ಬೆಂಗಳೂರು, ನವೆಂಬರ್ 27: ಆರ್ಟಿಒ ಇನ್ಸ್ಪೆಕ್ಟರ್ಗಳಿಲ್ಲದೆಯೇ ಇನ್ಮುಂದೆ ಆಗಲಿದೆ ಎಫ್ಸಿ! ಎಫ್ಸಿ ಮಾಡಲು ಸಾರಿಗೆ ಇಲಾಖೆ Automatic Testing Station (ATS) ತೆರೆದಿದೆ. ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ನೆಲಮಂಗಲ ಆರ್ಟಿಒದಲ್ಲಿ ಎಟಿಎಸ್ ಸೆಂಟರ್ಗಳನ್ನು ತೆರೆಯಲಾಗಿದೆ. ಈ ಸೆಂಟರ್ಗಳಿಗೆ ವಾಹನಗಳನ್ನು ತೆಗೆದುಕೊಂಡು ಹೋದರೆ ಸಾಕು, ಆ ಮಷಿನ್ಗಳೇ ವಾಹನಗಳಿಗೆ ಪಾಸ್ ಅಥವಾ ಫೇಲ್ ಸರ್ಟಿಫಿಕೇಟ್ ನೀಡುತ್ತವೆ. ಯಾವುದೇ ಆರ್ಟಿಓ ಅಧಿಕಾರಿಗಳು, ಬ್ರೋಕರ್ಗಳ ಹಾವಳಿ ಇಲ್ಲದೆ ವಾಹನಗಳ ಎಫ್ಸಿ ಮಾಡಿಸಿಕೊಳ್ಳಬಹುದು.
ಈ ಹಿಂದೆ ವಾಹನಗಳಿಗೆ ಎಫ್ಸಿ ಮಾಡಿಸಬೇಕು ಅಂದರೆ ಗಂಟೆಗಟ್ಟಲೆ ಕಾಯಬೇಕಿತ್ತು. ಆದರೆ ಈಗ ಹತ್ತು ನಿಮಿಷಗಳಲ್ಲಿ ಎಫ್ಸಿ ಆಗುತ್ತದೆ!
ನಿಯಮಗಳ ಪ್ರಕಾರ, ಯೆಲ್ಲೋ ಬೋರ್ಡ್ ಹೊಸ ವಾಹನಗಳಾಗಿದ್ದರೆ, ಏಳು ವರ್ಷದ ಒಳಗಿನ ವಾಹನಗಳು ಎರಡು ವರ್ಷಕ್ಕೊಮ್ಮೆ ಎಫ್ಸಿ ಮಾಡಿಸಬೇಕು. ಏಳು ವರ್ಷದ ನಂತರ ವಾಹನಗಳಿಗೆ ಪ್ರತಿವರ್ಷ ಎಫ್ಸಿ ಮಾಡಿಸಬೇಕು. ವೈಟ್ ಬೋರ್ಡ್ ವಾಹನಗಳಿಗೆ ಹದಿನೈದು ವರ್ಷಕ್ಕೊಮ್ಮೆ ಎಫ್ಸಿ ಮಾಡಿಸಬೇಕು. ನಂತರ ಐದು ವರ್ಷಕೊಮ್ಮೆ ಎಫ್ಸಿ ಮಾಡಿಸಬೇಕು.
ಈ ಹಿಂದೆ ಎಫ್ಸಿಗೆ ಹೋಗುವ ವಾಹನಗಳಲ್ಲಿ ಎಲ್ಲಾ ಸರಿ ಇದ್ದರೂ ಆರ್ಟಿಒ ಇನ್ಸ್ಪೆಕ್ಟರ್ಗಳು ಏನಾದರೂ ಕಾರಣ ಹೇಳಿ ಎಫ್ಸಿ ಫೇಲ್ ಮಾಡಿಸುತ್ತಿದ್ದರು. ಇದೀಗ ಈ ಎಟಿಎಸ್ಗಳಿಂದ ಆ ರೀತಿ ಮಾಡಲು ಆಗುವುದಿಲ್ಲ. ಪ್ರತಿಯೊಂದನ್ನೂ ಈ ಮಷಿನ್ಗಳು ಪರಿಶೀಲನೆ ಮಾಡಲಿವೆ. ಈ ಮಷಿನ್ ಮೂಲಕ ಸ್ಥಳದಲ್ಲೇ ವಾಹನ ಮಾಲೀಕರಿಗೆ ಎಫ್ಸಿ ಸರ್ಟಿಫಿಕೇಟ್ ದೊರೆಯುತ್ತದೆ. ಈ ಬಗ್ಗೆ ವಾಹನ ಮಾಲೀಕರು ಸಂತಸ ವ್ಯಕ್ತಪಡಿಸುತ್ತಿದ್ದಾರೆ.
ಇದನ್ನೂ ಓದಿ: ಬಿಪಿಎಲ್ ಕಾರ್ಡುದಾರರಿಗೆ ಗುಡ್ನ್ಯೂಸ್! ಕಾರ್ಡ್ ಮರುಸ್ಥಾಪನೆ ಕಾರ್ಯ ಬಹುತೇಕ ಪೂರ್ಣ, ಡಿಸೆಂಬರ್ನಿಂದ ಸಿಗಲಿದೆ ರೇಷನ್
ಒಟ್ಟಿನಲ್ಲಿ ಹೊಸದಾಗಿ ಓಪನ್ ಆಗಿರುವ ಎಟಿಎಸ್ ಸೆಂಟರ್ಗಳಿಂದ ವಾಹನ ಮಾಲೀಕರಿಗೆ ಕಿರಿಕಿರಿ ತಪ್ಪುವುದರ ಜತೆಗೆ ಹಣ ಉಳಿಯುವುದಂತೂ ಗ್ಯಾರಂಟಿ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:57 am, Wed, 27 November 24