ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಚಿವ ಸಂಪುಟದಲ್ಲಿ (Basavaraj Bommai) ಹಿರಿಯ ಸದಸ್ಯರಾಗಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ (KS Eshwarappa) ವಿರುದ್ಧ ಲಂಚ ಪಡೆದ ಗಂಭೀರ ಆರೋಪ ಮಾಡಿದ್ದರು. ಕೇವಲ 15 ದಿನಗಳ ಹಿಂದೆ ಸಚಿವ ಈಶ್ವರಪ್ಪ ವಿರುದ್ಧ ಆರೋಪ ಮಾಡಿ, ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ಗನ ಸೆಳೆದಿದ್ದರು. ಆ ಪತ್ರದಲ್ಲಿ ಇಡೀ ವೃತ್ತಾಂತವನ್ನು ಬಿಡಿಸಿ ಹೇಳಿದ್ದರು. ಆ ಪತ್ರದ ಆಧಾರದ ಮೇಲೆ ಕೇಂದ್ರ ಸರ್ಕಾರವು ಸಚಿವ ಕೆ.ಎಸ್. ಈಶ್ವರಪ್ಪ ಅವರಿಂದ ವಿವರಣೆ ಕೇಳಿತ್ತು. ಆ ವ್ಯಕ್ತಿ ಮತ್ಯಾರೂ ಅಲ್ಲ. ಆತನೇ ಸಂತೋಷ ಪಾಟೀಲ್. ಪಾಟೀಲ್ ಈಗ ಇಲ್ಲ. ಉಡುಪಿಗೆ ಹೋಗಿ ಆತ್ಮ ಹತ್ಯೆಗೆ ಶರಣಾಗಿದ್ದಾನೆ. ಒಂದು ತಿಂಗಳ ಹಿಂದೆ ಸಚಿವ ಈಶ್ವರಪ್ಪ ಅವರ ಮೇಲೆ ಆರೋಪ ಮಾಡಿದಾಗ ಸಚಿವ ಈಶ್ವರಪ್ಪ ಉತ್ತರಿಸಿದ್ದರು. ತಮ್ಮ ವಿರುದ್ಧ ಆರೋಪ ಮಾಡಿರುವ ವ್ಯಕ್ತಿ ಸಂತೋಷ್ ಯಾರು ಎಂಬುದೇ ತನಗೆ ಗೊತ್ತಿಲ್ಲ. ಆ ಹೆಸರಿನಲ್ಲಿ ತಮ್ಮ ಇಲಾಖೆ ಯಾವುದೇ ಗುತ್ತಿಗೆ ನೀಡಿಲ್ಲ (Contractor) ಎಂದು ತಿಳಿಸುತ್ತಾ ಲಂಚದ ಆರೋಪಗಳನ್ನು ತಳ್ಳಿ ಹಾಕಿದ್ದರು (Bribe allegation). ಹಿಂದೂ ವಾಹಿನಿ ನ್ಯಾಷನಲ್ ಸಂಘಟನೆಯ ಕಾರ್ಯದರ್ಶಿ, ಬಿಜೆಪಿ ಕಾರ್ಯಕರ್ತ ಕೂಡ ಆಗಿರುವ ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಕೆ.ಪಾಟೀಲ್ ಪ್ರಧಾನಿ ನರೇಂದ್ರ ಮೋದಿಗೆ ಬರೆದಿದ್ದ ಪತ್ರದ ಸಾರಾಂಶ ಇಲ್ಲಿದೆ. ಕಾಮಗಾರಿ ಮಾಡಿದ ಬಿಲ್ ಕೊಡಿಸುವಂತೆ ಪ್ರಧಾನಿಗೆ ಪತ್ರದ ಮೂಲಕ ಅವರು ಮನವಿ ಮಾಡಿದ್ದರು ಎಂಬುದು ಗಮನಾರ್ಹ.
ಸಚಿವ ಈಶ್ವರಪ್ಪ ಬೆಂಬಲಿಗರು ಕಮಿಷನ್ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. 108 ಕಾಮಗಾರಿಗಳನ್ನು ನಾಲ್ಕು ಕೋಟಿ ರೂಪಾಯಿ ವೆಚ್ಚದಲ್ಲಿ ಮಾಡಿ ಪೂರ್ಣಗೊಳಿಸಲಾಗಿದೆ. ಆದ್ರೆ ವರ್ಕ್ ಆರ್ಡರ್ ಕೊಟ್ಟಿಲ್ಲ. ಕಳೆದ ವರ್ಷದ ಫೆಬ್ರವರಿ 12 ರಂದು ಕೆಲಸ ಪೂರ್ಣಗೊಳಿಸಲು ಈಶ್ವರಪ್ಪ ಸೂಚಿಸಿದ್ದರು. ಆದರೆ ವರ್ಕ್ ಆರ್ಡರ್ ಕೊಟ್ಟಿಲ್ಲ, ಹಣವೂ ಬಿಡುಗಡೆ ಆಗಿಲ್ಲ. ಕಾಮಗಾರಿ ಪೂರ್ಣವಾಗಿ 1 ವರ್ಷ ಕಳೆದರೂ ಹಣ ನೀಡಿಲ್ಲ. ಸಾಲಕ್ಕೆ ಬಡ್ಡಿ ಪಾವತಿಸಿ ಹಣ ತಂದು ಕೆಲಸ ಪೂರ್ಣಗೊಳಿಸಿದ್ದೇವೆ. ಸಚಿವರಿಗೆ, ಅಧಿಕಾರಿಗಳಿಗೆ ಮನವಿ ಮಾಡಿದ್ರೂ ಸ್ಪಂದಿಸುತ್ತಿಲ್ಲ. ಇದನ್ನು ವೈಯಕ್ತಿಕವಾಗಿ ಪರಿಗಣಿಸಿ ಹಣ ಕೊಡಿಸುವಂತೆ ಮನವಿ ಮಾಡುತ್ತಿದ್ದೇವೆ. ಒಂದು ವೇಳೆ ಹಣ ನೀಡದಿದ್ದರೆ, ಆತ್ಮಹತ್ಯೆ ಮಾಡಿಕೊಳ್ಳುವುದೊಂದೇ ಉಳಿದಿರುವ ಮಾರ್ಗ ಎಂದು ಸಂತೋಷ ಪಾಟೀಲ್, ಪ್ರಧಾನಿ ನರೇಂದ್ರ ಮೋದಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ಕಾಮಗಾರಿಗೆ ಹಣ ಬಿಡುಗಡೆಯಾಗದಿರಲು ಈಶ್ವರಪ್ಪ ಮುಖ್ಯ ಕಾರಣ ಎಂದೂ ಹುಬ್ಬಳ್ಳಿಯಲ್ಲಿ ಗುತ್ತಿಗೆದಾರ ಸಂತೋಷ್ ಮತ್ತೊಂದು ಆರೋಪ ಮಾಡಿದ್ದರು.
ಕಾಮಗಾರಿಗೆ ಹಣ ಬಿಡುಗಡೆಯಾಗದಿರಲು ಈಶ್ವರಪ್ಪ ಮುಖ್ಯ ಕಾರಣ ಎಂದೂ ಹುಬ್ಬಳ್ಳಿಯಲ್ಲಿ ಗುತ್ತಿಗೆದಾರ ಸಂತೋಷ್ ಮತ್ತೊಂದು ಆರೋಪ ಮಾಡಿದ್ದರು
ನಾನು ನಿರ್ವಹಿಸಿದ ಕಾಮಗಾರಿಗೆ ಹಣ ಬಿಡುಗಡೆಯಾಗಿಲ್ಲ. ಇದಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ನೇರ ಹೊಣೆ ಎಂದು ಕಮಿಷನ್ ಆರೋಪ ಮಾಡಿರುವ ಸಂತೋಷ್ ಪಾಟೀಲ್ ಹೇಳಿದ್ದರು. ಈಶ್ವರಪ್ಪ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಂತೋಷ್ ಬರೆದಿದ್ದ ಪತ್ರ ಸುದ್ದಿಯಾಗಿತ್ತು. ‘ಈಶ್ವರಪ್ಪ ಅವರು ಆರೋಪದಿಂದ ನುಣುಚಿಕೊಳ್ಳಲು ಏನೇನೋ ಮಾತನಾಡುತ್ತಿದ್ದಾರೆ. ಸಚಿವರು, ಇಲಾಖೆಯ ಅನುಮತಿಯಿಲ್ಲದೆ ಯಾವುದಾದರೂ ಕಾಮಗಾರಿ ಮಾಡಲು ಸಾಧ್ಯವಿದೆಯೇ? ಅನುಮತಿ ಇಲ್ಲದೆ ಒಂದು ಅಡಿ ರಸ್ತೆ ಅಗೆದರೆ ಕೇಸ್ ಹಾಕುತ್ತಾರೆ. ಅಂಥದ್ದರಲ್ಲಿ ನಾನು ನೂರೆಂಟ್ ಕಾಮಗಾರಿ ಮಾಡಿದ್ದೇನೆ ಎಂದು ಹೇಳಿದ್ದರು.
ನಾನು ಅನುಮತಿ ಪಡೆಯದೆ ಕಾಮಗಾರಿ ನಡೆಸಲು ಹೇಗೆ ಸಾಧ್ಯ ಎನ್ನುವ ಬಗ್ಗೆ ಈಶ್ವರಪ್ಪ ಅವರೇ ಉತ್ತರಿಸಬೇಕು. ಇಷ್ಟೊಂದು ಕಾಮಗಾರಿಗಳನ್ನು ನಿರ್ವಹಿಸಿದ್ದರೂ ಬಿಲ್ಗಳ ಮಂಜೂರಾಗಿಲ್ಲ ಎಂದು ಗೆಳೆಯರೊಂದಿಗೆ ಚರ್ಚಿಸಿದಾಗ ಅವರು ತಾವೆಲ್ಲರೂ ಕಮಿಷನ್ ಕೊಟ್ಟು ಬಿಲ್ ಮಾಡಿಸಿಕೊಂಡಿದ್ದೇವೆ ಎಂದು ಹೇಳಿದರು. ನನಗೂ ಈಶ್ವರಪ್ಪ ಅವರ ಆಪ್ತ ಬಸವರಾಜು ಕಡೆಯಿಂದ ಕಮಿಷನ್ ಆಮಿಷ ಬಂದಿತ್ತು. ಹಿರಿಯರಾಗಿರುವ ಈಶ್ವರಪ್ಪ ಏನೇನೋ ಮಾತನಾಡಬಾರದು. ನಾನು ಪ್ರಧಾನಿ ಮೋದಿಗೆ ಪತ್ರ ಬರೆದು ನ್ಯಾಯ ಕೇಳಿದ್ದೇನೆ. ನ್ಯಾಯ ಸಿಗದಿದ್ದರೆ ನಾನು ಜೀವ ಕಳೆದುಕೊಳ್ಳಬೇಕಾಗುತ್ತದೆ. ನಾನು ಕಟ್ಟಾ ಬಿಜೆಪಿ ಕಾರ್ಯಕರ್ತ, ಅದು ಎಲ್ಲರಿಗೂ ಗೊತ್ತು ಎಂದು ಮಾರ್ಚ್ ತಿಂಗಳ ಅಂತ್ಯದಲ್ಲಿ ಹೇಳಿದ್ದರು.