
ಬೆಂಗಳೂರು: ನೂತನ ಉಪ ಲೋಕಾಯುಕ್ತರಾಗಿ ನಿವೃತ್ತ ಹೈಕೋರ್ಟ್ ಜಡ್ಜ್ ಬಿಎಸ್ ಪಾಟೀಲ್ ಅಧಿಕಾರ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಜಸ್ಟೀಸ್ ಭೀಮನಗೌಡ ಸಂಗಣ್ಣಗೌಡ ಪಾಟೀಲ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.
ಪ್ರಮಾಣ ವಚನ ಬೋಧನಾ ಸಮಾರಂಭದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಭಾಗಿಯಾಗಿದ್ದರು. ಅಧಿಕಾರ ಸ್ವೀಕಾರ ಮಾಡಿದ ಉಪ ಲೋಕಯುಕ್ತ ಪಾಟೀಲ್ ಗೆ ಹೂಗುಚ್ಛ ನೀಡಿ ಸಿಎಂ ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದರು. ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Published On - 6:02 pm, Thu, 21 November 19