ಕ್ರೂಸರ್​ಗೆ ಗೂಡ್ಸ್ ವಾಹನ ಡಿಕ್ಕಿ; ವಿಜಯಪುರದಲ್ಲಿ ನವ ವಿವಾಹಿತೆ ಸಾವು

| Updated By: Digi Tech Desk

Updated on: Jul 02, 2021 | 4:26 PM

ಕಲಬುರಗಿ ಜಿಲ್ಲೆಯ ಶಂಕರವಾಡಿ ಗ್ರಾಮದಿಂದ ಮನೆ ದೇವರ ದರ್ಶನಕ್ಕಾಗಿ ವಿಜಯಪುರದತ್ತ ಬರುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ಗೂಡ್ಸ್​ ಡಿಕ್ಕಿ ಹೊಡೆದ ರಭಸಕ್ಕೆ ಕ್ರೂಸರ್​ನಲ್ಲಿದ್ದ ಮೃತ ರಾಣಿಯ ಪತಿ ಗಣೇಶ ಸೇರಿ 6 ಜನರಿಗೆ ಗಾಯಗೊಂಡಿದ್ದಾರೆ.

ಕ್ರೂಸರ್​ಗೆ ಗೂಡ್ಸ್ ವಾಹನ ಡಿಕ್ಕಿ; ವಿಜಯಪುರದಲ್ಲಿ ನವ ವಿವಾಹಿತೆ ಸಾವು
ಪ್ರಾತಿನಿಧಿಕ ಚಿತ್ರ
Follow us on

ವಿಜಯಪುರ: ಕ್ರೂಸರ್​ಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದು ನವ ವಿವಾಹಿತೆ ಸಾವಿಗೀಡಾದ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ‌ ಯರಗಲ್ ಗ್ರಾಮದ ಬಳಿ ನಡೆದಿದೆ. ನಿನ್ನೆಯಷ್ಟೇ (ಜುಲೈ 1) ವಿವಾಹ ಕಾರ್ಯ ಮುಗಿದಿದ್ದು, ಇಂದು ದೇವರ ದರ್ಶನಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಈ ರಸ್ತೆ ಅಪಘಾತದಲ್ಲಿ ನವ ವಿವಾಹಿತೆ ರಾಣಿ ಗಣೇಶ ಚೌಹಾಣ್ (26) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕಲಬುರಗಿ ಜಿಲ್ಲೆಯ ಶಂಕರವಾಡಿ ಗ್ರಾಮದಿಂದ ಮನೆ ದೇವರ ದರ್ಶನಕ್ಕಾಗಿ ವಿಜಯಪುರದತ್ತ ಬರುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ಗೂಡ್ಸ್​ ಡಿಕ್ಕಿ ಹೊಡೆದ ರಭಸಕ್ಕೆ ಕ್ರೂಸರ್​ನಲ್ಲಿದ್ದ ಮೃತ ರಾಣಿಯ ಪತಿ ಗಣೇಶ ಸೇರಿ 6 ಜನರಿಗೆ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಿಂದಗಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಈ ಸಂಬಂಧ ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗೂಡ್ಸ್ ವಾಹನ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳಿಗೆ ಗೂಡ್ಸ್ ಲಾರಿ ಡಿಕ್ಕಿ
ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳಿಗೆ ಗೂಡ್ಸ್ ಲಾರಿ ಡಿಕ್ಕಿ ಹೊಡೆದ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ನಡೆದಿದೆ. ಚಾಲಕನ ನಿರ್ಲಕ್ಷ್ಯದಿಂದ ಹಲವು ವಾಹನಗಳು ಜಖಂ ಆಗಿದ್ದು, ಈ ಬಗ್ಗೆ ಪ್ರಶ್ನಿಸಿದ್ದಕ್ಕೆ ಆವಾಜ್ ಹಾಕಿದ ಚಾಲಕನಿಗೆ ಸ್ಥಳಿಯರು ಥಳಿಸಿದ್ದು, ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ಸದ್ಯ ಈ ಸಂಬಂಧ ಮಳವಳ್ಳಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲಾರಿಗೆ ಕಾರು ಡಿಕ್ಕಿ; ಓರ್ವ ದುರ್ಮರಣ, ಇಬ್ಬರಿಗೆ ಗಾಯ
ಲಾರಿಗೆ ಕಾರು ಡಿಕ್ಕಿಯಾಗಿ ಕಾರಲ್ಲಿದ್ದ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ‌ ನಡೆದಿದೆ. ಹಾವೇರಿ ಜಿಲ್ಲೆ ಹಿರೇಕೆರೂರಿನ ಪತ್ರಕರ್ತ ರಾಮು ಮುದಿಗೌಡ(50) ಸಾವನ್ನಪ್ಪಿದ್ದು, ಕಾರಲ್ಲಿದ್ದ ಇನ್ನಿಬ್ಬರಿಗೆ ಗಾಯವಾಗಿದೆ. ಗಾಯಾಳುಗಳನ್ನು ಹಿರಿಯೂರು ತಾಲೂಕು ಆಸ್ಪತ್ರೆಯಲ್ಲಿ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:
ಕಾರು-ಕ್ರೂಸರ್​ ನಡುವೆ ಭೀಕರ ಅಪಘಾತ; ಚಿಕಿತ್ಸೆಗೆ ಹೊರಟ್ಟಿದ್ದ ನಾಲ್ಕು ಮಂದಿ ಸ್ಥಳದಲ್ಲೇ ಸಾವು

ಪೊಲೀಸ್​​ ತಪಾಸಣೆ ವೇಳೆ ಗೂಡ್ಸ್ ಗಾಡಿ ಡಿಕ್ಕಿ; ತಾಯಿಯ ಎದುರೇ ಯುವಕನ ಸಾವು: ಪೊಲೀಸ್ ಚೆಕ್ ಪಾಯಿಂಟ್ ಧ್ವಂಸ

 

 

Published On - 4:15 pm, Fri, 2 July 21