಾಯಕರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ್ಮ ಮತ್ತು ತಮ್ಮ ಕುಟುಂಬದ ವಿರುದ್ಧ ರಾಜಕೀಯ ಷಡ್ಯಂತ್ರ ನಡೆಸಿ, ಪ್ರಜ್ವಲ್ ರೇವಣ್ಣ ಪ್ರಕರಣವನ್ನು ರಾಜಕೀಯವಾಗಿ ಬಳಸಿಕೊಳ್ಳಲಾಗಿದೆ ಎಂದು ಆರೋಪಿಸಿದರು. ದೇಶದಲ್ಲಿ ರಾಹುಲ್ ಗಾಂಧಿ ಪ್ರಧಾನಿಯಾಗಲು ತಮ್ಮ ಕುಟುಂಬವನ್ನು ಮತ್ತು ಜೆಡಿಎಸ್ ಪಕ್ಷವನ್ನು ಗುರಿಯಾಗಿಸಿ ಅಪಪ್ರಚಾರ ಮಾಡಲಾಗಿದೆ ಎಂದು ಅವರು ಕಿಡಿಕಾರಿದರು.
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ರಚಿಸಲಾದ ಎಸ್ಐಟಿ (SIT) ನೂತನ ಮುಖ್ಯಸ್ಥ ಐಜಿಪಿ ಚೇತನ್ ಸಿಂಗ್ ರಾಥೋಡ್ ಮೊದಲ ಬಾರಿಗೆ ಮಂಗಳೂರಿಗೆ ಆಗಮಿಸಿದ್ದಾರೆ. ಮಂಗಳೂರು ಎಸ್ಐಟಿ ಕಚೇರಿಯಲ್ಲಿ ಡಿಐಜಿಪಿ ಸುಧೀರ್ ಕುಮಾರ್ ರೆಡ್ಡಿ, ಎಸ್ಪಿ ನಿಶಾ ಜೇಮ್ಸ್ ಸೇರಿದಂತೆ ಪ್ರಮುಖ ತನಿಖಾಧಿಕಾರಿಗಳೊಂದಿಗೆ ಸುದೀರ್ಘ ಸಭೆ ನಡೆಸಿ ಪ್ರಕರಣದ ತನಿಖೆಯ ವಿವರಗಳನ್ನು ಪಡೆದುಕೊಂಡರು.
ಮುಖ್ಯಮಂತ್ರಿಗಳ ಭೇಟಿಯ ಬಳಿಕ ಮಾತನಾಡಿದ ಸಹಕಾರ ಸಚಿವ ಲಕ್ಷ್ಮಣ್ ಸವದಿ, ರಾಜ್ಯದಲ್ಲಿ ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಲು ಸಕ್ಕರೆ ಕಾರ್ಖಾನೆಗಳ ಮಾಲೀಕರ ಜೊತೆ ಚರ್ಚಿಸಿದ್ದೇನೆ ಎಂದಿದ್ದಾರೆ. ನೀರಿಲ್ಲದೆ ಬೆಳೆದ ಕಬ್ಬು ಒಣಗುತ್ತಿದ್ದು, ಸಂಜೆಯೊಳಗೆ ಮಾಲೀಕರು ಎಂಎಸ್ಪಿ (MSP) ದರ ನಿಗದಿಪಡಿಸಿ ಫ್ಯಾಕ್ಟರಿಗಳನ್ನು ಆರಂಭಿಸಬೇಕು ಎಂದು ತಿಳಿಸಿದರು. ಇದೇ ವೇಳೆ ರಾಜ್ಯ ಸರ್ಕಾರದ ಮೇಲಿನ ಆರೋಪಗಳಿಗೆ ತಿರುಗೇಟು ನೀಡಿದ ಅವರು, ಕೇಂದ್ರ ಸರ್ಕಾರ ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದೆ ಎಂದು ಕಿಡಿಕಾರಿದರು.
ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, “ನಾನು ಏನು ಮಾಡಿದ್ದೇನೆ ಎಂದು ನನ್ನನ್ನು ವಿಚಾರಣೆಗೆ ಕರೆಯುತ್ತಾರೆ?” ಎಂದು ಕಿಡಿಕಾರಿದ್ದಾರೆ. ಕೇಂದ್ರ ಸಚಿವರನ್ನು ಬಂಧಿಸಲಾಗುತ್ತದೆ ಎಂದು ರಾಜ್ಯದಲ್ಲಿ ಚರ್ಚೆಯಾಗುತ್ತಿರುವ ವಿಚಾರಕ್ಕೆ ತಿರುಗೇಟು ನೀಡಿದ ಅವರು, “ಅದು ಯಾವ ಕೇಂದ್ರ ಸಚಿವರನ್ನು ಬಂಧಿಸುತ್ತಾರೋ ನಾನು ನೋಡ್ತೀನಿ” ಎಂದು ಸರ್ಕಾರಕ್ಕೆ ಬಹಿರಂಗ ಸವಾಲು ಹಾಕಿದ್ದಾರೆ.
ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ. “ಈ ಕುಮಾರಸ್ವಾಮಿಯನ್ನು ಯಾರೂ ಮುಟ್ಟಲು ಆಗಲ್ಲ” ಎಂದು ಗುಡುಗಿರುವ ಅವರು, ನಿನ್ನೆ ರಾಜ್ಯೋತ್ಸವ ಆಚರಣೆಯ ಬಳಿಕ ಎಲ್ಲಿ ಸಭೆ ನಡೆಸಲಾಗಿದೆ ಎಂಬುದು ತಮಗೆ ಚೆನ್ನಾಗಿ ತಿಳಿದಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೃಪಾ ಆಳ್ವಾ ಹಾಗೂ ವಿನೋದ್ ಕುಮಾರ್ ಮತ್ತು ಪ್ರಶಾಂತ್ ಕುಮಾರ್ ಅವರು ನಿರೀಕ್ಷಣಾ ಜಾಮೀನು ಕೋರಿ 66ನೇ ಸಿಸಿಹೆಚ್ (CCH) ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಗಳ ಕುರಿತು ಹಾಗೂ ಮಧ್ಯಂತರ ಜಾಮೀನು ನೀಡುವ ಬಗ್ಗೆ ಕೋರ್ಟ್ ಇಂದು ಮಹತ್ವದ ತೀರ್ಮಾನ ಕೈಗೊಂಡು ಆದೇಶ ಹೊರಡಿಸಲಿದೆ.
ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಸಿದ್ದರಾಮಯ್ಯ ಅವರಿಗೆ ಸಿಸಿಬಿ ಪೊಲೀಸರು ಯಾವ ಆಧಾರದ ಮೇಲೆ ಕ್ಲೀನ್ಚಿಟ್ ನೀಡಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ಪ್ರಕರಣದಲ್ಲಿ ತಮ್ಮ ಪಕ್ಷದವರ ಪಾತ್ರವಿದೆ ಎಂದು ಯತೀಂದ್ರ ಹಾಗೂ ಸಚಿವರು ಆರೋಪಿಸುತ್ತಿದ್ದು, ಸರ್ಕಾರವನ್ನು ಉಳಿಸಿಕೊಳ್ಳಲು ಈ ರೀತಿ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ತಮ್ಮ ದೆಹಲಿ ನಿವಾಸದ ಮೇಲಿನ ದಾಳಿ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದವರು ಯಾರು ಎಂದು ಪ್ರಶ್ನಿಸಿದ ಅವರು, ಇದು ಹಳ್ಳ ಹಿಡಿಸುವ ಕೇಸ್ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಸ್ಟಿಂಗ್ಗೆ ಬಳಸಿದ ಮೊಬೈಲ್ ಅನ್ನು ತಮ್ಮ ನಿವಾಸದಲ್ಲೇ ಹಸ್ತಾಂತರಿಸಲಾಗಿದೆ ಎಂದು ಆರೋಪಿಸಿದ್ದಾರೆ. ನಿನ್ನೆ ರಜಾ ದಿನವಾದರೂ ರಾಜ್ಯೋತ್ಸವ ಸುದ್ದಿಗಿಂತ ಸ್ಟಿಂಗ್ ವಿಚಾರವೇ ಮುನ್ನಲೆಗೆ ಬಂದಿದ್ದು, ಪೊಲೀಸ್ ಕಮಿಷನರ್ ಕೂಡ ತಮ್ಮ ವಿರುದ್ಧ ಆರೋಪ ಮಾಡಿದ್ದಾರೆ ಎಂದರು.
ತಮ್ಮ ಹಾಗೂ ಸಂಪುಟ ಸಹೋದ್ಯೋಗಿಗಳ ವಿರುದ್ಧ ಇಡಿ (ED) ಬಳಸಲು ಕೇಂದ್ರ ಸಚಿವರೊಬ್ಬರು ಒತ್ತಡ ಹೇರುತ್ತಿದ್ದಾರೆ ಎಂದು ಗೃಹ ಸಚಿವ ಸಚಿವ ಪ್ರಿಯಾಂಕ್ ಖರ್ಗೆ ಎಕ್ಸ್ನಲ್ಲಿ ಆರೋಪಿಸಿದ್ದಾರೆ. ಕೆಪಿಎಸ್ಸಿ ತನಿಖೆಯಲ್ಲಿ ಕಾಂಗ್ರೆಸ್ ನಾಯಕರನ್ನು ಸಿಲುಕಿಸಲು ಯತ್ನಿಸಲಾಗುತ್ತಿದ್ದು, ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಅವರು ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಮತ್ತಿಕೆರೆಯ ಜೆಪಿ ಪಾರ್ಕ್ನಲ್ಲಿ ದುಷ್ಕರ್ಮಿಗಳು ರಾತ್ರೋರಾತ್ರಿ 15ಕ್ಕೂ ಹೆಚ್ಚು ಕಲ್ಲಿನ ಬೆಂಚ್ಗಳನ್ನು ಮುರಿದುಹಾಕಿ ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದ್ದಾರೆ. ನಿನ್ನೆವರೆಗೆ ಸುಸ್ಥಿತಿಯಲ್ಲಿದ್ದ ಬೆಂಚ್ಗಳು ಇಂದು ಬೆಳಿಗ್ಗೆ ಪುಡಿಪುಡಿಯಾಗಿರುವುದು ಕಂಡುಬಂದಿದ್ದು, ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಹಾಲು ಹಾಗೂ ಮೊಸರಿನ ದರ ಏರಿಕೆ ಖಂಡಿಸಿ ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಮಾಜಿ ಎಂಎಲ್ಸಿ ಭಾರತಿ ಶೆಟ್ಟಿ ನೇತೃತ್ವದಲ್ಲಿ ನಡೆದ ಧರಣಿಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ಹಲವರು ಭಾಗವಹಿಸಿದ್ದರು. ಕಾರ್ಯಕರ್ತೆಯರು ಹಾಲಿನ ಕ್ಯಾನ್ ಹಾಗೂ ಪ್ಯಾಕೆಟ್ ಹಿಡಿದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.
ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೆಸರು ಪ್ರಸ್ತಾಪಿಸಿದ ನಗರ ಪೊಲೀಸ್ ಆಯುಕ್ತ ಸೀಮಂತ್ಕುಮಾರ್ ಸಿಂಗ್ ನಡೆಯನ್ನು ಖಂಡಿಸಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುವ ಸಾಧ್ಯತೆಯಿದೆ. ಮುನ್ನೆಚ್ಚರಿಕೆಯಾಗಿ ಆಯುಕ್ತರ ಕಚೇರಿ ಬಳಿ 2 ಕೆಎಸ್ಆರ್ಪಿ ತುಕಡಿ ಸೇರಿದಂತೆ 50ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.
ನೈಸ್ (NICE) ರಸ್ತೆಗಾಗಿ ಕೆಐಎಡಿಬಿ (KIADB) ಮೂಲಕ ನಡೆದ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ನೈಸ್ ಸಂಸ್ಥೆ ಸಲ್ಲಿಸಿರುವ ಮೇಲ್ಮನವಿ ಅರ್ಜಿಗಳ ವಿಚಾರಣೆಯನ್ನು ಇಂದು ಸುಪ್ರೀಂಕೋರ್ಟ್ ಕೈಗೆತ್ತಿಕೊಳ್ಳಲಿದೆ. ಈ ಹಿಂದೆ ಹೈಕೋರ್ಟ್ ವಿಭಾಗೀಯ ಪೀಠವು ನೈಸ್ ಅಕ್ರಮಗಳು, ಕೆರೆ-ಜಮೀನುಗಳ ಅತಿಕ್ರಮಣ, ಪರಿಹಾರ ನೀಡದೆ ಭೂಮಿ ವಶ ಹಾಗೂ ಟೋಲ್ ಸಂಗ್ರಹದ ಕುರಿತು ಸ್ವತಂತ್ರ ತನಿಖೆ ಮತ್ತು ಫೊರೆನ್ಸಿಕ್ ಆಡಿಟಿಂಗ್ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟು ರೈತರಿಗೆ ಬಿಗ್ ರಿಲೀಫ್ ನೀಡಿತ್ತು. ಹೈಕೋರ್ಟ್ ನೀಡಿದ್ದ ಈ ಆದೇಶಕ್ಕೆ ಮಧ್ಯಂತರ ತಡೆ ನೀಡಲು ಸುಪ್ರೀಂಕೋರ್ಟ್ ಕಳೆದ ವಿಚಾರಣೆಯಲ್ಲಿ ನಿರಾಕರಿಸಿತ್ತು. ಇಂದು ನಡೆಯಲಿರುವ ವಿಚಾರಣೆಯಲ್ಲಿ ಹಿರಿಯ ವಕೀಲ ಹೆಚ್.ಎನ್.ಶಶಿಧರ್ ಅವರು ರೈತರ ಪರ ವಾದ ಮಂಡಿಸಲಿದ್ದಾರೆ.
ರಾಜ್ಯ ಸರ್ಕಾರಕ್ಕೆ 70% ಕಮಿಷನ್ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಹಾಗೂ ಬಾಕಿ ಇರುವ 38 ಸಾವಿರ ಕೋಟಿ ರೂ. ಬಿಲ್ ಬಿಡುಗಡೆಗೆ ಆಗ್ರಹಿಸಿ ಇಂದು ಸಂಜೆ 4 ಗಂಟೆಗೆ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಯಲಿದೆ. ಈಗಾಗಲೇ ಬಾಕಿ ಹಣ ಪಾವತಿಗೆ ಡಿಸೆಂಬರ್ವರೆಗೆ ಅಂತಿಮ ಗಡುವು ನೀಡಿದ್ದು, ಗುತ್ತಿಗೆದಾರರ ಮನವೊಲಿಸುವಲ್ಲಿ ಸರ್ಕಾರ ಯಶಸ್ವಿಯಾಗಲಿದೆಯೇ ಎಂಬ ಕುತೂಹಲ ಮೂಡಿದೆ.
ಹಾಂಗ್ ಕಾಂಗ್ ಸಿಕ್ಸಸ್ ಟೂರ್ನಿಯ ಪ್ಲೇಟ್ ಫೈನಲ್ನಲ್ಲಿ ಪಾಕಿಸ್ತಾನ್ ತಂಡ ಭರ್ಜರಿ ಬ್ಯಾಟಿಂಗ್ ನಡೆಸಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಪಂದ್ಯದಲ್ಲಿ ಕೇವಲ 36 ಎಸೆತಗಳಲ್ಲಿ 154 ರನ್ ಬಾರಿಸಿದ ಪಾಕಿಸ್ತಾನ್, ವಿಶ್ವ ದಾಖಲೆ ನಿರ್ಮಿಸುವ ಅವಕಾಶವನ್ನು ಕೂದಲೆಳೆಯ ಅಂತರದಲ್ಲಿ ಕೈಚೆಲ್ಲಿತು. ಇನ್ನುಳಿದಂತೆ, ಬೌಲ್ ಫೈನಲ್ನಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸಿದ ಸೌತ್ ಆಫ್ರಿಕಾ ಚಾಂಪಿಯನ್ ಪಟ್ಟ ಅಲಂಕರಿಸಿದರೆ, ಟೂರ್ನಿಯ ಪ್ರಮುಖ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿದ ಅಫ್ಘಾನಿಸ್ತಾನ್ ತಂಡ ಹಾಂಗ್ ಕಾಂಗ್ ಸಿಕ್ಸಸ್ ಟೂರ್ನಿಯ ಚಾಂಪಿಯನ್ ಆಗಿ ಮುಕುಟ ಧರಿಸಿದೆ. ಮತ್ತಷ್ಟು ಓದಿ
ಉತ್ತರಾಖಂಡ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಉದ್ಯಮಿ ಹಾಗೂ ಯುವ ಮುಖಂಡ ಪ್ರತಾಪ್ ಗೌಡ ಅವರ ಪಾರ್ಥಿವ ಶರೀರ ಹಾಸನ ತಲುಪಿದೆ. ಡೇರಿ ವೃತ್ತದಲ್ಲಿ ನೆರೆದಿದ್ದ ನೂರಾರು ಬಂಧುಗಳು, ಅಭಿಮಾನಿಗಳು ಅಂತಿಮ ದರ್ಶನ ಪಡೆದರು. ಶಾಸಕ ಸ್ವರೂಪ್ ಪ್ರಕಾಶ್ ಸೇರಿದಂತೆ ಹಲವು ಗಣ್ಯರು ಅಂತಿಮ ನಮನ ಸಲ್ಲಿಸಿ ಕಂಬನಿ ಮಿಡಿದರು.
ಬಂಗಾಳಕೊಲ್ಲಿಯಲ್ಲಿ ತೀವ್ರಗೊಂಡ ‘ಮುರಸು’ ಚಂಡಮಾರುತ (ತಮಿಳಿನಲ್ಲಿ ‘ಯುದ್ಧದ ಡೋಲು’ ಎಂದರ್ಥ) ಗಂಟೆಗೆ 100-120 ಕಿ.ಮೀ ವೇಗದಲ್ಲಿ ಇಂದಿರಾತ್ರಿ ನೆಲ್ಲೂರು-ನರಸಾಪುರ ನಡುವೆ ಅಪ್ಪಳಿಸಲಿದೆ. ಆಂಧ್ರ, ತಮಿಳುನಾಡು, ಪುದುಚೇರಿಯಲ್ಲಿ ಭಾರಿ ಮಳೆ ಎಚ್ಚರಿಕೆ ನೀಡಲಾಗಿದ್ದು, ಹಲವೆಡೆ ಶಾಲೆಗಳಿಗೆ ರಜೆ ಘೋಷಿಸಿ, ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಕಟ್ಟೆಚ್ಚರ ವಹಿಸಲಾಗಿದೆ. ಮತ್ತಷ್ಟು ಓದಿ
ಹಾಸನದ ವಿಶ್ವಪ್ರಸಿದ್ಧ ಹಾಸನಾಂಬ ದೇವಿ ಸಾರ್ವಜನಿಕ ದರ್ಶನದ 4ನೇ ದಿನವೂ ಭಕ್ತರ ಸಾಗರವೇ ಹರಿದುಬರುತ್ತಿದೆ. ಧರ್ಮ ದರ್ಶನ, 300 ಹಾಗೂ 1000 ರೂ.ಗಳ ವಿಶೇಷ ಸಾಲುಗಳು ಭಕ್ತರಿಂದ ತುಂಬಿ ತುಳುಕುತ್ತಿದ್ದು, ಸಾರ್ವಜನಿಕರು ಸಮಾಧಾನದಿಂದ ದರ್ಶನ ಪಡೆಯುತ್ತಿದ್ದಾರೆ. ಟಿಕೆಟ್ ಹಾಗೂ ಪ್ರಸಾದ ಮಾರಾಟದಿಂದ ಕಳೆದ ಮೂರೇ ದಿನಗಳಲ್ಲಿ ₹5 ಕೋಟಿಗೂ ಅಧಿಕ ಆದಾಯ ಸಂಗ್ರಹವಾಗಿದೆ. ಇಂದು ಕೇಂದ್ರ ಸಚಿವ ವಿ.ಸೋಮಣ್ಣ, ಮಠಾಧೀಶರು ಹಾಗೂ ನ್ಯಾಯಾಧೀಶರು ದೇವಿಯ ದರ್ಶನ ಪಡೆಯಲಿದ್ದಾರೆ.
Published On - 8:33 am, Mon, 2 November 26