ಹೈಕಮಾಂಡ್ ಸೂಚಿಸಿದ ತಕ್ಷಣ ರಾಜೀನಾಮೆ ನೀಡುತ್ತೇನೆ: ಬಿ.ಎಸ್.ಯಡಿಯೂರಪ್ಪ

ಎಲ್ಲಿಯವರೆಗೆ ಅಧಿಕಾರದಲ್ಲಿ ಇರುವಂತೆ ಹೇಳುತ್ತಾರೋ, ಅಲ್ಲಿಯವರೆಗೂ ನಾನು ಅಧಿಕಾರದಲ್ಲಿ ಮುಂದುವರಿಯುತ್ತೇನೆ. ಹೈಕಮಾಂಡ್ ರಾಜೀನಾಮೆ ನೀಡುವಂತೆ ನನಗೆ ಸೂಚಿಸಿದರೆ. ಹೈಕಮಾಂಡ್ ಸೂಚಿಸಿದ ತಕ್ಷಣ ರಾಜೀನಾಮೆ ನೀಡುತ್ತೇನೆ ಎಂದು ತಿಳಿಸಿದ್ದಾರೆ.

ಹೈಕಮಾಂಡ್ ಸೂಚಿಸಿದ ತಕ್ಷಣ ರಾಜೀನಾಮೆ ನೀಡುತ್ತೇನೆ: ಬಿ.ಎಸ್.ಯಡಿಯೂರಪ್ಪ
ಬಿ.ಎಸ್​. ಯಡಿಯೂರಪ್ಪ (ಸಂಗ್ರಹ ಚಿತ್ರ)
Follow us
TV9 Web
| Updated By: sandhya thejappa

Updated on:Jun 06, 2021 | 11:36 AM

ಬೆಂಗಳೂರು: ಹೈಕಮಾಂಡ್ ಸೂಚಿಸಿದ ತಕ್ಷಣ ರಾಜೀನಾಮೆ ನೀಡುತ್ತೇನೆ ಎಂದು ವಿಧಾನಸೌಧದಲ್ಲಿ ಹೇಳಿಕೆ ನೀಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ಹೈಕಮಾಂಡ್ ನನ್ನ ಮೇಲೆ ಸಂಪೂರ್ಣ ವಿಶ್ವಾಸವಿಟ್ಟಿದೆ. ಎಲ್ಲಿಯವರೆಗೆ ಅಧಿಕಾರದಲ್ಲಿ ಇರುವಂತೆ ಹೇಳುತ್ತಾರೋ, ಅಲ್ಲಿಯವರೆಗೂ ನಾನು ಅಧಿಕಾರದಲ್ಲಿ ಮುಂದುವರಿಯುತ್ತೇನೆ. ಹೈಕಮಾಂಡ್ ರಾಜೀನಾಮೆ ನೀಡುವಂತೆ ನನಗೆ ಸೂಚಿಸಿದರೆ. ಹೈಕಮಾಂಡ್ ಸೂಚಿಸಿದ ತಕ್ಷಣ ರಾಜೀನಾಮೆ ನೀಡುತ್ತೇನೆ ಎಂದು ತಿಳಿಸಿದ್ದಾರೆ.

ರಾಜೀನಾಮೆ ನೀಡಿ ರಾಜ್ಯದ ಅಭಿವೃದ್ಧಿಗೆ ಕೆಲಸ ಮಾಡುತ್ತೇನೆ. ಆದರೆ ಬಿಜೆಪಿ ಹೈಕಮಾಂಡ್ ನನ್ನ ಮೇಲೆ ವಿಶ್ವಾಸ ಇಟ್ಟಿದೆ. ಪರ್ಯಾಯ ನಾಯಕ ಇಲ್ಲವೆಂಬ ಮಾತನ್ನು ನಾನು ಒಪ್ಪಲ್ಲ. ದೇಶ, ರಾಜ್ಯದಲ್ಲಿ ಪರ್ಯಾಯ ನಾಯಕರು ಇರುತ್ತಾರೆ ಎಂದು ಬಿಎಸ್​ವೈ ಹೇಳಿದರು.

ಕೆಲ ಸಚಿವರಿಂದ ನಾಯಕತ್ವ ಬದಲಾವಣೆ ಕೆಲಸ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ಅವರು ನಾನು ಯಾರ ಬಗ್ಗೆಯೂ ಟೀಕೆ ಟಿಪ್ಪಣಿ ಮಾಡುವುದಿಲ್ಲ. ನನ್ನ ಮೇಲೆ ಹೈಕಮಾಂಡ್‌ಗೆ ವಿಶ್ವಾಸವಿರುವವರೆಗೆ ಇರುತ್ತೇನೆ. ರಾಜ್ಯದ ಮುಖ್ಯಮಂತ್ರಿಯಾಗಿ ನಾನು ಮುಂದುವರಿಯುತ್ತೇನೆ. ಯಡಿಯೂರಪ್ಪ ನೀವು ಬೇಡ ಅಂದ್ರೆ ರಾಜೀನಾಮೆ ಕೊಡುತ್ತೇನೆ. ರಾಜೀನಾಮೆ ಕೊಟ್ಟು ರಾಜ್ಯದ ಅಭಿವೃದ್ಧಿಗೆ ಕೆಲಸ ಮಾಡುತ್ತೇನೆ. ನಾನು ಯಾವುದೇ ಗೊಂದಲದಲ್ಲಿ ಇಲ್ಲ ಎಂದು ಮುಖ್ಯಮಂತ್ರಿ ಹೇಳಿದರು.

ರಾಜೀನಾಮೆ ಬಗ್ಗೆ ಮಾತನಾಡಿದರೆ ಜನರು ಸಂಕಷ್ಟ ಅನುಭವಿಸಬೇಕಾಗುತ್ತೆ: ಹೆಚ್.ಡಿ.ಕುಮಾರಸ್ವಾಮಿ ಸಿಎಂ ಯಡಿಯೂರಪ್ಪ ರಾಜೀನಾಮೆ ಬಗ್ಗೆ ಮಾತನಾಡಿದ ಬೆನ್ನಲ್ಲೇ ಟಿವಿ9ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಯಡಿಯೂರಪ್ಪನವರು ರಾಜೀನಾಮೆ ಬಗ್ಗೆ ಮಾತನಾಡಿದರೆ, ರಾಜ್ಯದ ಜನರು ಸಂಕಷ್ಟ ಅನುಭವಿಸಬೇಕಾಗುತ್ತದೆ. ಇವರು ಪಕ್ಷದ ಚೌಕಟ್ಟಿನಲ್ಲಿ ಈ ಬಗ್ಗೆ ಮಾತನಾಡಿಕೊಳ್ಳಲಿ. ಆಂತರಿಕ ಸಮಸ್ಯೆ ಬಗ್ಗೆ 4 ಗೋಡೆ ಮಧ್ಯೆ ಮಾತನಾಡಿಕೊಳ್ಳಲಿ. ಮೊದಲೇ ಸರ್ಕಾರದ ಬಗ್ಗೆ ರಾಜ್ಯದ ಜನರಿಗೆ ಬೇಸರವಿದೆ. ಇಂತಹ ಸಂದರ್ಭದಲ್ಲಿ ಸಿಎಂ ಇಂತಹ ಹೇಳಿಕೆಯನ್ನು ನೀಡಬಾರದು ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ರಾಜ್ಯ ಸರ್ಕಾರದ ಹಣೆಬರಹ ಬದಲಾವಣೆಯಾಗಲ್ಲ. ಇವರಿದ್ದರೂ ಇಷ್ಟೇ, ಹೊಸ ಸಿಎಂ ಬಂದರೂ ಇಷ್ಟೇ ಇರುತ್ತೆ. ಇದು ಹಣ ಹೂಡಿಕೆ ಮಾಡಿ ಬಂದಿರುವ ಸರ್ಕಾರವಾಗಿದೆ. ಈಗ ಇವರು ಹಣ ಗಳಿಸಬೇಕಲ್ಲವಾ. ಇಲ್ಲಿ ವ್ಯಕ್ತಿ ಮುಖ್ಯವಲ್ಲ, ನಾಯಕರನ್ನು ಸೃಷ್ಟಿಸುವ ಶಕ್ತಿ ಜನರಿಗಿದೆ. ಬಿಜೆಪಿಯನ್ನು ಕಟ್ಟಿ ಬೆಳೆಸಿದವರನ್ನೆಲ್ಲಾ ಮರೆಯುತಿದ್ದಾರೆ. ಈಗ ಹೊಸ ನಾಯಕರು ಸೃಷ್ಟಿಯಾಗುತ್ತಿದ್ದಾರೆ. ಆಡಳಿತ ನಡೆಸುವಲ್ಲಿ ಬಿಜೆಪಿ ಸಂಪೂರ್ಣ ವಿಫಲವಾಗಿದೆ ಎಂದು ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ

ವರ್ಗಾವಣೆ ಬೆನ್ನಲ್ಲೇ ಸಿಎಂ ಯಡಿಯೂರಪ್ಪ ನಿವಾಸಕ್ಕೆ ರೋಹಿಣಿ ಸಿಂಧೂರಿ ಭೇಟಿ

ಫಸ್ಟ್ ಟೈಂ ವೋಟರ್ಸ್ ಟ್ರ್ಯಾಕ್ ಮಾಡಲು ಈ ನಿರ್ಧಾರವೇ? ಸಚಿವ ಸುರೇಶ್ ಕುಮಾರ್ ವಿರುದ್ಧ ರಿಪೀಟರ್ಸ್ ಆಕ್ರೋಶ

(BS Yeddyurappa said he would resign as soon as the High Command suggested)

Published On - 11:00 am, Sun, 6 June 21

Daily Devotional: ಶನಿ ನೇರ ಸಂಚಾರ ಯಾರಿಗೆಲ್ಲ ಅದೃಷ್ಟ? ವಿಡಿಯೋ ನೋಡಿ
Daily Devotional: ಶನಿ ನೇರ ಸಂಚಾರ ಯಾರಿಗೆಲ್ಲ ಅದೃಷ್ಟ? ವಿಡಿಯೋ ನೋಡಿ
ಶನಿದೇವ ಕುಂಬ ರಾಶಿಗೆ ಪ್ರವೇಶಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಶನಿದೇವ ಕುಂಬ ರಾಶಿಗೆ ಪ್ರವೇಶಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ರಸ್ತೆ ದಾಟುವಾಗ ಬಸ್ ಡಿಕ್ಕಿ ಹೊಡೆದು ಕಾಲೇಜು ಯುವತಿ ಭೀಕರ ಸಾವು
ರಸ್ತೆ ದಾಟುವಾಗ ಬಸ್ ಡಿಕ್ಕಿ ಹೊಡೆದು ಕಾಲೇಜು ಯುವತಿ ಭೀಕರ ಸಾವು
ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಮಹಾರಾಷ್ಟ್ರದ ಪನ್ವೇಲ್​ನಲ್ಲಿ ಇಸ್ಕಾನ್​ನಿಂದ ಮೋದಿಗೆ ವಿಶೇಷ ಸ್ವಾಗತ
ಮಹಾರಾಷ್ಟ್ರದ ಪನ್ವೇಲ್​ನಲ್ಲಿ ಇಸ್ಕಾನ್​ನಿಂದ ಮೋದಿಗೆ ವಿಶೇಷ ಸ್ವಾಗತ
ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ
ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ
ಲೈಸೆನ್ಸ್ ಹಂಚಿಕೆಯಲ್ಲಿ ಅವ್ಯಾಹತ ಭ್ರಷ್ಟಾಚಾರ: ಗುರುಸ್ವಾಮಿ, ಸಂಘದ ಅಧ್ಯಕ್ಷ
ಲೈಸೆನ್ಸ್ ಹಂಚಿಕೆಯಲ್ಲಿ ಅವ್ಯಾಹತ ಭ್ರಷ್ಟಾಚಾರ: ಗುರುಸ್ವಾಮಿ, ಸಂಘದ ಅಧ್ಯಕ್ಷ