Karnataka News Live: ಹಾಲಿನ ಬೆಲೆ ಬೆನ್ನಲ್ಲೇ ಬಿಎಂಟಿಸಿ, ಕೆಎಸ್ಆರ್‌ಟಿಸಿ ದರ ಏರಿಕೆ: ಇಂದು ಹೊರಬೀಳಲಿದೆ ಅಧಿಕೃತ ಆದೇಶ!

Breaking News Today Live Updates: ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆಗೆ ಸಾರಿಗೆ ನಿಗಮಗಳು ಸಜ್ಜಾಗಿದ್ದು, ಶೀಘ್ರವೇ ಪರಿಷ್ಕೃತ ದರ ಜಾರಿಯಾಗಲಿದೆ. ಇನ್ನೊಂದೆಡೆ ಕಬ್ಬಿಗೆ ಸೂಕ್ತ ಬೆಲೆ ಆಗ್ರಹಿಸಿ ಬೆಳೆಗಾರರ ಹೋರಾಟ ತೀವ್ರಗೊಂಡಿದ್ದು ಸಿಎಂ ಸಭೆ ನಡೆಯಲಿದೆ. ಇದರ ನಡುವೆ ರಾಜ್ಯದ 4 ಜಿಲ್ಲೆಗಳಿಗೆ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ ಸಿಕ್ಕಿದೆ.

Karnataka News Live: ಹಾಲಿನ ಬೆಲೆ ಬೆನ್ನಲ್ಲೇ ಬಿಎಂಟಿಸಿ, ಕೆಎಸ್ಆರ್‌ಟಿಸಿ ದರ ಏರಿಕೆ: ಇಂದು ಹೊರಬೀಳಲಿದೆ ಅಧಿಕೃತ ಆದೇಶ!
ಸಾಂದರ್ಭಿಕ ಚಿತ್ರ

Updated on: Nov 04, 2026 | 9:34 AM

LIVE NEWS & UPDATES

  • 04 Nov 2026 09:34 AM (IST)

    ಸಿದ್ದರಾಮಯ್ಯ ಸ್ಟಿಂಗ್ ಪ್ರಕರಣ: ಪ್ರಜ್ವಲ್ ವಿಚಾರಣೆ, ಮೊಬೈಲ್ ರಹಸ್ಯ ಭೇದಿಸಿದ CCB!

    ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಪ್ರಕರಣದಲ್ಲಿ ಪ್ರಜ್ವಲ್ ವಿಚಾರಣೆಗೆ ಹಾಜರಾಗಿದ್ದು, ವೀಡಿಯೋ ಹಾಗೂ ರಿತೇಶ್ ಪಾಂಡೆ ಬಗ್ಗೆ ತನಗೆ ಮಾಹಿತಿ ಇಲ್ಲವೆಂದು ಹೇಳಿದ್ದಾರೆ. ಇತ್ತ CCB ಪೊಲೀಸರು ರಿತೇಶ್ ಪಾಂಡೆ ಮೊಬೈಲ್ ಖರೀದಿಸಿದ ಅಂಗಡಿಯ ಸಿಸಿಟಿವಿ ಫೂಟೇಜ್ ಹಾಗೂ ಬಿಲ್ ವಶಪಡಿಸಿಕೊಂಡು ತನಿಖೆ ಚುರುಕುಗೊಳಿಸಿದ್ದಾರೆ.

  • 04 Nov 2026 09:32 AM (IST)

    ರಾತ್ರೋರಾತ್ರಿ ಕೆರೆ ಮಣ್ಣು ಕಳ್ಳತನ, ಅಧಿಕಾರಿಗಳ ಸಾಥ್ ಶಂಕೆ!

    ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ರೈಲ್ವೆ ಗೊಲ್ಲಹಳ್ಳಿ ಕೆರೆಯಲ್ಲಿ ಜೆಸಿಬಿ ಹಾಗೂ ಟಿಪ್ಪರ್ ಬಳಸಿ ರಾತ್ರೋರಾತ್ರಿ ಲಕ್ಷಾಂತರ ರೂಪಾಯಿ ಮೌಲ್ಯದ ಮಣ್ಣನ್ನು ಅಕ್ರಮವಾಗಿ ಕದ್ದು ಸಾಗಿಸಲಾಗುತ್ತಿದೆ. ಈ ಅಕ್ರಮ ದಂಧೆಯಲ್ಲಿ ಗೋಪಾಲಪುರ ಮತ್ತು ರೈಲ್ವೆ ಗೊಲ್ಲಹಳ್ಳಿ ಪಂಚಾಯತಿಯ ಅಧಿಕಾರಿಗಳು ಹಾಗೂ ಇಒ ಭಾಗಿಯಾಗಿದ್ದಾರೆ ಎಂದು ಗ್ರಾಮಸ್ಥರು ಗಂಭೀರ ಆರೋಪ ಮಾಡಿದ್ದಾರೆ.

  • 04 Nov 2026 09:31 AM (IST)

    ಆಂಧ್ರ ಚಂಡಮಾರುತ: ನೆರವಿಗೆ ಧಾವಿಸಿದ 100 ಜೆಸ್ಕಾಂ ಪವರ್‌ಮ್ಯಾನ್‌ಗಳು!

    ಆಂಧ್ರಪ್ರದೇಶದಲ್ಲಿ ಚಂಡಮಾರುತ ಹಾಗೂ ಪ್ರವಾಹ ಸೃಷ್ಟಿಸಿರುವ ಅನಾಹುತಕ್ಕೆ ನೆರವಾಗಲು ಜೆಸ್ಕಾಂ ಸಂಸ್ಥೆಯು ೧೦೦ ಮಂದಿ ಪವರ್‌ಮ್ಯಾನ್‌ಗಳ ತಂಡವನ್ನು ರವಾನಿಸಿದೆ. ಸರ್ಕಾರದ ಆದೇಶದಂತೆ, ಜೆಸ್ಕಾಂ ಅಧ್ಯಕ್ಷ ಪ್ರವೀಣ್ ಪಾಟೀಲ್ ಅವರು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮುಂಜಾಗ್ರತೆಯಿಂದ ವಿದ್ಯುತ್ ಪುನರುಜ್ಜೀವನ ಕೆಲಸ ನಿರ್ವಹಿಸಲು ಸಿಬ್ಬಂದಿಗೆ ಸೂಚಿಸಿ ಕಳುಹಿಸಿಕೊಟ್ಟಿದ್ದಾರೆ.

  • 04 Nov 2026 09:30 AM (IST)

    ಮಣಿಪಾಲದಲ್ಲಿ ನಡುರಾತ್ರಿ ರಸ್ತೆ ಮಧ್ಯೆ ಯುವಕರ ಮಾರಾಮಾರಿ!

    ಮಣಿಪಾಲ ಪೊಲೀಸ್ ಠಾಣೆ ಸಮೀಪವೇ ಮದ್ಯಪಾನ ಮಾಡಿದ ಯುವಕರ ಗುಂಪು ನಡುರಸ್ತೆಯಲ್ಲಿ ಹೊಡೆದಾಡಿಕೊಂಡಿದೆ. ಪಬ್‌ಗಳ ಮುಂದೆ ಅವಧಿ ಮೀರಿ ಮದ್ಯ ಪೂರೈಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಗಲಾಟೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಾರ್ವಜನಿಕರು ಆರೋಪಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಆಗ್ರಹಿಸಿದ್ದಾರೆ.

  • 04 Nov 2026 09:27 AM (IST)

    ಸಾರಿಗೆಗೆ ತೊಂದರೆ: ಶಾಲಾ ಮಕ್ಕಳಿಂದಲೇ ರಸ್ತೆ ಗುಂಡಿ ಮುಚ್ಚುವ ಕೆಲಸ!

    ಕಲಬುರಗಿಯ ಕಮಲಾಪುರ ತಾಲೂಕಿನ ಕಾಳಮಂದರಗಿ ಬಳಿ ರಸ್ತೆ ಸಂಪೂರ್ಣ ಹಾಳಾಗಿದ್ದು, ಅಧಿಕಾರಿಗಳ ನಿರ್ಲಕ್ಷ್ಯದಿಂದ ಬೇಸತ್ತ ಶಾಲಾ ಮಕ್ಕಳು ಸಲಿಕೆ-ಪಿಕಾಸಿ ಹಿಡಿದು ತಾವೇ ಗುಂಡಿಗಳನ್ನು ಮುಚ್ಚಿದ್ದಾರೆ. ಸಂಚಾರಕ್ಕೆ ಸಂಕಷ್ಟ ಎದುರಾಗಿದ್ದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಶಾಸಕ ಬಸವರಾಜ ಮತ್ತಿಮೂಡ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • 04 Nov 2026 08:11 AM (IST)

    ಮಂಗಳೂರಿನಲ್ಲಿ 15.3 ಲಕ್ಷದ ಡ್ರಗ್ಸ್ ವಶ: ನಸೀಮಾ ಬಂಧನ!

    ಮಂಗಳೂರು ನಗರದಲ್ಲಿ ಯುವಕರಿಗೆ ಡ್ರಗ್ಸ್ ಪೂರೈಸುತ್ತಿದ್ದ ಆರೋಪಿ ನಸೀಮಾಳನ್ನು ಮಂಗಳೂರು ಉತ್ತರ ಪೊಲೀಸರು ಉಜ್ಜೂಡಿಯ ರಾಧಾ ರೆಸಿಡೆನ್ಸಿ ಫ್ಲಾಟ್‌ ಮೇಲೆ ದಾಳಿ ನಡೆಸಿ ಬಂಧಿಸಿದ್ದಾರೆ. ಡ್ರಗ್ಸ್ ಸೇವಿಸಿದವರ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿದ್ದು, 15.30 ಲಕ್ಷ ಮೌಲ್ಯದ 153 ಗ್ರಾಂ MDMA ವಶಪಡಿಸಿಕೊಂಡಿದ್ದಾರೆ.

Breaking News Today Live Updates in Kannada: ರಾಜ್ಯದ ಜನತೆಗೆ ಹಾಲಿನ ಬೆಲೆ ಏರಿಕೆಯ ಬೆನ್ನಲ್ಲೇ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟಲಿದೆ. ಕೆಎಸ್ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ಬಸ್ ಟಿಕೆಟ್ ದರ ಪರಿಷ್ಕರಣೆ ಕುರಿತು ಸಾರಿಗೆ ಸಚಿವ ಭೈರತಿ ಸುರೇಶ್ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ದರ ಏರಿಕೆ ಘೋಷಣೆಯಾಗುವ ಸಾಧ್ಯತೆಯಿದೆ. ಅತುಲ್ ತಿವಾರಿ ಸಮಿತಿಯ ವರದಿ ಆಧರಿಸಿ ಪರಿಷ್ಕೃತ ದರ ಜಾರಿಯಾಗಲಿದೆ. ಮತ್ತೊಂದೆಡೆ, ಬೆಳಗಾವಿಯಲ್ಲಿ ಟನ್ ಕಬ್ಬಿಗೆ 5,500 ರೂಪಾಯಿ ಬೆಲೆ ನಿಗದಿಗೆ ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಹೋರಾಟ ತೀವ್ರಗೊಂಡಿದೆ. ಸಚಿವ ಸತೀಶ್ ಜಾರಕಿಹೊಳಿ ನಡೆಸಿದ ಸಭೆ ವಿಫಲವಾಗಿದ್ದು, ಇಂದು ಸಿಎಂ ಡಿ.ಕೆ ಶಿವಕುಮಾರ್ ಜೊತೆ ನಡೆಯುವ ಸಭೆಯಲ್ಲಿ ಅಂತಿಮ ನಿರ್ಧಾರ ಹೊರಬೀಳುವ ನಿರೀಕ್ಷೆಯಿದೆ. ಇದೇ ವೇಳೆ, ಹವಾಮಾನ ಇಲಾಖೆಯು ರಾಜ್ಯದ ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.

Tv9 Kannada Live TV ಇಲ್ಲಿ ವೀಕ್ಷಿಸಿ

Published On - 8:10 am, Wed, 4 November 26

ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
Loading...
Unable to load recommendations.
Follow Us