AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಫ್ತು ಮಾಡುವ ಉದ್ಯಮಗಳಿಗೆ ಗುರುವಾರದಿಂದ ಅನುಮತಿ; ಸಿಎಂ ಬಿ.ಎಸ್.ಯಡಿಯೂರಪ್ಪ

ರಾಜ್ಯದಲ್ಲಿ ಕೊರೊನಾ ಇನ್ನೂ ಸಂಪೂರ್ಣವಾಗಿ ನಿಯಂತ್ರಣ ಆಗಿಲ್ಲ. ಅದನ್ನು ಸರಿದೂಗಿಸಿಕೊಂಡು ಹೇಗೆ ಹೋಗಬೇಕೆಂದು ಚರ್ಚೆ ಮಾಡಲಾಗುತ್ತದೆ. ಮತ್ತಷ್ಟು ವಲಯಗಳಿಗೆ ವಿನಾಯಿತಿ ನೀಡಿಕೆ ಬಗ್ಗೆಯೂ ಚರ್ಚೆ ನಡೆಸಲಾಗುತ್ತದೆ. ಎರಡನೇ ಪ್ಯಾಕೇಜ್ ಇನ್ನೊಂದೆರಡು ದಿನಗಳಲ್ಲಿ ಘೋಷಣೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ರಫ್ತು ಮಾಡುವ ಉದ್ಯಮಗಳಿಗೆ ಗುರುವಾರದಿಂದ ಅನುಮತಿ; ಸಿಎಂ ಬಿ.ಎಸ್.ಯಡಿಯೂರಪ್ಪ
ಬಿ.ಎಸ್​. ಯಡಿಯೂರಪ್ಪ (ಸಂಗ್ರಹ ಚಿತ್ರ)
TV9 Web
| Edited By: |

Updated on:Jun 02, 2021 | 2:25 PM

Share

ಬೆಂಗಳೂರು: ಲಾಕ್​ಡೌನ್​ ಸಡಿಲಿಕೆ ಬಗ್ಗೆ ನಾಳೆ ತೀರ್ಮಾನ ಮಾಡಲಾಗುತ್ತದೆ ಎಂದು ಹೇಳಿಕೆ ನೀಡಿದ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಇಂದು ಸಂಜೆ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಚರ್ಚೆ ಮಾಡುತ್ತೇವೆ. ಲಾಕ್​ಡೌನ್​ ವಿಸ್ತರಣೆ ಮಾಡಿ ಬಿಗಿ ಕ್ರಮಗಳ ಬಗ್ಗೆಯೂ ಚರ್ಚೆ ಮಾಡಲಾಗುತ್ತದೆ. ಅಧಿಕಾರಿಗಳ ಜೊತೆ ಚರ್ಚಿಸಿದ ಬಳಿಕ ಇದರ ಬಗ್ಗೆ ತೀರ್ಮಾನ ಮಾಡುತ್ತೇವೆ. ರಫ್ತು ಮಾಡುವ ಉದ್ಯಮಗಳಿಗೆ ಗುರುವಾರದಿಂದ ಅನುಮತಿ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಕೊರೊನಾ ಇನ್ನೂ ಸಂಪೂರ್ಣವಾಗಿ ನಿಯಂತ್ರಣ ಆಗಿಲ್ಲ. ಅದನ್ನು ಸರಿದೂಗಿಸಿಕೊಂಡು ಹೇಗೆ ಹೋಗಬೇಕೆಂದು ಚರ್ಚೆ ಮಾಡಲಾಗುತ್ತದೆ. ಮತ್ತಷ್ಟು ವಲಯಗಳಿಗೆ ವಿನಾಯಿತಿ ನೀಡಿಕೆ ಬಗ್ಗೆಯೂ ಚರ್ಚೆ ನಡೆಸಲಾಗುತ್ತದೆ. ಎರಡನೇ ಪ್ಯಾಕೇಜ್ ಇನ್ನೊಂದೆರಡು ದಿನಗಳಲ್ಲಿ ಘೋಷಣೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸದ್ಯ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ಆದರೆ ಹಳ್ಳಿಗಳಲ್ಲಿ ಈ ತಿಂಗಳಲ್ಲಿ ಹೆಚ್ಚು ಜನರಿಗೆ ಕೊರೊನಾ ಸೋಂಕು ಹರಡುವ ಸಾಧ್ಯತೆ ಇದೆ ಎಂದು ತಜ್ಞರು ಹೇಳಿದ್ದಾರೆ. ಹೀಗಾಗಿ ಈಗಾಗಲೇ ಜಾರಿಯಲ್ಲಿರುವ ಲಾಕ್​ಡೌನ್​ ಮುಂದುವರಿಸಬೇಕಾ? ಬೇಡವಾ ಎಂದು ಸರ್ಕಾರ ನಿರ್ಧರಿಸಲಿದೆ. ಹಲವರು ಲಾಕ್​ಡೌನ್​ ಮುಂದುವರಿಸುವುದು ಸೂಕ್ತ ಎಂದರೆ, ಇನ್ನು ಕೆಲವರು ನಿಧಾನವಾಗಿ ಸಡಿಲಿಕೆ ಮಾಡುವುದು ಒಳಿತು ಎಂದು ಅಭಿಪ್ರಾಯಪಟ್ಟಿರುವುದು ತಿಳಿದುಬಂದಿದೆ.

ಇದನ್ನೂ ಓದಿ

ಲಾಕ್‌ಡೌನ್ ನಿಮಿತ್ತ ಬಂದ್ ಆಗಿದ್ದ ಬೈಕ್ ಶೋ ರೂಮ್ ಈಗ ಕೊವಿಡ್ ಕೇರ್ ಸೆಂಟರ್; ಹಾವೇರಿಯ ಶೋ ರೂಮ್ ಮಾಲೀಕನಿಂದ ಮಾದರಿ ಕೆಲಸ

ತೌಕ್ತೆ ಚಂಡಮಾರುತ ಪೀಡಿತ ಪ್ರದೇಶದ ಮೀನುಗಾರರಿಗೆ ಗುಜರಾತ್ ಸರ್ಕಾರದಿಂದ ₹105 ಕೋಟಿ ಪರಿಹಾರ ಪ್ಯಾಕೇಜ್ ಘೋಷಣೆ

(BS Yeddyurappa says Exporters will be allowed from Thursday)

Published On - 2:21 pm, Wed, 2 June 21