Karnataka News Live: ಬೆಂಗಳೂರಿನಲ್ಲಿ ಇಂದು ಫ್ರೀಡಂ ಪಾರ್ಕ್‌ನಲ್ಲಿ ಕಬ್ಬು ಬೆಳೆಗಾರರ ಬೃಹತ್ ಧರಣಿ!

Breaking News Today Live Updates: ಫ್ರೀಡಂ ಪಾರ್ಕ್‌ನಲ್ಲಿ ಇಂದು ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಕಬ್ಬು ಬೆಳೆಗಾರರ ಬೃಹತ್ ಪ್ರತಿಭಟನೆ ನಡೆಯಲಿದ್ದು, ಸಾಲಮನ್ನಾ ಹಾಗೂ ಸೂಕ್ತ ಬೆಲೆಗೆ ಆಗ್ರಹಿಸಲಾಗಿದೆ. ಮತ್ತೊಂದೆಡೆ ಬೆಂಗಳೂರಿನಲ್ಲಿ ಒಂದೇ ಕುಟುಂಬದ ಏಳು ಮಂದಿಯ ಭೀಕರ ಹತ್ಯೆ ಪ್ರಕರಣ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಇದೇ ವೇಳೆ ರಾಜ್ಯದ ಕರಾವಳಿ ಮತ್ತು ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಸಾಧಾರಣ ಮಳೆಯ ಮುನ್ಸೂಚನೆ ಸಿಕ್ಕಿದೆ.

Karnataka News Live: ಬೆಂಗಳೂರಿನಲ್ಲಿ ಇಂದು ಫ್ರೀಡಂ ಪಾರ್ಕ್‌ನಲ್ಲಿ ಕಬ್ಬು ಬೆಳೆಗಾರರ ಬೃಹತ್ ಧರಣಿ!
ನಿನ್ನೆ ಬೆಳಗಾವಿಯಲ್ಲಿ ನಡೆದ ಕಬ್ಬು ಬೆಳೆಗಾರರ ಹೋರಾಟ

Updated on: Nov 06, 2026 | 9:21 AM

LIVE NEWS & UPDATES

  • 06 Nov 2026 09:21 AM (IST)

    ಬೆಂಗಳೂರಿನಲ್ಲಿ ಕೌಟುಂಬಿಕ ದ್ವೇಷಕ್ಕೆ ಒಂದೇ ಕುಟುಂಬದ 7 ಮಂದಿಯ ಭೀಕರ ಹತ್ಯೆ!

    ಕೌಟುಂಬಿಕ ದ್ವೇಷದ ಹಿನ್ನೆಲೆಯಲ್ಲಿ ಕ್ಯಾಬ್ ಚಾಲಕ ಇಂದುಶೇಖರ್ ತನ್ನ ಪತ್ನಿ, ಅತ್ತೆ ಸೇರಿದಂತೆ ಕುಟುಂಬದ ಏಳು ಮಂದಿಯನ್ನು ರುಬ್ಬುಗುಂಡಿನಿಂದ ಹೊಡೆದು ಕೊಂದಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಾಜಿನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ನಂದಿಬೆಟ್ಟದ ಬಳಿ ಬಾಲಕನ ಮೃತದೇಹ ಪತ್ತೆಯಾಗಿದ್ದು, ಉಳಿದ ಶವಗಳಿಗಾಗಿ ಪೊಲೀಸರ ಶೋಧ ಕಾರ್ಯಾಚರಣೆ ಮುಂದುವರಿದಿದೆ.

  • 06 Nov 2026 09:16 AM (IST)

    ಬೆಂಗಳೂರಿನ ಸ್ಟಾರ್ ಹೋಟೆಲ್‌ನಲ್ಲಿ ತೂಕ ಇಳಿಸುವ ಚಿಕಿತ್ಸೆ: ಆರೋಗ್ಯ ಇಲಾಖೆ ದಾಳಿ!

    ಬೆಂಗಳೂರಿನ ಪ್ರತಿಷ್ಠಿತ ಸ್ಟಾರ್ ಹೋಟೆಲ್‌ನಲ್ಲಿ ಅನಧಿಕೃತವಾಗಿ ತೂಕ ಇಳಿಸುವ ಇಂಜೆಕ್ಷನ್ ಚಿಕಿತ್ಸೆ ನೀಡುತ್ತಿದ್ದ ಆರೋಪದ ಮೇಲೆ ಜಿಲ್ಲಾ ಆರೋಗ್ಯಾಧಿಕಾರಿಗಳ ತಂಡ ದಾಳಿ ನಡೆಸಿದೆ. ಪರಿಶೀಲನೆ ವೇಳೆ ಅಲ್ಲಿ ಸಂಗ್ರಹಿಸಿಡಲಾಗಿದ್ದ ಕೊರಿಯಾ ದೇಶದ ಇಂಜೆಕ್ಷನ್‌ಗಳು, ವಿವಿಧ ಔಷಧಗಳು ಹಾಗೂ ತೂಕ ಇಳಿಸುವ ಪೌಡರ್ ಬಾಕ್ಸ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಮತ್ತಷ್ಟು ಓದಿ

  • 06 Nov 2026 09:14 AM (IST)

    ‘ರಾಮಾಯಣ’ ಚಿತ್ರಕ್ಕಾಗಿ 1 ಕೋಟಿ ರೂ. ರಾವಣನ ಭವ್ಯ ಸಿಂಹಾಸನ!

    ನಿತೇಶ್ ತಿವಾರಿ ನಿರ್ದೇಶನದ ‘ರಾಮಾಯಣ’ ಸಿನಿಮಾಗಾಗಿ ಮುಂಬೈನಲ್ಲಿ 150ಕ್ಕೂ ಹೆಚ್ಚು ಭವ್ಯ ಸೆಟ್‌ಗಳನ್ನು ನಿರ್ಮಿಸಲಾಗಿದೆ. ರಾವಣನಿಗೆ 1 ಕೋಟಿ ರೂಪಾಯಿ ವೆಚ್ಚದ ಸಿಂಹಾಸನ ಹಾಗೂ ಶೂರ್ಪಣಖಿಗೆ 1.5 ಕೋಟಿ ರೂಪಾಯಿ ಬೆಲೆಯ ರಥ ತಯಾರಿಸಲಾಗಿದ್ದು, ಸಣ್ಣ ಬಜೆಟ್ ಸಿನಿಮಾವನ್ನೇ ನಿರ್ಮಿಸುವಷ್ಟು ಹಣ ವ್ಯಯಿಸಲಾಗಿದೆ.

  • 06 Nov 2026 09:10 AM (IST)

    ಮೇಖ್ರಿ ಸರ್ಕಲ್ – ಹೆಬ್ಬಾಳ ರಸ್ತೆ 18 ತಿಂಗಳು ಬಂದ್: ಸಂಚಾರ ಮಾರ್ಗ ಬದಲಾವಣೆ!

    ಎಲಿವೇಟೆಡ್ ಕಾರಿಡಾರ್ ಕಾಮಗಾರಿ ಹಿನ್ನೆಲೆಯಲ್ಲಿ ಮೇಖ್ರಿ ಸರ್ಕಲ್‌ನಿಂದ ಹೆಬ್ಬಾಳದವರೆಗಿನ ರಸ್ತೆಯನ್ನು 18 ತಿಂಗಳು ಸಂಪೂರ್ಣ ನಿರ್ಬಂಧಿಸಲಾಗಿದೆ. ಬಸ್, ಲಾರಿ ಸೇರಿದಂತೆ ಭಾರಿ ವಾಹನಗಳಿಗೆ ಪ್ರವೇಶವಿಲ್ಲ. ವಿಮಾನ ನಿಲ್ದಾಣಕ್ಕೆ ತೆರಳುವ ಪ್ರಯಾಣಿಕರು ಪರ್ಯಾಯ ಮಾರ್ಗ ಬಳಸಲು ಹಾಗೂ ಮುಂಚಿತವಾಗಿ ಪ್ರಯಾಣ ಬೆಳೆಸಲು ಸೂಚಿಸಲಾಗಿದೆ. ಮತ್ತಷ್ಟು ಓದಿ

  • 06 Nov 2026 09:08 AM (IST)

    ನಟ ಸಾಯಿ ದುರ್ಗಾ ತೇಜ್ ಅದ್ಧೂರಿ ನಿಶ್ಚಿತಾರ್ಥ!

    ಟಾಲಿವುಡ್ ನಟ ಸಾಯಿ ದುರ್ಗಾ ತೇಜ್ ಹಾಗೂ ಕಿರಣ್ ಅವರ ನಿಶ್ಚಿತಾರ್ಥ ಹೈದರಾಬಾದ್‌ನ ಹಿಲ್ಟನ್ ರೆಸಾರ್ಟ್‌ನಲ್ಲಿ ಅದ್ಧೂರಿಯಾಗಿ ನೆರವೇರಿದೆ. ಚಿರಂಜೀವಿ, ರಾಮ್ ಚರಣ್ ಹಾಗೂ ಅಲ್ಲು ಅರ್ಜುನ್ ಸೇರಿದಂತೆ ಮೆಗಾ ಕುಟುಂಬದ ಸದಸ್ಯರು ಶುಭ ಹಾರೈಸಿದ್ದು, ಡಿಸೆಂಬರ್ 10ಕ್ಕೆ ಮದುವೆ ನಿಗದಿಯಾಗಿದೆ.

  • 06 Nov 2026 08:21 AM (IST)

    ಹಾಸನಾಂಬೆ ದರ್ಶನಕ್ಕೆ ಬಂದ ಭಕ್ತರಿಗೆ ಮಳೆ ಕಾಟ

    ಹಾಸನ ಜಿಲ್ಲಾದ್ಯಂತ ತಡರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಹಾಸನಾಂಬೆ ದೇಗುಲದ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಜನರೇಟರ್ ವ್ಯವಸ್ಥೆಯೂ ಇಲ್ಲದೆ ಭಕ್ತರು ಕತ್ತಲಲ್ಲೇ ಸರತಿ ಸಾಲಿನಲ್ಲಿ ನಿಂತು ಪರದಾಡಿದರು. ಕೆಲವರು ಮೊಬೈಲ್ ಟಾರ್ಚ್ ಬೆಳಗಿದರೆ, ಇನ್ನು ಕೆಲವರು ಧರ್ಮ ದರ್ಶನದ ಸಾಲಿನಲ್ಲೇ ನಿದ್ರೆಗೆ ಜಾರಿದರು.

Breaking News Today Live Updates in Kannada: ರಾಜ್ಯ ಕಬ್ಬು ಬೆಳೆಗಾರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಅವರ ನೇತೃತ್ವದಲ್ಲಿ ಸಾವಿರಾರು ರೈತರು ಇಂದು ಬೆಳಿಗ್ಗೆ 11.30ಕ್ಕೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ. ಬೆಳಗಾವಿಯಲ್ಲಿ ನಿಗದಿಪಡಿಸಿದ ಕಬ್ಬಿನ ದರವನ್ನು ವಿರೋಧಿಸಿರುವ ರೈತರು, ರಾಜ್ಯ ಸರ್ಕಾರ ಕಬ್ಬಿಗೆ ನ್ಯಾಯಯುತ ಎಸ್‌ಎಪಿ ದರ ಹಾಗೂ ಕೇಂದ್ರ ಸರ್ಕಾರ ಎಫ್‌ಆರ್‌ಪಿ ದರ ಹೆಚ್ಚಿಸಬೇಕು, ಸಂಪೂರ್ಣ ಸಾಲಮನ್ನಾ ಮಾಡಬೇಕು ಮತ್ತು ಎಕರೆಗೆ ₹25,000 ಬರ ಪರಿಹಾರ ನೀಡಬೇಕೆಂದು ಆಗ್ರಹಿಸಿದ್ದಾರೆ. ಇನ್ನೊಂದೆಡೆ, ಕೌಟುಂಬಿಕ ದ್ವೇಷಕ್ಕೆ ರಾಜಾಜಿನಗರದ ಕ್ಯಾಬ್ ಚಾಲಕ ಇಂದುಶೇಖರ್ ತನ್ನ ಪತ್ನಿ ಸುನೀತಾ ಹಾಗೂ ಆಕೆಯ ಕುಟುಂಬದ ಏಳು ಮಂದಿಯನ್ನು ರುಬ್ಬುಗುಂಡಿನಿಂದ ಹೊಡೆದು ಹತ್ಯೆಗೈದ ಭೀಕರ ಘಟನೆ ಬೆಳಕಿಗೆ ಬಂದಿದೆ. ಶ್ರೀರಾಮಪುರ ಠಾಣೆಯಲ್ಲಿ ದಾಖಲಾದ ನಾಪತ್ತೆ ದೂರಿನ ತನಿಖೆ ವೇಳೆ ಈ ಘಟನೆ ಬಯಲಾಗಿದ್ದು, ರಾಜಾಜಿನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ನಂದಿಬೆಟ್ಟದ ಬಳಿ ಬಾಲಕ ಪುನೀತ್‌ನ ಶವ ಸಿಕ್ಕಿದ್ದು, ಉಳಿದ ಶವಗಳಿಗಾಗಿ ಶೋಧ ಮುಂದುವರಿದಿದೆ. ಹವಾಮಾನ ಇಲಾಖೆ ಮುನ್ಸೂಚನೆಯಂತೆ ಬೆಂಗಳೂರು, ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.

Tv9 Kannada Live TV ಇಲ್ಲಿ ವೀಕ್ಷಿಸಿ

Published On - 8:20 am, Fri, 6 November 26

ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
Loading...
Unable to load recommendations.
Follow Us